AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಗಿ ರೊಟ್ಟಿ ತಿಂದರೆ ಏನೆಲ್ಲ ಪ್ರಯೋಜನಗಳಿವೆ ಗೊತ್ತಾ?

Ragi Roti Benefits: ರಾಗಿ ಮುದ್ದೆ, ರಾಗಿ ಮಾಲ್ಟ್​, ರಾಗಿ ದೋಸೆ ಮಾತ್ರವಲ್ಲ.. ರಾಗಿಯಿಂದ ಮಾಡಿದ ರೊಟ್ಟಿ ತಿನ್ನುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಇವುಗಳನ್ನು ತಿನ್ನುವುದರಿಂದ ತೂಕ ಇಳಿಸಿಕೊಳ್ಳಬಹುದು. ಏಕೆಂದರೆ ಅವುಗಳಲ್ಲಿ ಫೈಬರ್ ಮತ್ತು ಪ್ರೋಟೀನ್ ಇರುತ್ತದೆ.

ರಾಗಿ ರೊಟ್ಟಿ ತಿಂದರೆ ಏನೆಲ್ಲ ಪ್ರಯೋಜನಗಳಿವೆ ಗೊತ್ತಾ?
ರಾಗಿ ರೊಟ್ಟಿ ತಿಂದರೆ ಏನೆಲ್ಲ ಪ್ರಯೋಜನಗಳಿವೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Mar 30, 2024 | 5:23 PM

Share

ಮಿಲ್ಲೆಟ್ಸ್​ ಸಿರಿಧಾನ್ಯದಲ್ಲಿ ರಾಗಿ ಸಹ ಒಂದು ಭಾಗವಾಗಿದೆ. ರಾಗಿ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಎಂದು ಎಲ್ಲರಿಗೂ ತಿಳಿದಿದೆ. ಇತ್ತೀಚಿನ ದಿನಗಳಲ್ಲಿ, ಅನೇಕ ಜನರು ಆರೋಗ್ಯಕರ ಆಹಾರವನ್ನು ತಿನ್ನಲು ಬಯಸುತ್ತಿದ್ದಾರೆ. ರಾಗಿಯಿಂದ ನಾವು ಅನೇಕ ರೀತಿಯ ಆಹಾರ ಪದಾರ್ಥಗಳನ್ನು ಮಾಡಬಹುದು. ಅಲ್ಲದೇ ಈಗ ಬೇಸಿಗೆ ಕಾಲವಾಗಿರುವುದರಿಂದ ಶರೀರಕ್ಕೆ ಶಕ್ತಿ ತುಂಬಿ, ದೇಹವನ್ನು ತಂಪಾಗಿಸಲು ರಾಗಿ ನೆರವಾಗುತ್ತದೆ. ಬೇಸಿಗೆಯಲ್ಲಿ ಇದನ್ನು ಕುಡಿದರೆ ನಿರ್ಜಲೀಕರಣವಾಗುವುದಿಲ್ಲ. ರಾಗಿಯಿಂದ ರೊಟ್ಟಿಯನ್ನೂ ಮಾಡುತ್ತಾರೆ (Health).

ರಾಗಿ ಮುದ್ದೆ, ರಾಗಿ ಮಾಲ್ಟ್​, ರಾಗಿ ದೋಸೆ ಮಾತ್ರವಲ್ಲ.. ರಾಗಿಯಿಂದ ಮಾಡಿದ ರೊಟ್ಟಿ (Ragi Roti) ತಿನ್ನುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಇವುಗಳನ್ನು ತಿನ್ನುವುದರಿಂದ ತೂಕ ಇಳಿಸಿಕೊಳ್ಳಬಹುದು. ಏಕೆಂದರೆ ಅವುಗಳಲ್ಲಿ ಫೈಬರ್ ಮತ್ತು ಪ್ರೋಟೀನ್ ಇರುತ್ತದೆ. ಹಾಗಾಗಿ ರಾಗಿ ರೊಟ್ಟಿ ತಿಂದರೆ ತೂಕ ನಿಯಂತ್ರಣದಲ್ಲಿರುತ್ತದೆ.

Also Read: Belly Fat and Green Coffee -ಸೊಂಟದ ಕೊಬ್ಬು ಕರಗಿಸಲು ಬಾಧೆ ಪಡುತ್ತಿದ್ದೀರಾ? ಗ್ರೀನ್ ಕಾಫಿ ಕುಡಿದು ನೋಡಿ

ಮಧುಮೇಹದಿಂದ ಬಳಲುತ್ತಿರುವ ಜನರಿಗೆ ರಾಗಿ ರೊಟ್ಟಿ ವಿಶೇಷವಾಗಿ ಒಳ್ಳೆಯದು. ಇವುಗಳಲ್ಲಿರುವ ಕಾರ್ಬೋಹೈಡ್ರೇಟ್ ಮತ್ತು ಫೈಬರ್ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುವುದಿಲ್ಲ. ಇದಲ್ಲದೆ, ಇದು ಹಸಿವನ್ನು ಸಹ ನಿಯಂತ್ರಿಸುತ್ತದೆ. ಇದು ತ್ವರಿತ ಶಕ್ತಿಯನ್ನು ಸಹ ನೀಡುತ್ತದೆ.

ರಾಗಿ ರೊಟ್ಟಿ ತಿನ್ನುವುದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಇದು ಕರುಳಿನ ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಮಲಬದ್ಧತೆ ಸಮಸ್ಯೆಯನ್ನು ತಡೆಯುತ್ತದೆ. ರಾಗಿ ರೊಟ್ಟಿ ಜೀವಸತ್ವಗಳು ಮತ್ತು ಖನಿಜಗಳಲ್ಲಿ ಸಮೃದ್ಧವಾಗಿದೆ. ಗೋಧಿ ರೊಟ್ಟಿಗಿಂತ ರಾಗಿ ರೊಟ್ಟಿ ಹೆಚ್ಚು ಆರೋಗ್ಯಕರವಾಗಿದೆ.

ಆರೋಗ್ಯ ಕುರಿತಾದ ಹೆಚ್ಚಿನ ಲೇಖನಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು