Betel Leaves: ಕೀಲು ನೋವಿಗೆ ವೀಳ್ಯದೆಲೆ ನೀರಿನಲ್ಲಿದೆ ಪರಿಹಾರ
ಆಯುರ್ವೇದದಲ್ಲಿ ವೀಳ್ಯದೆಲೆಗೆ ವಿಶೇಷ ಸ್ಥಾನ ನೀಡಲಾಗಿದೆ. ಈ ಎಲೆಗಳಲ್ಲಿ ವಿಟಮಿನ್ ಸಿ, ಥಿಯಾಮಿನ್, ನಿಯಾಸಿನ್, ರೈಬೋಫ್ಲೇವಿನ್, ಕ್ಯಾರೋಟಿನ್ ಮತ್ತು ಕ್ಯಾಲ್ಸಿಯಂನಂತಹ ಪೋಷಕಾಂಶಗಳು ಸಮೃದ್ಧವಾಗಿವೆ. ವೀಳ್ಯದೆಲೆಯನ್ನು ಜಗಿಯುವುದರಿಂದ ಆರೋಗ್ಯ ಪ್ರಯೋಜನಗಳಿರುವಂತೆಯೇ, ಅವುಗಳನ್ನು ನೀರಿನಲ್ಲಿ ಕುದಿಸಿ ತಣ್ಣಗಾದ ನಂತರ ಕುಡಿಯುವುದರಿಂದ, ಅನೇಕ ಆರೋಗ್ಯ ಸಮಸ್ಯೆಗಳನ್ನು ಸುಲಭವಾಗಿ ನಿವಾರಿಸಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಈ ಮನೆ ಮದ್ದಿನಿಂದ ಯಾವ ರೀತಿಯ ಪ್ರಯೋಜನಗಳಿವೆ? ಯಾವ ಸಮಸ್ಯೆಗೆ ಒಳ್ಳೆಯದು ಎಂಬುದನ್ನು ತಿಳಿದುಕೊಳ್ಳಿ. ಇಲ್ಲಿದೆ ಸಂಪೂರ್ಣ ಮಾಹಿತಿ.

ಊಟ ಆದ ಮೇಲೆ ಎಲೆ, ಅಡಿಕೆ ತಿನ್ನುವ ಸಂಪ್ರದಾಯ ಹಲವರ ಮನೆಗಳಲ್ಲಿದೆ. ಇದು ಕೇವಲ ಪದ್ದತಿಯಲ್ಲ ಬದಲಾಗಿ ಇದರಿಂದ ಅನೇಕ ರೀತಿಯ ಪ್ರಯೋಜನಗಳಿವೆ. ಅದಲ್ಲದೆ ವೀಳ್ಯದೆಲೆಯಲ್ಲಿ ಔಷಧೀಯ ಗುಣಗಳು ಹೇರಳವಾಗಿದ್ದು ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ ಎಂದು ಆಯುರ್ವೇದ ತಜ್ಞರು ಹೇಳುತ್ತಾರೆ. ಹಾಗಾಗಿಯೇ ಆಯುರ್ವೇದದಲ್ಲಿ ವೀಳ್ಯದೆಲೆಗೆ ವಿಶೇಷ ಸ್ಥಾನ ನೀಡಲಾಗಿದೆ. ಈ ಎಲೆಗಳಲ್ಲಿ ವಿಟಮಿನ್ ಸಿ, ಥಿಯಾಮಿನ್, ನಿಯಾಸಿನ್, ರೈಬೋಫ್ಲೇವಿನ್, ಕ್ಯಾರೋಟಿನ್ ಮತ್ತು ಕ್ಯಾಲ್ಸಿಯಂನಂತಹ ಪೋಷಕಾಂಶಗಳು ಸಮೃದ್ಧವಾಗಿವೆ. ವೀಳ್ಯದೆಲೆಯನ್ನು ಜಗಿಯುವುದರಿಂದ ಆರೋಗ್ಯ ಪ್ರಯೋಜನಗಳಿರುವಂತೆಯೇ, ಅವುಗಳನ್ನು ನೀರಿನಲ್ಲಿ ಕುದಿಸಿ ತಣ್ಣಗಾದ ನಂತರ ಕುಡಿಯುವುದರಿಂದ, ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ಸುಲಭವಾಗಿ ನಿವಾರಿಸಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಈ ಮನೆ ಮದ್ದಿನಿಂದ ಯಾವ ರೀತಿಯ ಪ್ರಯೋಜನಗಳಿವೆ? ಯಾವ ಸಮಸ್ಯೆಗೆ ಒಳ್ಳೆಯದು ಎಂಬುದನ್ನು ತಿಳಿದುಕೊಳ್ಳಿ. ಇಲ್ಲಿದೆ ಸಂಪೂರ್ಣ ಮಾಹಿತಿ.
ತೂಕ ಕಡಿಮೆ ಮಾಡಲು ಸಹಕಾರಿ: ವೀಳ್ಯದೆಲೆಯಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಅವು ಸೋಂಕುಗಳಿಂದ ರಕ್ಷಣೆ ನೀಡುತ್ತವೆ. ಜೊತೆಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ. ವೀಳ್ಯದೆಲೆಯನ್ನು ನೀರಿನಲ್ಲಿ ಕುದಿಸಿ ಕುಡಿಯುವುದರಿಂದ ಅಜೀರ್ಣ ಮತ್ತು ಗ್ಯಾಸ್ ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ. ವೀಳ್ಯದೆಲೆ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುವ ಮೂಲಕ ತೂಕ ನಷ್ಟಕ್ಕೂ ಕೂಡ ಸಹಾಯ ಮಾಡುತ್ತದೆ.
ಮಧುಮೇಹಿಗಳಿಗೆ ಒಳ್ಳೆಯದು: ವೀಳ್ಯದೆಲೆಯನ್ನು ನೀರಿನಲ್ಲಿ ಕುದಿಸಿ ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಹಾಗಾಗಿ ಇದು ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿಯಾಗಿದೆ. ವೀಳ್ಯದೆಲೆಯು ದೇಹವನ್ನು ನಿರ್ವಿಷಗೊಳಿಸುತ್ತದೆ ಮತ್ತು ಚರ್ಮವನ್ನು ಆರೋಗ್ಯಕರವಾಗಿ ಕಾಣುವಂತೆ ಮಾಡುತ್ತದೆ. ಹಾಗಾಗಿ ಈ ನೀರನ್ನು ಪ್ರತಿನಿತ್ಯ ಸೇವನೆ ಮಾಡಬಹುದು. ಇದರಿಂದ ಯಾವುದೇ ರೀತಿಯ ಅಡ್ಡಪರಿಣಾಮಗಳು ಇರುವುದಿಲ್ಲ.
ಇದನ್ನೂ ಓದಿ: ವೈದ್ಯರು ನಿಯಮಿತವಾಗಿ ಆವಕಾಡೊ ಸೇವನೆ ಮಾಡಿ ಎನ್ನಲು ಕಾರಣವೇನು?
ಬಾಯಿಯ ಆರೋಗ್ಯಕ್ಕೆ ಒಳ್ಳೆಯದು: ವೀಳ್ಯದೆಲೆಯನ್ನು ನೀರಿನಲ್ಲಿ ಕುದಿಸಿ ಕುಡಿಯುವುದರಿಂದ ಕೀಲು ನೋವಿನಿಂದ ಪರಿಹಾರ ನೀಡುತ್ತದೆ. ಏಕೆಂದರೆ ಇದರ ಉರಿಯೂತ ನಿವಾರಕ ಗುಣಗಳು ನೋವಿಗೆ ಮುಕ್ತಿ ನೀಡುವಂತಹ ಶಕ್ತಿಯನ್ನು ಒಳಗೊಂಡಿದೆ. ವೀಳ್ಯದೆಲೆಯನ್ನು ಬಿಸಿ ನೀರಿನಲ್ಲಿ ಕುದಿಸಿ ಕುಡಿಯುವುದರಿಂದ ಗಂಟಲು ನೋವನ್ನು ನಿವಾರಿಸಬಹುದು. ವೀಳ್ಯದೆಲೆ ಬಾಯಿಯ ಕೆಟ್ಟ ವಾಸನೆಯಿಂದಲೂ ಮುಕ್ತಿ ನೀಡುತ್ತದೆ. ಮತ್ತು ಹಲ್ಲುಗಳು ಆರೋಗ್ಯವಾಗಿರಲು ಸಹಾಯ ಮಾಡುತ್ತದೆ.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ








