AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ayurveda Medicine: ತಾಯಿಯ ಎದೆ ಹಾಲನ್ನು ಹೆಚ್ಚಿಸಲು ಈ ಗಿಡಮೂಲಿಕೆ ಬಳಸಿ

ಬಾಳಂತಿಯರಿಗೆ, ಈ ಶತಾವರಿ ಗಿಡಮೂಲಿಕೆ ಬಿಟ್ಟರೆ ಇಷ್ಟು ಒಳ್ಳೆಯ ಮತ್ತು ಆರೋಗ್ಯಕ್ಕೆ ಪೂರಕವಾದ ಇನ್ನೊಂದು ಔಷಧ ಸಿಗುವುದಿಲ್ಲ. ಅಲ್ಲದೆ ಇದನ್ನು ತರಕಾರಿಯಾಗಿಯೂ ಬಳಸಲಾಗುತ್ತದೆ. ಏಕೆಂದರೆ ಇದು ತಾಯಿಯ ಎದೆ ಹಾಲು ಹೆಚ್ಚಿಸುವುದರೊಂದಿಗೆ, ದೇಹಕ್ಕೆ ಶಕ್ತಿಯನ್ನು ಕೊಡುತ್ತದೆ. ಇದೆಲ್ಲದರ ಜೊತೆಗೆ ಈ ಗಿಡವನ್ನು ವಿಶೇಷವಾಗಿ ಮಹಿಳೆಯರ ಆರೋಗ್ಯಕ್ಕೆ, ಗರ್ಭಕೋಶದ ಸಮಸ್ಯೆಗೆ, ಮಕ್ಕಳಾಗದಿರುವವರಿಗೆ ಮತ್ತು ಮಕ್ಕಳು ಆದ ಮೇಲೆ ಬಾಳಂತಿಯರಿಗೂ ಇದರ ಚೂರ್ಣವನ್ನು ತಿನ್ನಲು ಕೊಡುತ್ತಾರೆ.

Ayurveda Medicine: ತಾಯಿಯ ಎದೆ ಹಾಲನ್ನು ಹೆಚ್ಚಿಸಲು ಈ ಗಿಡಮೂಲಿಕೆ ಬಳಸಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Jun 28, 2024 | 4:06 PM

Share

ಭೂಮಿಯ ಮೇಲೆ ಹಲವಾರು ರೀತಿಯ ಔಷಧೀಯ ಗಿಡಗಳಿವೆ. ಇದರಿಂದಾಗಿ ಅವುಗಳನ್ನು ವಿವಿಧ ಔಷಧಿಗಳು ಮತ್ತು ಪರಿಹಾರ ಕ್ರಮಗಳಲ್ಲಿ ಬಳಕೆ ಮಾಡುತ್ತಾರೆ. ಆಯುರ್ವೇದದ ಪ್ರಕಾರ, ಕೆಲವು ಗಿಡಮೂಲಿಕೆಗಳು ದೇಹದ ಪ್ರಮುಖ ಕಾಯಿಲೆಗಳನ್ನು ಗುಣಪಡಿಸುವ ಸಾಮರ್ಥ್ಯ ಹೊಂದಿವೆ. ಅಂತಹ ಔಷಧೀಯ ಗುಣಗಳನ್ನು ಹೊಂದಿರುವ ‘ಶತಾವರಿ’ ಎಂಬ ಶಕ್ತಿಶಾಲಿ ಗಿಡಮೂಲಿಕೆ ಬಗ್ಗೆ ಕೇಳಿದ್ದೀರಾ? ಇದರಿಂದ ಉಪಯೋಗವೇನು? ಯಾವೆಲ್ಲಾ ಕಾಯಿಲೆಗಳನ್ನು ಗುಣಪಡಿಸಬಹುದು ಎಂಬುದರ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಿ.

ತಾಯಿಯ ಎದೆ ಹಾಲನ್ನು ಹೆಚ್ಚಿಸುತ್ತದೆ

ಸಾಮಾನ್ಯವಾಗಿ ಹೆರಿಗೆ ಆದ ಬಳಿಕ ಕೆಲವು ತಾಯಂದಿರಲ್ಲಿ ಎದೆ ಹಾಲು ಕಡಿಮೆಯಾಗುತ್ತದೆ. ಈ ಸಮಸ್ಯೆಗೆ ಹಲವಾರು ರೀತಿಯ ಔಷಧಿಗಳನ್ನು ಮಾಡಲಾಗುತ್ತದೆ. ಆದರೆ ತಾಯಿ ಎದೆ ಹಾಲು ಕಡಿಮೆಯಾದಾಗ ಅದನ್ನು ಕ್ರಮೇಣವಾಗಿ ಹೆಚ್ಚಿಸಲು ಇರುವ ಅತ್ಯುತ್ತಮ ಗಿಡಮೂಲಿಕೆ ಎಂದರೆ ಅದು ಶತಾವರಿ ಅಥವಾ ಶತಮೂಲಿ. ಇದರ ಚೂರ್ಣ ಅಥವಾ ಪುಡಿಯನ್ನು ಹಾಲಿನೊಂದಿಗೆ ಬೆರೆಸಿಕೊಂಡು ಬೆಳಿಗ್ಗೆ ಮತ್ತು ಸಂಜೆ ಕುಡಿಯುವುದರಿಂದ ಮಗುವಿಗೆ ಎಷ್ಟು ಬೇಕೋ ಅಷ್ಟು ಹಾಲನ್ನು ಉತ್ಪತ್ತಿ ಮಾಡುತ್ತದೆ. ಬಾಳಂತಿಯರಿಗೆ, ಈ ಗಿಡಮೂಲಿಕೆ ಬಿಟ್ಟರೆ ಇಷ್ಟು ಒಳ್ಳೆಯ ಮತ್ತು ಆರೋಗ್ಯಕ್ಕೆ ಪೂರಕವಾದ ಇನ್ನೊಂದು ಔಷಧ ಸಿಗುವುದಿಲ್ಲ. ಇನ್ನು ಈ ಸೊಪ್ಪನ್ನು ದನಗಳಿಗೂ ಕೊಡಲಾಗುತ್ತದೆ. ಅಲ್ಲದೆ ಇದನ್ನು ತರಕಾರಿಯಾಗಿಯೂ ಬಳಸಲಾಗುತ್ತದೆ. ಏಕೆಂದರೆ ಇದು ತಾಯಿಯ ಎದೆ ಹಾಲು ಹೆಚ್ಚಿಸುವುದರೊಂದಿಗೆ, ದೇಹಕ್ಕೆ ಶಕ್ತಿಯನ್ನು ಕೊಡುತ್ತದೆ. ಇದೆಲ್ಲದರ ಜೊತೆಗೆ ಈ ಗಿಡವನ್ನು ವಿಶೇಷವಾಗಿ ಮಹಿಳೆಯರ ಆರೋಗ್ಯಕ್ಕೆ, ಗರ್ಭಕೋಶದ ಸಮಸ್ಯೆಗೆ, ಮಕ್ಕಳಾಗದಿರುವವರಿಗೆ ಮತ್ತು ಮಕ್ಕಳು ಆದ ಮೇಲೆ ಬಾಳಂತಿಯರಿಗೂ ಇದರ ಚೂರ್ಣವನ್ನು ತಿನ್ನಲು ಕೊಡುತ್ತಾರೆ.

ಇದನ್ನೂ ಓದಿ: ಪುರುಷರಲ್ಲಿ ರಕ್ತಹೀನತೆ ಸಮಸ್ಯೆ ಹೆಚ್ಚಾಗಲು ಕಾರಣವೇನು? ಇಲ್ಲಿದೆ ಸರಳ ಸಲಹೆ

ವೀಡಿಯೋ ಇಲ್ಲಿದೆ:

ವೀರ್ಯದ ಗುಣಮಟ್ಟ ಹೆಚ್ಚಿಸುವ ಮೂಲಿಕೆ

ದೈಹಿಕ ಮತ್ತು ಮಾನಸಿಕ ಸೇರಿದಂತೆ ಲೈಂಗಿಕ ಸಮಸ್ಯೆಗಳಿಗೂ ಕೂಡ ಶತಾವರಿ ಗಿಡಮೂಲಿಕೆಗಳಿಂದ ತಯಾರಿಸಿದ ಔಷಧ ನೀಡುವ ರೂಢಿ ಇದೆ. ಋತುಬಂಧ, ಹಾರ್ಮೋನುಗಳು, ಫಲವತ್ತತೆ ಮುಂತಾದ ಮಹಿಳೆಯರ ಸಮಸ್ಯೆಗಳಿಗೆ ಇದು ಪರಿಣಾಮಕಾರಿ ಚಿಕಿತ್ಸೆ ನೀಡಬಲ್ಲದು. ಜೊತೆಗೆ ಈ ಮೂಲಿಕೆಯು ವೀರ್ಯದ ಗುಣಮಟ್ಟದಿಂದ ಫಲವತ್ತತೆ ಹೆಚ್ಚಿಸುವವರೆಗೆ ಪುರುಷರಲ್ಲಿ ಅನೇಕ ಲೈಂಗಿಕ ಸಮಸ್ಯೆಗಳಿಗೆ ಚಿಕಿತ್ಸೆ ನೀಡುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ