AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗು ಹುಟ್ಟುವ ಮುನ್ನವೇ ಶ್ರವಣ ಸಾಮರ್ಥ್ಯ ಪತ್ತೆಹಚ್ಚಲು ಏಮ್ಸ್‌ನ ಹೊಸ ಪ್ರಯತ್ನ!

ಶಿಶುಗಳ ಜನನದ ನಂತರ ಶ್ರವಣ ತಪಾಸಣೆ ಮಾಡುವುದು ಬಹಳ ಮುಖ್ಯವಾಗುತ್ತದೆ. ಆದರೆ ಕೆಲವು ಕಡೆ ಅದು ನಡೆಯದೇ ಇರುವುದರಿಂದ, ಮಗುವಿಗೆ ಸರಿಯಾಗಿ ಕೇಳುತ್ತಿದೆಯೇ ಇಲ್ಲವೇ ಎಂಬುದು ಸಮಯಕ್ಕೆ ಸರಿಯಾಗಿ ಪತ್ತೆಯಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ದೆಹಲಿ ಏಮ್ಸ್ ಆಸ್ಪತ್ರೆಯವರು ಗರ್ಭದಲ್ಲಿಯೇ ಮಗುವಿನ ಶ್ರವಣ ಸಾಮರ್ಥ್ಯವನ್ನು ಗುರುತಿಸುವ ದಿಶೆಯಲ್ಲಿ ಮಹತ್ವದ ಪ್ರಯತ್ನ ಆರಂಭಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಕೆಲವು ಪರೀಕ್ಷೆಗಳು ಲಭ್ಯವಿದ್ದು, ಅವುಗಳ ಮೂಲಕ ಶ್ರವಣ ಶಕ್ತಿ ಎಷ್ಟಿದೆ ಎಂಬುದನ್ನು ತಿಳಿದುಕೊಳ್ಳಬಹುದಾಗಿದೆ. ಹಾಗಾದರೆ ಈ ರೀತಿಯ ತಪಾಸಣೆ ಏಕೆ ಅಗತ್ಯ, ಶ್ರವಣ ಸಮಸ್ಯೆಗೆ ಪರಿಹಾರವೇನು ಎಂಬುದರ ಬಗ್ಗೆ ತಿಳಿದುಕೊಳ್ಳಿ.

ಮಗು ಹುಟ್ಟುವ ಮುನ್ನವೇ ಶ್ರವಣ ಸಾಮರ್ಥ್ಯ ಪತ್ತೆಹಚ್ಚಲು ಏಮ್ಸ್‌ನ ಹೊಸ ಪ್ರಯತ್ನ!
Detecting Hearing Loss In Fetal StageImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Mar 03, 2026 | 6:45 PM

Share

ಸಾಮಾನ್ಯವಾಗಿ ಕೆಲವು ಆಸ್ಪತ್ರೆಗಳಲ್ಲಿ ಶಿಶುಗಳ ಜನನದ ನಂತರ ಶ್ರವಣ ತಪಾಸಣೆ (ನಿಯೋನೇಟಲ್ ಹಿಯರಿಂಗ್ ಸ್ಕ್ರೀನಿಂಗ್) ನಡೆಯದೇ ಇರುವುದರಿಂದ, ಮಗುವಿಗೆ ಸರಿಯಾಗಿ ಕೇಳುತ್ತಿದೆಯೇ ಇಲ್ಲವೇ ಎಂಬುದು ಸಮಯಕ್ಕೆ ಸರಿಯಾಗಿ ಪತ್ತೆಯಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ದೆಹಲಿ ಏಮ್ಸ್ (AIIMS) ಆಸ್ಪತ್ರೆಯವರು ಗರ್ಭದಲ್ಲಿಯೇ ಮಗುವಿನ ಶ್ರವಣ ಸಾಮರ್ಥ್ಯವನ್ನು ಗುರುತಿಸುವ ದಿಶೆಯಲ್ಲಿ ಮಹತ್ವದ ಪ್ರಯತ್ನ ಆರಂಭಿಸಿದ್ದಾರೆ. ಏಮ್ಸ್‌ನ ಡಾ. ಕಪಿಲ್ ಸಿಕ್ಕಾ ಈ ಬಗ್ಗೆ ಕೆಲವು ಮಾಹಿತಿ ಹಂಚಿಕೊಂಡಿದ್ದು ಗರ್ಭದಲ್ಲಿರುವ ಮಗುವಿನ ಕೇಳಿಸಿಕೊಳ್ಳುವ ಸಾಮರ್ಥ್ಯವನ್ನು ಜನನಕ್ಕೂ ಮುನ್ನವೇ ಪರೀಕ್ಷಿಸುವ ವಿಧಾನಗಳ ಕುರಿತು ಸಂಶೋಧನೆ ನಡೆಯುತ್ತಿದೆ. ಇದಕ್ಕೆ ಸಂಬಂಧಿಸಿದ ಕೆಲವು ಪರೀಕ್ಷೆಗಳು ಲಭ್ಯವಿದ್ದು, ಅವುಗಳ ಮೂಲಕ ಶ್ರವಣ ಶಕ್ತಿ ಎಷ್ಟಿದೆ ಅಥವಾ ಕಿವಿ (Ear) ಎಷ್ಟು ಕೇಳಿಸುತ್ತದೆ ಎಂಬುದನ್ನು ತಿಳಿದುಕೊಳ್ಳಬಹುದು ಎಂದು ಹೇಳಿದ್ದಾರೆ. ಹಾಗಾದರೆ ಈ ರೀತಿಯ ತಪಾಸಣೆ ಏಕೆ ಅಗತ್ಯ, ಶ್ರವಣ ಸಮಸ್ಯೆಗೆ ಪರಿಹಾರವೇನು ಎಂಬುದರ ಬಗ್ಗೆ ತಿಳಿದುಕೊಳ್ಳಿ.

ಡಾ. ಸಿಕ್ಕಾ ಅವರ ಪ್ರಕಾರ, ಮಗುವಿನ ಜನನದ ಮೊದಲ ಆರು ತಿಂಗಳೊಳಗೆ ಶ್ರವಣ ಸಮಸ್ಯೆಯನ್ನು ಗುರುತಿಸಿದರೆ ಚಿಕಿತ್ಸೆ ಉತ್ತಮ ಫಲಿತಾಂಶ ನೀಡುತ್ತದೆ ಮತ್ತು ಭಾಷಾ ಅಭಿವೃದ್ಧಿಯ ಮೇಲಿನ ಪರಿಣಾಮವೂ ಕಡಿಮೆಯಾಗುತ್ತದೆ. ಆದರೆ ಹಲವು ಸಂದರ್ಭಗಳಲ್ಲಿ ಜನನದ 24 ರಿಂದ 48 ಗಂಟೆಗಳ ಒಳಗೆ ನವಜಾತ ಶಿಶುಗಳ ಶ್ರವಣ ತಪಾಸಣೆ ನಡೆಯುವುದಿಲ್ಲ. ಕೆಲವು ಕಡೆಗಳಲ್ಲಿ ಯುನಿವರ್ಸಲ್ ನವಜಾತ ಹಿಯರಿಂಗ್ ಸ್ಕ್ರೀನಿಂಗ್ ನಡೆಸಲಾಗುತ್ತಿದೆ. ಆದರೆ ಈ ಪರೀಕ್ಷೆ ನಡೆಯದಿದ್ದರೆ, ಮಗು ಒಂದು ವರ್ಷಕ್ಕೆ ಸಮೀಪಿಸಿ ಧ್ವನಿಗೆ ಪ್ರತಿಕ್ರಿಯೆ ನೀಡದಿದ್ದಾಗ ಮಾತ್ರ ಪೋಷಕರು ಸಮಸ್ಯೆಯನ್ನು ಅರಿಯುತ್ತಾರೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಕಿವಿ ಕೇಳಿಸದಿರುವುದು ಕೇವಲ ವೃದ್ಧಾಪ್ಯದ ಸಮಸ್ಯೆಯಲ್ಲ; ಚಿಕ್ಕ ವಯಸ್ಸಿನಲ್ಲಿ ಹೀಗಾಗುವುದಕ್ಕೆ ಕಾರಣವೇನು?

ಶ್ರವಣ ಸಮಸ್ಯೆಗೆ ಪರಿಹಾರವೇನು?

ಡಾ. ಕಪಿಲ್ ಸಿಕ್ಕಾ ಹೇಳುವ ಪ್ರಕಾರ, ತೀವ್ರ ಶ್ರವಣ ಹಾನಿ ಕಂಡುಬಂದಲ್ಲಿ ಶಿಶುಗಳಿಗೆ ಕಾಕ್ಲಿಯರ್ ಇಂಪ್ಲಾಂಟ್ ಪರಿಣಾಮಕಾರಿ ಚಿಕಿತ್ಸೆಯಿದೆ. ಅಲ್ಲದೆ, ಆಡಿಯಟರಿ ಬ್ರೈನ್‌ಸ್ಟೆಮ್ ಇಂಪ್ಲಾಂಟ್ ಮೊದಲಾದ ನವೀನ ತಂತ್ರಜ್ಞಾನಗಳು, ಗಂಭೀರ ನರ ಸಂಬಂಧಿತ ಶ್ರವಣ ದೋಷಗಳಲ್ಲಿಯೂ ಕೇಳುವ ಸಾಮರ್ಥ್ಯವನ್ನು ಸುಧಾರಿಸಲು ನೆರವಾಗುತ್ತಿವೆ. ಏಮ್ಸ್ ದೆಹಲಿಯ ಈ ಹೊಸ ಪ್ರಯತ್ನವು ಭವಿಷ್ಯದಲ್ಲಿ ಜನನಕ್ಕೂ ಮುನ್ನವೇ ಶ್ರವಣ ಸಮಸ್ಯೆಗಳನ್ನು ಪತ್ತೆಹಚ್ಚಲು ಅನುವು ಮಾಡಿಕೊಡುವುದರಿಂದ ಈ ಸಮಸ್ಯೆಗಳು ಕಂಡುಬರುವ ಪ್ರಮಾಣ ಕಡಿಮೆಯಾಗುತ್ತದೆ. ಅಷ್ಟೇಅಲ್ಲ, ಇದು ಮಕ್ಕಳ ಭಾಷಾ ಹಾಗೂ ಸಮಗ್ರ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದಂತಾಗುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್