AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Benefits of drinking coffee: ಕಾಫಿ ಕುಡಿಯುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿದಿದೆಯಾ? ತಜ್ಞರ ಅಭಿಪ್ರಾಯವೇನು?

ಹಲವರು ಕಾಫಿ ಕುಡಿಯುವುದು ಒಳ್ಳೆಯದಲ್ಲ ಎನ್ನುತ್ತಾರೆ. ಆದರೆ ಕಾಫಿಯಿಂದ ಸಿಗುವ ಆರೋಗ್ಯ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು. ನೀವು ಕಾಫಿ ಪ್ರೀಯರಾಗಿದ್ದರೆ ಮತ್ತು ಕಾಫಿ ನಿಮ್ಮ ಆರೋಗ್ಯಕ್ಕೆ ಹೇಗೆ ಪ್ರಯೋಜನಕಾರಿ ಎಂಬುದರ ಬಗ್ಗೆ ಕುತೂಹಲ ಹೊಂದಿದ್ದರೆ, ಈ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಬಯಸಿದರೆ ಈ ಲೇಖನವನ್ನು ಓದಿ.

Benefits of drinking coffee: ಕಾಫಿ ಕುಡಿಯುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿದಿದೆಯಾ? ತಜ್ಞರ ಅಭಿಪ್ರಾಯವೇನು?
Benefits of drinking coffee
ಪ್ರೀತಿ ಭಟ್​, ಗುಣವಂತೆ
| Edited By: |

Updated on: Sep 17, 2023 | 6:46 PM

Share

ಕಾಫಿಯಂತ ಶಕ್ತಿಯುತ ಅಮೃತವು ಕೇವಲ ಪಾನೀಯವಲ್ಲ. ಇದು ಒಂದು ಕಂಪನ! ಮುಂಜಾನೆ ಅಥವಾ ದಿನದ ಬಿಡುವಿಲ್ಲದ ಸಮಯದ ನಂತರ, ಕಾಫಿ ಪ್ರಿಯರು ಒಂದು ಕಪ್ ಕಾಫಿ ಹೀರಲು ಬಯಸುತ್ತಾರೆ. ಅದರ ಸುವಾಸನೆ ನಿಮ್ಮನ್ನು ಕಾಡದೇ ಇರಲಾರದು. ಕಾಫಿ ಕುಡಿಯುವುದು ಒಳ್ಳೆಯದಲ್ಲ ಎನ್ನುತ್ತಾರೆ. ಆದರೆ ಕಾಫಿಯಿಂದ ಸಿಗುವ ಆರೋಗ್ಯ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು. ನೀವು ಕಾಫಿ ಪ್ರೀಯರಾಗಿದ್ದರೆ ಮತ್ತು ಕಾಫಿ ನಿಮ್ಮ ಆರೋಗ್ಯಕ್ಕೆ ಹೇಗೆ ಪ್ರಯೋಜನಕಾರಿ ಎಂಬುದರ ಬಗ್ಗೆ ಕುತೂಹಲ ಹೊಂದಿದ್ದರೆ, ಈ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಬಯಸಿದರೆ ಇಲ್ಲಿದೆ ಸಂಪೂರ್ಣ ಮಾಹಿತಿ. ಕಾಫಿ ಕುಡಿಯುವುದರಿಂದ ಸಿಗುವ ಪ್ರಯೋಜನಗಳನ್ನು ಅರ್ಥಮಾಡಿಕೊಳ್ಳಲು ಹೆಲ್ತ್ ಶಾಟ್ಸ್ ಡೆಹ್ರಾಡೂನ್ನ ಆರೋಗ್ಯ ಮತ್ತು ಜೀವನಶೈಲಿ ತರಬೇತುದಾರ ಜೈಸ್ಲೀನ್ ಕೌರ್ ಅವರನ್ನು ಸಂಪರ್ಕಿಸಿದ್ದು, ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

ಕಾಫಿ ಕುಡಿಯುವುದರಿಂದ ಸಿಗುವ ಪ್ರಯೋಜನಗಳು ಯಾವುವು?

ಕಾಫಿಯ ಬಗ್ಗೆ ಕೇಳಿದಾಗ, ನಮ್ಮಲ್ಲಿ ಹೆಚ್ಚಿನವರು ಉತ್ತರಿಸುತ್ತಾರೆ. ಅದೆನೆಂದರೆ ಇದು ಕೆಫೀನ್ ಅಂಶವನ್ನು ಒಳಗೊಂಡಿದೆ ಎನ್ನುತ್ತಾರೆ. ಹೌದು, ನಾವು ತಿಳಿದುಕೊಂಡಿರುವುದು ಸತ್ಯ. ಆದರೆ ಕೆಫೀನ್ ಸಿಎನ್ಎಸ್ (ಕೇಂದ್ರ ನರಮಂಡಲ) ಅನ್ನು ಉತ್ತೇಜಿಸುತ್ತದೆ ಎಂದು ನಿಮಗೆ ತಿಳಿದಿದೆಯೇ? ಪ್ರತಿದಿನ ಕಾಫಿ ಕುಡಿಯುವುದರಿಂದ ಸಿಗುವ ಪ್ರಯೋಜನಗಳ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.

1. ಕಾಫಿ ನಿಮ್ಮನ್ನು ಜಾಗರೂಕರಾಗಿರಲು ಸಹಾಯ ಮಾಡುತ್ತದೆ:

ಬ್ಲ್ಯಾಕ್ ಕಾಫಿಯ ಪ್ರಯೋಜನಗಳು ಅದರ ಕೆಫೀನ್ ಅಂಶದಲ್ಲಿವೆ. ಯಾವುದೇ ಕಾಫಿಯಾಗಲಿ ಇದು ಕೆಫೀನ್ ಅನ್ನು ಹೊಂದಿರುತ್ತದೆ, ಇದು ಅಡೆನೊಸಿನ್ ಅನ್ನು ನಿರ್ಬಂಧಿಸುವ ನೈಸರ್ಗಿಕ ಉತ್ತೇಜಕವಾಗಿದೆ, ಇದು ಎಚ್ಚರವಾಗಿರಲು ಮತ್ತು ಜಾಗರೂಕರಾಗಿರಲು ಸಹಾಯ ಮಾಡುತ್ತದೆ ಎಂದು ತಜ್ಞರು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

2. ಕಾಫಿ ದೈಹಿಕ ಕಾರ್ಯಕ್ಷಮತೆಯನ್ನು ಸುಧಾರಿಸುತ್ತದೆ:

ಫಿಟ್ನೆಸ್ ಮತ್ತು ವ್ಯಾಯಾಮದ ವಿಷಯಕ್ಕೆ ಬಂದಾಗ, ಕಾಫಿ ನಿಮ್ಮ ಮಿತ್ರನಾಗಬಹುದು. ಕಾಫಿಯಲ್ಲಿರುವ ಕೆಫೀನ್ ಅಡ್ರಿನಾಲಿನ್ ಮಟ್ಟವನ್ನು ಹೆಚ್ಚಿಸುತ್ತದೆ, ವ್ಯಾಯಾಮದ ಸಮಯದಲ್ಲಿ ನಿಮ್ಮ ದೈಹಿಕ ಸಹಿಷ್ಣುತೆಯನ್ನು ಹೆಚ್ಚಿಸಲು ಮತ್ತು ನಿಮ್ಮ ಫಿಟ್ನೆಸ್ ಗುರಿಗಳನ್ನು ಸಾಧಿಸಲು ಸಹಾಯ ಮಾಡುತ್ತದೆ.

3. ಕಾಫಿಯಲ್ಲಿ ಹೇರಳವಾದ ಉತ್ಕರ್ಷಣ ನಿರೋಧಕಗಳಿವೆ:

“ಕಾಫಿ ಕ್ಲೋರೊಜೆನಿಕ್ ಆಮ್ಲದಂತಹ ಉತ್ಕರ್ಷಣ ನಿರೋಧಕಗಳ ನಿಧಿಯಾಗಿದೆ. ಈ ಸಂಯುಕ್ತಗಳು ಆಕ್ಸಿಡೇಟಿವ್ ಒತ್ತಡವನ್ನು ಎದುರಿಸಲು, ಉರಿಯೂತವನ್ನು ಕಡಿಮೆ ಮಾಡಲು ಮತ್ತು ನಿಮ್ಮ ಒಟ್ಟಾರೆ ಆರೋಗ್ಯವನ್ನು ಬೆಂಬಲಿಸಲು ಸಹಾಯ ಮಾಡುತ್ತದೆ” ಎಂದು ತಜ್ಞರು ಹೇಳುತ್ತಾರೆ.

ಇದನ್ನೂ ಓದಿ: ತೂಕ ಇಳಿಸಿಕೊಳ್ಳಲು ಪೇರಲೆ ಜ್ಯೂಸ್ ಕುಡಿದು ನೋಡಿ

4. ತೂಕವನ್ನು ನಿರ್ವಹಿಸಲು ಕಾಫಿ ಸಹಾಯ ಮಾಡುತ್ತದೆ:

ತೂಕ ನಿರ್ವಹಣಾ ಪ್ರಯಾಣದಲ್ಲಿರುವವರಿಗೆ, ಕಾಫಿ ಅಮೂಲ್ಯ ಮದ್ದಾಗಬಹುದು. ಇದರ ಕೆಫೀನ್ ಅಂಶವು ನಿಮ್ಮ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ ಮತ್ತು ಕೊಬ್ಬನ್ನು ಸುಡಲು ದೇಹವನ್ನು ಉತ್ತೇಜಿಸುತ್ತದೆ. ಜೊತೆಗೆ, ಕಾಫಿ ನಿಮ್ಮ ನರಮಂಡಲವನ್ನು ಸಕ್ರಿಯಗೊಳಿಸುತ್ತದೆ, ಇದರಿಂದಾಗಿ ನಿಮ್ಮ ದೇಹದಲ್ಲಿನ ಕೊಬ್ಬಿನ ಕೋಶಗಳು ದೇಹದ ಕೊಬ್ಬನ್ನು ವಿಭಜಿಸಲು ಸಂಕೇತ ನೀಡುತ್ತದೆ. ಇತರ ಸಕ್ಕರೆ ಪಾನೀಯಗಳ ಬದಲು ಕಾಫಿಯನ್ನು ಆರಿಸುವ ಮೂಲಕ, ನಿಮ್ಮ ಸ್ವಾಸ್ಥ್ಯ ಗುರಿಗಳಿಗೆ ಹೊಂದಿಕೆಯಾಗುವ ಆಯ್ಕೆ ಮಾಡಿಕೊಳ್ಳಬಹುದು. ಆದ್ದರಿಂದ, ಜಿಮ್ ಗೆ ಹೋಗುವ ಮೊದಲು, ನೀವು ಹೆಚ್ಚು ಕಾಫಿ ಕುಡಿಯಬಹುದು, ಇದು ನಿಮ್ಮ ತೂಕ ಇಳಿಸುವ ಗುರಿಗಳನ್ನು ವೇಗವರ್ಧಿಸುತ್ತದೆ ಎಂದು ತಜ್ಞರು ಹೇಳುತ್ತಾರೆ.

5. ಕಾಫಿ ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ:

ಕಾಫಿ ಸೇವನೆಯು ಪಾರ್ಕಿನ್ಸನ್ ಮತ್ತು ಅಲ್ಝೈಮರ್, ಟೈಪ್ 2 ಮಧುಮೇಹ ಮತ್ತು ಕೆಲವು ರೀತಿಯ ಕ್ಯಾನ್ಸರ್ನಂತಹ ನ್ಯೂರೋಡಿಜೆನರೇಟಿವ್ ಪರಿಸ್ಥಿತಿಗಳು ಸೇರಿದಂತೆ ವಿವಿಧ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ಅಧ್ಯಯನಗಳು ಸೂಚಿಸುತ್ತವೆ. ಈ ಸಂಭಾವ್ಯ ಆರೋಗ್ಯ ಪ್ರಯೋಜನಗಳು ಕಾಫಿಯ ಉತ್ಕರ್ಷಣ ನಿರೋಧಕ ಸಮೃದ್ಧ ಸ್ವಭಾವದೊಂದಿಗೆ ಸಂಬಂಧ ಹೊಂದಿವೆ” ಎಂದು ತಜ್ಞರು ಹೇಳುತ್ತಾರೆ. ಅಧ್ಯಯನಗಳ ಪ್ರಕಾರ, ನಿಯಮಿತವಾಗಿ ಕಾಫಿ ಸೇವಿಸುವುದರಿಂದ ಟೈಪ್ -2 ಮಧುಮೇಹ ಮತ್ತು ಅಲ್ಝೈಮರ್ ಕಾಯಿಲೆ ಬರುವ ಅಪಾಯವನ್ನು ಕಡಿಮೆ ಮಾಡಬಹುದು.

6. ಕಾಫಿ ಮನಸ್ಥಿತಿಯನ್ನು ಸುಧಾರಿಸುತ್ತದೆ:

ಕಾಫಿ ಕೇವಲ ದೈಹಿಕ ಆರೋಗ್ಯ ಮಾತ್ರವಲ್ಲ ಇದು ನಿಮ್ಮ ಮಾನಸಿಕ ಯೋಗಕ್ಷೇಮಕ್ಕೂ ಕೊಡುಗೆ ನೀಡುತ್ತದೆ. ಸಿರೊಟೋನಿನ್ ಮತ್ತು ಡೋಪಮೈನ್ ಬಿಡುಗಡೆಯನ್ನು ಉತ್ತೇಜಿಸುವ ಕೆಫೀನ್ ಸಾಮರ್ಥ್ಯವು ನಿಮ್ಮ ಮನಸ್ಥಿತಿಯನ್ನು ಸುಧಾರಿಸುತ್ತದೆ, ಖಿನ್ನತೆಯ ಅಪಾಯವನ್ನು ಕಡಿಮೆ ಮಾಡುತ್ತದೆ ಮತ್ತು ನಿಮ್ಮ ಒಟ್ಟಾರೆ ಮಾನಸಿಕ ಸ್ಥಿತಿಯನ್ನು ಹೆಚ್ಚಿಸುತ್ತದೆ.

ಇತರ ಯಾವುದೇ ಆಹಾರ ಅಥವಾ ಪಾನೀಯದಂತೆ, ಕಾಫಿಯ ವಿಷಯಕ್ಕೆ ಬಂದಾಗ ಮಿತವ್ಯಯವು ಮುಖ್ಯವಾಗಿದೆ ಎಂಬುದನ್ನು ನೆನಪಿಟ್ಟುಕೊಳ್ಳುವುದು ಬಹಳ ಮುಖ್ಯ. ಅತಿಯಾದ ಕೆಫೀನ್ ಸೇವನೆಯು ಚಡಪಡಿಕೆ, ನಿದ್ರಾಹೀನತೆ ಮತ್ತು ನಡುಕಕ್ಕೆ ಕಾರಣವಾಗಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ