AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bamboo Shoots Benefits: ಹಾವು, ಚೇಳು ಕಚ್ಚಿದಾಗ ಕಳಲೆಯ ರಸವೇ ಉತ್ತಮ ಮದ್ದು, ಇದರಲ್ಲಿದೆ ಹಲವು ಆರೋಗ್ಯ ಭಾಗ್ಯ

ಕಳಲೆಯ ಹೆಸರು ಕೇಳಿದಾಗಲೇ ಮೂಗು ಮುರಿಯುತ್ತಾರೆ. ಆದರೆ ಇವುಗಳಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ಫೈಬರ್ ಮತ್ತು ಖನಿಜಗಳು ಸಮೃದ್ಧವಾಗಿದೆ. ಅದೂ ಅಲ್ಲದೆ ಇವುಗಳಲ್ಲಿ ತುಂಬಾ ಕಡಿಮೆ ಪ್ರಮಾಣದಲ್ಲಿ ಕೊಬ್ಬುಗಳಿದೆ, ಜೊತೆಗೆ ಇದು ಮಧುಮೇಹಿಗಳಿಗೂ ಕೂಡ ಸೂಕ್ತವಾದ ಆಹಾರವಾಗಿದೆ. ಇವುಗಳು ನಮ್ಮ ದೇಶದಲ್ಲಿ ಹೆಚ್ಚಾಗಿ ಕರ್ನಾಟಕ, ಅಸ್ಸಾಂ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಜಾರ್ಖಂಡ್, ಒಡಿಶಾದಂತಹ ರಾಜ್ಯಗಳಲ್ಲಿ ಅದರಲ್ಲಿಯೂ ಮಳೆಗಾಲದಲ್ಲಿ ಹೆಚ್ಚು ಬಳಕೆ ಮಾಡಲಾಗುತ್ತದೆ. ಹಾಗಾದರೆ ಇದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು? ಇಲ್ಲಿದೆ ಮಾಹಿತಿ.

Bamboo Shoots Benefits: ಹಾವು, ಚೇಳು ಕಚ್ಚಿದಾಗ ಕಳಲೆಯ ರಸವೇ ಉತ್ತಮ ಮದ್ದು, ಇದರಲ್ಲಿದೆ ಹಲವು ಆರೋಗ್ಯ ಭಾಗ್ಯ
ಕಳಲೆ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on:Jul 05, 2024 | 2:27 PM

Share

ಬಿದಿರಿನ ಚಿಗುರು ಅಥವಾ ಕಳಲೆ ಎಂಬ ಹೆಸರನ್ನು ಕೇಳಿರಬಹುದು. ಕೆಲವರು ಇದರ ಹೆಸರು ಕೇಳಿದಾಗಲೇ ಮೂಗು ಮುರಿಯುತ್ತಾರೆ. ಆದರೆ ಇವುಗಳಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ಫೈಬರ್ ಮತ್ತು ಖನಿಜಗಳು ಸಮೃದ್ಧವಾಗಿದೆ. ಅದೂ ಅಲ್ಲದೆ ಇವುಗಳಲ್ಲಿ ತುಂಬಾ ಕಡಿಮೆ ಪ್ರಮಾಣದಲ್ಲಿ ಕೊಬ್ಬುಗಳಿದೆ, ಜೊತೆಗೆ ಇದು ಮಧುಮೇಹಿಗಳಿಗೂ ಕೂಡ ಸೂಕ್ತವಾದ ಆಹಾರವಾಗಿದೆ. ಇವುಗಳು ನಮ್ಮ ದೇಶದಲ್ಲಿ ಹೆಚ್ಚಾಗಿ ಕರ್ನಾಟಕ, ಅಸ್ಸಾಂ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಜಾರ್ಖಂಡ್, ಒಡಿಶಾದಂತಹ ರಾಜ್ಯಗಳಲ್ಲಿ ಅದರಲ್ಲಿಯೂ ಮಳೆಗಾಲದಲ್ಲಿ ಹೆಚ್ಚು ಬಳಕೆ ಮಾಡಲಾಗುತ್ತದೆ. ಹಾಗಾದರೆ ಇದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು? ಇಲ್ಲಿದೆ ಮಾಹಿತಿ.

ಕಳಲೆಯನ್ನು ಸಾಂಪ್ರದಾಯಿಕ ಔಷಧಗಳಲ್ಲಿ ಬಳಕೆ ಮಾಡಲಾಗುತ್ತದೆ. ಇದರ ಚಿಕಿತ್ಸಕ ಗುಣಗಳಿಂದಾಗಿ ಇದನ್ನು ಬೇರೆ ಬೇರೆ ದೇಶಗಳಲ್ಲಿಯೂ ಉಪಯೋಗಿಸಲಾಗುತ್ತದೆ. ಇದರಲ್ಲಿ ನ್ಯೂಟ್ರಾಸ್ಯುಟಿಕಲ್ಸ್ ಎಂದು ಕರೆಯಲ್ಪಡುವ ಫೈಬರ್ ಇದ್ದು, ಕರುಳಿನ ಸಮಸ್ಯೆಗಳನ್ನು ನಿಭಾಯಿಸಲು ಸಹಾಯ ಮಾಡುತ್ತದೆ. ಕಳಲೆಗೆ ಸಂಬಂಧ ಪಟ್ಟಂತೆ ಹಲವಾರು ಅಧ್ಯಯನಗಳು ನಡೆದಿದ್ದು ಇದರಲ್ಲಿ ಕ್ಯಾನ್ಸರ್ ವಿರೋಧಿ ಗುಣಗಳಿವೆ, ಅಲ್ಲದೆ ವೈರಾಣು ವಿರೋಧಿ ಗುಣಗಳನ್ನು ಹೊಂದಿದೆ ಎಂದು ಸಾಬೀತಾಗಿದೆ. ವಿಟಮಿನ್ ಎ, ವಿಟಮಿನ್ ಇ, ವಿಟಮಿನ್ ಬಿ 6, ಥಯಾಮಿನ್, ರಿಬೋಫ್ಲಾವಿನ್, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಪೊಟ್ಯಾಸಿಯಮ್, ಫಾಸ್ಫರಸ್, ತಾಮ್ರ, ಸತು, ಮ್ಯಾಂಗನೀಸ್ ಮತ್ತು ಇತರ ಪ್ರಮುಖ ಖನಿಜಗಳ ಲಾಭಗಳನ್ನು ಪಡೆಯಲು ಕಳಲೆ ಸೇವನೆ ಮಾಡಬಹುದಾಗಿದೆ.

ಹೃದಯ ಸಂಬಂಧಿ ಕಾಯಿಲೆಗಳಿಂದ ರಕ್ಷಣೆ ನೀಡುತ್ತದೆ

ಹೃದ್ರೋಗ ತಜ್ಞರ ಪ್ರಕಾರ ಪ್ರತಿದಿನ ಕಳಲೆ ಸೆವನೆ ಮಾಡುವುದು ಉತ್ತಮ. ಏಕೆಂದರೆ ಇದು ವಿವಿಧ ರೀತಿಯ ಹೃದಯ ಸಂಬಂಧಿ ಕಾಯಿಲೆಗಳು ಬರದಂತೆ ರಕ್ಷಿಸುತ್ತದೆ. ಮಳೆಗಾಲದಲ್ಲಿ ಮತ್ತು ಚಳಿಗಾಲದದಲ್ಲಿ ಇದರ ಸೇವನೆ ಮಾಡುವುದರಿಂದ ವೈರಲ್ ಮತ್ತು ಬ್ಯಾಕ್ಟೀರಿಯಾದ ಸೋಂಕಿನಿಂದ ದೂರವಿರಬಹುದು.

ಇದನ್ನೂ ಓದಿ: ಮಕ್ಕಳಲ್ಲಿ ದಿನೇ ದಿನೇ ಹೆಚ್ಚುತ್ತಿದೆ ಡೆಂಗ್ಯೂ, ಪೋಷಕರೇ ಎಚ್ಚರ ವಹಿಸಿ ಎಂದ ಡಾ.ಸುಧೀರ್

ವಿಷ ಜೀವಿಗಳು ಕಚ್ಚಿದರೆ ಇದರ ರಸವೇ ಮದ್ದು

ಈ ಕಳಲೆಯಿಂದ ಹೊರತೆಗೆಯಲಾದ ರಸವು ದೇಹದಿಂದ ವಿಷವನ್ನು ಕೂಡ ತೆಗೆಯುತ್ತದೆ, ವಿಶೇಷವಾಗಿ ಹಾವು, ಚೇಳು ಮತ್ತು ಇತರ ವಿಷ ಜೀವಿಗಳು ಕಚ್ಚಿದಾಗ ಈ ರಸವನ್ನು ಸೇವನೆ ಮಾಡಿದರೆ ಅಥವಾ ಕಚ್ಚಿರುವ ಜಾಗಕ್ಕೆ ಹಚ್ಚಿದರೆ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ.

ಹೆರಿಗೆಗೆ ಒಳ್ಳೆಯದು

ಕಳಲೆಯನ್ನು ಸಾಂಪ್ರದಾಯಿಕ ಚೈನೀಸ್ ಔಷಧಿಗಳಲ್ಲಿ ಬಳಕೆ ಮಾಡಲಾಗುತ್ತದೆ, ಅದರಲ್ಲಿಯೂ ಗರ್ಭಿಣಿಯರಿಗೆ ಒಂಬತ್ತನೇ ತಿಂಗಳುಗಳಲ್ಲಿ ಬಿದಿರಿನ ಖಾದ್ಯಗಳನ್ನು ಮಿತವಾಗಿ ಸೇವನೆ ಮಾಡಲು ಸಲಹೆ ನೀಡಲಾಗುತ್ತದೆ ಏಕೆಂದರೆ ಇದು ಹೆರಿಗೆಗೆ ಅನುಕೂಲವಾಗುವಂತೆ ಮಾಡುತ್ತದೆ ಎನ್ನಲಾಗುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:58 pm, Thu, 4 July 24

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ