AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೊಜ್ಜಿನ ಸಮಸ್ಯೆಯಿಂದ ಮುಕ್ತಿ ಬೇಕಾದರೆ ಮಾವಿನ ಹಣ್ಣನ್ನು ತಿನ್ನಿ

ಬೇಸಿಗೆ ಮಾವು ಪ್ರೀಯರಿಗೆ ಹಬ್ಬವಿದ್ದಂತೆ. ವಿವಿಧ ರೀತಿ ಸುವಾಸನೆಯ ವಿಭಿನ್ನ ಬಗೆಯ ಮಾವು ನಮ್ಮ ಮನ ಸೆಳೆಯುವುದರಲ್ಲಿ ಸಂಶಯವಿಲ್ಲ. ಅದಲ್ಲದೆ ಈ ಋತುವಿನಲ್ಲಿ ಮಾವಿನ ಹಣ್ಣುಗಳನ್ನು ಸೇವನೆ ಮಾಡುವುದು ಆರೋಗ್ಯಕ್ಕೆ ಬಹಳ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ. ಹಾಗಾದರೆ ಮಾವಿನ ಹಣ್ಣಿನ ಸೇವನೆಯಿಂದ ಯಾವ ರೀತಿಯ ಪ್ರಯೋಜನಗಳಿವೆ? ಯಾವ ಸಮಸ್ಯೆಗೆ ಇದು ಒಳ್ಳೆಯದು ಎಂಬುದನ್ನು ತಿಳಿದುಕೊಳ್ಳಿ.

ಬೊಜ್ಜಿನ ಸಮಸ್ಯೆಯಿಂದ ಮುಕ್ತಿ ಬೇಕಾದರೆ ಮಾವಿನ ಹಣ್ಣನ್ನು ತಿನ್ನಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Mar 10, 2025 | 4:44 PM

Share

ಬೇಸಿಗೆ(summer) ಬಂದರೆ ಸಾಕು ಮಾವಿನ ಹಣ್ಣಿನ ರಾಶಿ ರಾಶಿ ಮಾರುಕಟ್ಟೆಯಲ್ಲಿ ಕಾಣಸಿಗುತ್ತದೆ. ಬೇಸಿಗೆ ಮಾವು(Mango) ಪ್ರೀಯರಿಗೆ ಹಬ್ಬವಿದ್ದಂತೆ. ವಿವಿಧ ರೀತಿ ಸುವಾಸನೆಯ, ವಿಭಿನ್ನ ಬಗೆಯ ಮಾವು ನಮ್ಮ ಮನ ಸೆಳೆಯುವುದರಲ್ಲಿ ಸಂಶಯವಿಲ್ಲ. ಅದಲ್ಲದೆ ಈ ಋತುವಿನಲ್ಲಿ ಮಾವಿನ ಹಣ್ಣುಗಳನ್ನು ಸೇವನೆ ಮಾಡುವುದು ಆರೋಗ್ಯಕ್ಕೆ ಬಹಳ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ. ಹಾಗಾದರೆ ಮಾವಿನ ಹಣ್ಣಿನ ಸೇವನೆಯಿಂದ ಯಾವ ರೀತಿಯ ಪ್ರಯೋಜನಗಳಿವೆ? ಯಾವ ಸಮಸ್ಯೆಗೆ ಇದು ಒಳ್ಳೆಯದು ಎಂಬುದನ್ನು ತಿಳಿದುಕೊಳ್ಳಿ.

  • ಚರ್ಮಕ್ಕೆ ಒಳ್ಳೆಯದು: ಮಾವಿನಹಣ್ಣು ಚರ್ಮದ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದು ಚರ್ಮಕ್ಕೆ ತೇವಾಂಶವನ್ನು ಒದಗಿಸುತ್ತದೆ ಮತ್ತು ಹೊಳಪನ್ನು ನೀಡುತ್ತದೆ. ವಯಸ್ಸಾದ ಛಾಯೆಗಳನ್ನು ನಿವಾರಣೆ ಮಾಡುತ್ತದೆ ಮತ್ತು ಸುಕ್ಕುಗಳಿಂದ ರಕ್ಷಿಸುತ್ತದೆ. ಇದು ನಿಮ್ಮನ್ನು ಚಿಕ್ಕವರಂತೆ ಕಾಣುವಂತೆ ಮಾಡುತ್ತದೆ.
  • ಹೃದಯದ ಆರೋಗ್ಯ ಕಾಪಾಡುತ್ತದೆ: ಮಾವಿನ ಹಣ್ಣಿನಲ್ಲಿ ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಸಮೃದ್ಧವಾಗಿದೆ. ಅವು ಅಧಿಕ ರಕ್ತದೊತ್ತಡದಿಂದ ರಕ್ಷಿಸುತ್ತವೆ. ಇದು ಹೃದಯದ ಆರೋಗ್ಯವನ್ನು ಸಹ ಸುಧಾರಿಸುತ್ತದೆ. ರಕ್ತಹೀನತೆಯಿಂದ ಬಳಲುತ್ತಿರುವವರಿಗೆ ಮಾವಿನಹಣ್ಣು ಅತ್ಯುತ್ತಮ ಆಯ್ಕೆಯಾಗಿದೆ. ಈ ಋತುವಿನಲ್ಲಿ ಇವುಗಳನ್ನು ಪ್ರತಿದಿನ ತೆಗೆದುಕೊಳ್ಳಬಹುದು.
  • ಬೊಜ್ಜನ್ನು ಕಡಿಮೆ ಮಾಡುತ್ತದೆ: ಸಾಮಾನ್ಯವಾಗಿ ಇತ್ತೀಚಿನ ವರ್ಷಗಳಲ್ಲಿ ಹೆಚ್ಚುತ್ತಿರುವ ಬೊಜ್ಜಿನ ಸಮಸ್ಯೆಗೆ ಮಾವಿನ ಹಣ್ಣು ಔಷಧಿಯಾಗಿ ಬಳಕೆಯಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. ಇದರಲ್ಲಿರುವ ಪ್ರೋಟೀನ್, ಫೈಬರ್ ಮತ್ತು ಫೋಲಿಕ್ ಆಮ್ಲವು ಬೊಜ್ಜನ್ನು ಕಡಿಮೆ ಮಾಡಲು ಬಹಳ ಉಪಯುಕ್ತವಾಗಿದೆ. ಬೇಸಿಗೆಯಲ್ಲಿ ಇವುಗಳ ಸೇವನೆ ಮಾಡಿದರೆ ಬೊಜ್ಜಿನ ಸಮಸ್ಯೆಯಿಂದ ದೂರವಿರಬಹುದು.
  • ಜೀರ್ಣಕಾರಿ ಸಮಸ್ಯೆಗೆ ಒಳ್ಳೆಯದು: ಮಾವಿನ ಹಣ್ಣು ಜೀರ್ಣಕಾರಿ ಸಮಸ್ಯೆಗೆ ಒಳ್ಳೆಯದು. ಇದರಲ್ಲಿರುವ ಫೈಬರ್ ಅಂಶವು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಇದರಲ್ಲಿರುವ ಬೀಟಾ- ಕ್ಯಾರೋಟಿನ್ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ.
  • ತಲೆಹೊಟ್ಟು, ಕೂದಲು ಉದುರುವಿಕೆಯನ್ನು ತಡೆಯುತ್ತದೆ: ಕೂದಲಿನ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಮಾವಿನಹಣ್ಣು ಸಹ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ತಜ್ಞರು ಹೇಳುತ್ತಾರೆ. ತಲೆಹೊಟ್ಟು ಮತ್ತು ಕೂದಲು ಉದುರುವಿಕೆಯಂತಹ ಸಮಸ್ಯೆಗಳನ್ನು ನಿವಾರಣೆ ಮಾಡುತ್ತದೆ. ಆದರೆ ಮಾವಿನಹಣ್ಣುಗಳನ್ನು ನಿಯಮಿತ ಪ್ರಮಾಣದಲ್ಲಿ ತೆಗೆದುಕೊಂಡರೆ ಮಾತ್ರ ಈ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಇಲ್ಲವಾದಲ್ಲಿ ಬೇರೆ ಬೇರೆ ರೀತಿಯ ಆರೋಗ್ಯ ಸಮಸ್ಯೆಗಳು ಆರಂಭವಾಗುತ್ತದೆ.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ