ಪ್ರತಿದಿನ ತಪ್ಪದೆ ಬೀಟ್ರೂಟ್ ಜ್ಯೂಸ್ ಕುಡಿದರೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ?

ಬೀಟ್ರೂಟ್ ರಸವು ಜೀವಸತ್ವ, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದೆ, ಇದು ರಕ್ತದೊತ್ತಡವನ್ನು ನಿಯಂತ್ರಿಸುವುದರಿಂದ ಹಿಡಿದು ಚರ್ಮದ ಹೊಳಪನ್ನು ಹೆಚ್ಚಿಸುವವರೆಗೆ ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಆರೋಗ್ಯ ತಜ್ಞರು ಕೂಡ ಪ್ರತಿದಿನ ಒಂದು ಲೋಟ ಬೀಟ್ರೂಟ್ ರಸವನ್ನು ಕುಡಿಯುವುದರಿಂದ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳು ದೊರೆಯುತ್ತವೆ ಎಂದು ಹೇಳುತ್ತಾರೆ. ಹಾಗಾದರೆ ಪ್ರತಿನಿತ್ಯ ಒಂದು ಗ್ಲಾಸ್ ಬೀಟ್ರೂಟ್ ಜ್ಯೂಸ್‌ ಕುಡಿಯುವುದರಿಂದ ಯಾವ ರೀತಿ ಪ್ರಯೋಜನಗಳು ಸಿಗುತ್ತದೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಪ್ರತಿದಿನ ತಪ್ಪದೆ ಬೀಟ್ರೂಟ್ ಜ್ಯೂಸ್ ಕುಡಿದರೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ?
Beetroot Juice Benefits
Image Credit source: Getty images

Updated on: Jun 24, 2026 | 10:29 PM

ಮುಖ್ಯಾಂಶಗಳು

  • ಹೃದಯದ ಆರೋಗ್ಯಕ್ಕೆ ಬೀಟ್ರೂಟ್ ಜ್ಯೂಸ್ ಯಾಕೆ ಒಳ್ಳೆಯದು?
  • ಬೀಟ್ರೂಟ್ ಜ್ಯೂಸ್‌ನ ಆರೋಗ್ಯ ಪ್ರಯೋಜನಗಳು
  • ಯಕೃತ್ತಿನ ಆರೋಗ್ಯ ಮತ್ತು ರಕ್ತಸಂಚಾರಕ್ಕೆ ಬೀಟ್ರೂಟ್ ಜ್ಯೂಸ್‌ನ ಮಹತ್ವ

ಇತ್ತೀಚಿನ ದಿನಗಳಲ್ಲಿ ಆರೋಗ್ಯಕರ ಜೀವನಶೈಲಿಯತ್ತ ಜನರ ಒಲವು ಹೆಚ್ಚುತ್ತಿದೆ. ಅಂತಹ ಆರೋಗ್ಯಕರ ಆಹಾರಗಳಲ್ಲಿ ಬೀಟ್ರೂಟ್ ಜ್ಯೂಸ್ ಪ್ರಮುಖ ಸ್ಥಾನ ಪಡೆದಿದೆ. ವಿಟಮಿನ್‌ಗಳು, ಖನಿಜಗಳು, ಆಂಟಿಆಕ್ಸಿಡೆಂಟ್‌ಗಳು ಮತ್ತು ನೈಸರ್ಗಿಕ ನೈಟ್ರೇಟ್‌ಗಳಿಂದ ಸಮೃದ್ಧವಾಗಿರುವ ಈ ಪಾನೀಯವು ದೇಹಕ್ಕೆ ಅನೇಕ ಪ್ರಯೋಜನಗಳನ್ನು ನೀಡುತ್ತದೆ. ಹಾಗಾದರೆ ಪ್ರತಿನಿತ್ಯ ಒಂದು ಗ್ಲಾಸ್ ಬೀಟ್ರೂಟ್ ಜ್ಯೂಸ್‌ ಕುಡಿಯುವುದರಿಂದ ಯಾವ ರೀತಿ ಪ್ರಯೋಜನಗಳು ಸಿಗುತ್ತದೆ, ಯಾವ ರೀತಿ ಆರೋಗ್ಯ ಕಾಪಾಡಿಕೊಳ್ಳಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ರಕ್ತದೊತ್ತಡ ನಿಯಂತ್ರಣಕ್ಕೆ ಸಹಕಾರಿ

ಬೀಟ್ರೂಟ್‌ನಲ್ಲಿರುವ ನೈಸರ್ಗಿಕ ನೈಟ್ರೇಟ್‌ಗಳು ದೇಹದಲ್ಲಿ ನೈಟ್ರಿಕ್ ಆಕ್ಸೈಡ್ ಆಗಿ ಪರಿವರ್ತನೆಗೊಂಡು ರಕ್ತನಾಳಗಳನ್ನು ವಿಸ್ತರಿಸಲು ಸಹಾಯ ಮಾಡುತ್ತವೆ. ಇದರಿಂದ ರಕ್ತಸಂಚಾರ ಸುಧಾರಿಸಿ, ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ನೆರವಾಗುತ್ತದೆ. ಜೊತೆಗೆ ಹೃದಯ ಸಂಬಂಧಿತ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುವಲ್ಲಿ ಸಹಕಾರಿಯಾಗಿದೆ.

ಯಕೃತ್ತಿನ ಆರೋಗ್ಯಕ್ಕೆ ಬಹಳ ಒಳ್ಳೆಯದು

ಬೀಟ್ರೂಟ್‌ನಲ್ಲಿರುವ ಬಿಟಾಲೈನ್ ಎಂಬ ಆಂಟಿಆಕ್ಸಿಡೆಂಟ್ ಯಕೃತ್ತಿನ ಕಾರ್ಯಕ್ಷಮತೆಯನ್ನು ಬೆಂಬಲಿಸುತ್ತದೆ. ದೇಹದಲ್ಲಿನ ವಿಷಕಾರಿ ಅಂಶಗಳನ್ನು ಹೊರಹಾಕಲು ಮತ್ತು ಯಕೃತ್ತಿನಲ್ಲಿ ಕೊಬ್ಬು ಸಂಗ್ರಹವಾಗುವುದನ್ನು ತಡೆಯಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಕ್ಯಾಪ್ಸಿಕಂ ತಿನ್ನಲು ಇಷ್ಟವಿಲ್ಲವೇ? ಇದರ ಆರೋಗ್ಯ ಪ್ರಯೋಜನ ತಿಳಿದ್ರೆ ಪ್ರತಿದಿನ ತಿನ್ನುತ್ತೀರಿ!

ದಣಿವನ್ನು ಕಡಿಮೆ ಮಾಡಲು ಸಹಕಾರಿ

ಬೀಟ್ರೂಟ್ ಜ್ಯೂಸ್ ಕ್ರೀಡಾಪಟುಗಳು ಮತ್ತು ಫಿಟ್ನೆಸ್‌ ಪ್ರಿಯರಿಗೆ ಉತ್ತಮ ಆಯ್ಕೆಯಾಗಿದೆ. ಇದು ಸ್ನಾಯುಗಳಿಗೆ ಆಮ್ಲಜನಕದ ಪೂರೈಕೆಯನ್ನು ಹೆಚ್ಚಿಸಿ ದೈಹಿಕ ಕಾರ್ಯಕ್ಷಮತೆಯನ್ನು ಸುಧಾರಿಸುತ್ತದೆ. ದಣಿವನ್ನು ಕಡಿಮೆ ಮಾಡಿ ದಿನವಿಡೀ ಚೈತನ್ಯದಿಂದ ಇರಲು ನೆರವಾಗುತ್ತದೆ.

ರಕ್ತಹೀನತೆಯ ಅಪಾಯವನ್ನು ತಡೆಯುತ್ತದೆ

ಬೀಟ್ರೂಟ್‌ನಲ್ಲಿ ಕಬ್ಬಿಣ, ಫೋಲೇಟ್ ಮತ್ತು ವಿಟಮಿನ್ ಸಿ ಸಮೃದ್ಧವಾಗಿವೆ. ಇವು ಕೆಂಪು ರಕ್ತಕಣಗಳ ಉತ್ಪಾದನೆಯನ್ನು ಉತ್ತೇಜಿಸಿ ರಕ್ತಹೀನತೆಯ ಅಪಾಯವನ್ನು ಕಡಿಮೆ ಮಾಡುತ್ತವೆ. ವಿಶೇಷವಾಗಿ ಮಹಿಳೆಯರು ಮತ್ತು ಯುವತಿಯರಿಗೆ ಇದು ಪ್ರಯೋಜನಕಾರಿ.

ಚರ್ಮದ ಆರೋಗ್ಯಕ್ಕೂ ಒಳ್ಳೆಯದು

ಆಂಟಿಆಕ್ಸಿಡೆಂಟ್‌ಗಳಿರುವುದರಿಂದ ಬೀಟ್ರೂಟ್ ಜ್ಯೂಸ್ ಚರ್ಮದ ಕೋಶಗಳನ್ನು ರಕ್ಷಿಸುತ್ತದೆ. ರಕ್ತ ಶುದ್ಧೀಕರಣಕ್ಕೆ ಸಹಾಯ ಮಾಡುವುದರಿಂದ ಮೊಡವೆ ಮತ್ತು ಕಲೆಗಳನ್ನು ಕಡಿಮೆ ಮಾಡಿ ಚರ್ಮಕ್ಕೆ ನೈಸರ್ಗಿಕ ಕಾಂತಿ ನೀಡುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
Loading...
Unable to load recommendations.
Follow Us