ಮಾವಿನ ಹಣ್ಣು ಇಷ್ಟ ಆಗುತ್ತಾ? ಈ ಸಮಯದಲ್ಲಿ ತಿನ್ನುವುದು ಒಳ್ಳೆಯದು
ಮಾವಿನಹಣ್ಣಿನ ಸೇವನೆ ನಾಲಿಗೆಗೆ ರುಚಿ ನೀಡುವುದು ಮಾತ್ರವಲ್ಲ ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಈ ಹಣ್ಣು ಪೋಷಕಾಂಶಗಳಿಂದ ಸಮೃದ್ಧವಾಗಿರುವುದರಿಂದ ನಾನಾ ರೀತಿಯ ಭಕ್ಷ್ಯಗಳ ತಯಾರಿಕೆಯಲ್ಲಿ ಬಳಸಿಕೊಳ್ಳಬಹುದು ಅಥವಾ ಅದನ್ನು ಹಾಗೆಯೇ ಸೇವನೆ ಮಾಡಬಹುದು. ಹಾಗಾದರೆ ಬೇಸಿಗೆ ಋತುವಿನಲ್ಲಿ ಮಾವಿನ ಹಣ್ಣನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು? ಯಾವ ರೀತಿಯ ಅನಾರೋಗ್ಯ ಸಮಸ್ಯೆಯನ್ನು ನಿವಾರಿಸುತ್ತದೆ ಎಂಬುದನ್ನು ತಿಳಿದುಕೊಳ್ಳಿ.

ಬೇಸಿಗೆ ಕಾಲ ಮಾವಿನ ಹಣ್ಣಿನ ಋತುವಾಗಿದೆ. ಸಾಮಾನ್ಯವಾಗಿ ಮಾವು ಎಲ್ಲರಿಗೂ ಇಷ್ಟವಾಗುವ ಹಣ್ಣು. ಅದಕ್ಕಾಗಿಯೇ ಅವುಗಳನ್ನು ಹಣ್ಣುಗಳ ರಾಜ ಎಂದು ಕರೆಯಲಾಗುತ್ತದೆ. ಕೆಲವರಿಗೆ ಮಾವಿನ ಕಾಯಿಗೆ ಉಪ್ಪು, ಖಾರ ಹಾಕಿ ತಿನ್ನುವ ಅಭ್ಯಾಸವಿರುತ್ತದೆ. ಇದು ಕೆಲವೊಮ್ಮೆ ಪಿತ್ತ, ಅಲರ್ಜಿಗೆ ಕಾರಣವಾಗಬಹುದು. ಆದರೆ ಮಾವಿನಹಣ್ಣನ್ನು ತಿನ್ನುವುದು ಮತ್ತಷ್ಟು ರುಚಿ ನೀಡುವುದಲ್ಲದೆ ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಈ ಹಣ್ಣು ಪೋಷಕಾಂಶಗಳಿಂದ ಸಮೃದ್ಧವಾಗಿರುವುದರಿಂದ ನಾನಾ ರೀತಿಯ ಭಕ್ಷ್ಯಗಳ ತಯಾರಿಕೆಯಲ್ಲಿ ಬಳಸಿಕೊಳ್ಳಬಹುದು ಅಥವಾ ಅದನ್ನು ಹಾಗೆಯೇ ಸೇವನೆ ಮಾಡಬಹುದು. ಹಾಗಾದರೆ ಬೇಸಿಗೆ ಋತುವಿನಲ್ಲಿ ಮಾವಿನ ಹಣ್ಣನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು? ಯಾವ ರೀತಿಯ ಅನಾರೋಗ್ಯ ಸಮಸ್ಯೆಯನ್ನು ನಿವಾರಿಸುತ್ತದೆ ಎಂಬುದನ್ನು ತಿಳಿದುಕೊಳ್ಳಿ.
ಮಾವಿನ ಹಣ್ಣನ್ನು ಸೇವನೆ ಮಾಡುವುದರಿಂದ ಸಿಗುವ ಪ್ರಯೋಜನವೇನು?
ಈ ಹಣ್ಣಿನಲ್ಲಿ ನಾರಿನಂಶ ಸಮೃದ್ಧವಾಗಿದ್ದು ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಮಲಬದ್ಧತೆಯನ್ನು ಕಡಿಮೆ ಮಾಡುತ್ತದೆ.
ಮಾವಿನಹಣ್ಣುಗಳನ್ನು ತಿನ್ನುವುದರಿಂದ ಉರಿಯೂತ, ಅಜೀರ್ಣ ಮತ್ತು ಅತಿಸಾರದಂತಹ ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ.
ಮಾವಿನ ಹಣ್ಣಿನಲ್ಲಿ ಪೊಟ್ಯಾಸಿಯಮ್ ಇರುತ್ತದೆ. ಇದು ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಪೊಟ್ಯಾಸಿಯಮ್ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ದೇಹದಲ್ಲಿನ ಎಲೆಕ್ಟ್ರೋಲೈಟ್ ಗಳನ್ನು ಸಮತೋಲನಗೊಳಿಸುತ್ತದೆ.
ಹಣ್ಣುಗಳ ರಾಜ, ಮಾವಿನ ಹಣ್ಣಿನಲ್ಲಿ ವಿಟಮಿನ್ ಸಿ ಇದೆ. ಇದು ಉತ್ಕರ್ಷಣ ನಿರೋಧಕವಾಗಿದ್ದು, ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ.
ಮಾವಿನಹಣ್ಣಿನಲ್ಲಿ ಕ್ಯಾನ್ಸರ್ ವಿರುದ್ಧ ಹೋರಾಡಲು ಸಹಾಯ ಮಾಡುವ ಇತರ ಫೈಟೊಕೆಮಿಕಲ್ ಗಳಿವೆ. ಜೊತೆಗೆ ಬೀಟಾ- ಕ್ಯಾರೋಟಿನ್ ಇದೆ, ಇದನ್ನು ದೇಹದಲ್ಲಿ ವಿಟಮಿನ್ ಎ ಆಗಿ ಪರಿವರ್ತಿಸಲಾಗುತ್ತದೆ. ಇದು ಕಣ್ಣಿನ ಆರೋಗ್ಯಕ್ಕೆ ಒಳ್ಳೆಯದು.
ಮಾವಿನಹಣ್ಣಿನಲ್ಲಿ ವಿಟಮಿನ್ ಎ, ಇ ಮತ್ತು ಆಂಟಿಆಕ್ಸಿಡೆಂಟ್ ಗಳಿವೆ. ಅವು ಚರ್ಮಕ್ಕೆ ಒಳ್ಳೆಯದು. ಆದರೆ ಮಾವಿನ ಹಣ್ಣಿನ ಸ್ವಭಾವವು ಬಿಸಿಯಾಗಿರುತ್ತದೆ. ಆದ್ದರಿಂದ ಇದನ್ನು ತಿನ್ನುವ ಮೊದಲು ನೀರಿನಲ್ಲಿ ನೆನೆಸಬೇಕು. ಇದರಿಂದ ಚರ್ಮಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳು ಇರುವುದಿಲ್ಲ.
ಮಾವಿನಹಣ್ಣಿನಲ್ಲಿ ಕ್ಯಾಲೊರಿ ಮತ್ತು ಕೊಬ್ಬಿನ ಅಂಶ ಕಡಿಮೆ ಇರುತ್ತದೆ. ಇದು ತೂಕವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಇದನ್ನೂ ಓದಿ: ಈ ಸಮಯದಲ್ಲಿ ಹಣ್ಣುಗಳನ್ನು ಸೇವಿಸಿದರೆ, ಅದು ವಿಷವಾಗುತ್ತೆ
ಮಾವಿನಹಣ್ಣು ತಿನ್ನಲು ಒಳ್ಳೆಯ ಸಮಯ ಯಾವುದು?
ಸಾಮಾನ್ಯವಾಗಿ ಮಾವನ್ನು ಮಧ್ಯಾಹ್ನದ ಸಮಯದಲ್ಲಿ ಸೇವನೆ ಮಾಡಬೇಕು ಎಂದು ತಜ್ಞರು ಹೇಳುತ್ತಾರೆ. ಏಕೆಂದರೆ ಮಾವು ಬಿಸಿ ಸ್ವಭಾವದ ಹಣ್ಣಾಗಿರುವುದರಿಂದ ರಾತ್ರಿ ಸಮಯದಲ್ಲಿ ತಿನ್ನುವುದರಿಂದ ದೇಹದ ಉಷ್ಣತೆ ಹೆಚ್ಚಾಗುತ್ತದೆ. ಇದು ಹೊಟ್ಟೆಯಲ್ಲಿ ಶಾಖ ಮತ್ತು ಮುಖದ ಮೇಲೆ ಮೊಡವೆಗಳನ್ನು ಹೆಚ್ಚಿಸುತ್ತದೆ. ಹಾಗಾಗಿ ಸಾಧ್ಯವಾದಷ್ಟು ರಾತ್ರಿ ಸಮಯದಲ್ಲಿ ಮಾವಿನ ಹಣ್ಣುಗಳ ಸೇವನೆ ಮಾಡಬೇಡಿ.
ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ