ಆರೋಗ್ಯ ಕಾಪಾಡಿಕೊಳ್ಳಲು ಮಳೆಗಾಲದಲ್ಲಿ ಇಂತಹ ಆಹಾರಗಳಿಂದ ದೂರವಿರಿ

ಮಳೆಗಾಲ ಆರಂಭವಾಗಿದೆ. ಹಾಗಾಗಿ ಪ್ರತಿನಿತ್ಯ ಸೇವನೆ ಮಾಡುವ ಆಹಾರದ ಬಗ್ಗೆ ವಿಶೇಷ ಗಮನ ಹರಿಸುವುದು ಬಹಳ ಮುಖ್ಯ, ಏಕೆಂದರೆ ಸಣ್ಣ ಅಜಾಗರೂಕತೆ ಕೂಡ ಸೋಂಕು ಮತ್ತು ಆರೋಗ್ಯ ಸಮಸ್ಯೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಹಾಗಾಗಿ ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಮಳೆಗಾಲದಲ್ಲಿ ಯಾವ ರೀತಿಯ ಆಹಾರಗಳನ್ನು ಸೇವನೆ ಮಾಡಬಾರದು ಮತ್ತು ಆರೋಗ್ಯ ಕಾಪಾಡಿಕೊಳ್ಳಲು ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಆರೋಗ್ಯ ಕಾಪಾಡಿಕೊಳ್ಳಲು ಮಳೆಗಾಲದಲ್ಲಿ ಇಂತಹ ಆಹಾರಗಳಿಂದ ದೂರವಿರಿ
Monsoon Diet Tips
Image Credit source: Getty Images

Updated on: Jun 24, 2026 | 7:58 PM

ಮುಖ್ಯಾಂಶಗಳು

  • ಮಳೆಗಾಲದಲ್ಲಿ ಸೇವನೆ ಮಾಡಬಾರದಂತಹ ಆಹಾರಗಳ ಪಟ್ಟಿ
  • ಆರೋಗ್ಯ ಕಾಪಾಡಿಕೊಳ್ಳಲು ಅನುಸರಿಸಬೇಕಾದ ಸಲಹೆಗಳು
  • ಮಳೆಗಾಲದಲ್ಲಿ ತಾಜಾ ಮತ್ತು ಸ್ವಚ್ಛ ಆಹಾರ ಆರೋಗ್ಯ ಕಾಪಾಡಬಹುದು

ಮಳೆಗಾಲವು (Monsoon) ಬೇಸಿಗೆಯ ಬಿಸಿಯಿಂದ ನಿರಾಳತೆ ನೀಡಿದರೂ, ಅನೇಕ ಆರೋಗ್ಯ ಸಮಸ್ಯೆಗಳು ಮತ್ತು ಸೋಂಕುಗಳ ಅಪಾಯವನ್ನು ಹೆಚ್ಚಿಸುತ್ತದೆ ಎಂಬುದು ಸುಳ್ಳಲ್ಲ. ಈ ಸಮಯದಲ್ಲಿ ವಾತಾವರಣದಲ್ಲಿ ತೇವಾಂಶ ಹೆಚ್ಚಿರುವುದರಿಂದ ಬ್ಯಾಕ್ಟೀರಿಯಾ, ವೈರಸ್ ಹಾಗೂ ಶಿಲೀಂಧ್ರಗಳು ವೇಗವಾಗಿ ಬೆಳೆಯುತ್ತವೆ. ಇದರಿಂದ ಹೊಟ್ಟೆನೋವು, ಅಜೀರ್ಣ ಮತ್ತು ಇತರೆ ಸೋಂಕುಗಳ ಅಪಾಯ ಹೆಚ್ಚಾಗಬಹುದು. ಹಾಗಾಗಿ ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಮಳೆಗಾಲದಲ್ಲಿ ಯಾವ ರೀತಿಯ ಆಹಾರಗಳನ್ನು ಸೇವನೆ ಮಾಡಬಾರದು ಮತ್ತು ಆರೋಗ್ಯ ಕಾಪಾಡಿಕೊಳ್ಳಲು ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮಳೆಗಾಲದಲ್ಲಿ ಯಾವ ಆಹಾರಗಳನ್ನು ಸೇವನೆ ಮಾಡಬಾರದು?

ರಸ್ತೆ ಬದಿಯಲ್ಲಿ ಮಾರಾಟವಾಗುವ ತೆರೆದ ಆಹಾರ, ಮುಂಚಿತವಾಗಿ ಕತ್ತರಿಸಿ ಇಟ್ಟಿರುವ ಹಣ್ಣುಗಳು, ಹಿಂದಿನ ದಿನ ಮಾಡಿಟ್ಟ ಆಹಾರಗಳನ್ನು ಸೇವಿಸುವುದನ್ನು ಆದಷ್ಟು ತಪ್ಪಿಸಬೇಕು. ಕಚ್ಚಾ ಸಲಾಡ್, ಸರಿಯಾಗಿ ಬೇಯದ ಮಾಂಸಾಹಾರ ಹಾಗೂ ಚೆನ್ನಾಗಿ ತೊಳೆಯದ ಹಣ್ಣು- ತರಕಾರಿಗಳ ಸೇವನೆಯೂ ಸೋಂಕಿನ ಅಪಾಯವನ್ನು ಹೆಚ್ಚಿಸಬಹುದು. ಜೊತೆಗೆ ಅತಿಯಾಗಿ ಎಣ್ಣೆಯಲ್ಲಿ ಕರಿದ ಆಹಾರ, ಮಸಾಲೆಯುಕ್ತ ಆಹಾರಗಳು ಜೀರ್ಣಕ್ರಿಯೆಗೆ ತೊಂದರೆ ಉಂಟುಮಾಡಬಹುದು. ಆದ್ದರಿಂದ ಮನೆಯಲ್ಲೇ ತಯಾರಿಸಿದ ತಾಜಾ ಆಹಾರ ಸೇವಿಸುವುದು ಉತ್ತಮ.

ಇದನ್ನೂ ಓದಿ: ಈ ಆರೋಗ್ಯ ಸಮಸ್ಯೆ ಇದ್ದಾಗ ಡೆಂಗ್ಯೂ ಸೋಂಕು ಗಂಭೀರ ಸಮಸ್ಯೆಗಳನ್ನು ಉಂಟುಮಾಡಬಹುದು ಎಚ್ಚರ!

ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

ಮಳೆಗಾಲದಲ್ಲಿ ಪದೇಪದೇ ಹೊಟ್ಟೆನೋವು, ವಾಂತಿ, ಅತಿಸಾರ, ಹೊಟ್ಟೆ ಉಬ್ಬರ, ಜ್ವರ, ದೌರ್ಬಲ್ಯ ಅಥವಾ ಹಸಿವು ಕಡಿಮೆಯಾಗುವುದು ಕಂಡುಬಂದರೆ ಅದನ್ನು ನಿರ್ಲಕ್ಷಿಸಬಾರದು. ಇವು ಸೋಂಕಿನ ಲಕ್ಷಣಗಳಾಗಿರಬಹುದು. ಹಾಗಾಗಿ ದೇಹದಲ್ಲಿ ನೀರಿನ ಕೊರತೆ, ನಿರಂತರ ಆಯಾಸ ಅಥವಾ ಹಲವು ದಿನಗಳ ಕಾಲ ಆರೋಗ್ಯ ಸಮಸ್ಯೆಗಳು ಮುಂದುವರಿದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಅಗತ್ಯ.

ಆರೋಗ್ಯ ಕಾಪಾಡಲು ಏನು ಮಾಡಬೇಕು?

ಯಾವಾಗಲೂ ತಾಜಾ ಮತ್ತು ಸ್ವಚ್ಛ ಆಹಾರ ಸೇವಿಸಿ. ಊಟದ ಮೊದಲು ಮತ್ತು ನಂತರ ಕೈಗಳನ್ನು ಚೆನ್ನಾಗಿ ತೊಳೆಯುವ ಅಭ್ಯಾಸ ಬೆಳೆಸಿಕೊಳ್ಳಿ. ಸಾಕಷ್ಟು ನೀರು ಕುಡಿಯಿರಿ ಹಾಗೂ ಹಣ್ಣು-ತರಕಾರಿಗಳನ್ನು ಸ್ವಚ್ಛವಾಗಿ ತೊಳೆದು ಬಳಸಿ. ಹೊರಗಿನ ಆಹಾರದ ಸೇವನೆಯನ್ನು ಕಡಿಮೆ ಮಾಡಿ ಮತ್ತು ಆಹಾರವನ್ನು ಹೆಚ್ಚು ಹೊತ್ತು ತೆರೆದಿಡಬೇಡಿ. ಸರಿಯಾಗಿ ನಿದ್ರೆ ಮತ್ತು ವೈಯಕ್ತಿಕ ಸ್ವಚ್ಛತೆಯತ್ತ ಗಮನಹರಿಸಿ. ಸಣ್ಣ ಮುನ್ನೆಚ್ಚರಿಕೆಗಳೇ ಮಳೆಗಾಲದಲ್ಲಿ ದೊಡ್ಡ ಆರೋಗ್ಯ ಸಮಸ್ಯೆಗಳಿಂದ ನಿಮ್ಮನ್ನು ರಕ್ಷಿಸಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
Loading...
Unable to load recommendations.
Follow Us