Bird Flu: ಹಕ್ಕಿ ಜ್ವರ ಮನುಷ್ಯರಿಗೂ ತಗುಲಬಹುದು; ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ

ಜನರು ಸತ್ತ ಅಥವಾ ಅನಾರೋಗ್ಯಕ್ಕೊಳಗಾದ ಕಾಡು ಪ್ರಾಣಿಗಳನ್ನು ಮುಟ್ಟಬಾರದು. ಅವುಗಳನ್ನು ಮನೆಗೆ ತರಬಾರದು. ಈ ರೀತಿಯ ಕಾಡುಪ್ರಾಣಿಗಳು ಕಂಡುಬಂದರೆ ಸ್ಥಳೀಯ ಅಧಿಕಾರಿಗಳಿಗೆ ವರದಿ ನೀಡಬೇಕು ಎಂದು WHO ಸೂಚಿಸಿದೆ.

Bird Flu: ಹಕ್ಕಿ ಜ್ವರ ಮನುಷ್ಯರಿಗೂ ತಗುಲಬಹುದು; ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ
ಹಕ್ಕಿ ಜ್ವರ
Follow us
|

Updated on: Feb 10, 2023 | 4:08 PM

ನವದೆಹಲಿ: ಸಾಕು ಕೋಳಿಗಳು ಮತ್ತು ಬಾತುಕೋಳಿಗಳಲ್ಲಿ ಹೆಚ್ಚಾಗಿ ಕಂಡುಬರುವ ಹಕ್ಕಿ ಜ್ವರವು (Bird Flu) ಭಾರತದ ಅನೇಕ ರಾಜ್ಯಗಳನ್ನು ಪ್ರವೇಶಿಸಿದೆ. ಈ ಹಿನ್ನೆಲೆಯಲ್ಲಿ ಫಾರ್ಮ್​ಗಳಲ್ಲಿ ಲಕ್ಷಾಂತರ ಕೋಳಿಗಳನ್ನು ಈಗಾಗಲೇ ಸಾಮೂಹಿಕ ಹತ್ಯೆ ಮಾಡಲಾಗಿದೆ. ಆದರೆ, ಈ ಹಕ್ಕಿ ಜ್ವರ ಪಕ್ಷಿಗಳಿಗೆ ಮಾತ್ರವಲ್ಲದೆ ಮನುಷ್ಯರಿಗೂ ಹರಡುವ ಸಾಧ್ಯತೆ ಹೆಚ್ಚಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಎಚ್ಚರಿಕೆ ನೀಡಿದೆ.

ಹಕ್ಕಿ ಜ್ವರ ಏವಿಯನ್ ಇನ್ಫ್ಲುಯೆನ್ಸ್​ ಟೈಪ್ ಎ ವೈರಸ್‌ಗಳ ಸೋಂಕಿನಿಂದ ಬರುವ ಒಂದು ಕಾಯಿಲೆಯಾಗಿದ್ದು, ಇದು ಸಾಮಾನ್ಯವಾಗಿ ದೇಶೀಯ ಕೋಳಿಗಳಿಗೆ, ಇತರ ಪಕ್ಷಿ ಮತ್ತು ಸಸ್ತನಿ ಜಾತಿಗಳಲ್ಲಿ ಸೋಂಕು ಉಂಟುಮಾಡುತ್ತದೆ. ಆದರೆ, ಇತ್ತೀಚಿನ WHO ವಿಶ್ಲೇಷಣೆಯು ಈ ರೋಗವು ಮಾನವರನ್ನು ಕೂಡ ಕಾಡುವ ಸಾಧ್ಯತೆಯಿದೆ ಎಂದು ಹೇಳಿದೆ.

ಇದನ್ನೂ ಓದಿ: Bird Flu: ಕೇರಳದಲ್ಲಿ ಹೆಚ್ಚಿದ ಹಕ್ಕಿ ಜ್ವರ; ಕೊಟ್ಟಾಯಂನಲ್ಲಿ 6,000ಕ್ಕೂ ಹೆಚ್ಚು ಪಕ್ಷಿಗಳ ಹತ್ಯೆ

ಅಂತಾರಾಷ್ಟ್ರೀಯ ಏಜೆನ್ಸಿಯ ಡೈರೆಕ್ಟರ್ ಜನರಲ್, ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಈ ಬಗ್ಗೆ ಮುನ್ನೆಚ್ಚರಿಕೆ ನೀಡಿದ್ದು, “H5N1 25 ವರ್ಷಗಳಿಂದ ಕಾಡು ಪಕ್ಷಿಗಳು ಮತ್ತು ಕೋಳಿಗಳಲ್ಲಿ ವ್ಯಾಪಕವಾಗಿ ಹರಡಿದೆ. ಆದರೆ ಇದು ಮನುಷ್ಯರನ್ನು ಕೂಡ ಕಾಡುವ ಸಾಧ್ಯತೆಯಿದೆ.” ಎಂದಿದ್ದಾರೆ.

ಮಿಂಕ್ಸ್, ನೀರುನಾಯಿಗಳು, ನರಿಗಳು ಮತ್ತು ಸಮುದ್ರ ಸಿಂಹಗಳು ಸೇರಿದಂತೆ ಅನೇಕ ಸಸ್ತನಿಗಳಲ್ಲಿ ಹಿಂದಿನ ಕೆಲವು ವಾರಗಳಲ್ಲಿ ಹಕ್ಕಿ ಜ್ವರದ ಸೋಂಕಿನ ಹಲವಾರು ಪ್ರಕರಣಗಳು ಕಂಡುಬಂದಿವೆ. ಹೀಗಾಗಿ, ಮನುಷ್ಯರು ಕೂಡ ಎಚ್ಚರಿಕೆಯಿಂದ ಇರಬೇಕು. ಜನರು ಸತ್ತ ಅಥವಾ ಅನಾರೋಗ್ಯಕ್ಕೊಳಗಾದ ಕಾಡು ಪ್ರಾಣಿಗಳನ್ನು ಮುಟ್ಟಬಾರದು. ಅವುಗಳನ್ನು ಮನೆಗೆ ತರಬಾರದು. ಈ ರೀತಿಯ ಕಾಡುಪ್ರಾಣಿಗಳು ಕಂಡುಬಂದರೆ ಸ್ಥಳೀಯ ಅಧಿಕಾರಿಗಳಿಗೆ ವರದಿ ನೀಡಬೇಕು. WHO ಪರಿಸ್ಥಿತಿಯನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡಲು ಮತ್ತು ಮಾನವರಲ್ಲಿ H5N1 ಸೋಂಕಿನ ಪ್ರಕರಣಗಳನ್ನು ಅಧ್ಯಯನ ಮಾಡಲು ರಾಷ್ಟ್ರೀಯ ಅಧಿಕಾರಿಗಳು ಮತ್ತು ಪಾಲುದಾರರೊಂದಿಗೆ ಕೆಲಸ ಮಾಡುತ್ತಿದೆ ಎಂದಿದ್ದಾರೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್