Superfoods for Brain Health: ಮೆದುಳು ಕಂಪ್ಯೂಟರ್​​ಗಿಂತ ವೇಗವಾಗಿ ಕೆಲಸ ಮಾಡಬೇಕಾದರೆ ಈ ಆಹಾರ ಸೇವನೆ ಮಾಡಿ

ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ ಎಂದು ತಜ್ಞರು ಹೇಳುತ್ತಾರೆ. ವಾಸ್ತವದಲ್ಲಿ, ಮೆದುಳು ಮಾನವನ ತಲೆಯಲ್ಲಿರುವ ತಲೆಬುರುಡೆಯಿಂದ ರಕ್ಷಿಸಲ್ಪಟ್ಟಿದೆ. ಅಲ್ಲದೆ ಇದು ಎಲ್ಲಾ ಇಂದ್ರಿಯಗಳ ಪ್ರಮುಖ ಕೇಂದ್ರವಾಗಿದೆ. ಮೆದುಳು ಸ್ವತಃ ತನ್ನನ್ನು ತಾನು ಸರಿಪಡಿಸಿಕೊಳ್ಳುವ ಸಾಮರ್ಥ್ಯವನ್ನು ಹೊಂದಿದೆ ಎಂದು ಹಲವಾರು ಅಧ್ಯಯನಗಳು ತೋರಿಸಿ ಕೊಟ್ಟಿವೆ. ಹಾಗಾದರೆ ನಮ್ಮ ಮೆದುಳನ್ನು ಹೆಚ್ಚು ಸಕ್ರಿಯವಾಗಿ ಇರಿಸಿಕೊಳ್ಳಲು ಯಾವ ರೀತಿಯ ಆಹಾರ ಸೇವನೆ ಮಾಡಬೇಕು? ಜ್ಞಾಪಕ ಶಕ್ತಿ ಹೆಚ್ಚಾಗಲು ಯಾವ ಆಹಾರ ಒಳ್ಳೆಯದು? ಎಂಬ ವಿಷಯಗಳನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ಹಾಗಾಗಿ ಈ ಕೆಳಗೆ ತಿಳಿಸಿರುವ ಆಹಾರಗಳನ್ನು ಸೇವನೆ ಮಾಡಿ ಜ್ಞಾಪಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ.

Superfoods for Brain Health: ಮೆದುಳು ಕಂಪ್ಯೂಟರ್​​ಗಿಂತ ವೇಗವಾಗಿ ಕೆಲಸ ಮಾಡಬೇಕಾದರೆ ಈ ಆಹಾರ ಸೇವನೆ ಮಾಡಿ
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Sep 23, 2024 | 1:46 PM

ಮೆದುಳಿನ ಆರೋಗ್ಯವನ್ನು ಕಾಪಾಡಿಕೊಳ್ಳುವುದು ತುಂಬಾ ಮುಖ್ಯವಾಗುತ್ತದೆ. ನಮ್ಮ ದೇಹ ಕಾರ್ಯನಿರ್ವಹಿಸಲು ಶಕ್ತಿಯ ಅಗತ್ಯವಿರುವಂತೆ, ನಮ್ಮ ಮೆದುಳು ಚೆನ್ನಾಗಿ ಕೆಲಸ ಮಾಡಲು ಸರಿಯಾದ ಪೋಷಣೆಯ ಅಗತ್ಯವಿದೆ. ಆದ್ದರಿಂದ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ ಎಂದು ತಜ್ಞರು ಹೇಳುತ್ತಾರೆ. ವಾಸ್ತವದಲ್ಲಿ, ಮೆದುಳು ಮಾನವನ ತಲೆಯಲ್ಲಿರುವ ತಲೆಬುರುಡೆಯಿಂದ ರಕ್ಷಿಸಲ್ಪಟ್ಟಿದೆ. ಅಲ್ಲದೆ ಇದು ಎಲ್ಲಾ ಇಂದ್ರಿಯಗಳ ಪ್ರಮುಖ ಕೇಂದ್ರವಾಗಿದೆ. ಮೆದುಳು ಸ್ವತಃ ತನ್ನನ್ನು ತಾನು ಸರಿಪಡಿಸಿಕೊಳ್ಳುವ ಸಾಮರ್ಥ್ಯವನ್ನು ಹೊಂದಿದೆ ಎಂದು ಹಲವಾರು ಅಧ್ಯಯನಗಳು ತೋರಿಸಿ ಕೊಟ್ಟಿವೆ. ಹಾಗಾದರೆ ನಮ್ಮ ಮೆದುಳನ್ನು ಹೆಚ್ಚು ಸಕ್ರಿಯವಾಗಿ ಇರಿಸಿಕೊಳ್ಳಲು ಯಾವ ರೀತಿಯ ಆಹಾರ ಸೇವನೆ ಮಾಡಬೇಕು? ಜ್ಞಾಪಕ ಶಕ್ತಿ ಹೆಚ್ಚಾಗಲು ಯಾವ ಆಹಾರ ಒಳ್ಳೆಯದು? ಎಂಬ ವಿಷಯಗಳನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ಹಾಗಾಗಿ ಈ ಕೆಳಗೆ ತಿಳಿಸಿರುವ ಆಹಾರಗಳನ್ನು ಸೇವನೆ ಮಾಡಿ ಜ್ಞಾಪಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ.

ವಾಲ್ನಟ್ – ಕಡಲೆಕಾಯಿ: ವಾಲ್ನಟ್ಗಳು ಒಮೆಗಾ -3 ನಂತಹ ಪೋಷಕಾಂಶಗಳನ್ನು ಹೊಂದಿರುತ್ತವೆ, ಇದು ಮೆದುಳಿಗೆ ಒಳ್ಳೆಯದು. ವಾಲ್ನಟ್ಗಳನ್ನು ನಿಯಮಿತವಾಗಿ ಸೇವಿಸುವುದರಿಂದ ಜ್ಞಾಪಕ ಶಕ್ತಿಯನ್ನು ಹೆಚ್ಚಿಸುತ್ತದೆ. ಕಡಲೆಕಾಯಿ ಮೆದುಳಿಗೆ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ. ಏಕೆಂದರೆ ಅವು ಉತ್ತಮವಾದ ಕೊಬ್ಬು ಮತ್ತು ಪ್ರೋಟೀನ್ ಗಳಿಂದ ಸಮೃದ್ಧವಾಗಿವೆ.

ಬೀನ್ಸ್ – ಹಸಿರು ಎಲೆ ತರಕಾರಿಗಳು: ಬೀನ್ಸ್ ನಲ್ಲಿ ಫೈಬರ್, ವಿಟಮಿನ್ ಬಿ ಮತ್ತು ಒಮೆಗಾ ಕೊಬ್ಬಿನಾಮ್ಲಗಳು ಸಮೃದ್ಧವಾಗಿವೆ. ಇದು ಏಕಾಗ್ರತೆ ಮತ್ತು ಸ್ಮರಣೆ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಹಸಿರು ಎಲೆ ತರಕಾರಿಗಳಲ್ಲಿ ವಿಟಮಿನ್ ಇ ಮತ್ತು ಫೋಲೇಟ್ ಸಮೃದ್ಧವಾಗಿದೆ. ಇವು ಮೆದುಳಿನ ಸಾಮಾನ್ಯ ಬೆಳವಣಿಗೆಗೆ ಸಹಾಯ ಮಾಡುತ್ತವೆ. ಹೂಕೋಸು ಮತ್ತು ಬ್ರೊಕೋಲಿ ಮೆದುಳಿನ ಆರೋಗ್ಯಕ್ಕೆ ಸಹಾಯ ಮಾಡುತ್ತದೆ. ಈ ತರಕಾರಿಗಳಲ್ಲಿ ಹೆಚ್ಚಿನ ಪ್ರಮಾಣದ ಕೋಲೀನ್ ಇರುತ್ತದೆ. ಇದು ಜ್ಞಾಪಕ ಶಕ್ತಿಯನ್ನು ಬಲಪಡಿಸುತ್ತದೆ. ಜೊತೆಗೆ ಆಲೋಚನಾ ಸಾಮರ್ಥ್ಯವನ್ನು ತೀಕ್ಷ್ಣಗೊಳಿಸುತ್ತದೆ.

ಬ್ಲೂಬೆರ್ರಿ: ಬೆರ್ರಿ ಹಣ್ಣುಗಳು ಮೆದುಳಿನ ಬೆಳವಣಿಗೆಗೆ ಒಳ್ಳೆಯದು. ಅಲ್ಲದೆ ಇವು ಮೆದುಳಿನಲ್ಲಿನ ಮರೆವಿನ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ, ನರಗಳ ಕಾರ್ಯ ಮತ್ತು ಸಂವಹನ ಕೌಶಲ್ಯಗಳನ್ನು ಸುಧಾರಿಸುತ್ತದೆ.

ಇದನ್ನೂ ಓದಿ: ಈ ಐದು ರೋಗ ಇರುವವರು ಬದನೇಕಾಯಿ ಸೇವನೆ ಮಾಡಬಾರದು

ಕಾಫಿ-ಟೀ: ಅವುಗಳಲ್ಲಿರುವ ಕೆಫೀನ್ ಮೆದುಳನ್ನು ತೀಕ್ಷ್ಣಗೊಳಿಸುತ್ತದೆ ಮತ್ತು ಆಯಾಸವನ್ನು ಕಡಿಮೆ ಮಾಡುತ್ತದೆ. ಗ್ರೀನ್ ಟೀ ಮಾನಸಿಕ ಆರೋಗ್ಯಕ್ಕೂ ಪರಿಣಾಮಕಾರಿಯಾಗಿದೆ. ಆದರೆ ಇದರ ಅತಿಯಾದ ಸೇವನೆ ಒಳ್ಳೆಯದಲ್ಲ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?