AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿದಿನ ಮಾಡುವ ಈ 3 ತಪ್ಪುಗಳು ಬೆನ್ನುಮೂಳೆಯ ಆರೋಗ್ಯಕ್ಕೆ ಅಪಾಯ! ಇಂದೇ ಬದಲಾಯಿಸಿಕೊಳ್ಳಿ

ಮೊಬೈಲ್ ಬಳಕೆಯ ವೇಳೆ ತಲೆ ಬಾಗಿಸುವುದು, ದೀರ್ಘಕಾಲ ಒಂದೇ ಭಂಗಿಯಲ್ಲಿ ಕುಳಿತುಕೊಳ್ಳುವುದು ಮತ್ತು ಸರಿಯಾದ ಭಂಗಿಯಲ್ಲಿ ನಿದ್ರೆ ಮಾಡದಿರುವುದು ಬೆನ್ನುಮೂಳೆಯ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಇವುಗಳಿಂದ ಕುತ್ತಿಗೆ ನೋವು, ಬೆನ್ನುನೋವು ಮತ್ತು ಸ್ನಾಯುಗಳ ಬಿಗಿತ ಉಂಟಾಗುವ ಸಾಧ್ಯತೆಯಿದೆ. ಸರಿಯಾದ ಭಂಗಿ, ನಿಯಮಿತ ವಿರಾಮ, ವ್ಯಾಯಾಮ ಮತ್ತು ಸೂಕ್ತ ದಿಂಬಿನ ಬಳಕೆ ಸಹಾಯಕವಾಗುತ್ತವೆ. ನೋವು ಮುಂದುವರಿದರೆ ವೈದ್ಯರನ್ನು ಸಂಪರ್ಕಿಸುವುದು ಅಗತ್ಯ. ತೀವ್ರ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ.

ಪ್ರತಿದಿನ ಮಾಡುವ ಈ 3 ತಪ್ಪುಗಳು ಬೆನ್ನುಮೂಳೆಯ ಆರೋಗ್ಯಕ್ಕೆ ಅಪಾಯ! ಇಂದೇ ಬದಲಾಯಿಸಿಕೊಳ್ಳಿ
Spine HealthImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Oct 24, 2026 | 6:39 PM

Share

ಪ್ರತಿದಿನ ನಾವು ಮಾಡುವ ಕೆಲವು ಸಾಮಾನ್ಯ ಅಭ್ಯಾಸಗಳು ಬೆನ್ನುಮೂಳೆಯ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಗಂಟೆಗಟ್ಟಲೆ ಮೊಬೈಲ್ ನೋಡುವುದು, ಒಂದೇ ಭಂಗಿಯಲ್ಲಿ ಕುಳಿತು ಕೆಲಸ ಮಾಡುವುದು ಮತ್ತು ಸರಿಯಾದ ಭಂಗಿಯಲ್ಲಿ ನಿದ್ರೆ ಮಾಡದಿರುವುದು ಕುತ್ತಿಗೆ ನೋವು, ಬೆನ್ನುನೋವು ಹಾಗೂ ಸ್ನಾಯುಗಳ ಬಿಗಿತಕ್ಕೆ ಕಾರಣವಾಗಬಹುದು. ಇಂತಹ ಸಮಸ್ಯೆಗಳನ್ನು ಆರಂಭದಲ್ಲೇ ಗುರುತಿಸಿ, ದೈನಂದಿನ ಅಭ್ಯಾಸಗಳಲ್ಲಿ ಬದಲಾವಣೆ ಮಾಡಿಕೊಳ್ಳುವುದು ಮುಖ್ಯವಾಗಿದೆ. ಹಾಗಾದರೆ ಯಾವ ರೀತಿಯ ಸಲಹೆಗಳನ್ನು ಪಾಲಿಸಬೇಕು ಮತ್ತು ಇದರಿಂದ ಸಿಗುವ ಪ್ರಯೋಜನವೇನು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಗಂಟೆಗಟ್ಟಲೆ ಮೊಬೈಲ್ ನೋಡುವ ಅಭ್ಯಾಸ

ಇಂದಿನ ದಿನಗಳಲ್ಲಿ ಸ್ಮಾರ್ಟ್‌ಫೋನ್ ಬಳಕೆ ಹೆಚ್ಚಾಗಿದೆ. ಸಾಮಾಜಿಕ ಜಾಲತಾಣಗಳನ್ನು ವೀಕ್ಷಿಸುವಾಗ ಅಥವಾ ಸಂದೇಶಗಳನ್ನು ಓದುವಾಗ ಅನೇಕರು ತಲೆಯನ್ನು ಕೆಳಕ್ಕೆ ಬಾಗಿಸಿಕೊಂಡಿರುತ್ತಾರೆ. ಈ ಭಂಗಿಯಲ್ಲಿ ದೀರ್ಘಕಾಲ ಇರುವುದರಿಂದ ಕುತ್ತಿಗೆಯ ಸ್ನಾಯುಗಳ ಮೇಲೆ ಒತ್ತಡ ಹೆಚ್ಚಾಗಿ ನೋವು ಮತ್ತು ಆಯಾಸ ಉಂಟಾಗಬಹುದು. ಇದಕ್ಕೆ ಪರಿಹಾರ, ಮೊಬೈಲ್ ಅನ್ನು ಕಣ್ಣಿನ ಮಟ್ಟಕ್ಕೆ ಹತ್ತಿರವಾಗಿ ಹಿಡಿಯಿರಿ. ಕುತ್ತಿಗೆಯನ್ನು ಹೆಚ್ಚು ಬಾಗಿಸದೆ ನೇರವಾಗಿರಿಸಿ. ಆಗಾಗ ವಿರಾಮ ತೆಗೆದುಕೊಂಡು ಕುತ್ತಿಗೆ ಮತ್ತು ಭುಜಗಳನ್ನು ನಿಧಾನವಾಗಿ ಚಲಿಸುವ ಅಭ್ಯಾಸ ಮಾಡಿಕೊಳ್ಳಿ.

ದೀರ್ಘಕಾಲ ಒಂದೇ ಕಡೆ ಕುಳಿತುಕೊಳ್ಳುವುದು

ಕಚೇರಿಯಲ್ಲಿ ಕೆಲಸ ಮಾಡುವವರು ಅಥವಾ ಕಂಪ್ಯೂಟರ್ ಮುಂದೆ ಹೆಚ್ಚು ಸಮಯ ಕಳೆಯುವವರು ಕುಳಿತುಕೊಳ್ಳುವ ಭಂಗಿಯ ಬಗ್ಗೆ ಗಮನ ಹರಿಸಬೇಕು. ಬೆನ್ನು ಬಾಗಿಸಿಕೊಂಡು ಕುಳಿತುಕೊಳ್ಳುವುದು, ನಡುಭಾಗಕ್ಕೆ ಸರಿಯಾದ ಆಧಾರ ಇಲ್ಲದಿರುವುದು ಮತ್ತು ಚಲನೆಯಿಲ್ಲದೆ ಗಂಟೆಗಟ್ಟಲೆ ಕಳೆಯುವುದು ಬೆನ್ನುನೋವು ಹಾಗೂ ಸ್ನಾಯುಗಳ ಬಿಗಿತಕ್ಕೆ ಕಾರಣವಾಗಬಹುದು. ಕುಳಿತುಕೊಳ್ಳುವಾಗ ಪಾದಗಳನ್ನು ನೆಲದ ಮೇಲೆ ಇರಿಸಿ. ಕಂಪ್ಯೂಟರ್ ಪರದೆಯನ್ನು ಕಣ್ಣಿನ ಮಟ್ಟದಲ್ಲಿ ಹೊಂದಿಸಿ. ಪ್ರತಿ 30ರಿಂದ 60 ನಿಮಿಷಗಳಿಗೊಮ್ಮೆ ಎದ್ದು ಸ್ವಲ್ಪ ನಡೆಯಿರಿ. ಕೆಲಸದ ಮಧ್ಯೆ ಸಣ್ಣ ವಿರಾಮಗಳನ್ನು ತೆಗೆದುಕೊಳ್ಳುವುದು ಒಳ್ಳೆಯದು.

ಇದನ್ನೂ ಓದಿ: ಮಕ್ಕಳ ಮೂಳೆಗಳ ಆರೋಗ್ಯದ ಬಗ್ಗೆ ಪೋಷಕರು ತಿಳಿಯಲೇಬೇಕಾದ ಪ್ರಮುಖ ವಿಚಾರಗಳಿವು

ಸರಿಯಾದ ಭಂಗಿಯಲ್ಲಿ ನಿದ್ರೆ ಮಾಡದಿರುವುದು

ನಿದ್ರೆಯ ಸಮಯದಲ್ಲಿ ಕುತ್ತಿಗೆ ಮತ್ತು ಬೆನ್ನಿಗೆ ಸೂಕ್ತವಾದ ಆಧಾರ ಸಿಗುವುದು ಮುಖ್ಯ. ಬೋರಲಾಗಿ ಮಲಗುವುದರಿಂದ ಕುತ್ತಿಗೆಯನ್ನು ಒಂದು ಬದಿಗೆ ತಿರುಗಿಸಬೇಕಾಗಬಹುದು. ಇದರಿಂದ ಕೆಲವರಿಗೆ ಕುತ್ತಿಗೆಯಲ್ಲಿ ಅಸ್ವಸ್ಥತೆ ಉಂಟಾಗಬಹುದು. ಪಕ್ಕಕ್ಕೆ ಮಲಗುವವರು ತಲೆ ಮತ್ತು ಬೆನ್ನುಮೂಳೆ ಒಂದೇ ಸರಳ ರೇಖೆಯಲ್ಲಿರುವಂತೆ ದಿಂಬನ್ನು ಬಳಸಬಹುದು. ಮೊಣಕಾಲುಗಳ ನಡುವೆ ದಿಂಬು ಇಡುವುದೂ ಆರಾಮಕ್ಕೆ ಸಹಾಯ ಮಾಡಬಹುದು. ಬೆನ್ನಿನ ಮೇಲೆ ಮಲಗುವವರು ಮೊಣಕಾಲುಗಳ ಕೆಳಗೆ ದಿಂಬು ಇಟ್ಟುಕೊಳ್ಳಬಹುದು.

ಬೆನ್ನುಮೂಳೆಯ ಆರೋಗ್ಯಕ್ಕೆ ಅಗತ್ಯ ಮುನ್ನೆಚ್ಚರಿಕೆಗಳು

ನಿಯಮಿತ ವ್ಯಾಯಾಮ, ಸರಿಯಾದ ದೇಹದ ತೂಕ, ಉತ್ತಮ ಕುಳಿತುಕೊಳ್ಳುವ ಭಂಗಿ ಮತ್ತು ಸಾಕಷ್ಟು ವಿಶ್ರಾಂತಿ ಬೆನ್ನುಮೂಳೆಯ ಆರೋಗ್ಯಕ್ಕೆ ಸಹಾಯಕವಾಗುತ್ತವೆ. ಬೆನ್ನುನೋವು ದೀರ್ಘಕಾಲ ಮುಂದುವರಿದರೆ ವೈದ್ಯರನ್ನು ಸಂಪರ್ಕಿಸಬೇಕು. ಕೈ ಅಥವಾ ಕಾಲುಗಳಲ್ಲಿ ಹಠಾತ್ ಬಲಹೀನತೆ, ನಡೆಯಲು ತೊಂದರೆ ಅಥವಾ ಮೂತ್ರ-ಮಲದ ನಿಯಂತ್ರಣ ಕಳೆದುಕೊಳ್ಳುವ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯಕೀಯ ನೆರವು ಪಡೆಯಬೇಕು. ಅಪೋಲೊ ಅಡ್ಲಕ್ಸ್ ಆಸ್ಪತ್ರೆಯ ನರರೋಗ ತಜ್ಞರಾದ ಡಾ. ಜೋಸೆಫ್ ಶಿಬು ಅವರ ಸಲಹೆಯಂತೆ, ದೈನಂದಿನ ಅಭ್ಯಾಸಗಳಲ್ಲಿ ಸಣ್ಣ ಬದಲಾವಣೆಗಳನ್ನು ಮಾಡಿಕೊಳ್ಳುವುದು ಬೆನ್ನುಮೂಳೆಯ ಆರೋಗ್ಯವನ್ನು ಕಾಪಾಡಿಕೊಳ್ಳಲು ನೆರವಾಗಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ
40 ದಿನ ನಂತರ ಪತ್ತೆಯಾದ ಕೆಆರ್‌ಐಡಿಎಲ್ ಎಇಇ ಪರ್ವೀಜ್​ಗೆ ಈಗ ಪೊಲೀಸರ ಗ್ರಿಲ್
40 ದಿನ ನಂತರ ಪತ್ತೆಯಾದ ಕೆಆರ್‌ಐಡಿಎಲ್ ಎಇಇ ಪರ್ವೀಜ್​ಗೆ ಈಗ ಪೊಲೀಸರ ಗ್ರಿಲ್
ಡೈಮಂಡ್ ಟಾಸ್ಕ್​ ವಿಷಯದಲ್ಲಿ ಪಂಚಾಯ್ತಿ ಮಾಡಲು ಬಂದ ಸುದೀಪ್
ಡೈಮಂಡ್ ಟಾಸ್ಕ್​ ವಿಷಯದಲ್ಲಿ ಪಂಚಾಯ್ತಿ ಮಾಡಲು ಬಂದ ಸುದೀಪ್
ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಐಷಾರಾಮಿ ಪ್ರವಾಸಿ ರೈಲಿನಲ್ಲಿ ಪ್ರಯಾಣಿಸಿ ಖುಷಿ ಹಂಚಿಕೊಂಡ ಸಿಎಂ ಡಿಕೆಶಿ !
ಐಷಾರಾಮಿ ಪ್ರವಾಸಿ ರೈಲಿನಲ್ಲಿ ಪ್ರಯಾಣಿಸಿ ಖುಷಿ ಹಂಚಿಕೊಂಡ ಸಿಎಂ ಡಿಕೆಶಿ !
ಮಾವಿನಕೆರೆ ರಂಗನಾಥಸ್ವಾಮಿಗೆ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಮಾವಿನಕೆರೆ ರಂಗನಾಥಸ್ವಾಮಿಗೆ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ