AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾಸ್ಟ್ರಿಕ್, ಅಸಿಡಿಟಿಯಿಂದ ದಿನಪೂರ್ತಿ ಹಿಂಸೆ ಪಡುತ್ತಿದ್ದೀರಾ? ಹಾಗಿದ್ರೆ ತಪ್ಪದೆ ಈ ಅಭ್ಯಾಸಗಳನ್ನು ಮಾಡಿ

ಕೆಲವರು ದಿನವಿಡೀ ಗ್ಯಾಸ್ ಮತ್ತು ಅಸಿಡಿಟಿ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಇದರಿಂದಾಗಿ, ಅವರು ತಮ್ಮ ಕೆಲಸದ ಕಡೆ ಸರಿಯಾಗಿ ಗಮನಹರಿಸಲು ಸಾಧ್ಯವಾಗುವುದಿಲ್ಲ ಜೊತೆಗೆ ಬೇರೆ ಆಹಾರವನ್ನು ತೃಪ್ತಿಯಿಂದ ತಿನ್ನಲು ಸಹ ಆಗುವುದಿಲ್ಲ. ಈ ಸಮಸ್ಯೆ ದೊಡ್ಡದಲ್ಲ ಎನಿಸಬಹುದು ಆದರೆ ಇದು ನೀಡುವ ಹಿಂಸೆ ಅನುಭವಿಸಿದವನಿಗೆ ಗೊತ್ತು. ಹಾಗಾಗಿ ಈ ಸಮಸ್ಯೆಗೆ ಮಾತ್ರೆಗಳ ಮೊರೆ ಹೋಗುವುದಕ್ಕಿಂತ ಆಯುರ್ವೇದ ತಜ್ಞರು ನೀಡಿದ ಕೆಲವು ಸಲಹೆಗಳನ್ನು ಅನುಸರಿಸುವುದು ಬಹಳ ಒಳ್ಳೆಯದು.

ಗ್ಯಾಸ್ಟ್ರಿಕ್, ಅಸಿಡಿಟಿಯಿಂದ ದಿನಪೂರ್ತಿ ಹಿಂಸೆ ಪಡುತ್ತಿದ್ದೀರಾ? ಹಾಗಿದ್ರೆ ತಪ್ಪದೆ ಈ ಅಭ್ಯಾಸಗಳನ್ನು ಮಾಡಿ
Bloating And AcidityImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: May 20, 2026 | 8:59 PM

Share

ಇತ್ತೀಚಿನ ದಿನಗಳಲ್ಲಿ ಅಸಮರ್ಪಕ ಆಹಾರ ಪದ್ಧತಿ ಮತ್ತು ಅಸ್ತವ್ಯಸ್ತ ಜೀವನಶೈಲಿಯಿಂದ ಗ್ಯಾಸ್ಟ್ರಿಕ್, ಅಸಿಡಿಟಿ (Acidity), ಹೊಟ್ಟೆ ಉಬ್ಬರ ಮತ್ತು ಅಜೀರ್ಣ ಸಮಸ್ಯೆಗಳು ಸಾಮಾನ್ಯವಾಗಿವೆ. ಬೆಳಿಗ್ಗೆ ಎದ್ದ ಕ್ಷಣದಿಂದಲೇ ಹೊಟ್ಟೆಯಲ್ಲಿ ಉರಿಯೂತ, ಗ್ಯಾಸ್ ಮತ್ತು ಹೊಟ್ಟೆ ಭಾರವಾದ ಅನುಭವದಿಂದ ಹಲವರು ದಿನವಿಡೀ ಅಸ್ವಸ್ಥರಾಗಿರುತ್ತಾರೆ. ಇದರಿಂದ ಕೆಲಸದಲ್ಲಿ ಏಕಾಗ್ರತೆ ಕಡಿಮೆಯಾಗುವುದು ಮಾತ್ರವಲ್ಲದೆ, ಆಹಾರ ಸೇವಿಸುವ ಆಸಕ್ತಿಯೂ ಕುಗ್ಗುತ್ತದೆ. ಆಯುರ್ವೇದ ತಜ್ಞೆ ಡಾ. ಚಂಚಲ್ ಶರ್ಮಾ ಅವರು ಹೇಳುವ ಪ್ರಕಾರ, ಬೆಳಿಗ್ಗೆ ಕೆಲವು ಸರಳ ಆರೋಗ್ಯಕರ ಅಭ್ಯಾಸಗಳನ್ನು ಪಾಲಿಸಿದರೆ ಗ್ಯಾಸ್ಟ್ರಿಕ್ ಮತ್ತು ಆಸಿಡಿಟಿ ಸಮಸ್ಯೆಯನ್ನು ನಿಯಂತ್ರಿಸಬಹುದು. ವಿಶೇಷವಾಗಿ ದಿನದ ಆರಂಭವೇ ಆರೋಗ್ಯಕರವಾಗಿದ್ದರೆ ಜೀರ್ಣಕ್ರಿಯೆಯೂ ಉತ್ತಮವಾಗಿರುತ್ತದೆ. ಹಾಗಾದರೆ ಹಾಗಾದರೆ ಗ್ಯಾಸ್, ಅಸಿಡಿಟಿಯಿಂದ ಮುಕ್ತಿ ಪಡೆಯಲು ಬೆಳಿಗ್ಗೆ ಎದ್ದು ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಬೆಳಿಗ್ಗೆ ಎದ್ದು ಏನು ಮಾಡಬೇಕು?

ಬೆಚ್ಚಗಿನ ನೀರು ಕುಡಿಯಿರಿ

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಗ್ಲಾಸ್ ಬೆಚ್ಚಗಿನ ನೀರು ಕುಡಿಯುವುದರಿಂದ ದೇಹದಲ್ಲಿನ ವಿಷಕಾರಿ ಅಂಶಗಳು ಹೊರಹೋಗಲು ಸಹಾಯವಾಗುತ್ತದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸಿ ಅಸಿಡಿಟಿ ಕಡಿಮೆ ಮಾಡಲು ಸಹಕಾರಿಯಾಗುತ್ತದೆ.

ಯೋಗಾಭ್ಯಾಸ ಮಾಡಿ

ವಜ್ರಾಸನ, ಪವನಮುಖ್ತಾಸನ ಮತ್ತು ಬಾಲಾಸನದಂತಹ ಯೋಗಾಸನಗಳು ಹೊಟ್ಟೆಯ ಗ್ಯಾಸ್ ಸಮಸ್ಯೆಯನ್ನು ಕಡಿಮೆ ಮಾಡುತ್ತವೆ. ಜೊತೆಗೆ ದೇಹ ಮತ್ತು ಮನಸ್ಸಿಗೂ ಶಾಂತಿ ನೀಡುತ್ತವೆ.

ಇದನ್ನೂ ಓದಿ: ಊಟ ಕಡಿಮೆ ಮಾಡಿದ್ರೂ ಅಸಿಡಿಟಿಯಾಗುತ್ತಾ? ಇದಕ್ಕೆ ಕಾರಣ ಏನ್ ಗೊತ್ತಾ?

ಹರ್ಬಲ್ ಪಾನೀಯಗಳನ್ನು ಸೇವಿಸಿ

ಜೀರಿಗೆ ನೀರು, ಅಜ್ವೈನ್ ಚಹಾ ಮತ್ತು ಧನಿಯಾ ನೀರಿನಂತಹ ಹರ್ಬಲ್ ಡ್ರಿಂಕ್ಸ್ ಜೀರ್ಣಕ್ರಿಯೆಗೆ ತುಂಬಾ ಉಪಯುಕ್ತ. ಇವು ಹೊಟ್ಟೆಯ ಉರಿಯೂತ ಮತ್ತು ಗ್ಯಾಸ್ಟ್ರಿಕ್ ಸಮಸ್ಯೆಗಳನ್ನು ತಗ್ಗಿಸಲು ಸಹಾಯ ಮಾಡುತ್ತವೆ. ಖಾಲಿ ಹೊಟ್ಟೆಯಲ್ಲಿ ಚಹಾ ಅಥವಾ ಕಾಫಿ ಸೇವಿಸುವುದನ್ನು ತಪ್ಪಿಸುವುದು ಉತ್ತಮ.

ಜೀರ್ಣಕ್ರಿಯೆ ಸುಧಾರಿಸಲು ಏನು ಮಾಡಬೇಕು?

ತಜ್ಞರ ಪ್ರಕಾರ, ನಿಯಮಿತ ಸಮಯಕ್ಕೆ ಸಮತೋಲನಯುತ ಆಹಾರ ಸೇವನೆ, ಸಾಕಷ್ಟು ನೀರು ಕುಡಿಯುವುದು, ದಿನನಿತ್ಯ ವ್ಯಾಯಾಮ ಮತ್ತು 8 ಗಂಟೆಗಳ ಸಮರ್ಪಕ ನಿದ್ರೆ ಜೀರ್ಣಕ್ರಿಯೆ ಉತ್ತಮವಾಗಿಡಲು ಮುಖ್ಯವಾಗಿದೆ. ಗ್ಯಾಸ್ಟ್ರಿಕ್ ಅಥವಾ ಆಸಿಡಿಟಿ ಸಮಸ್ಯೆ ನಿರಂತರವಾಗಿ ಕಾಣಿಸಿಕೊಂಡರೆ ಸ್ವಯಂ ಚಿಕಿತ್ಸೆ ಮಾಡದೆ ವೈದ್ಯರ ಸಲಹೆ ಪಡೆಯುವುದು ಅಗತ್ಯ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!