ಬೆಂಗಳೂರಲ್ಲಿ ಕಡಿಮೆಯಾಗುತ್ತಿರುವ ಕೊವಿಡ್-19 ಸೋಂಕಿತರ ಸಂಖ್ಯೆ

ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇದಿನೆ ಕಡಿಮೆಯಾಗುತ್ತಿರುವುದು ಸಂತೋಷದ ವಿಷಯವೇ. ಆದರೆ ಅದೇ ತೆರನಾಗಿ ಪರೀಕ್ಷಣೆಗಳ ಸಂಖ್ಯೆಯೂ ಕಡಿಮೆಯಾಗಿದೆಯೆಂದು ವರದಿಯಾಗಿದೆ. ಈ ಕಾರಣದಿಂದಾಗಿ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿರುವುದಾದರೆ ಅದರಲ್ಲಿ ಸಂತೋಷಪಡುವಂಥದ್ದೇನೂ ಇಲ್ಲ.

ಬೆಂಗಳೂರಲ್ಲಿ ಕಡಿಮೆಯಾಗುತ್ತಿರುವ ಕೊವಿಡ್-19 ಸೋಂಕಿತರ ಸಂಖ್ಯೆ
ಪ್ರಾತಿನಿಧಿಕ ಚಿತ್ರ
Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Nov 28, 2020 | 10:33 PM

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಶನಿವಾರ ಸಾಯಂಕಾಲ ದೊರಕಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 12 ಜನ ಸಾವನ್ನಪ್ಪಿದ್ದಾರೆ ಮತ್ತು ಹೊಸದಾಗಿ 1,522 ಜನರಲ್ಲಿ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 11,750 ಜನ ಮರಣಿಸಿದ್ದಾರೆ ಹಾಗೂ ಸೋಂಕಿತರ ಸಂಖ್ಯೆ 8,82,608 ತಲುಪಿದೆ.

ಸೋಂಕಿತರ ಪೈಕಿ 8,46,082 ಜನ ಗುಣಮುಖರಾಗಿದ್ದಾರೆ, ಮಿಕ್ಕಿದ 24,757 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹಾಗೆಯೇ, ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 7 ಜನರ ಬಲಿಯಾಗಿದ್ದಾರೆ ಮತ್ತು ಕಳೆದ 24 ಗಂಟೆಗಳಲ್ಲಿ 719 ಜನರು ಸೋಂಕು ತಾಕಿಸಿಕೊಂಡಿದ್ದಾರೆ. ನಗರದಲ್ಲಿ ಕೊರೊನಾದಿಂದ ಈವರೆಗೆ 4,121 ಜನ ಸಾವಿಗೀಡಾಗಿದ್ದಾರೆ, ಸೋಂಕಿತರ ಸಂಖ್ಯೆ 3,68,604ಕ್ಕೇರಿದೆ

ಸೋಂಕಿತರ ಪೈಕಿ 3,46,116 ಜನರು ಗುಣಮುಖರಾಗಿದ್ದಾರೆ ಮತ್ತು ಮಿಕ್ಕಿದ 18,366 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆಯೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಲಭ್ಯವಾಗಿರುವ ಮಾಹಿತಿ ತಿಳಿಸುತ್ತದೆ.