ಜಾಯಿಕಾಯಿ ಬಗ್ಗೆ ನೀವು ಕೇಳಿರಬಹುದು. ಸಾಮಾನ್ಯವಾಗಿ ಇದನ್ನು ವಿವಿಧ ರೀತಿಯ ಆಹಾರಗಳ ತಯಾರಿಕೆಯಲ್ಲಿ ಉಪಯೋಗ ಮಾಡಲಾಗುತ್ತದೆ. ಅದಲ್ಲದೆ ಇದರಲ್ಲಿ ಅನೇಕ ರೀತಿಯ ಔಷಧೀಯ ಗುಣಗಳಿವೆ. ತಜ್ಞರು ಹೇಳುವ ಪ್ರಕಾರ, ಇದರ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು ಏಕೆಂದರೆ, ಜಾಯಿಕಾಯಿಯಲ್ಲಿ ಪೋಷಕಾಂಶಗಳು ಸಮೃದ್ಧವಾಗಿವೆ. ಇದರಲ್ಲಿ ಕ್ಯಾಲ್ಸಿಯಂ, ಮೆಗ್ನೀಸಿಯಮ್, ಸತು, ಕಬ್ಬಿಣ ಮತ್ತು ತಾಮ್ರದ ಅಂಶವು ಅಧಿಕವಾಗಿದೆ. ಅದರಲ್ಲಿಯೂ ಜಾಯಿಕಾಯಿ ಪುಡಿ ಬೆರೆಸಿದ ನೀರನ್ನು ಕುಡಿಯುವುದು ತುಂಬಾ ಒಳ್ಳೆಯದು. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಯಿಕಾಯಿ ಪುಡಿಯನ್ನು ನೀರಿನೊಂದಿಗೆ ಬೆರೆಸಿ ಕುಡಿಯುವುದರಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು ಎಂದು ಹೇಳುತ್ತಾರೆ. ಹಾಗಾದರೆ ಇದನ್ನು ಖಾಲಿ ಹೊಟ್ಟೆಯಲ್ಲಿ ಏಕೆ ಸೇವನೆ ಮಾಡಬೇಕು? ಇದರಿಂದ ಯಾವ ರೀತಿಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಖಾಲಿ ಹೊಟ್ಟೆಯಲ್ಲಿ ನೀರಿನೊಂದಿಗೆ ಜಾಯಿಕಾಯಿ ಪುಡಿಯನ್ನು ಕುಡಿಯುವುದರಿಂದ ಜೀರ್ಣ ಶಕ್ತಿ ಹೆಚ್ಚುತ್ತದೆ. ಜೊತೆಗೆ ಜಾಯಿಕಾಯಿಯಲ್ಲಿ ಬ್ಯಾಕ್ಟೀರಿಯಾ ವಿರೋಧಿ ಮತ್ತು ಶಿಲೀಂಧ್ರ ವಿರೋಧಿ ಗುಣಗಳಿವೆ. ಅವು ಹೊಟ್ಟೆಯ ಸಮಸ್ಯೆಗಳನ್ನು ನಿವಾರಿಸಲು ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತವೆ. ಜಾಯಿಕಾಯಿ ನೀರನ್ನು ನಿಯಮಿತವಾಗಿ ಸೇವಿಸುವುದರಿಂದ ಮಲಬದ್ಧತೆ ಮತ್ತು ಆಮ್ಲೀಯತೆಯಂತಹ ಸಮಸ್ಯೆಗಳನ್ನು ಕಡಿಮೆ ಮಾಡಬಹುದು ಮತ್ತು ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿರಿಸಬಹುದು.
ಜಾಯಿಕಾಯಿಯಲ್ಲಿ ನೋವು ನಿವಾರಕ ಗುಣಗಳಿವೆ. ಅವು ತಲೆನೋವು ಮತ್ತು ಮೈಗ್ರೇನ್ ನೋವಿನಿಂದ ಪರಿಹಾರ ನೀಡುತ್ತವೆ. ಹಾಗಾಗಿ ಮುಂಜಾನೆ ಸಮಯದಲ್ಲಿ ಈ ಜಾಯಿಕಾಯಿ ನೀರನ್ನು ನಿಯಮಿತವಾಗಿ ಕುಡಿಯುವುದರಿಂದ ತಲೆನೋವು ಮತ್ತು ಮೈಗ್ರೇನ್ ರೋಗಲಕ್ಷಣಗಳಿಂದ ಪರಿಹಾರ ಪಡೆದುಕೊಳ್ಳಬಹುದು.
ಜಾಯಿಕಾಯಿಯಲ್ಲಿ ಸಾಕಷ್ಟು ಉತ್ಕರ್ಷಣ ನಿರೋಧಕ ಮತ್ತು ಉರಿಯೂತ ಗುಣಗಳಿವೆ. ಇದು ರೋಗ ನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಜೊತೆಗೆ ಹೊರಗಿನಿಂದ ಬರುವ ಹಾನಿಕಾರಕ ಸೋಂಕುಗಳ ವಿರುದ್ಧ ಹೋರಾಡುವ ದೇಹದ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಇದರಿಂದ ಸೋಂಕುಗಳಿಗೆ ಒಳಗಾಗುವುದು ಕಡಿಮೆಯಾಗುತ್ತದೆ.
ಇದನ್ನೂ ಓದಿ: ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ತಿಂದರೆ ಏನಾಗುತ್ತದೆ ಎಂಬುದು ತಿಳಿದಿದೆಯೇ?
ಜಾಯಿಕಾಯಿಯಲ್ಲಿರುವ ಟ್ರಿಪ್ಟೋಫಾನ್ ನಂತಹ ನೈಸರ್ಗಿಕ ಸಂಯುಕ್ತಗಳು ಮೆದುಳನ್ನು ಒತ್ತಡ ಮುಕ್ತಗೊಳಿಸಿ ದೇಹ ಮತ್ತು ಮನಸ್ಸನ್ನು ಶಾಂತಗೊಳಿಸುತ್ತದೆ. ಹಾಗಾಗಿ ಖಾಲಿ ಹೊಟ್ಟೆಯಲ್ಲಿ ಜಾಯಿಕಾಯಿ ನೀರನ್ನು ಕುಡಿಯುವುದರಿಂದ ಒತ್ತಡವನ್ನು ಕಡಿಮೆ ಮಾಡುತ್ತದೆ. ನಿದ್ರೆಯ ಗುಣಮಟ್ಟವನ್ನು ಸುಧಾರಿಸುತ್ತದೆ. ಹಾಗಾಗಿ ನಿದ್ರಾಹೀನತೆಯಿಂದ ಬಳಲುತ್ತಿದ್ದು ಪ್ರತಿನಿತ್ಯ ಮಾತ್ರೆ ತೆಗೆದುಕೊಳ್ಳುವ ಅಭ್ಯಾಸ ಇರುವವರಿಗೆ ಇದು ಪ್ರಯೋಜನಕಾರಿಯಾಗಿದೆ.
ಜಾಯಿಕಾಯಿಯಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಮತ್ತು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳು ಚರ್ಮವನ್ನು ಆರೋಗ್ಯಕರವಾಗಿ ಮತ್ತು ಸ್ವಚ್ಛವಾಗಿಡಲು ಸಹಾಯ ಮಾಡುತ್ತದೆ. ಇದು ಮೊಡವೆ ಮತ್ತು ಇತರ ಚರ್ಮದ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹಾಗಾಗಿ ಜಾಯಿಕಾಯಿ ನೀರನ್ನು ಕುಡಿಯುವುದರಿಂದ ಚರ್ಮದ ಸೌಂದರ್ಯ ಹೆಚ್ಚುತ್ತದೆ. ಜೊತೆಗೆ ಇದರ ನೀರನ್ನು ಕುಡಿಯುವುದರಿಂದ ಮೊಡವೆಗಳು ಕಡಿಮೆಯಾಗಿ, ಸುಕ್ಕುಗಳು ಬರುವುದಿಲ್ಲ.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ