
ಮಳೆಗಾಲ (Rainy Season) ಆರಂಭವಾಗುತ್ತಿದ್ದಂತೆ ಜ್ವರ, ಶೀತ, ಗಂಟಲು ನೋವು, ವೈರಲ್ ಸೋಂಕು, ಹೊಟ್ಟೆ ಸಂಬಂಧಿತ ತೊಂದರೆಗಳು ಹೆಚ್ಚಾಗುವುದು ಸಾಮಾನ್ಯ. ಈ ಸಮಯದಲ್ಲಿ ಔಷಧಿಗಳಷ್ಟೇ ಅಲ್ಲ, ಪೌಷ್ಟಿಕ ಆಹಾರ ಮತ್ತು ಋತುಮಾನಕ್ಕೆ ತಕ್ಕ ಹಣ್ಣು, ತರಕಾರಿಗಳ ಸೇವನೆ ಕೂಡ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಅದರಲ್ಲಿಯೂ ವಿಟಮಿನ್ ಸಿ, ಆ್ಯಂಟಿಆಕ್ಸಿಡೆಂಟ್, ಫೈಬರ್ ಹಾಗೂ ಖನಿಜಾಂಶಗಳಿಂದ ಸಮೃದ್ಧವಾಗಿರುವ ಕೆಲವು ಹಣ್ಣುಗಳು ದೇಹವನ್ನು ಸೋಂಕುಗಳಿಂದ ರಕ್ಷಿಸಲು ನೆರವಾಗುತ್ತವೆ ಎಂದು ಪೌಷ್ಟಿಕ ತಜ್ಞರು ಹೇಳುತ್ತಾರೆ.
ನೇರಳೆ ಹಣ್ಣಿನಲ್ಲಿ ವಿಟಮಿನ್ ಸಿ, ಕಬ್ಬಿಣ, ಫೋಲೇಟ್ ಹಾಗೂ ಆ್ಯಂಟಿಆಕ್ಸಿಡೆಂಟ್‌ಗಳು ಸಮೃದ್ಧವಾಗಿವೆ. ಇದು ರೋಗನಿರೋಧಕ ಶಕ್ತಿ ಹೆಚ್ಚಿಸುವುದರ ಜೊತೆಗೆ ಜೀರ್ಣಕ್ರಿಯೆಗೆ ಸಹಕಾರಿ. ಮಧುಮೇಹ ಇರುವವರು ಈ ಹಣ್ಣನ್ನು ವೈದ್ಯರ ಸಲಹೆ ಪಡೆದು ಮಿತ ಪ್ರಮಾಣದಲ್ಲಿ ಸೇವಿಸಬಹುದು.
ಸಾಮಾನ್ಯವಾಗಿ ದಾಳಿಂಬೆ ಪಾಲಿಫಿನಾಲ್ ಹಾಗೂ ವಿಟಮಿನ್ ಸಿಯ ಉತ್ತಮ ಮೂಲವಾಗಿದೆ. ಇದು ದೇಹದಲ್ಲಿನ ಉರಿಯೂತ ಕಡಿಮೆ ಮಾಡಲು, ರಕ್ತಸಂಚಾರ ಸುಧಾರಿಸಲು ಮತ್ತು ವೈರಲ್ ಸೋಂಕಿನ ವಿರುದ್ಧ ದೇಹದ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ.
ಪ್ರತಿದಿನ ಒಂದು ಸೇಬು ಸೇವಿಸುವುದರಿಂದ ಫೈಬರ್, ವಿಟಮಿನ್ ಹಾಗೂ ಆ್ಯಂಟಿಆಕ್ಸಿಡೆಂಟ್‌ಗಳು ದೊರೆಯುತ್ತವೆ. ಮಳೆಗಾಲದಲ್ಲಿ ನಿಧಾನವಾಗುವ ಜೀರ್ಣಕ್ರಿಯೆಯನ್ನು ಸುಧಾರಿಸಲು ಹಾಗೂ ಹೊಟ್ಟೆಯ ಆರೋಗ್ಯ ಕಾಪಾಡಲು ಇದು ನೆರವಾಗಬಹುದು.
ಇದನ್ನೂ ಓದಿ: ಬಿಂಬಳಕಾಯಿಯನ್ನು ಅಡುಗೆಯಲ್ಲಿ ಮಾತ್ರವಲ್ಲ, ಜೀರ್ಣಕ್ರಿಯೆಯನ್ನು ಸುಧಾರಿಸಲು ಕೂಡ ಬಳಸಬಹುದು!
ವಿಟಮಿನ್ ಸಿ ಅತಿ ಹೆಚ್ಚು ಇರುವ ಹಣ್ಣುಗಳಲ್ಲಿ ಪೇರಳೆ ಪ್ರಮುಖ. ಕಿತ್ತಳೆಗಿಂತಲೂ ಹೆಚ್ಚಿನ ವಿಟಮಿನ್ ಸಿ ಹೊಂದಿರುವ ಈ ಹಣ್ಣು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು, ಗಂಟಲಿಗೆ ಸಂಬಂಧಪಟ್ಟ ಸೋಂಕು ಮತ್ತು ಸಾಮಾನ್ಯ ಶೀತದ ಅಪಾಯವನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ.
ಈ ಹಣ್ಣುಗಳಲ್ಲಿ ವಿಟಮಿನ್ ಎ, ವಿಟಮಿನ್ ಸಿ ಮತ್ತು ಪೊಟ್ಯಾಶಿಯಂ ಸಮೃದ್ಧವಾಗಿದೆ. ಚರ್ಮದ ಆರೋಗ್ಯ ಕಾಪಾಡುವುದರ ಜೊತೆಗೆ ದೇಹದ ರೋಗನಿರೋಧಕ ಪ್ರತಿಕ್ರಿಯೆಯನ್ನು ಉತ್ತಮಗೊಳಿಸಲು ಸಹಾಯ ಮಾಡುತ್ತದೆ.
ಪಪ್ಪಾಯಿ, ಕಿವಿ, ಕಿತ್ತಳೆ ಹಾಗೂ ಸೀಬೆಹಣ್ಣುಗಳಂತಹ ಋತುಮಾನಕ್ಕೆ ತಕ್ಕ ಹಣ್ಣುಗಳನ್ನು ಮಿತ ಪ್ರಮಾಣದಲ್ಲಿ ಸೇವಿಸಬಹುದು. ಇವುಗಳಲ್ಲಿ ಇರುವ ಫೈಬರ್ ಮತ್ತು ಆ್ಯಂಟಿಆಕ್ಸಿಡೆಂಟ್‌ಗಳು ಕರುಳಿನ ಆರೋಗ್ಯವನ್ನು ಸುಧಾರಿಸಿ, ದೇಹದ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ನೆರವಾಗುತ್ತವೆ.
ಸೂಚನೆ: ಹಣ್ಣುಗಳು ಆರೋಗ್ಯಕರ ಆಹಾರದ ಭಾಗವಾಗಿದ್ದರೂ, ಯಾವುದೇ ಹಣ್ಣು ವೈರಲ್ ಸೋಂಕನ್ನು ಸಂಪೂರ್ಣವಾಗಿ ತಡೆಯುತ್ತದೆ ಎಂಬುದಕ್ಕೆ ವೈಜ್ಞಾನಿಕ ಸಾಕ್ಷ್ಯಗಳಿಲ್ಲ. ಆದರೆ ಸಮತೋಲನ ಆಹಾರ, ಸಾಕಷ್ಟು ನಿದ್ರೆ, ಶುದ್ಧ ನೀರು ಮತ್ತು ವೈಯಕ್ತಿಕ ಸ್ವಚ್ಛತೆಯೊಂದಿಗೆ ಹಣ್ಣುಗಳನ್ನು ಸೇವಿಸುವುದರಿಂದ ದೇಹದ ರೋಗನಿರೋಧಕ ಶಕ್ತಿಯನ್ನು ಚೆನ್ನಾಗಿ ಕಾಪಾಡಿಕೊಳ್ಳಬಹುದು.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ