AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಸೊಂಟದ ಸುತ್ತಲಿನ ಕೊಬ್ಬನ್ನು ಕರಗಿಸಲು ಈ ಸಿಂಪಲ್​ ಟಿಪ್ಸ್​​ ಫಾಲೋ ಮಾಡಿ

ಹಸುವಿನ ತುಪ್ಪದಲ್ಲಿ ಬ್ಯುಟರಿಕ್ ಆಮ್ಲವಿದೆ. ಇದು ಕರುಳಿನಲ್ಲಿ ಒಳ್ಳೆಯ ಬ್ಯಾಕ್ಟೀರಿಯಾವನ್ನು ಹೆಚ್ಚಿಸುತ್ತದೆ. ಇದು ದೇಹದಲ್ಲಿ ಸಂಗ್ರಹವಾಗಿರುವ ಅನಗತ್ಯ ಕೊಬ್ಬನ್ನು ಕರಗಿಸಲು ಸಹ ಸಹಾಯ ಮಾಡುತ್ತದೆ.

Health Tips: ಸೊಂಟದ ಸುತ್ತಲಿನ ಕೊಬ್ಬನ್ನು ಕರಗಿಸಲು ಈ ಸಿಂಪಲ್​ ಟಿಪ್ಸ್​​ ಫಾಲೋ ಮಾಡಿ
ಅಕ್ಷತಾ ವರ್ಕಾಡಿ
|

Updated on: Jun 12, 2024 | 6:42 PM

Share

ಸಾಕಷ್ಟು ಜನರಲ್ಲಿ ಸೊಂಟದ ಸುತ್ತಲೂ ಹೆಚ್ಚಿನ ಕೊಬ್ಬು ಸಂಗ್ರಹವಾಗಿರುತ್ತದೆ. ಇದು ಆರೋಗ್ಯದ ಮೇಲೆ ಪರಿಣಾಮ ಬೀರುವುದು ಮಾತ್ರವಲ್ಲದೇ ನಿಮ್ಮ ಸೌಂದರ್ಯದ ಮೇಲೂ ಅಡ್ಡಿಯುಂಟು ಮಾಡುತ್ತದೆ. ಆದ್ದರಿಂದ ಸೊಂಟದ ಸುತ್ತಲೂ ಇರುವ ಕೊಬ್ಬನ್ನು ಕರಗಿಸಲು ಇಲ್ಲಿದೆ ನೋಡಿ ಸರಳ ಮತ್ತು ಪರಿಣಾಮಕಾರಿ ಸಲಹೆಗಳು. ನೀವು ಕೇವಲ ಒಂದು ಚಮಚ ತುಪ್ಪದ ಮೂಲಕ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು.

ಹಸುವಿನ ತುಪ್ಪದಲ್ಲಿ ವಿಟಮಿನ್ ಎ, ಡಿ ಮತ್ತು ಇ ಇದೆ. ಅವು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ಇದು ಅನೇಕ ರೀತಿಯ ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಹಸುವಿನ ತುಪ್ಪದಲ್ಲಿರುವ ಪೋಷಕಾಂಶಗಳು ಮತ್ತು ಉತ್ಕರ್ಷಣ ನಿರೋಧಕಗಳು ಚರ್ಮವನ್ನು ಆರೋಗ್ಯವಾಗಿರಿಸುತ್ತದೆ. ಚರ್ಮವನ್ನು ಮೃದುವಾಗಿ, ಹೊಳೆಯುವಂತೆ ಮತ್ತು ಯೌವನದಿಂದ ಇಡುತ್ತದೆ. ಹಸುವಿನ ತುಪ್ಪವು ನೈಸರ್ಗಿಕ ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ಇದು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಮೆದುಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ.

ಇದನ್ನೂ ಓದಿ: ಜೀರ್ಣಕಾರಿ ಸಮಸ್ಯೆಗಳಿಂದ ಹೈರಾಣವಾಗಿದ್ದರೆ ಮಜ್ಜಿಗೆ ಹುಲ್ಲನ್ನು ಈ ರೀತಿ ಬಳಸಿ

ಹಸುವಿನ ತುಪ್ಪದಲ್ಲಿ ಬ್ಯುಟರಿಕ್ ಆಮ್ಲವಿದೆ. ಇದು ಕರುಳಿನಲ್ಲಿ ಒಳ್ಳೆಯ ಬ್ಯಾಕ್ಟೀರಿಯಾವನ್ನು ಹೆಚ್ಚಿಸುತ್ತದೆ. ಇದು ದೇಹದಲ್ಲಿ ಸಂಗ್ರಹವಾಗಿರುವ ಅನಗತ್ಯ ಕೊಬ್ಬನ್ನು ಕರಗಿಸಲು ಸಹ ಸಹಾಯ ಮಾಡುತ್ತದೆ. ಹಸುವಿನ ತುಪ್ಪದಲ್ಲಿರುವ ಉತ್ಕರ್ಷಣ ನಿರೋಧಕಗಳು ದೇಹದಿಂದ ವಿಷವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಹೀಗೆ ದೇಹವನ್ನು ಒಳಗಿನಿಂದ ಶುದ್ಧೀಕರಿಸಿ ಉತ್ತಮ ಕರುಳಿನ ಆರೋಗ್ಯವನ್ನು ಕಾಪಾಡುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ