AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ನೇರಳೆ ಹಣ್ಣಿನ ಬೀಜದಿಂದಲೂ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಮಧುಮೇಹದಿಂದ ಬಳಲುತ್ತಿರುವವರಿಗೆ ನೇರಳೆ ಹಣ್ಣಿನ ಬೀಜ ತುಂಬಾ ಪ್ರಯೋಜನಕಾರಿ ಆಗಿದೆ. ಹಣ್ಣಿನ ಬೀಜವನ್ನು ಸಂಗ್ರಹಿಸಿ ಪೌಡರ್​ ಮಾಡಿ ಶೇಖರಿಸಿಟ್ಟುಕೊಂಡು ಅದರ ಸೇವನೆಯಿಂದ ದೇಹದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣಕ್ಕೆ ತರಬಹುದು.

Health Tips: ನೇರಳೆ ಹಣ್ಣಿನ ಬೀಜದಿಂದಲೂ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
ನೇರಳೆ ಹಣ್ಣಿನ ಬೀಜಗಳು
Follow us
TV9 Web
| Updated By: shruti hegde

Updated on: Jun 17, 2021 | 9:46 AM

ನೇರಳೆ ಹಣ್ಣು ಸವಿಯಲು ಎಷ್ಟು ರುಚಿಯೋ ಅಷ್ಟೇ ಆರೋಗ್ಯಕ್ಕೆ ಒಳ್ಳೆಯದು ಕೂಡಾ. ಕೇವಲ ಹಣ್ಣು ಮಾತ್ರವಲ್ಲ ಅದರೊಳಗಿನ ಬೀಜವೂ ಸಹ ಔಷಧೀಯ ಗುಣಗಳನ್ನು ಹೊಂದಿದೆ. ಹಣ್ಣನ್ನು ತಿಂದು ಬೀಜವನ್ನು ಉಗುಳುತ್ತಿರುವ ಅಭ್ಯಾಸವಿದ್ದರೆ ಅದನ್ನು ಇಂದೇ ಬಿಟ್ಟುಬಿಡಿ. ಬೀಜವನ್ನು ಸಂಗ್ರಹಿಸಿ ಅವುಗಳನ್ನು ಪುಡಿ ಮಾಡಿ ಶೇಖರಿಸಿಟ್ಟುಕೊಳ್ಳುವ ಅಭ್ಯಾಸ ರೂಢಿಯಲ್ಲಿಟ್ಟುಕೊಳ್ಳಿ.

ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಕೂಡಾ ನೇರಳೆ ಹಣ್ಣುನ್ನು ಇಷ್ಟಪಡುತ್ತಾರೆ. ಇನ್ನು ಕೆಲವರು ಹಣ್ಣು ಬಿಡುವ ಸೀಸನ್​ಗಾಗಿ ಕಾಯುತ್ತಾ ಕುಳಿತಿರುತ್ತಾರೆ. ತಿಳಿ ನೇರಳೆ ಬಣ್ಣದಿಂದ ಆವೃತವಾದ ರಸಭರಿತ ಹಣ್ಣು ಆರೋಗ್ಯಕ್ಕೆ ಒಳ್ಳೆಯದು. ಇದರ ಬೀಜಗಳಿಂದಲೂ ಸಹ ಆರೋಗ್ಯ ಸುಧಾರಿಸುತ್ತದೆ. ಹಾಗಿದ್ದಾಗ ನಮ್ಮ ಸುತ್ತಮುತ್ತಲೇ ಸಿಗುವ ಹಣ್ಣುಗಳ ಸೇವನೆಯಿಂದ ನಮ್ಮ ಆರೋಗ್ಯವನ್ನು ಸುಧಾರಿಸುತ್ತ ಯೋಚಿಸುವುದು ಒಳ್ಳೆಯದು.

ಮಧುಮೇಹ ನಿಯಂತ್ರಣ ಮಧುಮೇಹದಿಂದ ಬಳಲುತ್ತಿರುವವರಿಗೆ ನೇರಳೆ ಹಣ್ಣಿನ ಬೀಜ ತುಂಬಾ ಪ್ರಯೋಜನಕಾರಿ ಆಗಿದೆ. ಹಣ್ಣಿನ ಬೀಜವನ್ನು ಸಂಗ್ರಹಿಸಿ ಪೌಡರ್​ ಮಾಡಿ ಶೇಖರಿಸಿಟ್ಟುಕೊಂಡು ಅದರ ಸೇವನೆಯಿಂದ ದೇಹದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣಕ್ಕೆ ತರಬಹುದು.

ಹೊಟ್ಟೆ ಸಮಸ್ಯೆಗೆ ಸಹಾಯಕಾರಿ ಆಯುರ್ವೇದದ ಪ್ರಕಾರ ದೇಹದ ಅರ್ಧದಷ್ಟು ಖಾಯಿಲೆಗೆ ಕಾರಣ ಹೊಟ್ಟೆ. ಆದ್ದರಿಂದ ಹೊಟ್ಟೆಯನ್ನು ಆರೋಗ್ಯವಾಗಿರಿಸಿಕೊಳ್ಳುವುದು ಉತ್ತಮ. ನೇರಳೆ ಹಣ್ಣಿನ ಬೀಜಗಳು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಅದು ಅಜೀರ್ಣದಂತಹ ಸಮಸ್ಯೆಗಳಿಗೆ ಪರಿಹಾರವಾಗಿ ಕೆಲಸ ಮಾಡುತ್ತದೆ. ಹೊಟ್ಟೆಯನ್ನು ಸ್ವಚ್ಛಗೊಳಿಸುತ್ತದೆ.

ವಿಷಕಾರಿ ಅಂಶವನ್ನು ತೆಗೆದುಹಾಕುತ್ತದೆ ನಮ್ಮ ದೇಹದಲ್ಲಿ ಸೇರಿಕೊಂಡಿರುವ ವಿಷಕಾರಿ ಅಂಶಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಜತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಸಹಾಯ ಮಾಡುತ್ತದೆ. ನೇರಳೆ ಹಣ್ಣಿನ ಬೀಜದ ಪುಡಿಯನ್ನು ಕಷಾಯದ ರೂಪದಲ್ಲಿ ಸೇವಿಸಬಹುದಾಗಿದೆ.

ನೇರಳೆ ಹಣ್ಣುಗಳ ಬೀಜವನ್ನು ತೆಳ್ಳಗಿನ ಬಟ್ಟೆಯಲ್ಲಿ ಮುಚ್ಚಿ ಬಿಸಿಲಿನಲ್ಲಿ ಒಣಹಾಕಿ. ಬೀಜಗಳು ಸರಿಯಾಗಿ ಒಣಗಿದ ಬಳಿಕ ಅದನ್ನು ಪೌಡರ್​ ಮಾಡಿ ಶೇಖರಿಸಿಡಿ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸುವುದು ಉತ್ತಮ ಎಂಬುದು ತಿಳಿದು ಬಂದಿದೆ. ಜನರ ದೇಹ ಪ್ರಕೃತಿಗೆ ಅನುಸಾರವಾಗಿ ಅವರ ಆರೋಗ್ಯದಲ್ಲಿ ಸಮಸ್ಯೆ ಉಂಟಾಗುವುದರಿಂದ ತಜ್ಞರ ಸಲಹೆಯ ಮೇರೆಗೆ ಇದನ್ನು ಸೇವಿಸುವುದು ಉತ್ತಮ.

ಇದನ್ನೂ ಓದಿ:

’Jamun Health Benefits: ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರು ನೇರಳೆ ಹಣ್ಣನ್ನು ಸೇವಿಸಿ

ಬಿಳಿ ಜಂಬೂ ಅಥವಾ ಪನ್ನೇರಳೆ ಹಣ್ಣು ರುಚಿಯಷ್ಟೇ ಆರೋಗ್ಯಕರ; ರೋಗನಿರೋಧಕ ಶಕ್ತಿ ಹೆಚ್ಚಿಸುವ ಈ ಹಣ್ಣನ್ನು ಒಮ್ಮೆ ತಿಂದು ನೋಡಿ

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ