AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Heath Tips: ನಿಮಗೆ ಕೆಮ್ಮಿ ಕೆಮ್ಮಿ ಸಾಕಾಯ್ತ? ಪರಿಹಾರ ನೋಡಿ

ಬೆಳ್ಳುಳ್ಳಿಯಲ್ಲಿ ಆಂಟಿವೈರಲ್, ಉರಿಯೂತದ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳಿವೆ. ಬೆಳ್ಳುಳ್ಳಿಯನ್ನು ನಿಯಮಿತವಾಗಿ ತಿನ್ನುವುದರಿಂದ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

Heath Tips: ನಿಮಗೆ ಕೆಮ್ಮಿ ಕೆಮ್ಮಿ ಸಾಕಾಯ್ತ? ಪರಿಹಾರ ನೋಡಿ
ಕೆಮ್ಮು (ಸಾಂದರ್ಭಿಕ ಚಿತ್ರ)
TV9 Web
| Updated By: preethi shettigar|

Updated on: Jul 16, 2021 | 7:34 AM

Share

ಮಳೆಗಾಲದಲ್ಲಿ ಶೀತ ಆಗುವುದು ಸಹಜ. ಶೀತ ಆದಾಗ ಕೆಮ್ಮು(Cough )ಬರುವುದೂ ಸಹಜ. ವಿಪರೀತ ಮಳೆಯಿಂದ ವಾತಾವರಣ ಬದಲಾಗಿ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗುತ್ತದೆ. ಅತಿಯಾದ ಕೆಮ್ಮಿನಿಂದ ಕಿರಿ ಕಿರಿಯಾಗುತ್ತದೆ. ಕೆಮ್ಮು ಬಂದಾಗೆಲ್ಲ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುತ್ತಾರೆ. ಆದರೆ ಮನೆಯಲ್ಲೇ ಕೆಮ್ಮಿಗೆ ಮದ್ದಿದೆ. ಕೆಮ್ಮು ಶುರುವಾದಗೆಲ್ಲಾ ಆಸ್ಪತ್ರೆಗೆ ಹೋಗುವ ಬದಲು ಮನೆಯಲ್ಲಿ ಅದಕ್ಕೆ ಸೂಕ್ತ ಚಿಕಿತ್ಸೆ ಪಡೆಯಿರಿ.

* ಜೇನುತುಪ್ಪ ಕೆಮ್ಮಿಗೆ ರಾಮಬಾಣವಿದ್ದಂತೆ. ಇದು ಆರೋಗ್ಯಕ್ಕೆ ಸಂಬಂಧಿಸಿದ ಅನೇಕ ಪ್ರಯೋಜನಗಳನ್ನು ಹೊಂದಿದೆ. ಆಂಟಿವೈರಲ್, ಉರಿಯೂತದ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಇದು ನೋಯುತ್ತಿರುವ ಗಂಟಲನ್ನು ಶಮನಗೊಳಿಸಲು ಸಹಾಯ ಮಾಡುತ್ತದೆ. ಕೆಮ್ಮು ಕಡಿಮೆಯಾಗಲು ಬಿಸಿ ನೀರಿನಲ್ಲಿ 2 ಟೀ ಚಮಚ ಜೇನುತುಪ್ಪವನ್ನು ಬೆರೆಸಿ ಕುಡಿಯಿರಿ.

* ಬೆಳ್ಳುಳ್ಳಿಯಲ್ಲಿ ಆಂಟಿವೈರಲ್, ಉರಿಯೂತದ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳಿವೆ. ಬೆಳ್ಳುಳ್ಳಿಯನ್ನು ನಿಯಮಿತವಾಗಿ ತಿನ್ನುವುದರಿಂದ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಬೆಳ್ಳುಳ್ಳಿಯನ್ನು ಹುರಿದು ರಾತ್ರಿ ಮಲಗುವ ಮೊದಲು ಒಂದು ಚಮಚ ಜೇನುತುಪ್ಪದೊಂದಿಗೆ ಸೇವಿಸಿ. ಜೊತೆಗೆ, ಕತ್ತರಿಸಿದ ಬೆಳ್ಳುಳ್ಳಿಯನ್ನು ತುಪ್ಪದಲ್ಲಿ ಹುರಿದು ಅಡುಗೆಗೆ ಬಳಸಬಹುದು. ಇದು ಅತಿಯಾದ ಕೆಮ್ಮಿನಿಂದ ಪಾರು ಮಾಡುವುದಲ್ಲದೆ, ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.

* ಪದೇ ಪದೇ ಕೆಮ್ಮು ಬರುತ್ತಿದ್ದರೆ ಅನಾನಸ್ (Pineapple) ಹಣ್ಣಿನ ಜ್ಯೂಸ್ ಕುಡಿಯಬೇಕು. ಅನಾನಸ್ ಹಣ್ಣಿನಲ್ಲಿ ಬ್ರೊಮೆಲೈನ್ ಎಂಬ ಎಂಜೈಮ್ ಇದೆ. ಇದು ಕೆಮ್ಮಿನಿಂದ ಉಂಟಾಗುವ ಸೋಂಕನ್ನು ಕಡಿಮೆಗೊಳಿಸುತ್ತದೆ. ಇದನ್ನು ಕೆಲವೊಮ್ಮೆ ಉರಿಯೂತದ ಚಿಕಿತ್ಸೆಗೆ ಸಹ ಬಳಸಲಾಗುತ್ತದೆ. ಕೆಮ್ಮು ಬಂದಾಗ ಅನಾನಸ್ ಹಣ್ಣಿನ ತುಂಡು ತಿನ್ನಿರಿ. ಬದಲಿಗೆ 250 ಮಿಲಿ ಅನಾನಸ್ ಜ್ಯೂಸ್ನ ದಿನಕ್ಕೆ ಎರಡು ಬಾರಿ ಕುಡಿಯಿರಿ.

* ಅರಿಶಿನ (Turmeric) ಸಹಜವಾಗಿ ಎಲ್ಲರ ಮನೆಯಲ್ಲೂ ಇರುತ್ತದೆ. ಅನೇಕ ಆರೋಗ್ಯ ಸಮಸ್ಯೆಗಳಿಗೆ ಇದು ಪರಿಹಾರವಿದ್ದಂತೆ. ಇದು ಆಂಟಿವೈರಲ್, ಉರಿಯೂತದ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳನ್ನು ಹೊಂದಿದೆ. ಶತಮಾನಗಳಿಂದ ಆಯುರ್ವೇದ ಔಷಧಿಯಾಗಿ ಇದನ್ನು ಬಳಸಲಾಗುತ್ತಿದೆ. ಉಸಿರಾಟದ ಸಮಸ್ಯೆಗೆ ಇದನ್ನು ಹೆಚ್ಚಾಗಿ ಬಳಸುತ್ತಾರೆ. ರಾತ್ರಿ ಮಲಗುವ ಮೊದಲು, 1/4 ಟೀಸ್ಪೂನ್ ಅರಿಶಿನವನ್ನು ಒಂದು ಲೋಟ ಬೆಚ್ಚಗಿನ ಹಾಲಿಗೆ ಬೆರೆಸಿ ಸೇವಿಸಿದರೆ ಕೆಮ್ಮು ಕಡಿಮೆಯಾಗುತ್ತದೆ.

* ಉಪ್ಪು ನೀರಿನಿಂದ ಗಾರ್ಗ್ಲಿಂಗ್ ಮಾಡುವುದು ಮನೆಮದ್ದು. ಗಂಟಲು ನೋವನ್ನು ಕಡಿಮೆ ಮಾಡಲು ವೈದ್ಯರು ಈ ಸಲಹೆ ನೀಡುತ್ತಾರೆ. 1 ಕಪ್ ಬೆಚ್ಚಗಿನ ನೀರಿನಲ್ಲಿ 1/4 ಟೀಸ್ಪೂನ್ ಉಪ್ಪನ್ನು ಬೆರೆಸಿ ದಿನಕ್ಕೆ ಹಲವಾರು ಬಾರಿ ಗಾರ್ಗ್ ಮಾಡಬಹುದು. ಹೀಗೆ ಮಾಡಿದರೆ ಗಂಟಲು ಕಡಿತ ಕಡಿಮೆಯಾಗುತ್ತದೆ. ಕೆಮ್ಮು ನಿವಾರಣೆಯಾಗುತ್ತದೆ.

ಇದನ್ನೂ ಓದಿ

Monsoon Health Tips: ಮಳೆಯಲ್ಲಿ ನೆಂದ ಕೂಡಲೇ ಏನು ಮಾಡಬೇಕು? ಮಳೆಗಾಲದಲ್ಲಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ

Health Tips: ಹುಣಸೆ ಹಣ್ಣಿನ ಸೇವನೆಯ ಆರೋಗ್ಯ ಪ್ರಯೋಜನಗಳನ್ನು ತಿಳಿಯಿರಿ

(Best medicine for Cough in home remedies)

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ