Ayushman Bharat Diwas 2024: ಬಡಜನರ ಆಯಸ್ಸು ಹೆಚ್ಚಿಸಿದ ಆಯುಷ್ಮಾನ್‌ ಭಾರತ್ ಯೋಜನೆ

| Updated By: ಅಕ್ಷಯ್​ ಪಲ್ಲಮಜಲು​​

Updated on: Apr 30, 2024 | 9:24 AM

ಆಯುಷ್ಮಾನ್‌ ಭಾರತ ಯೋಜನೆಯ ಬಗ್ಗೆ ಎಲ್ಲರಿಗೂ ತಿಳಿದಿದೆ. ಈ ಯೋಜನೆಯಿಂದ ಹಲವಾರು ಬಡ ಹಾಗೂ ಮಧ್ಯಮವರ್ಗದ ಜನರು ಆರೋಗ್ಯ ವಿಮೆ ಸೇರಿದಂತೆ ಇನ್ನಿತ್ತರ ಸೌಲಭ್ಯಗಳನ್ನು ಪಡೆದುಕೊಂಡಿದ್ದಾರೆ. ಹಾಗಾದ್ರೆ ಏಪ್ರಿಲ್ 30 ರಂದು ಆಯುಷ್ಮಾನ್ ಭಾರತ್ ದಿವಸ್ ಇತಿಹಾಸ ಹಾಗೂ ಮಹತ್ವದ ಬಗೆಗಿನ ಮಾಹಿತಿಯು ಇಲ್ಲಿದೆ.

Ayushman Bharat Diwas 2024: ಬಡಜನರ ಆಯಸ್ಸು ಹೆಚ್ಚಿಸಿದ ಆಯುಷ್ಮಾನ್‌ ಭಾರತ್ ಯೋಜನೆ
ಸಾಂದರ್ಭಿಕ ಚಿತ್ರ
Follow us on

ಭಾರತದಲ್ಲಿರುವ ಲಕ್ಷಾಂತರ ಜನರಿಗೆ ಆರೋಗ್ಯ ಸೇವೆಯನ್ನು ಸುಲಭವಾಗಿ ದೊರೆಯುವಂತೆ ಮಾಡುವ ಗುರಿಯನ್ನು ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯು ಹೊಂದಿದೆ. ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಆರೋಗ್ಯ ಸೇವೆಗಳನ್ನು ನೀಡುವ ಮೂಲಕ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವುದಾಗಿದೆ. ಭಾರತೀಯರಿಗೆ ಉತ್ತಮ ಆರೋಗ್ಯ ಸೌಲಭ್ಯಗಳನ್ನು ಒದಗಿಸುವಲ್ಲಿ ಆಯುಷ್ಮಾನ್‌ ಭಾರತ ಯೋಜನೆಯನ್ನು ಜಾರಿಗೆ ತರಲಾಗಿದೆ.

ಆಯುಷ್ಮಾನ್ ಭಾರತ್ ದಿವಸ್ ಇತಿಹಾಸ

ಆಯುಷ್ಮಾನ್‌ ಭಾರತ ಯೋಜನೆಯು ಆರೋಗ್ಯ ಯೋಜನೆಯಲ್ಲಿ ಒಂದಾಗಿದೆ. ಸೆಪ್ಟೆಂಬರ್ 23, 2018 ರಂದು ಸರ್ಕಾರವು ಆಯುಷ್ಮಾನ್ ಭಾರತ್ ಪ್ರಧಾನ್ ಮಂತ್ರಿ ಜನ ಆರೋಗ್ಯ ಯೋಜನೆಯನ್ನು ಪ್ರಾರಂಭಿಸಿದರು. ಇದರ ಸವಿನೆನಪಿಗಾಗಿ ಪ್ರತಿ ವರ್ಷ ಏಪ್ರಿಲ್ 30 ರಂದು ಆಯುಷ್ಮಾನ್ ಭಾರತ್ ದಿವಸ್ ಅನ್ನು ಆಚರಿಸಲಾಗುತ್ತಿದೆ.

ಆಯುಷ್ಮಾನ್ ಭಾರತ್ ದಿವಸ್ ಮಹತ್ವ

ಆಯುಷ್ಮಾನ್ ಭಾರತ್ ಈ ಯೋಜನೆಯ ಉನ್ನತೀಕರಿಸುವ ಉದ್ದೇಶದಿಂದ ಪ್ರತಿ ವರ್ಷ ಏಪ್ರಿಲ್ ತಿಂಗಳ ಕೊನೆಯ ದಿನದಂದು ಆಯುಷ್ಮಾನ್ ಭಾರತ್ ದಿವಸ್ ಎಂದು ಆಚರಿಸಲಾಗುತ್ತಿದೆ. ಈ ಆರೋಗ್ಯ ಯೋಜನೆಗಳ ಮೂಲಕ ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬಗಳಿಗೆ ಆರ್ಥಿಕ ರಕ್ಷಣೆಯನ್ನು ನೀಡುವ ಉದ್ದೇಶವನ್ನು ಹೊಂದಿದೆ.

ಇದನ್ನೂ ಓದಿ: ಕೋವಿಶೀಲ್ಡ್​​ ಕೊರೊನಾ ಲಸಿಕೆಯಿಂದ ಅಡ್ಡಪರಿಣಾಮವಿದೆ ಎಂದು ಒಪ್ಪಿಕೊಂಡ ಅಸ್ಟ್ರಾಜೆನೆಕಾ, ಟಿಟಿಎಸ್​ಗೂ ಕಾರಣವಾಗಬಹುದು

ಏನಿದು ಈ ಆಯುಷ್ಮಾನ್ ಭಾರತ್ ಯೋಜನೆ?

ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (PMJAY) ಎಂದು ಕರೆಯಲ್ಪಡುವ ಆಯುಷ್ಮಾನ್ ಭಾರತ್ ಯೋಜನೆಯು ಭಾರತ ಸರ್ಕಾರವು ಪರಿಚಯಿಸಿದ ಆರೋಗ್ಯ ಯೋಜನೆಯಾಗಿದೆ. ದುರಂತದ ಆರೋಗ್ಯ ವೆಚ್ಚಗಳ ವಿರುದ್ಧ ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬಗಳಿಗೆ ಆರ್ಥಿಕ ರಕ್ಷಣೆ ನೀಡುವುದಾಗಿದೆ. ಈ ಯೋಜನೆಯಲ್ಲಿ ಅರ್ಹ ಫಲಾನುಭವಿಗಳು ನಿಗದಿತ ಆಸ್ಪತ್ರೆಗಳಲ್ಲಿ ನಿರ್ದಿಷ್ಟ ಮೊತ್ತದವರೆಗೆ ನಗದು ರಹಿತ ಆರೋಗ್ಯ ಸೇವೆಗಳನ್ನು ಪಡೆಯಲು ಅರ್ಹರಾಗಿರುತ್ತಾರೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ