AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಲಿ ಹೊಟ್ಟೆಯಲ್ಲಿ ಜಾಯಿಕಾಯಿ ನೀರು ಕುಡಿದರೆ ಈ ಎಲ್ಲಾ ಸಮಸ್ಯೆಗಗಳಿಗೂ ಪರಿಹಾರ ಸಿಗುತ್ತದೆ

ಜಾಯಿಕಾಯಿ ಪುಡಿ ಬೆರೆಸಿದ ನೀರನ್ನು ಕುಡಿಯುವುದು ತುಂಬಾ ಒಳ್ಳೆಯದು. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಯಿಕಾಯಿ ಪುಡಿಯನ್ನು ನೀರಿನೊಂದಿಗೆ ಬೆರೆಸಿ ಕುಡಿಯುವುದರಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು ಎಂದು ತಜ್ಞರು ಹೇಳುತ್ತಾರೆ. ಹಾಗಾದರೆ ಇದನ್ನು ಖಾಲಿ ಹೊಟ್ಟೆಯಲ್ಲಿ ಏಕೆ ಸೇವನೆ ಮಾಡಬೇಕು? ಇದರಿಂದ ಯಾವ ರೀತಿಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಖಾಲಿ ಹೊಟ್ಟೆಯಲ್ಲಿ ಜಾಯಿಕಾಯಿ ನೀರು ಕುಡಿದರೆ ಈ ಎಲ್ಲಾ ಸಮಸ್ಯೆಗಗಳಿಗೂ ಪರಿಹಾರ ಸಿಗುತ್ತದೆ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Jan 22, 2025 | 1:14 PM

Share

ಜಾಯಿಕಾಯಿ ಬಗ್ಗೆ ನೀವು ಕೇಳಿರಬಹುದು. ಸಾಮಾನ್ಯವಾಗಿ ಇದನ್ನು ವಿವಿಧ ರೀತಿಯ ಆಹಾರಗಳ ತಯಾರಿಕೆಯಲ್ಲಿ ಉಪಯೋಗ ಮಾಡಲಾಗುತ್ತದೆ. ಅದಲ್ಲದೆ ಇದರಲ್ಲಿ ಅನೇಕ ರೀತಿಯ ಔಷಧೀಯ ಗುಣಗಳಿವೆ. ತಜ್ಞರು ಹೇಳುವ ಪ್ರಕಾರ, ಇದರ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು ಏಕೆಂದರೆ, ಜಾಯಿಕಾಯಿಯಲ್ಲಿ ಪೋಷಕಾಂಶಗಳು ಸಮೃದ್ಧವಾಗಿವೆ. ಇದರಲ್ಲಿ ಕ್ಯಾಲ್ಸಿಯಂ, ಮೆಗ್ನೀಸಿಯಮ್, ಸತು, ಕಬ್ಬಿಣ ಮತ್ತು ತಾಮ್ರದ ಅಂಶವು ಅಧಿಕವಾಗಿದೆ. ಅದರಲ್ಲಿಯೂ ಜಾಯಿಕಾಯಿ ಪುಡಿ ಬೆರೆಸಿದ ನೀರನ್ನು ಕುಡಿಯುವುದು ತುಂಬಾ ಒಳ್ಳೆಯದು. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಯಿಕಾಯಿ ಪುಡಿಯನ್ನು ನೀರಿನೊಂದಿಗೆ ಬೆರೆಸಿ ಕುಡಿಯುವುದರಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು ಎಂದು ಹೇಳುತ್ತಾರೆ. ಹಾಗಾದರೆ ಇದನ್ನು ಖಾಲಿ ಹೊಟ್ಟೆಯಲ್ಲಿ ಏಕೆ ಸೇವನೆ ಮಾಡಬೇಕು? ಇದರಿಂದ ಯಾವ ರೀತಿಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಜೀರ್ಣ ಶಕ್ತಿ ಹೆಚ್ಚುತ್ತದೆ:

ಖಾಲಿ ಹೊಟ್ಟೆಯಲ್ಲಿ ನೀರಿನೊಂದಿಗೆ ಜಾಯಿಕಾಯಿ ಪುಡಿಯನ್ನು ಕುಡಿಯುವುದರಿಂದ ಜೀರ್ಣ ಶಕ್ತಿ ಹೆಚ್ಚುತ್ತದೆ. ಜೊತೆಗೆ ಜಾಯಿಕಾಯಿಯಲ್ಲಿ ಬ್ಯಾಕ್ಟೀರಿಯಾ ವಿರೋಧಿ ಮತ್ತು ಶಿಲೀಂಧ್ರ ವಿರೋಧಿ ಗುಣಗಳಿವೆ. ಅವು ಹೊಟ್ಟೆಯ ಸಮಸ್ಯೆಗಳನ್ನು ನಿವಾರಿಸಲು ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತವೆ. ಜಾಯಿಕಾಯಿ ನೀರನ್ನು ನಿಯಮಿತವಾಗಿ ಸೇವಿಸುವುದರಿಂದ ಮಲಬದ್ಧತೆ ಮತ್ತು ಆಮ್ಲೀಯತೆಯಂತಹ ಸಮಸ್ಯೆಗಳನ್ನು ಕಡಿಮೆ ಮಾಡಬಹುದು ಮತ್ತು ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿರಿಸಬಹುದು.

ಮೈಗ್ರೇನ್ ನಿಂದ ಮುಕ್ತಿ:

ಜಾಯಿಕಾಯಿಯಲ್ಲಿ ನೋವು ನಿವಾರಕ ಗುಣಗಳಿವೆ. ಅವು ತಲೆನೋವು ಮತ್ತು ಮೈಗ್ರೇನ್ ನೋವಿನಿಂದ ಪರಿಹಾರ ನೀಡುತ್ತವೆ. ಹಾಗಾಗಿ ಮುಂಜಾನೆ ಸಮಯದಲ್ಲಿ ಈ ಜಾಯಿಕಾಯಿ ನೀರನ್ನು ನಿಯಮಿತವಾಗಿ ಕುಡಿಯುವುದರಿಂದ ತಲೆನೋವು ಮತ್ತು ಮೈಗ್ರೇನ್ ರೋಗಲಕ್ಷಣಗಳಿಂದ ಪರಿಹಾರ ಪಡೆದುಕೊಳ್ಳಬಹುದು.

ಹಾನಿಕಾರಕ ಸೋಂಕುಗಳ ವಿರುದ್ಧ ಹೋರಾಡುತ್ತದೆ:

ಜಾಯಿಕಾಯಿಯಲ್ಲಿ ಸಾಕಷ್ಟು ಉತ್ಕರ್ಷಣ ನಿರೋಧಕ ಮತ್ತು ಉರಿಯೂತ ಗುಣಗಳಿವೆ. ಇದು ರೋಗ ನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಜೊತೆಗೆ ಹೊರಗಿನಿಂದ ಬರುವ ಹಾನಿಕಾರಕ ಸೋಂಕುಗಳ ವಿರುದ್ಧ ಹೋರಾಡುವ ದೇಹದ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಇದರಿಂದ ಸೋಂಕುಗಳಿಗೆ ಒಳಗಾಗುವುದು ಕಡಿಮೆಯಾಗುತ್ತದೆ.

ಇದನ್ನೂ ಓದಿ: ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ತಿಂದರೆ ಏನಾಗುತ್ತದೆ ಎಂಬುದು ತಿಳಿದಿದೆಯೇ?

ಒತ್ತಡವನ್ನು ಕಡಿಮೆ ಮಾಡುತ್ತದೆ:

ಜಾಯಿಕಾಯಿಯಲ್ಲಿರುವ ಟ್ರಿಪ್ಟೋಫಾನ್ ನಂತಹ ನೈಸರ್ಗಿಕ ಸಂಯುಕ್ತಗಳು ಮೆದುಳನ್ನು ಒತ್ತಡ ಮುಕ್ತಗೊಳಿಸಿ ದೇಹ ಮತ್ತು ಮನಸ್ಸನ್ನು ಶಾಂತಗೊಳಿಸುತ್ತದೆ. ಹಾಗಾಗಿ ಖಾಲಿ ಹೊಟ್ಟೆಯಲ್ಲಿ ಜಾಯಿಕಾಯಿ ನೀರನ್ನು ಕುಡಿಯುವುದರಿಂದ ಒತ್ತಡವನ್ನು ಕಡಿಮೆ ಮಾಡುತ್ತದೆ. ನಿದ್ರೆಯ ಗುಣಮಟ್ಟವನ್ನು ಸುಧಾರಿಸುತ್ತದೆ. ಹಾಗಾಗಿ ನಿದ್ರಾಹೀನತೆಯಿಂದ ಬಳಲುತ್ತಿದ್ದು ಪ್ರತಿನಿತ್ಯ ಮಾತ್ರೆ ತೆಗೆದುಕೊಳ್ಳುವ ಅಭ್ಯಾಸ ಇರುವವರಿಗೆ ಇದು ಪ್ರಯೋಜನಕಾರಿಯಾಗಿದೆ.

ಚರ್ಮದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ:

ಜಾಯಿಕಾಯಿಯಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಮತ್ತು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳು ಚರ್ಮವನ್ನು ಆರೋಗ್ಯಕರವಾಗಿ ಮತ್ತು ಸ್ವಚ್ಛವಾಗಿಡಲು ಸಹಾಯ ಮಾಡುತ್ತದೆ. ಇದು ಮೊಡವೆ ಮತ್ತು ಇತರ ಚರ್ಮದ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹಾಗಾಗಿ ಜಾಯಿಕಾಯಿ ನೀರನ್ನು ಕುಡಿಯುವುದರಿಂದ ಚರ್ಮದ ಸೌಂದರ್ಯ ಹೆಚ್ಚುತ್ತದೆ. ಜೊತೆಗೆ ಇದರ ನೀರನ್ನು ಕುಡಿಯುವುದರಿಂದ ಮೊಡವೆಗಳು ಕಡಿಮೆಯಾಗಿ, ಸುಕ್ಕುಗಳು ಬರುವುದಿಲ್ಲ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ