Benefits Of Bananas: ದಿನಕ್ಕೆ ಎರಡು ಬಾಳೆಹಣ್ಣು ಸೇವಿಸಿದರೆ ಏನಾಗುತ್ತೆ?

ಬಾಳೆಹಣ್ಣಿನಲ್ಲಿ ಉತ್ತಮ ಪ್ರಮಾಣದ ಫೈಬರ್ ಮತ್ತು ಪೊಟ್ಯಾಸಿಯಮ್ ಇದೆ. ಫೈಬರ್ ಜೀರ್ಣಕ್ರಿಯೆಯನ್ನು ಸುಧಾರಿಸುವುದರ ಜೊತೆಗೆ ಮಲಬದ್ಧತೆಯನ್ನು ನಿವಾರಿಸುತ್ತದೆ. ಪೊಟ್ಯಾಸಿಯಮ್ ಅಂಶವು ರಕ್ತದೊತ್ತಡವನ್ನು ನಿಯಂತ್ರಿಸುವುದರ ಜೊತೆಗೆ ಹೃದಯರಕ್ತನಾಳದ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡುತ್ತದೆ. ಹಾಗಾದರೆ ದಿನಕ್ಕೆ ಎರಡು ಬಾಳೆಹಣ್ಣುಗಳನ್ನು ತಿನ್ನುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು? ಇಲ್ಲಿದೆ ಮಾಹಿತಿ.

Benefits Of Bananas: ದಿನಕ್ಕೆ ಎರಡು ಬಾಳೆಹಣ್ಣು ಸೇವಿಸಿದರೆ ಏನಾಗುತ್ತೆ?
Updated By: ಅಕ್ಷಯ್​ ಪಲ್ಲಮಜಲು​​

Updated on: Jun 04, 2024 | 6:00 PM

ಬಾಳೆಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ಇಷ್ಟವಾಗುವ ಹಣ್ಣು. ಇದರ ಸೇವನೆಯು ದೇಹಕ್ಕೆ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಬಾಳೆಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಬಿ 6 ಸಮೃದ್ಧವಾಗಿದೆ. ವಿಟಮಿನ್ ಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ವಿಟಮಿನ್ ಬಿ 6 ಮೆದುಳಿನ ಕಾರ್ಯವನ್ನು ಹೆಚ್ಚಿಸುತ್ತದೆ. ಬಾಳೆಹಣ್ಣಿನಲ್ಲಿ ಉತ್ತಮ ಪ್ರಮಾಣದ ಫೈಬರ್ ಮತ್ತು ಪೊಟ್ಯಾಸಿಯಮ್ ಇದೆ. ಫೈಬರ್ ಜೀರ್ಣಕ್ರಿಯೆಯನ್ನು ಸುಧಾರಿಸುವುದರ ಜೊತೆಗೆ ಮಲಬದ್ಧತೆಯನ್ನು ನಿವಾರಿಸುತ್ತದೆ. ಪೊಟ್ಯಾಸಿಯಮ್ ಅಂಶವು ರಕ್ತದೊತ್ತಡವನ್ನು ನಿಯಂತ್ರಿಸುವುದರ ಜೊತೆಗೆ ಹೃದಯರಕ್ತನಾಳದ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡುತ್ತದೆ. ಹಾಗಾದರೆ ದಿನಕ್ಕೆ ಎರಡು ಬಾಳೆಹಣ್ಣುಗಳನ್ನು ತಿನ್ನುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು? ಇಲ್ಲಿದೆ ಮಾಹಿತಿ.

ದಿನಕ್ಕೆ ಎರಡು ಬಾಳೆಹಣ್ಣುಗಳನ್ನು ಸೇವಿಸುವುದರಿಂದ ಜೀರ್ಣಕಾರಿ ಸಮಸ್ಯೆಯ ಜೊತೆಗೆ ಮಲಬದ್ಧತೆಯ ಸಮಸ್ಯೆಯೂ ನಿವಾರಣೆಯಾಗುತ್ತದೆ. ಹೊಟ್ಟೆ ಉಬ್ಬರ ಕಡಿಮೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಹೃದಯ ಸಂಬಂಧಿತ ಸಮಸ್ಯೆಗಳು ಹೆಚ್ಚುತ್ತಿದ್ದು ಇದರಿಂದ ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ. ಇದರಿಂದಾಗಿ ಸ್ವಲ್ಪ ಮಟ್ಟಿಗೆ ಜೀವನಶೈಲಿಯಲ್ಲಿ ಬದಲಾವಣೆ ಮಾಡುವುದರಿಂದ ಈ ರೀತಿಯ ಅಪಾಯಗಳನ್ನು ಕಡಿಮೆ ಮಾಡಬಹುದು. ಪೊಟ್ಯಾಸಿಯಮ್ ಸಮೃದ್ಧವಾಗಿರುವ ಬಾಳೆಹಣ್ಣುಗಳನ್ನು ತಿನ್ನುವುದರಿಂದ ಹೃದಯದ ಆರೋಗ್ಯವನ್ನು ಸುಧಾರಿಸಬಹುದು. ಇದರಲ್ಲಿರುವ ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳು ಕೂಡ ಹೃದಯದ ಆರೋಗ್ಯಕ್ಕೆ ಒಳ್ಳೆಯದು ದಿನಕ್ಕೆ ಎರಡು ಬಾಳೆಹಣ್ಣುಗಳನ್ನು ತಿನ್ನುವುದು ಹೃದಯವನ್ನು ಆರೋಗ್ಯಕರವಾಗಿರಿಸುತ್ತದೆ ಮತ್ತು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ

ಸೋಂಕು ಮತ್ತು ಅನಾರೋಗ್ಯದ ವಿರುದ್ಧ ಹೋರಾಡಲು ರೋಗನಿರೋಧಕ ಶಕ್ತಿ ಅತ್ಯಗತ್ಯ. ಬಾಳೆಹಣ್ಣಿನಲ್ಲಿರುವ ಪೋಷಕಾಂಶಗಳು ಮತ್ತು ವಿಟಮಿನ್ ಸಿ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತವೆ. ಈ ವಿಟಮಿನ್ ಉತ್ಕರ್ಷಣ ನಿರೋಧಕವಾಗಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ ಬಾಳೆಹಣ್ಣಿನಲ್ಲಿರುವ ವಿಟಮಿನ್ ಬಿ 6 ಮತ್ತು ಸತುವಿನ ಅಂಶವು ರೋಗನಿರೋಧಕ ವ್ಯವಸ್ಥೆಗೆ ಪ್ರಯೋಜನಕಾರಿಯಾಗಿದೆ.

ಇದನ್ನೂ ಓದಿ: ಬೆವರುವುದು ಆರೋಗ್ಯಕ್ಕೆ ಒಳ್ಳೆಯದು , ಯಾಕೆ ಗೊತ್ತಾ?

ಬಾಳೆಹಣ್ಣಿನ ನಿಯಮಿತ ಸೇವನೆಯು ಮೆದುಳಿನ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಬಾಳೆಹಣ್ಣಿನಲ್ಲಿ ವಿಟಮಿನ್ ಬಿ6 ಸಮೃದ್ಧವಾಗಿದೆ. ಸಂತೋಷದ ಹಾರ್ಮೋನುಗಳಾದ ಸೆರೊಟೋನಿನ್ ಮತ್ತು ಡೋಪಮೈನ್ ಅನ್ನು ಬಿಡುಗಡೆ ಮಾಡುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ. ಜೊತೆಗೆ ಚೆನ್ನಾಗಿ ನಿದ್ರೆ ಮಾಡಲು ಸಹಾಯ ಮಾಡುತ್ತದೆ. ಬಾಳೆಹಣ್ಣಿನಲ್ಲಿರುವ ಮೆಗ್ನೀಸಿಯಮ್ ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ. ರಕ್ತನಾಳಗಳನ್ನು ಸಡಿಲಗೊಳಿಸುತ್ತದೆ.

ತೂಕ ಇಳಿಸಿಕೊಳ್ಳಲು ಸಹಕಾರಿ

ಬಾಳೆಹಣ್ಣು ತಿನ್ನುವುದರಿಂದ ಸುಲಭವಾಗಿ ತೂಕ ಇಳಿಸಿಕೊಳ್ಳಬಹುದು. ಇದರ ಸೇವನೆಯು ನಿಮಗೆ ಹೆಚ್ಚು ಸಮಯದವರೆಗೆ ಹೊಟ್ಟೆ ತುಂಬಿದ ಅನುಭವವನ್ನು ನೀಡುತ್ತದೆ. ಜೊತೆಗೆ ಪದೇ ಪದೇ ಹಸಿವಾಗುವುದನ್ನು ನಿಯಂತ್ರಿಸುತ್ತದೆ. ಜೊತೆಗೆ ಕ್ಯಾಲೊರಿ ಸೇವನೆಯನ್ನು ಕಡಿಮೆ ಮಾಡುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: