Adenovirus in Bengaluru: ಅಡೆನೊವೈರಸ್ ಪ್ರಕರಣಗಳು ಹೆಚ್ಚಾಗುತ್ತಿವೆ, ಆದರೆ ಭಯ ಬೇಡ

ಬೆಂಗಳೂರಿನಲ್ಲಿ ಅಡೆನೊವೈರಸ್ ಪ್ರಕರಣಗಳು ಹೆಚ್ಚಾಗುತ್ತಿವೆ, ಆದರೆ ಸೋಂಕಿನ ಬಗ್ಗೆ ಸಾರ್ವಜನಿಕರು ಆತಂಕ ಪಡಬೇಕಾಗಿಲ್ಲ ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ.

Adenovirus in Bengaluru: ಅಡೆನೊವೈರಸ್ ಪ್ರಕರಣಗಳು ಹೆಚ್ಚಾಗುತ್ತಿವೆ, ಆದರೆ ಭಯ ಬೇಡ
Follow us
ಅಕ್ಷತಾ ವರ್ಕಾಡಿ
|

Updated on:Mar 08, 2023 | 2:48 PM

ಬೆಂಗಳೂರು: ನಗರದಲ್ಲಿಅಡೆನೊವೈರಸ್ಪ್ರಕರಣಗಳು ಹೆಚ್ಚಾಗುತ್ತಿವೆ, ಆದರೆ ಸೋಂಕಿನ ಬಗ್ಗೆ ಸಾರ್ವಜನಿಕರು ಆತಂಕ ಪಡಬೇಕಾಗಿಲ್ಲ ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ. ಇದು ಸಾಂಕ್ರಾಮಿಕ ರೋಗ ಲಕ್ಷಣವನ್ನು ಹೊಂದಿರುವುದರಿಂದ ನೀವು ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅಗತ್ಯ ಎಂದು ವೈದ್ಯರು ಸಲಹೆ ನೀಡುತ್ತಾರೆ. ವಿಶೇಷವಾಗಿ ಮಕ್ಕಳಲ್ಲಿ ಈ ಸೋಂಕು ಹೆಚ್ಚಾಗಿ ಕಂಡುಬರುವುದರಿಂದ ನಿಮ್ಮ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅಗತ್ಯವಾಗಿದೆ.

ಅಡೆನೊವೈರಸ್ ಎಂದರೇನು?

ಕೊರೋನಾದಂತೆಯೇ ಉಸಿರಾಟದ ಮೂಲಕ ಒಬ್ಬರಿಂದ ಒಬ್ಬರಿಗೆ ಹರಡುವ ವೈರಲ್​ ಸೋಂಕು ಇದಾಗಿದ್ದು, ಇತ್ತೀಚಿಗೆ ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ. ಸಾಮಾನ್ಯವಾಗಿ ಜ್ವರ, ನೆಗಡಿ, ನ್ಯುಮೋನಿಯಾ, ಶ್ವಾಸಕೋಶದ ತೊಂದರೆಯನ್ನುಂಟು ಮಾಡುತ್ತದೆ. ಈ ವೈರಸ್ ಗಾಳಿಯ ಮೂಲಕ ಅಂದರೆ ಕೆಮ್ಮುವಿಕೆ ಅಥವಾ ಸೀನುವಿಕೆಯಿಂದ ಹರಡುತ್ತದೆ.

ಇದನ್ನೂ ಓದಿ: ಭಾರತದಲ್ಲಿ ಹೆಚ್ಚಾಗುತ್ತಿರುವ ಎಚ್​3ಎನ್​2 ವೈರಸ್​​ನ ಲಕ್ಷಣ ಹಾಗೂ ಚಿಕಿತ್ಸೆಯ ಕುರಿತು ಮಾಹಿತಿ ಇಲ್ಲಿದೆ

ಅಡೆನೊವೈರಸ್ ರೋಗ ಲಕ್ಷಣಗಳು:

ಅಡೆನೊವೈರಸ್ ಸೋಂಕು ತಗುಲಿದ ಪ್ರಾರಂಭದ ಹಂತದಲ್ಲಿ ನೆಗಡಿ, ತಲೆನೋವು ಮತ್ತು ಜ್ವರದ ಲಕ್ಷಣಗಳು ಕಂಡುಬರುತ್ತದೆ. ಇದಲ್ಲದೆ ಜ್ವರ, ಗಂಟಲು ಶುಷ್ಕತೆ, ತೀವ್ರವಾದ ಬ್ರಾಂಕೈಟಿಸ್‌ನಂತಹ ಸಮಸ್ಯೆಗಳು ಅಡೆನೊದಿಂದ ಉಂಟಾಗುತ್ತವೆ. ನಿಮ್ಮ ಮಕ್ಕಳು ಎರಡು ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರೆ. ಮೂತ್ರ ಗಾಢ ಹಳದಿ ಬಣ್ಣವನ್ನು ಹೊಂದಿದ್ದರೆ , ಜೊತೆಗೆ ಅತಿಯಾದ ಸುಸ್ತು, ಕಣ್ಣು ಕೆಂಪಾಗಿದ್ದರೆ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದುಕೊಳ್ಳುವುದು ಅಗತ್ಯವಾಗಿದೆ.

ಅಡೆನೊವೈರಸ್ಗೆ ಚಿಕಿತ್ಸೆ ಏನು?

ಅಡೆನೊವೈರಸ್‌ಗೆ ಯಾವುದೇ ನಿರ್ದಿಷ್ಟ ಔಷಧ ಅಥವಾ ಚಿಕಿತ್ಸೆ ಇಲ್ಲ. ಹೆಚ್ಚಿನ ಸಮಯ, ಅಡೆನೊವೈರಸ್ ಸೋಂಕು ಸೌಮ್ಯ ಲಕ್ಷಣಗಳನ್ನು ಹೊಂದಿರುತ್ತದೆ. ಇದನ್ನು ನೋವು ಅಥವಾ ಜ್ವರಕ್ಕೆ ಸಂಬಂಧಿಸಿ ಔಷಧದಿಂದ ಗುಣಪಡಿಸಲಾಗುತ್ತದೆ. ಅದಕ್ಕಾಗಿಯೇ ಭಯಪಡುವ ಅಗತ್ಯವಿಲ್ಲ ಎಂದು ಬೆಂಗಳೂರಿನ ಡಾ. ರಜತ್​​​ ಆತ್ರೇಯಾ ಸಲಹೆ ನೀಡಿದ್ದಾರೆ. ನಗರದಲ್ಲಿ ಕೆಲವೇ ಕೆಲವು ಲ್ಯಾಬ್‌ಗಳು ವೈರಸ್‌ಗಾಗಿ ಪರೀಕ್ಷಾ ಸೌಲಭ್ಯಗಳನ್ನು ಹೊಂದಿವೆ. ಪಶ್ಚಿಮ ಬಂಗಾಳದಲ್ಲಿ ಒಂಬತ್ತು ದಿನಗಳಲ್ಲಿ ಸಾವಿನ ಸಂಖ್ಯೆ 40 ಕ್ಕೆ ಏರಿದೆ. ಆದ್ದರಿಂದ ಸ್ವಯಂ ಕಾಳಜಿ ವಹಿಸುವುದು ಅಗತ್ಯ. ಮಾಸ್ಕ್​​​ ಧರಿಸಿ, ಸಾಮಾಜಿ ಅಂತರ ಮತ್ತು ಆಗಾಗ ಕೈಗಳನ್ನು ತೊಳೆಯಿರಿ ಎಂದು ತಜ್ಞರು ಎಚ್ಚರಿಕೆ ನೀಡುತ್ತಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 1:30 pm, Wed, 8 March 23

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ