ಪ್ರತಿ ರಾತ್ರಿ ಒಂದು ಲೋಟ ಹಾಲು ಕುಡಿಯಿರಿ; ಪ್ರಯೋಜನ ಸಾಕಷ್ಟಿವೆ

ರಾತ್ರಿ ಮಲಗುವ ಮುನ್ನ ಬೆಚ್ಚಗಿನ ಹಾಲು ಕುಡಿಯುವುದು ನಿದ್ರೆಯನ್ನು ಸುಧಾರಿಸುತ್ತದೆ, ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ ಮತ್ತು ಸಂತಾನೋತ್ಪತ್ತಿ ಆರೋಗ್ಯಕ್ಕೆ ಉತ್ತಮ. ಹಾಲಿನಲ್ಲಿರುವ ಟ್ರಿಪ್ಟೊಫಾನ್, ಸಿರೊಟೋನಿನ್ ಮತ್ತು ಮೆಲಟೋನಿನ್ ನಿದ್ರೆಯನ್ನು ಉತ್ತೇಜಿಸುತ್ತವೆ. ಇದು ಹೊಟ್ಟೆ ಸಂಬಂಧಿ ಸಮಸ್ಯೆಗಳನ್ನು ನಿವಾರಿಸಲು ಮತ್ತು ಫಲವತ್ತತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಪ್ರತಿ ರಾತ್ರಿ ಒಂದು ಲೋಟ ಹಾಲು ಕುಡಿಯಿರಿ; ಪ್ರಯೋಜನ ಸಾಕಷ್ಟಿವೆ
Benefits Of Warm Milk Before Bed
Follow us
ಅಕ್ಷತಾ ವರ್ಕಾಡಿ
|

Updated on: Dec 24, 2024 | 8:59 PM

ಪ್ರತಿದಿನ ಮಲಗುವ ಮುನ್ನ ಒಂದು ಲೋಟ ಹಾಲು ಕುಡಿಯುವುದರಿಂದ ದೇಹಕ್ಕೆ ಅಗತ್ಯವಾದ ವಿಶ್ರಾಂತಿಯನ್ನು ಮತ್ತು ಶಕ್ತಿಯನ್ನು ನೀಡುತ್ತದೆ, ಆತಂಕವನ್ನು ನಿವಾರಿಸುತ್ತದೆ ಮತ್ತು ಉತ್ತಮ ನಿದ್ರೆಯನ್ನು ನೀಡುತ್ತದೆ ಎಂದು ನಂಬಲಾಗಿದೆ. ಆದರೆ, ಕೆಲವರು ರಾತ್ರಿ ಹಾಲು ಕುಡಿಯುವುದನ್ನು ತಪ್ಪಿಸುತ್ತಾರೆ. ರಾತ್ರಿ ಮಲಗುವ ಮುನ್ನ ಹಾಲು ಕುಡಿಯುವುದು ಆರೋಗ್ಯಕ್ಕೆ ಹಾನಿಕಾರಕ ಎಂದು ಕೆಲವರು ನಂಬುತ್ತಾರೆ. ಆದರೆ ಇದು ಸಂಪೂರ್ಣವಾಗಿ ತಪ್ಪು. ರಾತ್ರಿ ಮಲಗುವ ಮುನ್ನ ಹಾಲು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಹಾಗಾದರೆ ಪ್ರತಿದಿನ ರಾತ್ರಿ ಮಲಗುವ ಮುನ್ನ ಬೆಚ್ಚಗಿನ ಹಾಲು ಕುಡಿಯುವುದರಿಂದ ಆಗುವ ಲಾಭಗಳೇನು ಎಂಬುದನ್ನು ತಿಳಿದುಕೊಳ್ಳೋಣ.

ಬೇಗ ನಿದ್ದೆ ಬರುವಂತೆ ಮಾಡುತ್ತದೆ:

ಮಲಗುವ ಮುನ್ನ ಹಾಲು ಕುಡಿಯುವುದರಿಂದ ರಾತ್ರಿಯಲ್ಲಿ ಹೆಚ್ಚು ಶಾಂತವಾದ ನಿದ್ರೆಯನ್ನು ಪಡೆಯಲು ಸಹಾಯ ಮಾಡುತ್ತದೆ ಎಂದು ಅನೇಕ ಅಧ್ಯಯನಗಳು ಕಂಡುಹಿಡಿದಿದೆ. ಆದರೆ, ಇದು ಏಕೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಅನೇಕ ಆರೋಗ್ಯ ತಜ್ಞರು ಹಾಲಿನಲ್ಲಿ ನಿದ್ರೆಯನ್ನು ಉತ್ತೇಜಿಸುವ ರಾಸಾಯನಿಕ ಸಂಯುಕ್ತಗಳಿವೆ ಎಂದು ವರದಿ ಮಾಡುತ್ತಾರೆ.

ಹಾಲು ಸಿರೊಟೋನಿನ್, ಟ್ರಿಪ್ಟೊಫಾನ್ ಮತ್ತು ಮೆಲಟೋನಿನ್ ನಂತಹ ಸಂಯುಕ್ತಗಳನ್ನು ಹೊಂದಿರುತ್ತದೆ. ಇದು ರಾತ್ರಿಯಲ್ಲಿ ವೇಗವಾಗಿ ನಿದ್ರಿಸಲು ಸಹಾಯ ಮಾಡುತ್ತದೆ. ಟ್ರಿಪ್ಟೊಫಾನ್ ಅನೇಕ ಪ್ರೋಟೀನ್-ಭರಿತ ಆಹಾರಗಳಲ್ಲಿ ಕಂಡುಬರುವ ಅಮೈನೋ ಆಮ್ಲವಾಗಿದೆ. ಇದು ನರಪ್ರೇಕ್ಷಕ ಸಿರೊಟೋನಿನ್ ಉತ್ಪಾದನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಸಿರೊಟೋನಿನ್ ಮನಸ್ಥಿತಿಯನ್ನು ಶಾಂತಗೊಳಿಸುತ್ತದೆ ಮತ್ತು ವಿಶ್ರಾಂತಿಯನ್ನು ಉತ್ತೇಜಿಸುತ್ತದೆ. ಅಲ್ಲದೆ, ಮೆಲಟೋನಿನ್ ಹಾರ್ಮೋನ್ ಉತ್ಪಾದನೆಗೆ ಸಹಾಯ ಮಾಡುತ್ತದೆ. ನಿದ್ರೆಯ ಹಾರ್ಮೋನ್ ಎಂದೂ ಕರೆಯಲ್ಪಡುವ ಮೆಲಟೋನಿನ್ ನಿಮ್ಮ ಮೆದುಳಿನಿಂದ ಬಿಡುಗಡೆಯಾಗುತ್ತದೆ. ಇದು ನಿಮ್ಮ ಸಿರ್ಕಾಡಿಯನ್ ರಿದಮ್ ಅನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಮತ್ತು ನಿಮ್ಮ ದೇಹದ ನಿದ್ರೆಯ ಚಕ್ರಗಳನ್ನು ಸುಧಾರಿಸುತ್ತದೆ.

ಇದನ್ನೂ ಓದಿ: ಮೊಟ್ಟೆ ತಿನ್ನುವಾಗ ಈ ತಪ್ಪು ಮಾಡಬೇಡಿ: ಗಂಭೀರ ಕಾಯಿಲೆಗೆ ತುತ್ತಾಗುತ್ತೀರ

ಜೀರ್ಣಕ್ರಿಯೆ:

ಹಾಲು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡಲು ಬಹಳಷ್ಟು ಸಹಾಯ ಮಾಡುತ್ತದೆ. ಅಲ್ಲದೆ, ಇದು ಬೆಳಗಿನ ಕರುಳಿನ ಚಲನೆಯನ್ನು ಸುಗಮಗೊಳಿಸುತ್ತದೆ. ರಾತ್ರಿ ಹಾಲು ಕುಡಿಯುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿಭಾಯಿಸಲು ಸಹಾಯ ಮಾಡುತ್ತದೆ.

ಸಂತಾನೋತ್ಪತ್ತಿ:

ರಾತ್ರಿ ಹಾಲು ಕುಡಿಯುವುದರಿಂದ ಶುಕ್ರ ಧಾತು ಬಲಗೊಳ್ಳುತ್ತದೆ. ಇದು ನಿಮ್ಮ ಸಂತಾನೋತ್ಪತ್ತಿ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದು ನಿಮ್ಮ ಗರ್ಭಾಶಯಕ್ಕೆ ಸರಿಯಾದ ಪೋಷಣೆಯನ್ನು ಒದಗಿಸುತ್ತದೆ ಮತ್ತು ನಿಮ್ಮ ಫಲವತ್ತತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾನ್ಪುರದಲ್ಲಿ ಸ್ಕೂಟರ್ ಸವಾರಿ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಸಾಕು ನಾಯಿ
ಕಾನ್ಪುರದಲ್ಲಿ ಸ್ಕೂಟರ್ ಸವಾರಿ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಸಾಕು ನಾಯಿ
ಅಕ್ರಮ ಹಣ ವರ್ಗಾವಣೆ ಬಗ್ಗೆ ಎಲ್ಲರೆದುರೇ ಅತ್ತು ಗೋಳಾಡಿದ ಕಾಂಗ್ರೆಸ್ ಶಾಸಕಿ
ಅಕ್ರಮ ಹಣ ವರ್ಗಾವಣೆ ಬಗ್ಗೆ ಎಲ್ಲರೆದುರೇ ಅತ್ತು ಗೋಳಾಡಿದ ಕಾಂಗ್ರೆಸ್ ಶಾಸಕಿ
ಜೀ ಕನ್ನಡದ ಹೊಸ ರಿಯಾಲಿಟಿ ಶೋನಲ್ಲಿ ರಕ್ಷಕ್ ಬುಲೆಟ್
ಜೀ ಕನ್ನಡದ ಹೊಸ ರಿಯಾಲಿಟಿ ಶೋನಲ್ಲಿ ರಕ್ಷಕ್ ಬುಲೆಟ್
ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು
ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ