AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bird Flu: ಹಕ್ಕಿ ಜ್ವರ ಹೇಗೆ ಹರಡುತ್ತೆ? ಯಾವ ಲಕ್ಷಣಗಳು ಕಂಡುಬಂದಲ್ಲಿ ವೈದ್ಯರನ್ನು ಸಂಪರ್ಕಿಸಬೇಕು

ಹಕ್ಕಿಜ್ವರ(Bird Flu) ಪ್ರಕರಣಗಳು ವರದಿಯಾಗುತ್ತಿದೆ. ಹಕ್ಕಿ ಜ್ವರವು ಸೋಂಕಿತ ಪಕ್ಷಿಗಳು ಅಥವಾ ಅವುಗಳ ಹಿಕ್ಕೆಗಳ ನೇರ ಸಂಪರ್ಕದ ಮೂಲಕ ಹರಡುತ್ತದೆ ಎನ್ನಲಾಗುತ್ತದೆ. ಈ ಕಾಯಿಲೆ ಬಗ್ಗೆ ಯಾವುದೇ ರೀತಿಯ ಸ್ಪಷ್ಟ ಮಾಹಿತಿ ಇಲ್ಲವಾದರೂ ಕೂಡ ಇದರ ಬಗ್ಗೆ ಆದಷ್ಟು ಜಾಗೃತಿ ವಹಿಸುವುದು ಅನಿವಾರ್ಯವಾಗಿದೆ. ಆಗ ಮಾತ್ರ ನಮಗೆ ಅದರ ಬಗ್ಗೆ ಸ್ವಲ್ಪ ಮಟ್ಟಿಗಾದರೂ ಅರಿವಿರಲು ಸಾಧ್ಯ. ಇಂತಹ ಸಂದರ್ಭದಲ್ಲಿ ಈ ರೋಗದ ಲಕ್ಷಣಗಳು? ಹೇಗೆ ಹರಡುತ್ತದೆ ಎಂಬುದರ ಕುರಿತು ತಿಳಿದುಕೊಳ್ಳುವುದು ಅಗತ್ಯವಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

Bird Flu: ಹಕ್ಕಿ ಜ್ವರ ಹೇಗೆ ಹರಡುತ್ತೆ? ಯಾವ ಲಕ್ಷಣಗಳು ಕಂಡುಬಂದಲ್ಲಿ ವೈದ್ಯರನ್ನು ಸಂಪರ್ಕಿಸಬೇಕು
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Mar 03, 2025 | 5:07 PM

Share

ರಾಜ್ಯಗಳಲ್ಲಿ ಹಕ್ಕಿಜ್ವರ(Bird Flu) ಪ್ರಕರಣಗಳು ವರದಿಯಾಗುತ್ತಿದೆ. ಎಚ್​5ಎನ್​1(H5N1) ವೈರಸ್ ಅನ್ನು ಪಕ್ಷಿ ಜ್ವರ ಎಂದೂ ಕರೆಯುತ್ತಾರೆ. ಈ ವೈರಸ್ ಮೊದಲಿಗೆ 1996ರಲ್ಲಿ ಚೀನಾದಲ್ಲಿ ಪತ್ತೆಯಾಗಿದ್ದು, ನಂತರ ಜಗತ್ತಿನಾದ್ಯಂತ ಹರಡಿತು ಎನ್ನಲಾಗುತ್ತದೆ. ಇತ್ತೀಚಿನ ವರ್ಷಗಳಲ್ಲಿ ಪಕ್ಷಿಗಳು ಮತ್ತು ಸಸ್ತನಿಗಳಲ್ಲಿ ಈ ರೋಗದಲ್ಲಿ ಭಾರಿ ಹೆಚ್ಚಳ ಕಂಡುಬಂದಿದೆ. ಹಕ್ಕಿ ಜ್ವರವು ಸೋಂಕಿತ ಪಕ್ಷಿಗಳು ಅಥವಾ ಅವುಗಳ ಹಿಕ್ಕೆಗಳ ನೇರ ಸಂಪರ್ಕದ ಮೂಲಕ ಹರಡುತ್ತದೆ ಎನ್ನಲಾಗುತ್ತದೆ. ಈ ಕಾಯಿಲೆ ಬಗ್ಗೆ ಯಾವುದೇ ರೀತಿಯ ಸ್ಪಷ್ಟ ಮಾಹಿತಿ ಇಲ್ಲವಾದರೂ ಕೂಡ ಇದರ ಬಗ್ಗೆ ಆದಷ್ಟು ಜಾಗೃತಿ ವಹಿಸುವುದು ಅನಿವಾರ್ಯವಾಗಿದೆ. ಆಗ ಮಾತ್ರ ನಮಗೆ ಅದರ ಬಗ್ಗೆ ಸ್ವಲ್ಪ ಮಟ್ಟಿಗಾದರೂ ಅರಿವಿರಲು ಸಾಧ್ಯ. ಈ ಸಮಯದಲ್ಲಿ ಅನೇಕ ರೀತಿಯ ಸುಳ್ಳು ಸುದ್ದಿಗಳೂ ಕೂಡ ಹರಡುತ್ತಿರುವುದರಿಂದ ಜನರಿಗೆ ಯಾವುದು ಸತ್ಯ ಯಾವುದು ಸುಳ್ಳು, ಯಾವುದನ್ನು ನಂಬಬೇಕು ಎಂದು ತಿಳಿಯದಿರುವ ಪರಿಸ್ಥಿತಿ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ಈ ರೋಗದ ಲಕ್ಷಣಗಳು? ಹೇಗೆ ಹರಡುತ್ತದೆ ಎಂಬುದರ ಕುರಿತು ತಿಳಿದುಕೊಳ್ಳುವುದು ಅಗತ್ಯವಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಹಕ್ಕಿ ಜ್ವರ ಎಂದರೇನು?

ಏವಿಯನ್ ಇನ್ಫ್ಲುಯೆನ್ಸ ಎಂದೂ ಕರೆಯಲ್ಪಡುವ ಬರ್ಡ್ ಫ್ಲೂ ವೈರಸ್ ಸೋಂಕು ಆಗಿದ್ದು ಅದು ಪಕ್ಷಿಗಳಿಗೆ ಮಾತ್ರವಲ್ಲ, ಮನುಷ್ಯರು ಮತ್ತು ಇತರ ಪ್ರಾಣಿಗಳಲ್ಲಿಯೂ ಕಂಡು ಬರುತ್ತದೆ.

ಹಕ್ಕಿ ಜ್ವರದ ಲಕ್ಷಣಗಳೇನು?

ತೀವ್ರ ಜ್ವರ

ಇದನ್ನೂ ಓದಿ
Image
ಅಣಬೆಗಳು ಈ ಆರೋಗ್ಯ ಸಮಸ್ಯೆ ಇರುವವರಿಗೆ ಒಳ್ಳೆಯದಲ್ಲ
Image
ರೇಬಿಸ್: ಕರ್ನಾಟಕದಲ್ಲಿ ಎರಡೇ ತಿಂಗಳಲ್ಲಿ 8 ಸಾವು, ಬೆಂಗಳೂರಿನಲ್ಲೇ ಹೆಚ್ಚು
Image
ನಿಮ್ಮ ಮಕ್ಕಳಲ್ಲಿ ಹೆಚ್ಚುತ್ತಿರುವ ಬೊಜ್ಜಿನ ಸಮಸ್ಯೆಗೆ ಇದೇ ಕಾರಣ
Image
ಜಗತ್ತಿನಲ್ಲೇ ಅತ್ಯಂತ ಅಪರೂಪದ ರಕ್ತದ ಗುಂಪು ಯಾವುದು ಗೊತ್ತಾ?

ಕೆಮ್ಮು

ಉಸಿರಾಟದಲ್ಲಿ ತೊಂದರೆ

ಮೂಗು ಸೋರುವಿಕೆ

ತಲೆನೋವು

ಸ್ನಾಯುಗಳ ನೋವು

ಗಂಟಲಿನ ಊತ

ಮೂಗು ಮತ್ತು ಒಸಡಿನಿಂದ ರಕ್ತ ಸೋರುವಿಕೆ

ಕೆಲವರಲ್ಲಿ ವಾಕರಿಕೆ, ವಾಂತಿ ಮತ್ತು ಬೇಧಿಯು ಕಂಡುಬರುವುದು ಎಂದು ಹೇಳಲಾಗಿದೆ. ಇನ್ನು ಕೆಲವರಲ್ಲಿ ಕಣ್ಣು ಕೆಂಪಾಗುವ ಸಮಸ್ಯೆಯು ಕಂಡುಬರಬಹುದು. ಸೋಂಕು ದೇಹದೊಳಗೆ ಹೋಗಿ 2- 5 ದಿನಗಳಲ್ಲಿ ಇದರ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ ಎನ್ನಲಾಗುತ್ತದೆ. ಇದಕ್ಕೆ ತಕ್ಷಣವೇ ಚಿಕಿತ್ಸೆ ಪಡೆದುಕೊಂಡರೆ ಆಗ ಇದು ಪ್ರಾಣಾಂತಿಕವಾಗುವುದನ್ನು ತಪ್ಪಿಸಬಹುದಾಗಿದೆ. ಹಾಗಾಗಿ ಯಾವುದಾದರೂ ಲಕ್ಷಣ ಕಂಡು ಬಂದಲ್ಲಿ ಅದನ್ನು ನಿರ್ಲಕ್ಷ್ಯ ಮಾಡದೆಯೇ ತಕ್ಷಣ ವೈದ್ಯರ ಸಲಹೆ ಪಡೆದುಕೊಳ್ಳಿ.

ಇದನ್ನೂ ಓದಿ: ಫ್ಲೂ ಲಸಿಕೆ ಪಡೆದು ಫ್ಲೂನಿಂದ ದೂರವಿರಿ ಮತ್ತು ಆರೋಗ್ಯವಾಗಿರಿ

ಹಕ್ಕಿ ಜ್ವರ ಬರದಂತೆ ತಡೆಯಲು ಈ ಸಲಹೆಗಳನ್ನು ಪಾಲಿಸಿ

ಸೋಂಕು ತಗುಲಿರುವಂತಹ ಹಕ್ಕಿಯನ್ನು ಸ್ಪರ್ಶಿಸುವುದು, ಅದರ ಹಿಕ್ಕೆಗಳು ಮತ್ತು ಹಾಸನ್ನು ಮುಟ್ಟುವುದರಿಂದ ಅಥವಾ ಅದನ್ನು ಅಡುಗೆಗೆ ಬಳಸುವುದು ಇತ್ಯಾದಿಯಿಂದ ಸೋಂಕು ಹರಡಬಹುದು ಎನ್ನಲಾಗುತ್ತದೆ. ಹಾಗಾಗಿ ಆದಷ್ಟು ಈ ಸಮಯದಲ್ಲಿ ಸ್ವಚ್ಛತೆ ಬಗ್ಗೆ ಗಮನ ನೀಡಿ. ಅಡುಗೆ ಮಾಡುವ ಸ್ಥಳ ಯಾವಾಗಲೂ ಸ್ವಚ್ಛವಾಗಿರಲಿ. ಆಹಾರ ತಿನ್ನುವ ಮೊದಲು ಅಥವಾ ಅದನ್ನು ತಯಾರಿಸುವ ಮೊದಲು ಕೈಗಳನ್ನು ಸರಿಯಾಗಿ ತೊಳೆಯಿರಿ. ಸ್ಯಾನಿಟೈಸರ್ ನ್ನು ಬಳಸಿ. ಬೇರೆ ಊರಿಗೆ ಹೋಗುವಾಗಲೂ ಇದರ ಬಳಕೆ ಮಾಡುವುದನ್ನು ಮರೆಯಬೇಡಿ. ತೆರೆದ ಮಾರುಕಟ್ಟೆಯಿಂದ ದೂರವಿರಿ. ಸರಿಯಾಗಿ ಬೇಯಿಸದೆ ಇರುವ ಕೋಳಿ ಅಥವಾ ಬಾತುಕೋಳಿಯನ್ನು ತಿನ್ನಬೇಡಿ. ಹಸಿ ಮೊಟ್ಟೆಯನ್ನು ಸೇವಿಸಬೇಡಿ. ವೈದ್ಯರ ಬಳಿ ಈ ಬಗ್ಗೆ ಸರಿಯಾದ ಸಲಹೆ ತೆಗೆದುಕೊಂಡು ಆ ಬಳಿಕ ಮಾಂಸಾಹಾರ ಸೇವನೆ ಮಾಡಿ. ಜೊತೆಗೆ ಆಹಾರಗಳನ್ನು ಬೇಯಿಸಿ ತಿನ್ನುವುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ