AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಬ್ಬಾ… ಟೊಮೇಟೊ ತಿನ್ನೋದ್ರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಭಾರತೀಯರ ಪ್ರತಿ ಮನೆಯಲ್ಲಿಯೂ ಟೊಮೇಟೊ ಇಲ್ಲದೆಯೇ ಅಡುಗೆ ತಯಾರಾಗುವುದೇ ಇಲ್ಲ. ಇದು ಅಡುಗೆಯ ರುಚಿ ಹೆಚ್ಚಿಸುವುದು ಮಾತ್ರವಲ್ಲ, ನಮ್ಮ ಆರೋಗ್ಯಕ್ಕೂ ಕೂಡ ಬಹಳ ಪ್ರಯೋಜನಕಾರಿ. ಇದರಲ್ಲಿರುವ ಆರೋಗ್ಯಕರ ಗುಣಗಳು ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ. ನಾವು ದಿನನಿತ್ಯ ಬಳಕೆ ಮಾಡುವ ಈ ತರಕಾರಿಯಲ್ಲಿ ಇಷ್ಟೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ತಿಳಿದರೆ ನಿಮಗೆ ಆಶ್ಚರ್ಯವಾಗಬಹುದು. ಹಾಗಾದರೆ ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಸಿಗುವ ಪ್ರಯೋಜನಗಳೇನು ಎಂಬುದನ್ನು ತಿಳಿದುಕೊಳ್ಳಿ.

ಅಬ್ಬಬ್ಬಾ... ಟೊಮೇಟೊ ತಿನ್ನೋದ್ರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
ಟೊಮೇಟೊ ಆರೋಗ್ಯ ಪ್ರಯೋಜನImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Jul 03, 2025 | 7:30 PM

Share

ಟೊಮೇಟೊ! (Tomatoes) ಈ ಹೆಸರನ್ನು ಕೇಳದವರೇ ಇಲ್ಲ. ಟೊಮೇಟೊ/ ಗೂರೆ ಹಣ್ಣು (ಸೊಲ್ಯಾನಮ್ ಲೈಕೋಪರ್ಸಿಕಮ್) ಸೋಲನೇಸಿ ಕುಟುಂಬಕ್ಕೆ ಸೇರಿದ ಒಂದು ಗಿಡ. ಭಾರತೀಯರ ಪ್ರತಿ ಮನೆಯಲ್ಲಿಯೂ ಈ ತರಕಾರಿ (vegetable) ಇಲ್ಲದೆಯೇ ಅಡುಗೆ ತಯಾರಾಗುವುದಿಲ್ಲ. ಹಾಗಾಗಿಯೇ ಇದನ್ನು ಪ್ರತಿ ಖಾದ್ಯದಲ್ಲೂ ಬಳಸಲಾಗುತ್ತದೆ. ಇದು ಯಾವುದೇ ಅಡುಗೆ ಇರಲಿ ತನ್ನದೇ ಆದಂತಹ ರುಚಿ ನೀಡಿ ಅಡುಗೆಯ ಸ್ವಾದವನ್ನು ಇಮ್ಮಡಿಗೊಳಿಸುತ್ತದೆ. ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು. ಹಾಗಾದರೆ ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಯಾವ ರೀತಿಯ ಪ್ರಯೋಜನಗಳು ಸಿಗುತ್ತದೆ? ಟೊಮೇಟೊ ಸೇವನೆಯನ್ನು ಯಾರು ತಪ್ಪಿಸಬೇಕು? ಈ ಬಗೆಗಿನ ಸಂಪೂರ್ಣ ವಿವರ ಇಲ್ಲಿದೆ.

ಟೊಮೇಟೊ ಸೇವಿಸುವುದರಿಂದ ಸಿಗುವ ಪ್ರಯೋಜನ

ಟೊಮೇಟೊದಲ್ಲಿ ಲೈಕೋಪೀನ್ ಎಂಬ ಶಕ್ತಿಶಾಲಿ ಉತ್ಕರ್ಷಣ ನಿರೋಧಕವಿದೆ. ಇದು ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಮಾತ್ರವಲ್ಲ ಹೃದಯಕ್ಕೆ ಹಾನಿ ಮಾಡುವ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಹೆಚ್ಚುವರಿಯಾಗಿ, ಟೊಮೇಟೊದಲ್ಲಿ ಕಂಡು ಬರುವ ಪೊಟ್ಯಾಸಿಯಮ್ ಅಂಶ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಇದರಿಂದ ಹೃದಯಕ್ಕೆ ಸಂಬಂಧ ಪಟ್ಟ ಕಾಯಿಲೆಗಳು ಬರುವ ಅಪಾಯ ಕೂಡ ಕಡಿಮೆಯಾಗುತ್ತದೆ.

ಕಣ್ಣಿನ ಆರೋಗ್ಯಕ್ಕೆ ಸಹಕಾರಿ

ಟೊಮೇಟೊಗಳು ವಿಟಮಿನ್ ಎ ಜೊತೆಗೆ ಲುಟೀನ್, ಬೀಟಾ- ಕ್ಯಾರೋಟಿನ್ ಮತ್ತು ಜಿಯಾಕ್ಸಾಂಥಿನ್ ನಂತಹ ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ. ಇವು ನಮ್ಮ ಕಣ್ಣಿನ ದೃಷ್ಟಿಯನ್ನು ಸುಧಾರಿಸುತ್ತದೆ ಮತ್ತು ವಯಸ್ಸಿಗೆ ಸಂಬಂಧಿಸಿದ ಮ್ಯಾಕ್ಯುಲರ್ ಡಿಜೆನರೇಶನ್ ಸಮಸ್ಯೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಡಿಜಿಟಲ್ ಸಾಧನಗಳಿಂದ ಹೊರಸೂಸುವ ನೀಲಿ ಬೆಳಕಿನಿಂದಲೂ ಕಣ್ಣುಗಳನ್ನು ರಕ್ಷಿಸಲು ಸಹಾಯ ಮಾಡುತ್ತವೆ.

ಇದನ್ನೂ ಓದಿ
Image
ಕಣ್ಣಿನ ಆರೋಗ್ಯದಿಂದ ಕ್ಯಾನ್ಸರ್ ತಡೆಗಟ್ಟುವ ವರೆಗೆ; ಚೀನಿಕಾಯಿಯ ಉಪಯೋಗಗಳಿವು
Image
ರಾತ್ರಿಯಲ್ಲಿ ಕಂಡು ಬರುವ ಕಾಲು ಸೆಳೆತವನ್ನು ತಡೆಯಲು ಇಲ್ಲಿದೆ ಸಲಹೆಗಳು
Image
ನೀವು ಏನಾದರೂ ತಿಂದ ತಕ್ಷಣ ಟಾಯ್ಲೆಟ್ ಗೆ ಹೋಗುತ್ತೀರಾ? ನಿಮಗೆ ಇಲ್ಲಿದೆ ಸಲಹೆ
Image
ಹಾಗಲಕಾಯಿ ಕಹಿ ಎಂದು ಮನೆಗೆ ತರದೇ ಇರುವವರು ಈ ಸುದ್ದಿಯನ್ನು ತಪ್ಪದೆ ಓದಿ

ಕ್ಯಾನ್ಸರ್ ತಡೆಗಟ್ಟುವಿಕೆ

ಟೊಮೇಟೊದಲ್ಲಿ ಕಂಡು ಬರುವ ಲೈಕೋಪೀನ್ ಕ್ಯಾನ್ಸರ್ ತಡೆಗಟ್ಟುವಿಕೆಗೂ ಸಹಾಯ ಮಾಡುತ್ತದೆ. ಇದು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ನಿಯಂತ್ರಿಸುವಲ್ಲಿ ಸಹಾಯ ಮಾಡುತ್ತದೆ. ಪ್ರಾಸ್ಟೇಟ್, ಶ್ವಾಸಕೋಶ, ಹೊಟ್ಟೆ ಮತ್ತು ಕೊಲೊರೆಕ್ಟಲ್ ಕ್ಯಾನ್ಸರ್‌ಗಳ ಅಪಾಯವನ್ನು ಕಡಿಮೆ ಮಾಡುವಲ್ಲಿ ಇದು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಹಲವಾರು ಅಧ್ಯಯನಗಳಿಂದ ತಿಳಿದು ಬಂದಿದೆ.

ನಮ್ಮ ಚರ್ಮಕ್ಕೆ ಒಳ್ಳೆಯದು

ಟೊಮೇಟೊಗಳು ವಿಟಮಿನ್ ಸಿ ಯಲ್ಲಿ ಸಮೃದ್ಧವಾಗಿವೆ. ಹೆಚ್ಚುವರಿಯಾಗಿ, ಅವು ಲೈಕೋಪೀನ್ ಅನ್ನು ಸಹ ಹೊಂದಿರುತ್ತವೆ. ಇವೆರಡೂ ಚರ್ಮದ ಆರೋಗ್ಯಕ್ಕೆ ಪ್ರಯೋಜನವನ್ನು ನೀಡುತ್ತವೆ. ಈ ಎರಡು ಅಂಶಗಳು ಕಾಲಜನ್ ಉತ್ಪಾದನೆಯನ್ನು ಉತ್ತೇಜಿಸುತ್ತವೆ, ಪರಿಣಾಮವಾಗಿ ಚರ್ಮ ಆರೋಗ್ಯಕರವಾಗಿರುತ್ತದೆ. ಮಾತ್ರವಲ್ಲ ಯೌವ್ವನದಿಂದ ಕೂಡಿರುತ್ತದೆ. ಜೊತೆಗೆ, ಸೂರ್ಯನ ಬೆಳಕಿನಿಂದ ಉಂಟಾಗುವ ಹಾನಿಯಿಂದ ಚರ್ಮವನ್ನು ರಕ್ಷಿಸಲು ಮತ್ತು ಚರ್ಮದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಲು ಸಹ ಇವು ಸಹಾಯ ಮಾಡುತ್ತವೆ.

ಇದನ್ನೂ ಓದಿ: Tomato: ಮಧುಮೇಹಿಗಳು ಟೊಮೇಟೊ ತಿನ್ನಬಹುದೇ? ಗರ್ಭಿಣಿಯರೂ ಟೊಮೆಟೊಗಳನ್ನು ತಿನ್ನಬಹುದೇ?

ಇತರ ಪ್ರಯೋಜನಗಳೇನು?

  • ಟೊಮೇಟೊದಲ್ಲಿ ವಿಟಮಿನ್ ಸಿ ಜೊತೆಗೆ ಆಂಟಿಆಕ್ಸಿಡೆಂಟ್‌ಗಳಿವೆ. ಇವು ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತವೆ, ದೇಹವನ್ನು ಸೋಂಕುಗಳು ಮತ್ತು ರೋಗಗಳಿಂದ ರಕ್ಷಿಸಲು ಸಹಾಯ ಮಾಡುತ್ತವೆ.
  • ಟೊಮೇಟೊದಲ್ಲಿ ವಿಟಮಿನ್ ಕೆ ಮತ್ತು ಕ್ಯಾಲ್ಸಿಯಂ ಇದ್ದು, ಇದು ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಜೊತೆಗೆ ದೇಹಕ್ಕೆ ತಕ್ಷಣದ ಶಕ್ತಿಯನ್ನು ಒದಗಿಸಲು ಸಹಾಯ ಮಾಡುತ್ತದೆ.
  • ಪ್ರತಿದಿನ ಟೊಮೇಟೊ ತಿನ್ನುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಮಾತ್ರವಲ್ಲ ಟೊಮೇಟೊದಲ್ಲಿ ಕಡಿಮೆ ಕ್ಯಾಲೋರಿ ಮತ್ತು ಹೆಚ್ಚಿನ ಫೈಬರ್ ಅಂಶವಿದ್ದು ಇದು ಹೊಟ್ಟೆ ತುಂಬಿದ ಭಾವನೆಯನ್ನು ನೀಡುತ್ತದೆ ಇದರಿಂದ ಅತಿಯಾಗಿ ತಿನ್ನುವುದು ಕಡಿಮೆಯಾಗುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?