AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗ್ಗೆ ಎದ್ದ ತಕ್ಷಣ ಒಂದು ಲೋಟ ಬಿಸಿ ನೀರು ಕುಡಿದರೆ ಏನಾಗುತ್ತೆ ನೋಡಿ

ನಮ್ಮ ದೇಹವು ಆರೋಗ್ಯಕರವಾಗಿರಬೇಕೆಂದರೆ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಲೇಬೇಕು ಎಂದು ತಜ್ಞರು ಸಲಹೆ ನೀಡುತ್ತಾರೆ. ನಿರ್ಜಲೀಕರಣವನ್ನು ತಪ್ಪಿಸುವುದರಿಂದ ಹಿಡಿದು ಜೀರ್ಣಕ್ರಿಯೆಯವರೆಗೆ ನೀರು ಕುಡಿಯುವುದರಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಹೀಗಿರುವಾಗ ಬೆಳಗ್ಗೆ ಎದ್ದ ತಕ್ಷಣ ಒಂದು ಲೋಟ ಬಿಸಿ ನೀರು ಕುಡಿಯುವುದರಿಂದ ಏನಾಗುತ್ತೆ ಎಂಬುದನ್ನು ನೋಡಿ.

ಬೆಳಗ್ಗೆ ಎದ್ದ ತಕ್ಷಣ ಒಂದು ಲೋಟ ಬಿಸಿ ನೀರು ಕುಡಿದರೆ ಏನಾಗುತ್ತೆ ನೋಡಿ
ಸಾಂದರ್ಭಿಕ ಚಿತ್ರ Image Credit source: Getty Images
ಮಾಲಾಶ್ರೀ ಅಂಚನ್​
|

Updated on: Jun 29, 2025 | 7:46 PM

Share

ನಾವು ಆರೋಗ್ಯಕರವಾಗಿರಬೇಕೆಂದರೆ ಅಗತ್ಯ ಪ್ರಮಾಣದ ನೀರನ್ನು (Water) ಸೇವನೆ ಮಾಡಲೇಬೇಕು. ಸಾಕಷ್ಟು ಪ್ರಮಾಣದಲ್ಲಿ ನೀರನ್ನು ಕುಡಿಯುವುದರಿಂದಲೇ ಅರ್ಧದಷ್ಟು ಆರೋಗ್ಯ ಸಮಸ್ಯೆಗಳನ್ನು ಕಡಿಮೆ ಮಾಡಬಹುದು ಎಂದು ಹೇಳುತ್ತಾರೆ. ಹೌದು ಸರಿಯಾಗಿ ನೀರು ಕುಡಿಯುವ ಮೂಲಕ ನಿರ್ಜಲೀಕರಣ ಸಮಸ್ಯೆ, ಮಲಬದ್ಧತೆ, ಜೀರ್ಣಕ್ರಿಯೆಯ ಸಮಸ್ಯೆಯನ್ನು ತೊಡೆದು ಹಾಕಬಹುದು. ಅಷ್ಟೇ ಯಾಕೆ ಚರ್ಮವೂ ಆರೋಗ್ಯಕರವಾಗಿರುತ್ತದೆ. ಇನ್ನೂ ಅನೇಕರು ಬೆಳಗ್ಗೆ ಎದ್ದ ತಕ್ಷಣ ಒಂದು ಗ್ಲಾಸ್‌ ಬೆಚ್ಚಗಿನ ನೀರು ಕುಡಿಯುವ ಅಭ್ಯಾಸವನ್ನು ರೂಢಿಸಿಕೊಂಡಿರುತ್ತಾರೆ. ಹೀಗೆ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿದರೆ (Benefits Of Drinking Hot Water) ಏನಾಗುತ್ತೆ ಗೊತ್ತಾ? ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿಯುವುದರ ಪ್ರಯೋಜನ:

ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಉಗುರು ಬೆಚ್ಚಗಿನ ನೀರು ಕುಡಿಯುವುದರಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳು ಲಭಿಸುತ್ತವೆ. ಅವುಗಳೆಂದರೆ,

ಚಯಾಪಚಯ ಕ್ರಿಯೆ ಹೆಚ್ಚಿಸುತ್ತದೆ:  ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬಿಸಿ ನೀರು ಕುಡಿಯುವುದರಿಂದ ದೇಹದ ಚಯಾಪಚಯ ಕ್ರಿಯೆ ಹೆಚ್ಚುತ್ತದೆ. ಇದರಿಂದ ಸುಲಭವಾಗಿ ತೂಕವನ್ನು ಸಹ ಇಳಿಕೆ ಮಾಡಬಹುದು.

ಇದನ್ನೂ ಓದಿ
Image
ಬೆಳಿಗ್ಗೆ ಉಪಾಹಾರದಲ್ಲಿ ಆವಕಾಡೊ ಸೇರಿಸುವುದರಿಂದ ಸಿಗುವ ಲಾಭಗಳು
Image
ಮೂತ್ರದಲ್ಲಿ ರಕ್ತ ಬರುತ್ತಾ? ಈ ವೈಟ್ ಜ್ಯೂಸ್ ಕುಡಿದು ನೋಡಿ
Image
ಹಾಲಿಗೆ ಇದೊಂದು ಪುಡಿ ಬೆರೆಸಿ ಕುಡಿದರೆ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ
Image
ಹುರುಳಿ ಸೂಪ್ ಮಾಡಲು ಇಲ್ಲಿದೆ ಸುಲಭ ವಿಧಾನ

ಮಲಬದ್ಧತೆ ಮತ್ತು ಅಜೀರ್ಣವನ್ನು ನಿವಾರಿಸುತ್ತದೆ:  ಬೆಚ್ಚಗಿನ ನೀರು ಜೀರ್ಣಾಂಗ ವ್ಯವಸ್ಥೆಯನ್ನು ಸಕ್ರಿಯಗೊಳಿಸುತ್ತದೆ ಮತ್ತು ಮಲಬದ್ಧತೆ, ಅಜೀರ್ಣದಂತಹ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಇದು ಕರುಳಿನ ಸ್ನಾಯುಗಳನ್ನು ಸಡಿಲಗೊಳಿಸುತ್ತದೆ ಮತ್ತು ಕರುಳನ್ನು ಆರೋಗ್ಯಕರವಾಗಿಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

ಕಲ್ಮಶವನ್ನು ತೆಗೆದು ಹಾಕುತ್ತದೆ: ಬಿಸಿನೀರು ನೈಸರ್ಗಿಕ ನಿರ್ವಿಶೀಕರಣಕಾರಕವಾಗಿ ಕಾರ್ಯನಿರ್ವಹಿಸುತ್ತದೆ, ಅಂದರೆ ಇದು ದೇಹದಿಂದ ವಿಷ, ಕಲ್ಮಶವನ್ನು ತೆಗೆದು ಹಾಕಲು ಸಹಾಯ ಮಾಡುತ್ತದೆ.  ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿನೀರನ್ನು ಕುಡಿದರೆ ನಿಮ್ಮ ದೇಹವು ಸ್ವತಃ ನಿರ್ವಿಷಗೊಳ್ಳುತ್ತದೆ. ಬಿಸಿನೀರು ದೇಹದ ಉಷ್ಣತೆಯನ್ನು ಹೆಚ್ಚಿಸುತ್ತದೆ, ಇದು ಬೆವರುವಿಕೆಗೆ ಕಾರಣವಾಗುತ್ತದೆ ಮತ್ತು ಇದರಿಂದ ದೇಹದಲ್ಲಿ ಸಂಗ್ರಹವಾದ ಕಲ್ಮಶ ಬೆವರಿನ ಮೂಲಕ ಹೊರಬರುತ್ತದೆ.

ತೂಕ ಇಳಿಕೆಗೆ ಸಹಕಾರಿ: ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿರುವವರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಚ್ಚಗಿನ ನೀರನ್ನು ಕುಡಿಯಬೇಕು. ಇದು ಹಸಿವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಬಿಸಿ ನೀರು ಚಯಾಪಚಯ ಕ್ರಿಯೆಯನ್ನು ವೇಗಗೊಳಿಸುತ್ತದೆ ಮತ್ತು ಕ್ಯಾಲೊರಿಗಳನ್ನು ಸುಡಲು ಸಹಾಯ ಮಾಡುತ್ತದೆ.

ಚರ್ಮವನ್ನು ಕಾಂತಿಯುತಗೊಳಿಸುತ್ತದೆ:  ಬಿಸಿನೀರು ದೇಹದಲ್ಲಿ ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ, ಇದು ಚರ್ಮಕ್ಕೆ ಹೆಚ್ಚಿನ ಆಮ್ಲಜನಕವನ್ನು ಒದಗಿಸುತ್ತದೆ. ಚರ್ಮವನ್ನು ಕಾಂತಿಯುತವಾಗಿಸುತ್ತದೆ ಮತ್ತು ಮೊಡವೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಮೂತ್ರದಲ್ಲಿ ರಕ್ತ ಬರುತ್ತಾ? ಮೂಲವ್ಯಾಧಿ ಇದ್ಯಾ? ಚಿಂತೆ ಬೇಡ! ಬೆಳಿಗ್ಗೆ ಎದ್ದು ಈ ತರಕಾರಿಯ ಜ್ಯೂಸ್ ಕುಡಿಯಿರಿ

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ : ಬೆಚ್ಚಗಿನ ನೀರು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ರೋಗಗಳಿಂದ ನಿಮ್ಮನ್ನು ರಕ್ಷಿಸಲು ಸಹಾಯ ಮಾಡುತ್ತದೆ. ಅಲ್ಲದೆ ಇದು ಒತ್ತಡವನ್ನು ಕಡಿಮೆ ಮಾಡಲು ಕೂಡ ಸಹಕಾರಿಯಾಗಿದೆ.

ಈ ಎಲ್ಲಾ ಕಾರಣಗಳಿಂದಾಗಿ, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬೆಚ್ಚಗಿನ ನೀರನ್ನು ಕುಡಿಯುವ ಅಭ್ಯಾಸವನ್ನು ಬೆಳೆಸಿಕೊಳ್ಳಿ. ಇದರ ಮೂಲಕ ನೀವು  ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ