ಆಯುರ್ವೇದವು ಪ್ರಾಚೀನ ಭಾರತೀಯ ವೈದ್ಯಕೀಯ ಪದ್ಧತಿಯಾಗಿದೆ. ಇದು ನೈಸರ್ಗಿಕ ಔಷಧ ಪದ್ಧತಿಯಾಗಿದ್ದು, ಇದು ಆರೋಗ್ಯ ಮತ್ತು ಮನಸ್ಸು, ದೇಹ ಮತ್ತು ಆತ್ಮದ ನಡುವಿನ ಸೂಕ್ಷ್ಮ ಸಮತೋಲನವನ್ನು ಅವಲಂಬಿಸಿರುತ್ತದೆ. ಆಯುರ್ವೇದದಲ್ಲಿ ಜೀರ್ಣಾಂಗ ವ್ಯವಸ್ಥೆಯನ್ನು ಅಗ್ನಿ ಎಂದು ಕರೆಯಲಾಗುತ್ತದೆ. ಅಗ್ನಿ ಬಲವಾದ ಮತ್ತು ಸಮತೋಲಿತವಾಗಿದ್ದಾಗ ಇದು ಅತ್ಯುತ್ತಮ ಜೀರ್ಣಕ್ರಿಯೆ ಮತ್ತು ಪೋಷಕಾಂಶಗಳ ಹೀರಿಕೊಳ್ಳುವಿಕೆಗೆ ಕಾರಣವಾಗುತ್ತದೆ. ಜೊತೆಗೆ ಬಲವಾದ ರೋಗನಿರೋಧಕ ಶಕ್ತಿಯನ್ನು ನಿರ್ಮಿಸಲು ಮತ್ತು ವೇಗವಾಗಿ ಅಂಗಾಂಶ ದುರಸ್ತಿಗೆ ಸಹಾಯ ಮಾಡುತ್ತದೆ. ಮತ್ತೊಂದೆಡೆ ಅಗ್ನಿಯು ದುರ್ಬಲವಾದಾಗ ಅಥವಾ ಅಸಮತೋಲನಗೊಂಡಾಗ, ಇದು ಮಲಬದ್ಧತೆ, ಅತಿಸಾರ, ಹೊಟ್ಟೆ ಉಬ್ಬುವುದು ಮತ್ತು ಕರುಳಿನ ಜೀರ್ಣಕಾರಿ ಸಮಸ್ಯೆಗಳಿಗೆ ಕಾರಣವಾಗಬಹುದು. ಆಯುರ್ವೇದದಲ್ಲಿ ಹಲವಾರು ನೈಸರ್ಗಿಕ ಪರಿಹಾರಗಳು ಅತ್ಯುತ್ತಮ ಕರುಳಿನ ಆರೋಗ್ಯವನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.
ಆರೋಗ್ಯ ತಜ್ಞ ಮತ್ತು ರಾಯಲ್ ಬೀ ನ್ಯಾಚುರಲ್ ಪ್ರಾಡಕ್ಟ್ ಸಂಸ್ಥಾಪಕ ಆಂಜನೇಯ್ ಅಗರ್ವಾಲ್ ಅವರು ಅತ್ಯುತ್ತಮ ಕರುಳಿನ ಆರೋಗ್ಯಕ್ಕಾಗಿ ಕೆಲವು ಅತ್ಯುತ್ತಮ ಆಯುರ್ವೇದ ಚಿಕಿತ್ಸೆಯ ಬಗ್ಗೆ ತಿಳಿಸಿಕೊಟ್ಟಿದ್ದಾರೆ.
ತ್ರಿಫಲ: ತ್ರಿಫಲವು ನೆಲ್ಲಿಕಾಯಿ, ಅಳಲೆಕಾಯಿ, ಬಿಭಿತಕಿ ಈ ಮೂರು ಹಣ್ಣುಗಳನ್ನು ಸಂಯೋಜಿಸುತ್ತದೆ. ಆರೋಗ್ಯಕರ ಜೀರ್ಣಕ್ರಿಯೆಗೆ ಇದು ಅತ್ಯಂತ ಜನಪ್ರಿಯ ಆಯುರ್ವೇದ ಪರಿಹಾರಗಳಲ್ಲಿ ಒಂದಾಗಿದೆ. ತ್ರಿಫಲವು ಕರುಳಿನ ಚಲನೆಯನ್ನು ಸುಧಾರಿಸುತ್ತದೆ ಮತ್ತು ಮಲಬದ್ಧತೆಯನ್ನು ನಿವಾರಿಸುತ್ತದೆ. ಇದು ದೇಹದಲ್ಲಿ ನೀರಿನಾಂಶವನ್ನು ಹೆಚ್ಚಿಸಲು ಮತ್ತು ಒಟ್ಟಾರೆ ಜೀರ್ಣಕ್ರಿಯೆಯ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಇಂಗು: ಹಿಂಗ್(ಇಂಗು) ಮತ್ತು ಓಂಕಾಳಿನಂತಹ ಮಸಾಲೆಗಳನ್ನು ಅಡುಗೆಯಲ್ಲಿ ಸೇರಿಸುವ ಮೂಲಕ ಹೊಟ್ಟೆ ಉಬ್ಬುವಿಕೆಯನ್ನು ತಡೆಗಟ್ಟಲು ಮತ್ತು ಜೀರ್ಣಕ್ರಿಯೆಯನ್ನು ವರ್ಧಿಸಲು ಸಹಾಯ ಮಾಡುತ್ತದೆ. ಮತ್ತು ಇದು ಚಯಾಪಚಯ ದರವನ್ನು ಹೆಚ್ಚಿಸುತ್ತದೆ.
ಸೈಲಿಯಮ್ ಹೊಟ್ಟು: ಸೈಲಿಯಮ್ (ಇಸಾಬ್ಗೋಲ್) ಹೊಟ್ಟು ನೈಸರ್ಗಿಕ ಫೈಬರ್ ಆಗಿದ್ದು, ಇದನ್ನು ಸಾಮಾನ್ಯವಾಗಿ ವಿರೇಚಕವಾಗಿ ಬಳಸಲಾಗುತ್ತದೆ. ಇದು ಮಲವನ್ನು ಮೃದುಗೊಳಿಸಲು ಮತ್ತು ಸಾಮಾನ್ಯ ಕರುಳಿನ ಚಲನೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ಸೈಲಿಯಮ್ ಹೊಟ್ಟು ಜೀರ್ಣಾಂಗದಲ್ಲೊ ಉರಿಯೂತವನ್ನು ಕಡಿಮೆ ಮಾಡಲು ಮತ್ತು ಒಟ್ಟಾರೆ ಕರುಳಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಇದನ್ನೂ ಓದಿ: Glowing Skin: ಹೊಳೆಯುವ ತ್ವಚೆಗಾಗಿ 5 ಆಯುರ್ವೇದ ಸಲಹೆಗಳು
ಶುಂಠಿ: ಶುಂಠಿಯು ನೈಸರ್ಗಿಕ ಉರಿಯೂತ ನಿವಾರಕ ಮತ್ತು ಜೀರ್ಣಕಾರಿ ಸಹಾಯಕವಾಗಿದೆ. ಇದು ಜೀರ್ಣಕ್ರಿಯೆಯನ್ನು ಉತ್ತೇಜಿಸಲು ಮತ್ತು ಮಲಬದ್ಧತೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ. ಮತ್ತು ಹೊಟ್ಟೆಯುಬ್ಬರವನ್ನು ಕಡಿಮೆ ಮಾಡುತ್ತದೆ.
ಸೋಂಪುಕಾಳು: ಸೋಂಪುಕಾಳು ನೈಸರ್ಗಿಕ ಕಾರ್ಮಿನೇಟಿವ್ ಆಗಿದ್ದು, ಅದು ಜೀರ್ಣಾಂಗ ವ್ಯವಸ್ಥೆಯಲ್ಲಿ ಗ್ಯಾಸ್ ಮತ್ತು ಉಬ್ಬುವಿಕೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸಲು ಮತ್ತು ಮಲಬದ್ಧತೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ.
ಅಲೋವೆರಾ: ಅಲೋವೆರಾ ನೈಸರ್ಗಿಕ ವಿರೇಚಕವಾಗಿದ್ದು, ಅದು ಮಲವನ್ನು ಮೃದುಗೊಳಿಸಲು ಮತ್ತು ನಿಯಮಿತವಾಗಿ ಕರುಳಿನ ಚಲನೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ಇದು ಜೀರ್ಣಾಂಗದಲ್ಲಿ ಉರಿಯೂತವನ್ನು ಕಡಿಮೆ ಮಾಡಲು ಮತ್ತು ಒಟ್ಟಾರೆ ಕರುಳಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಹರಳೆಣ್ಣೆ: ಹರಳೆಣ್ಣೆ ಶಕ್ತಿಯುತ ವಿರೇಚಕವಾಗಿದ್ದು, ಅದು ಕರುಳಿನ ಚಲನೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ಇದು ಜೀರ್ಣಾಂಗ ವ್ಯವಸ್ಥೆಯಲ್ಲಿ ಉರಿಯೂತವನ್ನು ಕಡಿಮೆ ಮಾಡಲು ಮತ್ತು ಒಟ್ಟಾರೆ ಕರುಳಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಅಳಲೆಕಾಯಿ: ಅಳಲೆಕಾಯಿ ಒಂದು ಆಯುರ್ವೇದ ಮೂಲಿಕೆಯಾಗಿದ್ದು, ಅದು ಜೀರ್ಣಕ್ರಿಯೆಯನ್ನು ಸುಧಾರಿಸಲು ಮತ್ತು ಮಲಬದ್ಧತೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ. ಇದು ದೇಹವನ್ನು ಹೈಡ್ರೇಟಿಕರಿಸಲು ಮತ್ತು ಒಟ್ಟಾರೆ ಕರುಳಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ತುಪ್ಪ: ತುಪ್ಪವು ಆರೋಗ್ಯಕರ ಕೊಬ್ಬುಗಳಲ್ಲಿ ಸಮೃದ್ಧವಾಗಿದ್ದು, ಇದು ಜೀರ್ಣಾಂಗ ವ್ಯವಸ್ಥೆಯನ್ನು ನಯಗೊಳಿಸಲು ಮತ್ತು ನಿಯಮಿತ ಕರುಳಿನ ಚಲನೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ತುಪ್ಪವು ಜೀರ್ಣಾಂಗದಲ್ಲಿ ಉರಿಯೂತವನ್ನು ಕಡಿಮೆ ಮಾಡಲು ಮತ್ತು ಒಟ್ಟಾರೆ ಕರುಳಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
Published On - 12:58 pm, Sat, 15 April 23