ದಾಸವಾಳ ಹೂವಿನಿಂದ ಎಷ್ಟೆಲ್ಲ ಉಪಯೋಗವಿದೆ ಗೊತ್ತೇ?

ದಾಸವಾಳ ಹೂವುಗಳನ್ನು ಆಹಾರ, ಸೌಂದರ್ಯವರ್ಧಕ ಮತ್ತು ಔಷಧೀಯ ಗಿಡಮೂಲಿಕೆಯಾಗಿಯೂ ವ್ಯಾಪಕವಾಗಿ ಬಳಸಲಾಗುತ್ತದೆ. ದಾಸವಾಳವು ಔಷಧೀಯ ಮೌಲ್ಯವನ್ನು ಹೊಂದಿದೆ. ಇದನ್ನು ಆಯುರ್ವೇದ ಮತ್ತು ಚೀನೀ ಔಷಧ ಪದ್ಧತಿಯಲ್ಲಿ ಉಲ್ಲೇಖಿಸಲಾಗಿದೆ.

ದಾಸವಾಳ ಹೂವಿನಿಂದ ಎಷ್ಟೆಲ್ಲ ಉಪಯೋಗವಿದೆ ಗೊತ್ತೇ?
ದಾಸವಾಳ
Follow us
ಸುಷ್ಮಾ ಚಕ್ರೆ
|

Updated on: Sep 23, 2023 | 6:48 PM

ದಾಸವಾಳ ಸಾಮಾನ್ಯವಾಗಿ ಪ್ರತಿಯೊಬ್ಬರ ಮನೆಯಲ್ಲೂ ಇರುವ ಹೂವಿನ ಗಿಡ. ಈ ದಾಸವಾಳ ದೇವರಿಗೆ ಅತ್ಯಂತ ಪ್ರಿಯವಾದ ಹೂವು. ವಿವಿಧ ಬಣ್ಣಗಳಲ್ಲಿರುವ ದಾಸವಾಳ ಹೂವಿನಿಂದ ಆರೋಗ್ಯಕ್ಕೂ ಸಾಕಷ್ಟು ಪ್ರಯೋಜನಗಳಿವೆ. ದಾಸವಾಳವು 300 ಕ್ಕೂ ಹೆಚ್ಚು ಜಾತಿಯ ಹೂಬಿಡುವ ಸಸ್ಯಗಳನ್ನು ಹೊಂದಿದೆ. ದಾಸವಾಳವು ದೀರ್ಘಕಾಲಿಕ ಹೂಬಿಡುವ ಸಸ್ಯವಾಗಿದ್ದು, ಎಲ್ಲ ಋತುಗಳಲ್ಲೂ ಬೆಳೆಯಲಾಗುತ್ತದೆ.

ದಾಸವಾಳವನ್ನು ಹೂವುಗಳು, ಎಲೆಗಳು, ಕಾಂಡಗಳು, ಬೀಜಗಳು ಮತ್ತು ಬೇರುಗಳಿಗಾಗಿ ಬೆಳೆಸಲಾಗುತ್ತದೆ. ದಾಸವಾಳ ಹೂವುಗಳನ್ನು ಆಹಾರ, ಸೌಂದರ್ಯವರ್ಧಕ ಮತ್ತು ಔಷಧೀಯ ಗಿಡಮೂಲಿಕೆಯಾಗಿಯೂ ವ್ಯಾಪಕವಾಗಿ ಬಳಸಲಾಗುತ್ತದೆ. ದಾಸವಾಳವು ಔಷಧೀಯ ಮೌಲ್ಯವನ್ನು ಹೊಂದಿದೆ. ಇದನ್ನು ಆಯುರ್ವೇದ ಮತ್ತು ಚೀನೀ ಔಷಧ ಪದ್ಧತಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಮಹಿಳೆಯರ ಆರೋಗ್ಯ ಸಮಸ್ಯೆಗಳಿಗೆ ದಾಳಿಂಬೆ ಹಣ್ಣಿನಲ್ಲಿದೆ ಪರಿಹಾರ

ದಾಸವಾಳ ಹೂವಿನ ಆರೋಗ್ಯ ಪ್ರಯೋಜನಗಳ ಬಗ್ಗೆ ಇಲ್ಲಿದೆ ಮಾಹಿತಿ…

– ನಂಜುನಿರೋಧಕ ಗುಣಲಕ್ಷಣಗಳನ್ನು ಹೊಂದಿದೆ.

– ಸ್ನಾಯು ಸೆಳೆತವನ್ನು ನಿವಾರಿಸುತ್ತದೆ. ಇದು ರಕ್ತದೊತ್ತಡವನ್ನು ಕಡಿಮೆ ಮಾಡುವ ಗುಣಗಳನ್ನು ಹೊಂದಿದೆ.

– ಮಲಬದ್ಧತೆ ನಿವಾರಣೆಗೆ ಸಹಾಯ ಮಾಡುತ್ತದೆ. ಮೂತ್ರದ ಉತ್ಪಾದನೆಯನ್ನು ಹೆಚ್ಚಿಸುತ್ತದೆ.

– ಇದು ಉತ್ಕರ್ಷಣ ನಿರೋಧಕ ಚಟುವಟಿಕೆಯನ್ನು ಹೊಂದಿದೆ. ಇದು ಕ್ಯಾನ್ಸರ್ ಸಾಧ್ಯತೆಯನ್ನು ನಿಯಂತ್ರಿಸುತ್ತದೆ.

– ಜ್ವರವನ್ನು ಕಡಿಮೆ ಮಾಡುತ್ತದೆ. ನೆಮ್ಮದಿಯ ನಿದ್ರೆ ನೀಡುತ್ತದೆ.

– ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡುವ ಗುಣಗಳನ್ನು ಹೊಂದಿದೆ.

ಇದನ್ನೂ ಓದಿ: ಸೌಂದರ್ಯಕ್ಕೆ ಮಾತ್ರವಲ್ಲ ಆರೋಗ್ಯದಲ್ಲೂ ಗುಲಾಬಿ ಹೂವಿನ ಮ್ಯಾಜಿಕ್

– ಸೌಂದರ್ಯದಲ್ಲೂ ದಾಸವಾಳದ ಪ್ರಯೋಜನಗಳು ಸಾಕಷ್ಟಿವೆ. ಶಾಂಪೂ, ಹೇರ್ ಆಯಿಲ್, ಫೇಸ್​ವಾಶ್, ಸೋಪ್​ಗಳಲ್ಲಿ ದಾಸವಾಳದ ಹೂವುಗಳನ್ನು ಬಳಸಲಾಗುತ್ತದೆ.

– ದಾಸವಾಳದ ಎಲೆಗಳು ಮತ್ತು ಹೂವುಗಳು ಕೂದಲಿನ ಆರೋಗ್ಯಕ್ಕೆ ಪ್ರಯೋಜನಕಾರಿ ಗುಣಗಳನ್ನು ಹೊಂದಿದೆ. ಕೂದಲ ಬುಡಕ್ಕೆ ರಕ್ತವನ್ನು ಪರಿಚಲನೆ ಮಾಡಲು ಇದು ಸಹಾಯಕ. ದಾಸವಾಳದ ಎಲೆಗಳು ಮತ್ತು ಹೂವುಗಳು ನೈಸರ್ಗಿಕ ವರ್ಣದ್ರವ್ಯಗಳು, ಉತ್ಕರ್ಷಣ ನಿರೋಧಕಗಳು ಮತ್ತು ವಿಟಮಿನ್‌ಗಳನ್ನು ಒಳಗೊಂಡಿರುತ್ತವೆ. ಇದು ಕೂದಲಿನ ಆರೋಗ್ಯಕ್ಕೆ ಉಪಯುಕ್ತವಾಗಿದೆ.

– ಚರ್ಮದ ಆರೋಗ್ಯಕ್ಕಾಗಿ ದಾಸವಾಳ ಸಹಕಾರಿ. ತೂಕವನ್ನು ಇಳಿಕೆ ಮಾಡಲು ಕೂಡ ದಾಸವಾಳ ಉಪಯುಕ್ತವಾಗಿದೆ.

– ಬ್ಯಾಕ್ಟೀರಿಯಾದ ಬೆಳವಣಿಗೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ