Health Tips: ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ತಿಂದರೆ ಏನಾಗುತ್ತದೆ ಎಂಬುದು ತಿಳಿದಿದೆಯೇ?

| Updated By: ಅಕ್ಷತಾ ವರ್ಕಾಡಿ

Updated on: Jan 21, 2025 | 9:50 AM

ಪಪ್ಪಾಯಿಯನ್ನು ನಿಯಮಿತವಾಗಿ ಸೇವನೆ ಮಾಡಿದಲ್ಲಿ ನೀವು ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಇದು ರುಚಿಕರ ಮಾತ್ರವಲ್ಲ, ಪೌಷ್ಠಿಕಾಂಶದಿಂದ ಕೂಡಿರುತ್ತದೆ. ಜೊತೆಗೆ ಪಪ್ಪಾಯಿ ವರ್ಷದ 12 ತಿಂಗಳು ಲಭ್ಯವಿರುವ ಹಣ್ಣುಗಳಲ್ಲಿ ಒಂದಾಗಿದೆ. ಇದು ನಮ್ಮ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳನ್ನು ಒದಗಿಸುವ ಸಾಮಾನ್ಯ ಹಣ್ಣು. ಜೊತೆಗೆ ಖಾಲಿ ಹೊಟ್ಟೆಯಲ್ಲಿ ಇದರ ಸೇವನೆಯಿಂದ ಅನೇಕ ರೀತಿಯ ರೋಗಗಳನ್ನು ಗುಣಪಡಿಸಲು ಸಾಧ್ಯವಿದೆ. ಹಾಗಾದರೆ ಈ ಪಪ್ಪಾಯಿ ತಿನ್ನುವ ಮೂಲಕ ಯಾವ ರೋಗಗಳನ್ನು ಗುಣಪಡಿಸಬಹುದು ಎಂಬುದನ್ನು ಸರಿಯಾಗಿ ತಿಳಿದುಕೊಳ್ಳಿ.

Health Tips: ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ತಿಂದರೆ ಏನಾಗುತ್ತದೆ ಎಂಬುದು ತಿಳಿದಿದೆಯೇ?
Benefits Of Eating Papaya
Follow us on

ನಮ್ಮ ಆರೋಗ್ಯ ಚೆನ್ನಾಗಿರಬೇಕು ಎಂದರೆ ನಾವು ದಿನನಿತ್ಯ ಸೇವನೆ ಮಾಡುವ ಆಹಾರವೂ ಸರಿಯಾಗಿರಬೇಕು. ಸಾಮಾನ್ಯವಾಗಿ ತರಕಾರಿ ಮತ್ತು ಹಣ್ಣುಗಳು ನಮ್ಮ ದೇಹವನ್ನು ಸುಸ್ಥಿತಿಯಲ್ಲಿ ಇಡುವಲ್ಲಿ ಸಹಕಾರಿಯಾಗಿದೆ. ಅದರಲ್ಲಿಯೂ ಕೆಲವು ಹಣ್ಣುಗಳು ನಿಮ್ಮ ಆರೋಗ್ಯವನ್ನು ಹತೋಟಿಯಲ್ಲಿಡಲು ಸಹಾಯ ಮಾಡುತ್ತದೆ. ಅದರಲ್ಲಿ ಪಪ್ಪಾಯಿ ಹಣ್ಣು ಅಗ್ರ ಸ್ಥಾನದಲ್ಲಿರುತ್ತದೆ. ಇದನ್ನು ನಿಯಮಿತವಾಗಿ ಸೇವನೆ ಮಾಡಿದಲ್ಲಿ ನೀವು ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಇದು ರುಚಿಕರ ಮಾತ್ರವಲ್ಲ, ಪೌಷ್ಠಿಕಾಂಶದಿಂದ ಕೂಡಿರುತ್ತದೆ. ಜೊತೆಗೆ ಪಪ್ಪಾಯಿ ವರ್ಷದ 12 ತಿಂಗಳು ಲಭ್ಯವಿರುವ ಹಣ್ಣುಗಳಲ್ಲಿ ಒಂದಾಗಿದೆ. ಇದು ನಮ್ಮ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳನ್ನು ಒದಗಿಸುವ ಸಾಮಾನ್ಯ ಹಣ್ಣು. ಜೊತೆಗೆ ಖಾಲಿ ಹೊಟ್ಟೆಯಲ್ಲಿ ಇದರ ಸೇವನೆಯಿಂದ ಅನೇಕ ರೀತಿಯ ರೋಗಗಳನ್ನು ಗುಣಪಡಿಸಲು ಸಾಧ್ಯವಿದೆ. ಹಾಗಾದರೆ ಈ ಪಪ್ಪಾಯಿ ತಿನ್ನುವ ಮೂಲಕ ಯಾವ ರೋಗಗಳನ್ನು ಗುಣಪಡಿಸಬಹುದು ಎಂಬುದನ್ನು ಸರಿಯಾಗಿ ತಿಳಿದುಕೊಳ್ಳಿ.

  1. ತಜ್ಞರು ಹೇಳುವ ಪ್ರಕಾರ ಈ ಹಣ್ಣು ರುಚಿಕರ ಮಾತ್ರವಲ್ಲ, ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿ. ಅದರಲ್ಲಿಯೂ ಹಸಿ ಪಪ್ಪಾಯಿ ಹಣ್ಣಿನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ, ಇದು ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ, ಮತ್ತು ಬೇಯಿಸಿದ ಪಪ್ಪಾಯಿ ನಿಮ್ಮ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಜೊತೆಗೆ ನಿಮ್ಮ ಚರ್ಮಕ್ಕೆ ಹೊಳಪನ್ನು ನೀಡುತ್ತದೆ.
  2. ಪಪ್ಪಾಯಿಯಲ್ಲಿ ಕಂಡು ಬರುವ ಜೀರ್ಣಕಾರಿ ಕಿಣ್ವಗಳು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ, ಇದು ಆಮ್ಲೀಯತೆ, ಗ್ಯಾಸ್ ಮತ್ತು ಮಲಬದ್ಧತೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
  3. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ಸೇವನೆ ಮಾಡುವುದರಿಂದ, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ, ಜೊತೆಗೆ ಇದು ಮಧುಮೇಹದ ಲಕ್ಷಣಗಳನ್ನು ಕಡಿಮೆ ಮಾಡುತ್ತದೆ.
  4. ಪಪ್ಪಾಯಿ ಹಣ್ಣಿನಲ್ಲಿ ಪೊಟ್ಯಾಸಿಯಮ್ ಮತ್ತು ಇತರ ಪೋಷಕಾಂಶಗಳಿವೆ, ಇದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ, ಇದರಿಂದಾಗಿ ಹೃದ್ರೋಗದ ಅಪಾಯ ಕಡಿಮೆ ಆಗುತ್ತದೆ.
  5. ಪಪ್ಪಾಯಿಯಲ್ಲಿ ಸಾಕಷ್ಟು ಉತ್ಕರ್ಷಣ ನಿರೋಧಕಗಳಿವೆ, ಇದು ಕ್ಯಾನ್ಸರ್ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ, ವಿಶೇಷವಾಗಿ ಕೊಲೊರೆಕ್ಟಲ್ ಕ್ಯಾನ್ಸರ್ ತಡೆಗಟ್ಟುವಲ್ಲಿ ಇದು ಬಹಳ ಮುಖ್ಯ ಪಾತ್ರ ವಹಿಸುತ್ತದೆ.
  6. ಪಪ್ಪಾಯಿಯಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಸಿ ಮತ್ತು ವಿಟಮಿನ್ ಎ ಇದ್ದು, ಇದು ಕರುಳಿನ ಸೋಂಕಿನ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಜೊತೆಗೆ ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ.
  7. ಅದರಲ್ಲಿಯೂ ಪಪ್ಪಾಯಿ ಹಣ್ಣಿನಲ್ಲಿರುವ ಫೈಬರ್ ಆರೋಗ್ಯಕರ ಕರುಳಿಗೆ ಪ್ರಯೋಜನಕಾರಿಯಾಗಿದೆ, ಇದು ಡೈವರ್ಟಿಕ್ಯುಲಿಟಿಸ್ ನಂತಹ ಕರುಳಿನ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಅಲ್ಲದೆ ಪಪ್ಪಾಯಿ ಹಣ್ಣು ತನ್ನ ಶಕ್ತಿ, ಪೋಷಣೆ ಮತ್ತು ನೈಸರ್ಗಿಕ ಗುಣಲಕ್ಷಣಗಳಿಗೆ ಹೆಸರುವಾಸಿಯಾಗಿದೆ.
  8. ಪಪ್ಪಾಯಿಯಲ್ಲಿ ವಿಟಮಿನ್ ಕೆ ಮತ್ತು ಮೆಗ್ನೀಸಿಯಮ್ ಇದ್ದು, ಮೂಳೆಯ ಆರೋಗ್ಯವನ್ನು ಸುಧಾರಿಸಿ ಅವುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಜೊತೆಗೆ ಈ ಹಣ್ಣು, ಕಡಿಮೆ ಕ್ಯಾಲೊರಿ ಮತ್ತು ಹೆಚ್ಚಿನ ಫೈಬರ್ ಇರುವ ಆಹಾರವಾಗಿದ್ದು, ಇದು ತೂಕ ನಿಯಂತ್ರಣಕ್ಕೆ ಸಹಾಯ ಮಾಡುತ್ತದೆ.

(ಸೂಚನೆ: ಈ ಲೇಖನವು ಮಾಹಿತಿಗಾಗಿ ಮಾತ್ರ. ಇದನ್ನು ಬಳಸುವ ಮೊದಲು ನೀವು ನಿಮ್ಮ ವೈದ್ಯರು ಅಥವಾ ತಜ್ಞರನ್ನು ಸಂಪರ್ಕಿಸಬೇಕು.)