ಈ ಒಂದು ಮಸಾಲೆ ಪದಾರ್ಥಕ್ಕೆ ನಿಮ್ಮನ್ನು ಮಾನಸಿಕ ಖಿನ್ನತೆಯಿಂದ ಹೊರತರುವ ಶಕ್ತಿ ಇದೆ

ಭಾರತೀಯರಾದ ನಾವು ಏಲಕ್ಕಿಯನ್ನು ಯಥೇಚ್ಛವಾಗಿ ಬಳಕೆ ಮಾಡುತ್ತೇವೆ. ಸಿಹಿತಿಂಡಿಗಳಿಂದ ಹಿಡಿದು ಚಹಾದ ವರೆಗೆ ಪ್ರತಿಯೊಂದು ಆಹಾರದಲ್ಲಿಯೂ ಬಳಸುತ್ತೇವೆ. ಮಾತ್ರವಲ್ಲ ಏಲಕ್ಕಿಯನ್ನು ಮೌತ್ ಫ್ರೆಶ್ನರ್ ಆಗಿಯೂ ಬಳಕೆ ಮಾಡುತ್ತೇವೆ. ಆದರೆ ನಿಮಗೆ ಗೊತ್ತಾ? ಇದು ಕೇವಲ ಇಷ್ಟಕ್ಕೆ ಸೀಮಿತವಾಗಿಲ್ಲ. ಇದರಿಂದ ನೀವು ಊಹಿಸಲೂ ಸಾಧ್ಯವಾಗದಷ್ಟು ಆರೋಗ್ಯ ಪ್ರಯೋಜನಳು ಇವೆ. ಹಾಗಾದರೆ ಇದರಿಂದ ಸಿಗುವ ಪ್ರಯೋಜನಗಳೇನು? ಯಾಕೆ ಆರೋಗ್ಯಕ್ಕೆ ಒಳ್ಳೆಯದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಈ ಒಂದು ಮಸಾಲೆ ಪದಾರ್ಥಕ್ಕೆ ನಿಮ್ಮನ್ನು ಮಾನಸಿಕ ಖಿನ್ನತೆಯಿಂದ ಹೊರತರುವ ಶಕ್ತಿ ಇದೆ
Benefits Of Cardamom

Updated on: Aug 25, 2025 | 5:44 PM

ಸಾಮಾನ್ಯವಾಗಿ ಏಲಕ್ಕಿಯನ್ನು ಪ್ರತಿನಿತ್ಯ ಒಂದಲ್ಲಾ ಒಂದು ರೀತಿಯಲ್ಲಿ ಬಳಕೆ ಮಾಡುತ್ತೇವೆ. ಸಿಹಿತಿಂಡಿಗಳಿಂದ ಹಿಡಿದು ಚಹಾದ ವರೆಗೆ ಪ್ರತಿಯೊಂದು ಆಹಾರದಲ್ಲಿಯೂ ಬಳಸುತ್ತೇವೆ. ಖಾದ್ಯಗಳ ಸುವಾಸನೆ ಹೆಚ್ಚಿಸುವುದಕ್ಕಾಗಿ ಈ ಏಲಕ್ಕಿಗಳನ್ನು ಹೆಚ್ಚಾಗಿ ಉಪಯೋಗ ಮಾಡುತ್ತೇವೆ. ಮಾತ್ರವಲ್ಲ ಊಟ ಮಾಡಿದ ನಂತರ, ಏಲಕ್ಕಿಯನ್ನು ಮೌತ್ ಫ್ರೆಶ್ನರ್ ಆಗಿಯೂ ಬಳಸುತ್ತೇವೆ. ಆದರೆ ಏಲಕ್ಕಿ ಉಪಯೋಗ ಇಷ್ಟಕ್ಕೆ ಮಾತ್ರ ಸೀಮಿತವಾಗಿಲ್ಲ. ಇದರಿಂದ ನಮ್ಮ ಆರೋಗ್ಯಕ್ಕೂ ಹಲವು ರೀತಿಯ ಪ್ರಯೋಜನಗಳಿವೆ. ಇದು ನಿಮಗೆ ಆಶ್ಚರ್ಯ ಹುಟ್ಟಿಸಬಹುದು ಆದರೆ ಇದು ಸತ್ಯ. ನಿರ್ದಿಷ್ಟವಾಗಿ ಹೇಳುವುದಾದರೆ, ಏಲಕ್ಕಿ (Cardamom) ನಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವುದರಿಂದ ಹಿಡಿದು ಖಿನ್ನತೆಯಿಂದ ದೂರ ಮಾಡುವವ ವರೆಗೆ ಪ್ರತಿಯೊಂದು ಆರೋಗ್ಯ (Health) ಸಮಸ್ಯೆಗೂ ಇದು ರಾಮಬಾಣವಾಗಿ ಕೆಲಸ ಮಾಡುತ್ತದೆ. ಹಾಗಾದರೆ ಇದರಿಂದ ಸಿಗುವ ಪ್ರಯೋಜನಗಳೇನು? ಯಾಕೆ ಆರೋಗ್ಯಕ್ಕೆ ಒಳ್ಳೆಯದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಜೀರ್ಣಾಂಗ ವ್ಯವಸ್ಥೆ ಆರೋಗ್ಯವಾಗಿರುತ್ತೆ

ಪ್ರತಿನಿತ್ಯ ಏಲಕ್ಕಿಯನ್ನು ಅಗಿದು ತಿನ್ನುವ ಅಭ್ಯಾಸ ನಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ಮಾತ್ರವಲ್ಲ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಮುಕ್ತಿ ನೀಡುತ್ತದೆ. ಅನಿಲ ಮತ್ತು ಉಬ್ಬುವುದು ಕ್ರಮೇಣ ಕಡಿಮೆಯಾಗುತ್ತದೆ.

ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ

ಏಲಕ್ಕಿಯಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದ್ದು ಇದು ದೇಹದಲ್ಲಿ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಏಲಕ್ಕಿಯನ್ನು ಅಗಿದು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವು ನಿಯಂತ್ರಣದಲ್ಲಿರುತ್ತದೆ. ಮಾತ್ರವಲ್ಲ ಏಲಕ್ಕಿ ಸೇವನೆ ನಿಮ್ಮ ಮನಸ್ಸು ಮತ್ತು ದೇಹವನ್ನು ಸಂತೋಷವಾಗಿಡಲು ಸಹಾಯ ಮಾಡುತ್ತದೆ. .

ಆತಂಕ, ಖಿನ್ನತೆ ದೂರವಾಗುತ್ತದೆ

ಏಲಕ್ಕಿಯನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಆತಂಕ ಮತ್ತು ಖಿನ್ನತೆಯಿಂದ ಪರಿಹಾರ ಸಿಗುತ್ತದೆ. ಏಲಕ್ಕಿಯನ್ನು ನೀರಿನಲ್ಲಿ ಕುದಿಸಿ ಕುಡಿಯುವುದು ಕೂಡ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿಯಾಗಿದೆ. ಇದರ ಸುವಾಸನೆಯು ಮಾನಸಿಕ ಆರೋಗ್ಯವನ್ನು ಹೆಚ್ಚಿಸುತ್ತದೆ.

ಚರ್ಮಕ್ಕೆ ಹೊಳಪನ್ನು ನೀಡುತ್ತದೆ

ಏಲಕ್ಕಿಯಲ್ಲಿರುವ ಉತ್ಕರ್ಷಣ ನಿರೋಧಕ ಗುಣಗಳು ಚರ್ಮವನ್ನು ಸ್ವತಂತ್ರ ರಾಡಿಕಲ್‌ಗಳಿಂದ ಉಂಟಾಗುವ ಹಾನಿಯಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಇದು ದೇಹದಿಂದ ವಿಷವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ ಮತ್ತು ಚರ್ಮಕ್ಕೆ ಹೊಳಪನ್ನು ನೀಡುತ್ತದೆ.

ಇದನ್ನೂ ಓದಿ: ಲಿವರ್ ಡಿಟಾಕ್ಸ್ ಆಗಬೇಕು ಅಂದ್ರೆ ಈ ಒಂದು ತರಕಾರಿಯನ್ನು ವಾರಕ್ಕೊಮ್ಮೆ ಸೇವನೆ ಮಾಡಿ

ಉಸಿರಾಟದ ಕಾಯಿಲೆಗಳಿಂದ ಪರಿಹಾರ ನೀಡುತ್ತದೆ

ಮಳೆಗಾಲದಲ್ಲಿ ಕೆಮ್ಮು ಮತ್ತು ಗಂಟಲು ನೋವಿನಿಂದ ಬಳಲುತ್ತಿರುವವರು ಏಲಕ್ಕಿ ಚಹಾ ಕುಡಿಯುವುದು ಒಳ್ಳೆಯದು. ಏಲಕ್ಕಿಯಲ್ಲಿ ಉರಿಯೂತ ನಿವಾರಕ ಗುಣಗಳು ಹೇರಳವಾಗಿವೆ. ಇದು ಗಂಟಲಿಗೆ ಸಂಬಂಧಿಸಿದ ಎಲ್ಲಾ ರೀತಿಯ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಇದಲ್ಲದೆ, ಇದು ಅಸ್ತಮಾ ಮತ್ತು ಬ್ರಾಂಕೈಟಿಸ್‌ನಂತಹ ಉಸಿರಾಟದ ಕಾಯಿಲೆಗಳಿಂದ ಪರಿಹಾರ ನೀಡುತ್ತದೆ.

ಮುಟ್ಟಿನ ನೋವನ್ನು ನಿವಾರಿಸುತ್ತದೆ

ಮುಟ್ಟಿನ ಸಮಯದಲ್ಲಿ ತೀವ್ರ ಹೊಟ್ಟೆ ನೋವು ಮತ್ತು ಸ್ನಾಯು ಸೆಳೆತದಿಂದ ಬಳಲುತ್ತಿರುವವರಿಗೆ, ಏಲಕ್ಕಿ ನೀರು ಕುಡಿಯುವುದು ತುಂಬಾ ಪ್ರಯೋಜನಕಾರಿ. ಏಲಕ್ಕಿ ನೀರು ಹೇರಳವಾದ ಆಂಟಿಸ್ಪಾಸ್ಮೊಡಿಕ್ ಗುಣಗಳನ್ನು ಹೊಂದಿದೆ. ಇದು ಹಾರ್ಮೋನುಗಳ ಅಸಮತೋಲನದಿಂದ ಪರಿಹಾರವನ್ನು ನೀಡುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ