Garlic benefits: ಮಲಗುವ ಮುನ್ನ ದಿಂಬಿನ ಕೆಳಗೆ ಬೆಳ್ಳುಳ್ಳಿ ಎಸಳುಗಳನ್ನು ಇಡುವುದರಿಂದಾಗುವ ಅದ್ಭುತ ಪ್ರಯೋಜನಗಳ ತಿಳಿಯಿರಿ

ನೀವು ಪ್ರತಿ ದಿನ ರಾತ್ರಿ ಮಲಗುವ ಮುನ್ನ ನಿಮ್ಮ ದಿಂಬಿನ ಕೆಳಗಡೆ ಬೆಳ್ಳುಳ್ಳಿ ಎಸಳುಗಳನ್ನು ಇಟ್ಟುಕೊಂಡು ಮಲಗಿ. ಇದರಿಂದಾಗುವ ಆರೋಗ್ಯ ಪ್ರಯೋಜನಗಳು ಇಲ್ಲಿವೆ.

Garlic benefits: ಮಲಗುವ ಮುನ್ನ ದಿಂಬಿನ ಕೆಳಗೆ ಬೆಳ್ಳುಳ್ಳಿ ಎಸಳುಗಳನ್ನು ಇಡುವುದರಿಂದಾಗುವ ಅದ್ಭುತ ಪ್ರಯೋಜನಗಳ ತಿಳಿಯಿರಿ
ಸಾಂದರ್ಭಿಕ ಚಿತ್ರImage Credit source: Lokmat.com
Follow us
| Updated By: ಅಕ್ಷತಾ ವರ್ಕಾಡಿ

Updated on:Dec 08, 2022 | 12:40 PM

ಸಾಮಾನ್ಯವಾಗಿ ಬೆಳ್ಳುಳ್ಳಿ (Garlic) ಯನ್ನು ಆಹಾರ ಪದಾರ್ಥಗಳಲ್ಲಿ ಬಳಕೆ ಮಾಡುವುದನ್ನು ನೀವು ನೋಡಿರುತ್ತೀರಿ. ಆದರೆ ಅದರ ಹೊರತಾಗಿಯೂ ಬೆಳ್ಳುಳ್ಳಿಯಿಂದ ನಿಮ್ಮ ದೇಹದ ಆರೋಗ್ಯ (Health)ಕ್ಕೆ ಸಾಕಷ್ಟು ಪ್ರಯೋಜನಗಳಿವೆ. ಬೆಳ್ಳುಳ್ಳಿ ಅಡುಗೆಮನೆಯಲ್ಲಿ ಮಾತ್ರವಲ್ಲದೆ ಮಲಗುವ ಕೋಣೆಯಲ್ಲಿಯೂ ಬಳಸಿಕೊಳ್ಳಿ. ನೀವು ಪ್ರತಿ ದಿನ ರಾತ್ರಿ ಮಲಗುವ ಮುನ್ನ ನಿಮ್ಮ ದಿಂಬಿನ ಕೆಳಗಡೆ ಬೆಳ್ಳುಳ್ಳಿ ಎಸಳುಗಳನ್ನು ಇಟ್ಟುಕೊಂಡು ಮಲಗಿ. ಇದರಿಂದಾಗಿ ಆರೋಗ್ಯ ಪ್ರಯೋಜನಗಳು ಇಲ್ಲಿವೆ.

ಹಿಂದಿನ ಕಾಲದಲ್ಲಿ ಬೆಳ್ಳುಳ್ಳಿಯ ಎರಡು ಮೂರು ಎಸಳುಗಳನ್ನು ದಿಂಬಿನ ಕೆಳಗಡೆ ಇಟ್ಟು ಮಲಗುತ್ತಿದ್ದರು. ಇದರಿಂದಾಗಿ ನೀವು ಮಲಗಿದಂತಹ ಸಮಯದಲ್ಲಿ ಕ್ರಿಮಿ ಕೀಟಗಳು ನಿಮ್ಮ ಹತ್ತಿರ ಬರದಿರಲಿ ಎಂದು, ಅಂದರೆ ಬೆಳ್ಳುಳ್ಳಿಯ ವಾಸನೆಯಿಂದ ಕ್ರಿಮಿ ಕೀಟಗಳನ್ನು ತಡೆಯುವ ಶಕ್ತಿಯಿದೆ ಎಂದು ಹಿರಿಯರು ಹೇಳುತ್ತಿದ್ದರು. ಇದರ ಜೊತೆಗೆ ಬೆಳ್ಳುಳ್ಳಿಗೆ ಕೆಟ್ಟ ಶಕ್ತಿಯನ್ನು ತಡೆಯುವ ಶಕ್ತಿ ಇದೆ. ಇದರಿಂದಾಗಿ ಕೆಟ್ಟ ಶಕ್ತಿ ನಿಮ್ಮ ಹತ್ತಿರ ಸುಳಿಯದಂತೆ ನೋಡಿಕೊಳ್ಳುತ್ತದೆ ಎಂದು ನಂಬಿಕೆ ಇದೆ. ಇಂದಿನ ಬದಲಾದ ಜೀವನಶೈಲಿಯಿಂದಾಗಿ ಜನರು ಹಿಂದಿನ ನಂಬಿಕೆಗಳನ್ನು ಮೂಡನಂಬಿಕೆ ಎಂದು ಹೇಳುವುದು ಕಾಣಬಹುದು. ಆದರೆ ಹಿರಿಯರು ಪಾಲಿಸಿಕೊಂಡು ಬಂದ ಪ್ರತಿಯೊಂದು ನಂಬಿಕೆಯಲ್ಲಿಯೂ ಅದರದೇ ಆದ ವೈಜ್ಞಾನಿಕ ಕಾರಣಗಳಿವೆ.

ನಿಮ್ಮ ದಿಂಬಿನ ಕೆಳಗೆ ಬೆಳ್ಳುಳ್ಳಿಯನ್ನು ಇಟ್ಟುಕೊಂಡು ನೀವು ಅದ್ಬುತ ಪ್ರಯೋಜನವನ್ನು ಪಡೆಯಬಹುದಾಗಿದೆ. ನೀವು ನಿದ್ರಾಹೀನತೆಯಿಂದ ಬಳಲುತ್ತಿದ್ದರೆ ಇದು ನಿಮ್ಮ ನಿದ್ರಾಹೀನತೆಗೆ ಉತ್ತಮ ಔಷಧಿಯಾಗಿದೆ. ಬೆಳ್ಳುಳ್ಳಿಯಲ್ಲಿರುವ ಸಲ್ಫರಸ್ ಅಂಶವು ನೀವು ಶಾಂತವಾಗಿ ಮಲಗಲು ಸಹಾಯಮಾಡುತ್ತದೆ.

ಇದನ್ನು ಓದಿ: ಪ್ರತಿ ರಾತ್ರಿ ಮಲಗುವ ಮುನ್ನ ಈ ಅಭ್ಯಾಸವನ್ನು ರೂಢಿಸಿಕೊಳ್ಳಿ

ಇದರ ಜೊತೆಗೆ ಬೆಳ್ಳುಳ್ಳಿಯ ರಸವನ್ನು ಸೇವಿಸುವುದರಿಂದ ನಿಮಗೆ ಯಾವುದೇ ಹೊಟ್ಟೆ ನೋವಿನ ಸಮಸ್ಯೆಯಿದ್ದರೂ ಪರಿಹಾರವನ್ನು ಕಂಡುಕೊಳ್ಳಬಹುದು. ಬೆಳ್ಳುಳ್ಳಿ ಎಸಳನ್ನು ರುಬ್ಬಿ, ಸ್ವಲ್ಪ ಬೆಚ್ಚಗಿನ ಹಾಲು ಮತ್ತು ಜೇನುತುಪ್ಪದೊಂದಿಗೆ ಸೇವಿಸಿ. ನಿಮಗೆ ನಿದ್ರೆ ಬರಲು ಕಷ್ಟವಾದಾಗ ನೀವು ಬೆಳ್ಳುಳ್ಳಿಯನ್ನು ಸಹ ಪ್ರಯತ್ನಿಸಬಹುದು. ಆದ್ದರಿಂದ ಬೆಳ್ಳುಳ್ಳಿಯಿಂದ ನಿಮ್ಮ ದೇಹದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Published On - 12:34 pm, Thu, 8 December 22

ತಾಜಾ ಸುದ್ದಿ
ದರ್ಶನ್​ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು
ದರ್ಶನ್​ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು
ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್
ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್
ಹೋರಿ ಬೆದರಿಸುವುದನ್ನು ನೋಡಲು ವಿದ್ಯುತ್​ ಟಿಸಿ ಏರಿ ಕೂತರು: ಜನರ ಹುಚ್ಚಾಟ
ಹೋರಿ ಬೆದರಿಸುವುದನ್ನು ನೋಡಲು ವಿದ್ಯುತ್​ ಟಿಸಿ ಏರಿ ಕೂತರು: ಜನರ ಹುಚ್ಚಾಟ
ಸೋತಲ್ಲೇ ಗೆಲುವ ಹುಡುಕುವ ಛಲ ಮಗನಲ್ಲಿ ಹುಟ್ಟಿದೆ: ಲಕ್ಷ್ಮಿ ಹೆಬ್ಬಾಳ್ಕರ್
ಸೋತಲ್ಲೇ ಗೆಲುವ ಹುಡುಕುವ ಛಲ ಮಗನಲ್ಲಿ ಹುಟ್ಟಿದೆ: ಲಕ್ಷ್ಮಿ ಹೆಬ್ಬಾಳ್ಕರ್
ಕಾಂಗ್ರೆಸ್ ನಾಯಕರು ಯಾರನ್ನೇ ಸಿಎಂ ಮಾಡಿದರೂ ನಂಗೆ ಸಂಬಂಧಿಸದ ವಿಷಯ: ರೇವಣ್ಣ
ಕಾಂಗ್ರೆಸ್ ನಾಯಕರು ಯಾರನ್ನೇ ಸಿಎಂ ಮಾಡಿದರೂ ನಂಗೆ ಸಂಬಂಧಿಸದ ವಿಷಯ: ರೇವಣ್ಣ
ದರ್ಶನ್ ಬಂಧನದ ದಿನ ‘ಡೆವಿಲ್’ ಸಿನಿಮಾ ಸೆಟ್​ನಲ್ಲಿ ಏನಾಯ್ತು? ವಿನಯ್
ದರ್ಶನ್ ಬಂಧನದ ದಿನ ‘ಡೆವಿಲ್’ ಸಿನಿಮಾ ಸೆಟ್​ನಲ್ಲಿ ಏನಾಯ್ತು? ವಿನಯ್
ಡಿಕೆ ಸುರೇಶ್​ರನ್ನು ಸೋಲಿಸಿದ್ದು ಸಿದ್ದರಾಮಯ್ಯ; ಅಶೋಕರಿಂದ ಅಸಂಬದ್ಧ ಹೇಳಿಕೆ
ಡಿಕೆ ಸುರೇಶ್​ರನ್ನು ಸೋಲಿಸಿದ್ದು ಸಿದ್ದರಾಮಯ್ಯ; ಅಶೋಕರಿಂದ ಅಸಂಬದ್ಧ ಹೇಳಿಕೆ
ಸಿಎಂ ಮತ್ತು ಡಿಸಿಎಂ ಆಯ್ಕೆ ಮಾಡೋದು ಸ್ವಾಮೀಜಿಗಳಲ್ಲ: ಸಿದ್ದರಾಮಯ್ಯ, ಸಿಎಂ
ಸಿಎಂ ಮತ್ತು ಡಿಸಿಎಂ ಆಯ್ಕೆ ಮಾಡೋದು ಸ್ವಾಮೀಜಿಗಳಲ್ಲ: ಸಿದ್ದರಾಮಯ್ಯ, ಸಿಎಂ
ಸ್ವಾಮೀಜಿಗಳು ಹೇಳುತ್ತಿರುವ ಹಿಂದೆ ಬಿಜೆಪಿ ಕೈವಾಡ ಇರಬಹುದು: ಚಲುವರಾಯಸ್ವಾಮಿ
ಸ್ವಾಮೀಜಿಗಳು ಹೇಳುತ್ತಿರುವ ಹಿಂದೆ ಬಿಜೆಪಿ ಕೈವಾಡ ಇರಬಹುದು: ಚಲುವರಾಯಸ್ವಾಮಿ
ದರ್ಶನ್ ನಡೆದು ಬಂದ ಹಾದಿಯ ಬಗ್ಗೆ ಸಾರಾ ಗೋವಿಂದು ವಿಶ್ಲೇಷಣೆ
ದರ್ಶನ್ ನಡೆದು ಬಂದ ಹಾದಿಯ ಬಗ್ಗೆ ಸಾರಾ ಗೋವಿಂದು ವಿಶ್ಲೇಷಣೆ