ಖಾಲಿ ಹೊಟ್ಟೆಯಲ್ಲಿ ಈ ಆಹಾರಗಳ ಸೇವನೆ ಮಾಡಬೇಡಿ

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕೆಲವು ಆಹಾರಗಳನ್ನು ಸೇವಿಸುವುದು ಆರೋಗ್ಯಕ್ಕೆ ಹಾನಿಕಾರಕ ಎಂದು ವೈದ್ಯರು ಹೇಳುತ್ತಾರೆ. ಚಹಾ ಮತ್ತು ಕಾಫಿ ಹೊಟ್ಟೆಯಲ್ಲಿ ಆಮ್ಲಗಳನ್ನು ಹೆಚ್ಚಿಸುತ್ತದೆ ಮತ್ತು ಉರಿಯೂತ ಮತ್ತು ಗ್ಯಾಸ್ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಚಾಕೊಲೇಟ್ ಮತ್ತು ಸಿಹಿತಿಂಡಿಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತವೆ ಮತ್ತು ಇನ್ಸುಲಿನ್ ಸಮಸ್ಯೆಗಳನ್ನು ಉಂಟುಮಾಡುತ್ತವೆ ಎಂದು ಹೇಳಲಾಗುತ್ತದೆ. ಬಾಳೆಹಣ್ಣಿನಲ್ಲಿ ಮೆಗ್ನೀಸಿಯಮ್ ಅಧಿಕವಾಗಿದೆ ಮತ್ತು ಹೃದಯಕ್ಕೆ ಹಾನಿಕಾರಕವಾಗಿದೆ. ಹಾಗಾದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬಾರದು? ಇದರಿಂದ ಆರೋಗ್ಯಕ್ಕೆ ಯಾವ ರೀತಿಯ ಸಮಸ್ಯೆಗಳಾಗುತ್ತವೆ ತಿಳಿದುಕೊಳ್ಳಿ.

ಖಾಲಿ ಹೊಟ್ಟೆಯಲ್ಲಿ ಈ ಆಹಾರಗಳ ಸೇವನೆ ಮಾಡಬೇಡಿ
ಸಾಂದರ್ಭಿಕ ಚಿತ್ರ
Updated By: ಅಕ್ಷಯ್​ ಪಲ್ಲಮಜಲು​​

Updated on: Feb 07, 2025 | 10:30 AM

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕೆಲವು ಆಹಾರಗಳನ್ನು ಸೇವಿಸುವುದು ಆರೋಗ್ಯಕ್ಕೆ ಹಾನಿಕಾರಕ ಎಂದು ವೈದ್ಯರು ಹೇಳುತ್ತಾರೆ. ಏಕೆಂದರೆ ಇವುಗಳಿಂದ ದೇಹ ಹಾನಿಗೊಳಗಾಗುತ್ತದೆ. ಸಾಮಾನ್ಯವಾಗಿ ಜನರು ಬೆಳಿಗ್ಗೆ ಎದ್ದ ತಕ್ಷಣ ಚಹಾ ಅಥವಾ ಕಾಫಿ ಕುಡಿಯುವ ಅಭ್ಯಾಸವನ್ನು ರೂಢಿಸಿಕೊಂಡಿರುತ್ತಾರೆ. ಇದು ತುಂಬಾ ಸಾಮಾನ್ಯ. ಆದರೆ ಖಾಲಿ ಹೊಟ್ಟೆಯಲ್ಲಿ ಇವುಗಳ ಸೇವನೆ ಆರೋಗ್ಯಕ್ಕೆ ಅಷ್ಟು ಒಳ್ಳೆಯದಲ್ಲ. ಅದರಲ್ಲಿಯೂ ಚಹಾ ಮತ್ತು ಕಾಫಿಯಲ್ಲಿ ಟ್ಯಾನಿನ್ ಮತ್ತು ಕೆಫೀನ್ ನಂತಹ ಪದಾರ್ಥಗಳಿವೆ. ಅವು ಹೊಟ್ಟೆಯಲ್ಲಿ ಆಮ್ಲಗಳ ಉತ್ಪಾದನೆಯನ್ನು ಹೆಚ್ಚಿಸುತ್ತವೆ. ಜೊತೆಗೆ ಉರಿಯೂತ, ಹುಣ್ಣು ಮತ್ತು ಗ್ಯಾಸ್ಟ್ರಿಕ್ ಸಮಸ್ಯೆಗಳಿಗೆ ಕಾರಣವಾಗಬಹುದು. ಕೆಲವರಿಗೆ, ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದರಿಂದ ವಾಕರಿಕೆ ಮತ್ತು ತಲೆನೋವಿನಂತಹ ಸಮಸ್ಯೆಗಳು ಉಂಟಾಗಬಹುದು. ಇದು ಕೇವಲ ಚಹಾ ಅಥವಾ ಕಾಫಿ ಸೇವನೆ ಮಾಡುವವರಿಗೆ ಮಾತ್ರವಲ್ಲ, ಕೆಲವರು ಬೆಳಿಗ್ಗೆ ಎದ್ದಾಕ್ಷಣ ಸಿಹಿ ತಿನಿಸುಗಳು ಅಥವಾ ಎಣ್ಣೆಯಲ್ಲಿ ಕರಿದಂತಹ ಪದಾರ್ಥಗಳ ಸೇವನೆ ಮಾಡುತ್ತಾರೆ ಇದು ಕೂಡ ದೇಹಕ್ಕೆ ಒಳ್ಳೆಯದಲ್ಲ. ಹಾಗಾದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬಾರದು? ಇದರಿಂದ ಆರೋಗ್ಯಕ್ಕೆ ಯಾವ ರೀತಿಯ ಸಮಸ್ಯೆಗಳಾಗುತ್ತವೆ ತಿಳಿದುಕೊಳ್ಳಿ.

ಸಿಹಿತಿಂಡಿ ತಿಂದರೆ ಏನಾಗುತ್ತದೆ?

ಸಾಮಾನ್ಯವಾಗಿ ಚಾಕೊಲೇಟ್ ಮತ್ತು ಸಿಹಿ ತಿಂಡಿಗಳನ್ನು ಖಾಲಿ ಹೊಟ್ಟೆಯಲ್ಲಿ ತಿನ್ನಬಾರದು. ಅವುಗಳಲ್ಲಿ ಸಕ್ಕರೆ ಅಧಿಕವಾಗಿರುತ್ತದೆ. ಈ ರೀತಿಯ ಪದಾರ್ಥಗಳ ಸೇವನೆ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಹಠಾತ್ ಹೆಚ್ಚಿಸಲು ಕಾರಣವಾಗಬಹುದು. ಇದು ಇನ್ಸುಲಿನ್ ಮಟ್ಟವನ್ನು ಹೆಚ್ಚಿಸುತ್ತದೆ. ಮಧುಮೇಹಿಗಳಿಗೆ ತುಂಬಾ ಅಪಾಯಕಾರಿ. ಇದಲ್ಲದೆ, ಖಾಲಿ ಹೊಟ್ಟೆಯಲ್ಲಿ ಸಕ್ಕರೆಯನ್ನು ಸೇವಿಸುವುದರಿಂದ ತೂಕ ಕೂಡ ಹೆಚ್ಚಾಗುತ್ತದೆ.

ಮೊಸರನ್ನು ಯಾವ ಸಮಯದಲ್ಲಿ ಸೇವನೆ ಮಾಡುವುದು ಒಳ್ಳೆಯದು?

ಮೊಸರು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಖಾಲಿ ಹೊಟ್ಟೆಯಲ್ಲಿ ಮೊಸರು ತಿನ್ನಬೇಡಿ. ಮೊಸರು ಲ್ಯಾಕ್ಟಿಕ್ ಆಮ್ಲವನ್ನು ಹೊಂದಿರುತ್ತದೆ. ಇದು ಹೊಟ್ಟೆಯಲ್ಲಿ ಆಮ್ಲಗಳ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಜೊತೆಗೆ ಹೊಟ್ಟೆಯಲ್ಲಿ ಉರಿಯೂತವನ್ನು ಉಂಟುಮಾಡುತ್ತದೆ. ಊಟದ ನಂತರ ಅಥವಾ ರಾತ್ರಿ ಮಲಗುವ ಮೊದಲು ಮೊಸರನ್ನು ಸೇವಿಸುವುದು ಒಳ್ಳೆಯದು.

ಖಾಲಿ ಹೊಟ್ಟೆಯಲ್ಲಿ ಮಾತ್ರೆ ಸೇವನೆ ಮಾಡಬೇಡಿ

ಸಾಮಾನ್ಯವಾಗಿ, ಮಾತ್ರೆಗಳನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳಬಾರದು. ಹೆಚ್ಚಿನ ಮಾತ್ರೆಗಳು ಹೊಟ್ಟೆಯಲ್ಲಿರುವ ಆಮ್ಲದೊಂದಿಗೆ ಬೆರೆತು ಹೊಟ್ಟೆಯ ಒಳಪದರವನ್ನು ಹಾನಿಗೊಳಿಸುತ್ತವೆ. ಇದು ಹುಣ್ಣು ಮತ್ತು ರಕ್ತಸ್ರಾವದಂತಹ ಸಮಸ್ಯೆಗಳಿಗೆ ಕಾರಣವಾಗಬಹುದು. ವೈದ್ಯರು ಸೂಚಿಸಿದರೆ ಕೆಲವು ವಿಶೇಷ ಮಾತ್ರೆಗಳನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳಬಹುದು. ಆದರೆ ಸಾಮಾನ್ಯವಾಗಿ ಆಹಾರವನ್ನು ಸೇವಿಸಿದ ನಂತರವೇ ಮಾತ್ರೆಗಳನ್ನು ತೆಗೆದುಕೊಳ್ಳುವುದು ಉತ್ತಮ.

ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣುಗಳನ್ನು ಸೇವನೆ ಮಾಡಬೇಡಿ

ಬಾಳೆಹಣ್ಣಿನಲ್ಲಿ ಮೆಗ್ನೀಸಿಯಮ್ ಅಧಿಕವಾಗಿರುತ್ತದೆ. ನೀವು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣುಗಳನ್ನು ಸೇವಿಸಿದರೆ, ರಕ್ತದಲ್ಲಿನ ಮೆಗ್ನೀಸಿಯಮ್ ಮಟ್ಟವು ಇದ್ದಕ್ಕಿದ್ದಂತೆ ಹೆಚ್ಚಾಗುತ್ತದೆ. ಇದು ಹೃದಯಕ್ಕೆ ಹಾನಿ ಮಾಡಬಹುದು. ಬಾಳೆಹಣ್ಣುಗಳನ್ನು ಬೆಳಿಗ್ಗೆ ಸೇವಿಸುವ ಬದಲು ಊಟದ ನಂತರ ಅಥವಾ ಸಂಜೆ ಸೇವಿಸುವುದು ಒಳ್ಳೆಯದು.

ಇದನ್ನೂ ಓದಿ: ದಿನವಿಡೀ ನಿದ್ರೆ ಮಾಡುತ್ತಿದ್ದೀರಾ ಈ ಸಮಸ್ಯೆಗೆ ಇಲ್ಲಿದೆ ಕಾರಣ

ಟೊಮೆಟೊ ಖಾಲಿ ಹೊಟ್ಟೆಗೆ ಒಳ್ಳೆಯದಲ್ಲ

ಈ ತರಕಾರಿಯನ್ನು ಖಾಲಿ ಹೊಟ್ಟೆಯಲ್ಲಿ ತಿನ್ನಬಾರದು. ಅವು ಟಾನಿಕ್ ಆಮ್ಲವನ್ನು ಹೊಂದಿರುತ್ತವೆ. ಇದು ಹೊಟ್ಟೆಯಲ್ಲಿ ಸ್ರವಿಸುವ ಆಮ್ಲದೊಂದಿಗೆ ಸಂಯೋಜನೆಗೊಂಡು ಹಾನಿಯನ್ನುಂಟು ಮಾಡುತ್ತದೆ. ಹಾಗಾಗಿ ಇವುಗಳನ್ನು ಅಡುಗೆ ಮಾಡುವಾಗ ಇತರ ಆಹಾರಗಳೊಂದಿಗೆ ಸೇರಿಸಿ ಸೇವಿಸುವುದು ಸೂಕ್ತ.

ಖಾಲಿ ಹೊಟ್ಟೆಗೆ ಮಸಾಲೆಯುಕ್ತ ಆಹಾರ ಸೇವನೆ ಒಳ್ಳೆಯದಲ್ಲ

ಹೊಟ್ಟೆ ಖಾಲಿ ಇರುವಾಗ ಮಸಾಲೆಯುಕ್ತ ಆಹಾರವನ್ನು ಸೇವಿಸುವುದರಿಂದ ಹೊಟ್ಟೆಯ ಉರಿಯೂತ ಮತ್ತು ಹುಣ್ಣುಗಳು ಉಂಟಾಗಬಹುದು. ಮಸಾಲೆಯುಕ್ತ ಆಹಾರಗಳಲ್ಲಿನ ಕ್ಯಾಪ್ಸೈಸಿನ್ ಹೊಟ್ಟೆಯ ಒಳಪದರವನ್ನು ಕಿರಿಕಿರಿಗೊಳಿಸುತ್ತದೆ. ಇದು ಹೊಟ್ಟೆಯಲ್ಲಿ ನೋವು ಮತ್ತು ಉರಿಯೂತವನ್ನು ಉಂಟುಮಾಡುತ್ತದೆ.

ತಂಪು ಪಾನೀಯಗಳನ್ನು ಸೇವನೆ ಮಾಡಬೇಡಿ

ಖಾಲಿ ಹೊಟ್ಟೆಯಲ್ಲಿ ತಂಪು ಪಾನೀಯಗಳನ್ನು ಕುಡಿಯುವುದರಿಂದ ಹೊಟ್ಟೆಯಲ್ಲಿ ಗ್ಯಾಸ್ ಸಮಸ್ಯೆ ಉಂಟಾಗಬಹುದು. ತಂಪು ಪಾನೀಯಗಳಲ್ಲಿ ಇಂಗಾಲದ ಡೈ ಆಕ್ಸೈಡ್ ಅಧಿಕವಾಗಿರುತ್ತದೆ. ಇದು ಹೊಟ್ಟೆಯಲ್ಲಿ ಅನಿಲದ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಇದು ಹೊಟ್ಟೆಯಲ್ಲಿ ಉಬ್ಬರ ಮತ್ತು ನೋವನ್ನು ಉಂಟುಮಾಡುತ್ತದೆ.

ಇವೆಲ್ಲಾ ಕಾರಣಗಳಿಂದ ಬೆಳಿಗ್ಗೆ ಆರೋಗ್ಯಕರ ಆಹಾರ ಸೇವನೆ ಮಾಡುವುದು ಬಹಳ ಮುಖ್ಯ. ಹಾಗಾಗಿ ಇಡ್ಲಿ, ದೋಸೆ, ಉಪ್ಪಿಟ್ಟು ಅಥವಾ ಪೊಂಗಲ್ ನಂತಹ ಆಹಾರಗಳನ್ನು ತಿನ್ನುವುದು ನಿಮ್ಮ ಆರೋಗ್ಯಕ್ಕೆ ಒಳ್ಳೆಯದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ