AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗ್ಗೆ ಎದ್ದ ತಕ್ಷಣ ಹಲ್ಲುಜ್ಜದೆ ನೀರು ಕುಡಿಯುವುದರಿಂದ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಹಲ್ಲುಜ್ಜುವ ಮೊದಲು ನೀರನ್ನು ಕುಡಿಯಲು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಇದು ನಿಮ್ಮ ದೇಹದಲ್ಲಿರುವ ವಿಷಕಾರಿ ವಸ್ತುಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.

ಬೆಳಗ್ಗೆ ಎದ್ದ ತಕ್ಷಣ ಹಲ್ಲುಜ್ಜದೆ ನೀರು ಕುಡಿಯುವುದರಿಂದ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?
ನೀರು
ನಯನಾ ರಾಜೀವ್
|

Updated on: Feb 14, 2023 | 3:10 PM

Share

ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಹಲ್ಲುಜ್ಜುವ ಮೊದಲು ನೀರನ್ನು ಕುಡಿಯಲು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಇದು ನಿಮ್ಮ ದೇಹದಲ್ಲಿರುವ ವಿಷಕಾರಿ ವಸ್ತುಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಇದರೊಂದಿಗೆ, ಗ್ಯಾಸ್, ಆ್ಯಸಿಡಿಟಿ, ಅಜೀರ್ಣ ಮತ್ತು ಮಲಬದ್ಧತೆ ಮುಂತಾದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ನೀವು ರಕ್ಷಣೆ ಪಡೆಯುತ್ತೀರಿ. ಅದೇ ಸಮಯದಲ್ಲಿ, ಇದು ನಿಮ್ಮ ಚರ್ಮದ ಮೇಲೆ ಇರುವ ಮೊಡವೆಗಳು ಮತ್ತು ಮಂದತೆಯನ್ನು ದೂರವಿಡುತ್ತದೆ ಮತ್ತು ನೀವು ಹೊಳೆಯುವ ಚರ್ಮವನ್ನು ಪಡೆಯುತ್ತೀರಿ.

ಆದರೆ ಅನೇಕ ಬಾರಿ ಜನರು ಬೆಳಿಗ್ಗೆ ಹಲ್ಲುಜ್ಜದೆ ನೀರು ಕುಡಿಯುವುದರ ಬಗ್ಗೆ ಗೊಂದಲಕ್ಕೊಳಗಾಗುತ್ತಾರೆ, ಆದ್ದರಿಂದ ನಾವು ಇಂದು ನಿಮಗೆ ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬ್ರಷ್ ಮಾಡದೆ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ಹೇಳಲಿದ್ದೇವೆ.

ಇದನ್ನು ದಿನಚರಿಯಲ್ಲಿ ಅಳವಡಿಸಿಕೊಂಡರೆ ಹಲವಾರು ರೋಗಗಳಿಂದ ಪಾರಾಗಬಹುದು, ಹಾಗಾದರೆ ಹಲ್ಲುಜ್ಜದೆ ನೀರು ಕುಡಿಯುವುದರಿಂದ ಆಗುವ ಲಾಭಗಳೇನು ಎಂದು ತಿಳಿಯೋಣ.

ಮತ್ತಷ್ಟು ಓದಿ: ನೀರು ಹೆಚ್ಚು ಕುಡಿಯುವುದರಿಂದ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರಬಹುದು

ಹಲ್ಲುಜ್ಜದೆ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳು

ಆರೋಗ್ಯಕರ ಜೀರ್ಣಕ್ರಿಯೆ ನೀವು ಪ್ರತಿದಿನ ಬೆಳಿಗ್ಗೆ ಹಲ್ಲುಜ್ಜದೆ ಖಾಲಿ ಹೊಟ್ಟೆಯಲ್ಲಿ ನೀರನ್ನು ಸೇವಿಸಿದರೆ, ಅದು ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಇದರೊಂದಿಗೆ ಬ್ಯಾಕ್ಟೀರಿಯಾ ಕೂಡ ಬಾಯಿಯಲ್ಲಿ ಸಂಗ್ರಹವಾಗುವುದಿಲ್ಲ.

ರೋಗನಿರೋಧಕ ಶಕ್ತಿ ವರ್ಧಕ ನೀವು ಪ್ರತಿದಿನ ಬೆಳಿಗ್ಗೆ ಹಲ್ಲುಜ್ಜದೆ ಖಾಲಿ ಹೊಟ್ಟೆಯಲ್ಲಿ ನೀರನ್ನು ಸೇವಿಸಿದರೆ, ಅದು ನಿಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಶೀತಕ್ಕೆ ಬಹುಬೇಗ ಬಲಿಯಾಗುವವರು ಪ್ರತಿದಿನ ಬೆಳಗ್ಗೆ ಹಲ್ಲುಜ್ಜದೆ ನೀರು ಕುಡಿಯಬೇಕು.

ಬಲವಾದ ಕೂದಲು ನೀವು ಪ್ರತಿದಿನ ಬೆಳಿಗ್ಗೆ ಹಲ್ಲುಜ್ಜದೆ ಖಾಲಿ ಹೊಟ್ಟೆಯಲ್ಲಿ ನೀರನ್ನು ಕುಡಿಯುತ್ತಿದ್ದರೆ, ಅದು ನಿಮ್ಮ ಕೂದಲನ್ನು ಬಲವಾಗಿ ಮತ್ತು ಹೊಳೆಯುವಂತೆ ಮಾಡುತ್ತದೆ. ಇದಲ್ಲದೇ ನಿಮ್ಮ ತ್ವಚೆಯಲ್ಲಿ ಗ್ಲೋ ಉಳಿಯುತ್ತದೆ.

ರಕ್ತದೊತ್ತಡ ಮತ್ತು ಮಧುಮೇಹವನ್ನು ನಿಯಂತ್ರಣದಲ್ಲಿಡುತ್ತೆ

ನೀವು ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಂತಹ ಜೀವನಶೈಲಿ ಕಾಯಿಲೆಗಳಿಂದ ಬಳಲುತ್ತಿದ್ದರೆ, ನೀವು ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಹಲ್ಲುಜ್ಜುವ ಮೊದಲು ನೀರನ್ನು ಕುಡಿಯಬೇಕು. ಇದರೊಂದಿಗೆ ನಿಮ್ಮ ತೂಕವೂ ನಿಯಂತ್ರಣದಲ್ಲಿರುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್