Banana Flower: ಈ ರೋಗಗಳು ಬರದಂತೆ ತಡೆಯಲು ಬಾಳೆ ಹೂವನ್ನು ಸೇವನೆ ಮಾಡಿ

ಬಾಳೆ ಹೂವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದರಲ್ಲಿ ವಿಟಮಿನ್ ಸಿ, ಎ, ಇ, ಪೊಟ್ಯಾಸಿಯಮ್ ಮತ್ತು ಫೈಬರ್ ನಂತಹ ವಿವಿಧ ಪೋಷಕಾಂಶಗಳಿವೆ, ಇದು ಆರೋಗ್ಯಕ್ಕೆ ತುಂಬಾ ಉಪಯುಕ್ತವಾಗಿದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರಿಂದ ವಿವಿಧ ರೀತಿಯ ದೈಹಿಕ ಸಮಸ್ಯೆಗಳನ್ನು ಪರಿಹರಿಸುವ ವರೆಗೆ, ಇವು ಅನೇಕ ರೀತಿಯಲ್ಲಿ ಆರೋಗ್ಯವನ್ನು ಕಾಪಾಡುತ್ತದೆ. ಹಾಗಾದರೆ ಇದನ್ನು ಸೇವನೆ ಮಾಡುವುದರಿಂದ ಸಿಗುವ ಉಪಯೋಗಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

Banana Flower: ಈ ರೋಗಗಳು ಬರದಂತೆ ತಡೆಯಲು ಬಾಳೆ ಹೂವನ್ನು ಸೇವನೆ ಮಾಡಿ
ಬಾಳೆ ಹೂವು
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 06, 2024 | 4:58 PM

ಬಾಳೆಹಣ್ಣು ಅನೇಕರಿಗೆ ಪ್ರೀಯವಾದ ಹಣ್ಣು. ಇದು ರುಚಿ ಜೊತೆಗೆ ಪೌಷ್ಟಿಕಾಂಶ ಭರಿತವಾಗಿರುತ್ತದೆ. ಬಾಳೆಹಣ್ಣು ಮಾತ್ರವಲ್ಲ ಬಾಳೆ ಗಿಡದ ಪ್ರತಿಯೊಂದು ಭಾಗವೂ ಒಂದೊಂದು ರೀತಿಯಲ್ಲಿ ಉಪಯೋಗಕ್ಕೆ ಬರುತ್ತವೆ. ಬಾಳೆಹಣ್ಣಿನ ಮೊದಲು ಬರುವ ಬಾಳೆ ಹೂವು ಸಹ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಬಾಳೆ ಹೂವಿನಲ್ಲಿ ವಿಟಮಿನ್ ಸಿ, ಎ, ಇ, ಪೊಟ್ಯಾಸಿಯಮ್ ಮತ್ತು ಫೈಬರ್ ನಂತಹ ವಿವಿಧ ಪೋಷಕಾಂಶಗಳಿವೆ, ಇದು ಆರೋಗ್ಯಕ್ಕೆ ತುಂಬಾ ಉಪಯುಕ್ತವಾಗಿದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರಿಂದ ಹಿಡಿದು ವಿವಿಧ ದೈಹಿಕ ಸಮಸ್ಯೆಗಳನ್ನು ಪರಿಹರಿಸುವ ವರೆಗೆ, ಇವು ಅನೇಕ ರೀತಿಯಲ್ಲಿ ಆರೋಗ್ಯವನ್ನು ಕಾಪಾಡುತ್ತದೆ. ಹಾಗಾದರೆ ಇದನ್ನು ಸೇವನೆ ಮಾಡುವುದರಿಂದ ಸಿಗುವ ಉಪಯೋಗಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

  • ಬಾಳೆ ಹೂವಿನಲ್ಲಿ ಪೊಟ್ಯಾಸಿಯಮ್ ಸಮೃದ್ಧವಾಗಿದೆ. ಇದರಿಂದಾಗಿ ಇದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಜೊತೆಗೆ ಹೃದಯದ ಸಮಸ್ಯೆಗಳನ್ನು ಕೂಡ ನಿವಾರಣೆ ಮಾಡುತ್ತದೆ.
  • ಬಾಳೆ ಹೂವಿನಲ್ಲಿ ಕಬ್ಬಿಣದ ಅಂಶ ಹೇರಳವಾಗಿದೆ. ಈ ಬಾಳೆ ಹೂವು ಹಿಮೋಗ್ಲೋಬಿನ್ ಹೆಚ್ಚಾಗಲು ಸಹಾಯ ಮಾಡುತ್ತದೆ. ನೀವು ರಕ್ತಹೀನತೆ ಸಮಸ್ಯೆಯಿಂದ ಬಳಲುತ್ತಿದ್ದರೆ ನಿಮ್ಮ ದೈನಂದಿನ ಆಹಾರದಲ್ಲಿ ಬಾಳೆ ಹೂವನ್ನು ಸೇರಿಸಿಕೊಳ್ಳಬಹುದು.
  • ಬೇರೆ ಸಮಯಕ್ಕಿಂತ ಮಳೆಗಾಲದಲ್ಲಿ ಶೀತ ಮತ್ತು ಜ್ವರದ ಸಮಸ್ಯೆಗಳು ಹೆಚ್ಚಾಗಿ ಕಂಡುಬರುತ್ತದೆ. ಈ ಎಲ್ಲಾ ಸಮಸ್ಯೆಗಳನ್ನು ತಪ್ಪಿಸಲು ಪ್ರತಿದಿನ ಬಾಳೆ ಹೂವನ್ನು ನಿಮ್ಮ ಪದಾರ್ಥಗಳಲ್ಲಿ ಸೇರಿಸುವುದರಿಂದ ಈ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು. ಮಳೆಗಾಲದಲ್ಲಿ ವಿವಿಧ ದೈಹಿಕ ಸಮಸ್ಯೆಗಳನ್ನು ತಡೆಗಟ್ಟಲು ಸಹ ಬಾಳೆ ಹೂವಿನ ಸೇವನೆ ಮಾಡುವುದು ಒಳ್ಳೆಯದು.
  • ಅಲ್ಲದೆ ಇವುಗಳಲ್ಲಿರುವ ವಿಟಮಿನ್- ಸಿ ರೋಗಗಳನ್ನು ತಡೆಯುತ್ತದೆ. ಆದರೆ ಇದರಲ್ಲಿ ಕಾರ್ಬೋಹೈಡ್ರೇಟ್ಗಳು ಇರುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸಬಹುದು. ಆದ್ದರಿಂದ ಮಧುಮೇಹ ರೋಗಿಗಳು ಬಾಳೆ ಹೂವನ್ನು ತಿನ್ನಬಾರದು.
  • ಅನೇಕರಿಗೆ ಬಾಳೆ ಹೂವಿನ ಸೇವನೆ ಇಷ್ಟವಾಗುವುದಿಲ್ಲ. ಆದರೆ ಇದರಿಂದ ವಿವಿಧ ರೀತಿಯ ರುಚಿಕರವಾದ ಭಕ್ಷ್ಯಗಳನ್ನು ತಯಾರಿಸಬಹುದು. ಸರಿಯಾದ ರೀತಿಯಲ್ಲಿ ಬಳಸಿದರೆ ಇದು ಅಡುಗೆಯ ಸ್ವಾದವನ್ನು ಹೆಚ್ಚಿಸುವ ಗುಣವನ್ನು ಹೊಂದಿದೆ.

ಸೂಚನೆ: ಬೇರೆ ಬೇರೆ ರೀತಿಯ ಆರೋಗ್ಯ ಸಮಸ್ಯೆಗಳು ಇದ್ದವರು ಇದನ್ನು ಸೇವನೆ ಮಾಡುವ ಮೊದಲು ನಿಮ್ಮ ವೈದ್ಯರ ಸಲಹೆ ಪಡೆದುಕೊಳ್ಳಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!