Black Garlic : ಕಪ್ಪು ಬೆಳ್ಳುಳ್ಳಿ ಸೇವಿಸುವ ಮುನ್ನ ಅದರ ಪ್ರಯೋಜನ ತಿಳಿಯಿರಿ

ಪ್ರತಿಯೊಬ್ಬರ ಅಡುಗೆ ಮನೆಯಲ್ಲಿ ಬೆಳ್ಳುಳ್ಳಿ ಇದ್ದೆ ಇರುತ್ತದೆ. ಒಗ್ಗರಣೆಗೆ ಬೆಳ್ಳುಳ್ಳಿ ಇಲ್ಲದೇ ಹೋದರೆ ಅಡುಗೆಯು ರುಚಿಸುವುದೇ ಇಲ್ಲ. ಬೆಳ್ಳುಳ್ಳಿ ವಿಟಮಿನ್ ಸಿ, ಕೆ, ಫೋಲೇಟ್, ನಿಯಾಸಿನ್ ಮತ್ತು ಥಯಾಮಿನ್‌ನ ಉತ್ತಮ ಮೂಲವಾಗಿದ್ದು, ಆಹಾರದ ಘಮ ಹಾಗೂ ರುಚಿಯನ್ನು ಹೆಚ್ಚಿಸುವ ಬಿಳಿ ಬೆಳ್ಳುಳ್ಳಿಯನ್ನು ನೋಡಿರಬಹುದು. ಆದರೆ ಕಪ್ಪು ಬೆಳ್ಳುಳ್ಳಿಯ ಬಗ್ಗೆ ಹೆಚ್ಚಿನವರಿಗೆ ತಿಳಿದಿಲ್ಲ. ಹುದುವಿಕೆಯಿಂದ ತಯಾರಿಸಲಾಗುವ ಈ ಕಪ್ಪು ಬೆಳ್ಳುಳ್ಳಿಯು ಹಲವಾರು ಆರೋಗ್ಯಕಾರಿ ಪ್ರಯೋಜನಗಳನ್ನು ಹೊಂದಿದೆ. ಹಾಗಾದ್ರೆ ಇದರ ನಿಯಮಿತ ಸೇವನೆಯು ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನಗಳಿವೆ ಎನ್ನುವುದರ ಮಾಹಿತಿ ಇಲ್ಲಿದೆ.

Black Garlic : ಕಪ್ಪು ಬೆಳ್ಳುಳ್ಳಿ ಸೇವಿಸುವ ಮುನ್ನ ಅದರ ಪ್ರಯೋಜನ ತಿಳಿಯಿರಿ
ಕಪ್ಪು ಬೆಳ್ಳುಳ್ಳಿ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Dec 16, 2024 | 3:25 PM

ದಿನನಿತ್ಯ ಅಡುಗೆಗೆ ಬಳಸುವ ಬೆಳ್ಳುಳ್ಳಿ ಅಡುಗೆಯ ಪರಿಮಳ ಮಾತ್ರವಲ್ಲದೇ, ರುಚಿ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಈ ಬೆಳ್ಳುಳ್ಳಿ ಸೇವನೆ ಮಾಡುವುದರಿಂದ ಹಲವಾರು ಆರೋಗ್ಯ ಲಾಭಗಳಿವೆ. ಆದರೆ ಬಿಳಿ ಬೆಳ್ಳುಳ್ಳಿ ರೂಪವಾಗಿರುವ ಕಪ್ಪು ಬೆಳ್ಳುಳ್ಳಿಯು ಅಷ್ಟೇನು ರುಚಿಯನ್ನು ಹೊಂದಿಲ್ಲವಾದರೂ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದರ ನಿಯಮಿತ ಸೇವನೆ ಹಲವಾರು ಆರೋಗ್ಯ ಸಮಸ್ಯೆಗಳನ್ನು ದೂರವಿರಿಸಲು ಸಹಕಾರಿಯಾಗಿದೆ.

  1. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ : ಕಪ್ಪು ಬೆಳ್ಳುಳ್ಳಿಯನ್ನು ಸೇವನೆಯೂ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದರಲ್ಲಿನ ಹೆಚ್ಚಿನ ಉತ್ಕರ್ಷಣ ನಿರೋಧಕ ಮಟ್ಟವು ಮಧುಮೇಹ ಸಮಸ್ಯೆಯಿಂದ ಉಂಟಾಗುವ ತೊಂದರೆಗಳನ್ನು ದೂರ ಮಾಡುತ್ತದೆ. ಗರ್ಭಾವಸ್ಥೆಯಲ್ಲಿದ್ದಾಗ ಮಧುಮೇಹದ ಬರುವುದನ್ನು ತಡೆಯುತ್ತದೆ.
  2. ಹೃದಯದ ಆರೋಗ್ಯಕ್ಕೆ ಸಹಕಾರಿ: ಕಪ್ಪು ಬೆಳ್ಳುಳ್ಳಿಯು ಹೃದಯದ ಆರೋಗ್ಯವನ್ನು ಕಾಪಾಡಲು ಸಹಕಾರಿಯಾಗಿದೆ. ಕಪ್ಪು ಬೆಳ್ಳುಳ್ಳಿಯಲ್ಲಿರುವ ಆಲಿಸಿನ್ ಅಂಶವು ಹೇರಳವಾಗಿದೆ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ರಕ್ತ ಪರಿಚಲನೆ ಸುಧಾರಿಸುತ್ತದೆ. ರಕ್ತದೊತ್ತಡವನ್ನು ನಿಯಂತ್ರಿಸುವ ಮೂಲಕ ಅಧಿಕ ರಕ್ತದೊತ್ತಡದ ಅಪಾಯವನ್ನು ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ.
  3. ಕ್ಯಾನ್ಸರ್​ ಅಪಾಯವನ್ನು ತಗ್ಗಿಸುತ್ತದೆ : ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕಪ್ಪು ಬೆಳ್ಳುಳ್ಳಿ ಸೇವನೆ ಮಾಡುವುದರಿಂದ ರಕ್ತ ಕ್ಯಾನ್ಸರ್ ಹಾಗೂ ಕೊಲೊನ್ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ. ಕ್ಯಾನ್ಸರ್ ನಂತಹ ಸಮಸ್ಯೆಗಳಿದ್ದರೆ ಇದರ ನಿಯಮಿತವಾದ ಸೇವನೆಯಿಂದ ಚಿಕಿತ್ಸೆಯಲ್ಲಿ ಧನಾತ್ಮಕ ಬದಲಾವಣೆ ತರುತ್ತದೆ.
  4. ಜೀರ್ಣಕ್ರಿಯೆಗೆ ಸಹಕಾರಿ : ಕಪ್ಪು ಬೆಳ್ಳುಳ್ಳಿ ಸೇವನೆಯಿಂದ ಜೀರ್ಣಕ್ರಿಯೆ ಸಮಸ್ಯೆಗಳನ್ನು ದೂರವಿರಿಸುತ್ತದೆ. ಇದರಲ್ಲಿರುವ ಪೋಷಕಾಂಶಗಳು ಆಹಾರವು ಜೀರ್ಣವಾಗಲು ಸಹಾಯ ಮಾಡುತ್ತದೆ.
  5. ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ : ಕಪ್ಪು ಬೆಳ್ಳುಳ್ಳಿಯಲ್ಲಿ ಆಂಟಿ ಬ್ಯಾಕ್ಟಿರಿಯಲ್ ಮತ್ತು ಆಂಟಿ ವೈರಲ್ ಗುಣಗಳು ಹೇರಳವಾಗಿದೆ. ಇದರ ನಿಯಮಿತ ಸೇವನೆಯಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚುತ್ತದೆ. ದೇಹದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸಿ, ಸೋಂಕುಗಳ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡಲು ಸಹಾಯ ಮಾಡುತ್ತದೆ.
  6. ಮೆದುಳಿನ ಆರೋಗ್ಯವನ್ನು ಕಾಪಾಡುತ್ತದೆ : ಕಪ್ಪು ಬೆಳ್ಳುಳ್ಳಿಯೂ ದೇಹಕ್ಕೆ ಸಂಬಂಧಪಟ್ಟ ಸಮಸ್ಯೆಯನ್ನು ಮಾತ್ರವಲ್ಲದೇ ಮನಸ್ಸಿನ ಸಮಸ್ಯೆಯನ್ನು ದೂರವಾಗಿಸುತ್ತದೆ. ಕಪ್ಪು ಬೆಳ್ಳುಳ್ಳಿಯೂ ಬುದ್ಧಿಮಾಂದ್ಯತೆ, ಖಿನ್ನತೆಯಂತಹ ಸಮಸ್ಯೆಗಳು ದೂರವಾಗಿಸಿ, ಮೆದುಳು ಚೆನ್ನಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳುತ್ತದೆ.
  7. ಯಕೃತ್ತಿನ ಸಮಸ್ಯೆಗಳನ್ನು ದೂರವಾಗಿಸಲು ಸಹಕಾರಿ : ಪಿತ್ತಜನಕಾಂಗ ಅಥವಾ ಯಕೃತ್ತಿನ ಸಮಸ್ಯೆಗಳನ್ನು ಕಡಿಮೆ ಮಾಡುವಲ್ಲಿ ಕಪ್ಪು ಬೆಳ್ಳುಳ್ಳಿ ಪಾತ್ರ ಬಹುದೊಡ್ಡದಿದೆ. ಇದರ ನಿಯಮಿತ ಸೇವನೆಯಿಂದ ಪಿತ್ತಜನಕಾಂಗವು ನಿರ್ವಿಶೀಕರಣಗೊಳಿಸಿ ಯಕೃತ್ತಿಗೆ ಹಾನಿಯಾಗುವುದನ್ನು ತಪ್ಪಿಸುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮುಖ್ಯಮಂತ್ರಿ ಸಿದ್ದರಾಮಯ್ಯ ಲಿಂಗಾಯತ ವಿರೋಧಿ ಎಂದ ಪ್ರತಿಭಟನೆಕಾರರು
ಮುಖ್ಯಮಂತ್ರಿ ಸಿದ್ದರಾಮಯ್ಯ ಲಿಂಗಾಯತ ವಿರೋಧಿ ಎಂದ ಪ್ರತಿಭಟನೆಕಾರರು
Video: ಸಂಸತ್ತಿಗೆ ಪ್ಯಾಲೆಸ್ತೀನ್ ಬ್ಯಾಗ್ ಹಿಡಿದು ಬಂದ ಪ್ರಿಯಾಂಕಾ ಗಾಂಧಿ
Video: ಸಂಸತ್ತಿಗೆ ಪ್ಯಾಲೆಸ್ತೀನ್ ಬ್ಯಾಗ್ ಹಿಡಿದು ಬಂದ ಪ್ರಿಯಾಂಕಾ ಗಾಂಧಿ
ಸಿದ್ದರಾಮಯ್ಯನವರ ಗೊಡ್ಡು ಬೆದರಿಕೆಗಳಿಗೆ ಹೆದರಲ್ಲ, ಬಗ್ಗಲ್ಲ: ವಿಜಯೇಂದ್ರ
ಸಿದ್ದರಾಮಯ್ಯನವರ ಗೊಡ್ಡು ಬೆದರಿಕೆಗಳಿಗೆ ಹೆದರಲ್ಲ, ಬಗ್ಗಲ್ಲ: ವಿಜಯೇಂದ್ರ
ವಿಜಯೇಂದ್ರ-ಭೈರೇಗೌಡ ನಡುವೆ ವಾಗ್ವಾದ, ಸ್ಪೀಕರ್ ಯುಟಿ ಖಾದರ್ ಅಸಹಾಯಕ
ವಿಜಯೇಂದ್ರ-ಭೈರೇಗೌಡ ನಡುವೆ ವಾಗ್ವಾದ, ಸ್ಪೀಕರ್ ಯುಟಿ ಖಾದರ್ ಅಸಹಾಯಕ
ಅಧಿಕಾರದಲ್ಲಿರೋದು ಮುಸ್ಲಿಂ ಓಲೈಕೆಯ ಹಿಂದೂ ವಿರೋಧಿ ಸರ್ಕಾರ: ಯತ್ನಾಳ್
ಅಧಿಕಾರದಲ್ಲಿರೋದು ಮುಸ್ಲಿಂ ಓಲೈಕೆಯ ಹಿಂದೂ ವಿರೋಧಿ ಸರ್ಕಾರ: ಯತ್ನಾಳ್
150 ಕೋಟಿ ಆಮಿಷ ಆರೋಪವನ್ನು ಸಿಬಿಐಗೆ ವಹಿಸಲಿ: ವಿಜಯೇಂದ್ರ ಆಗ್ರಹ
150 ಕೋಟಿ ಆಮಿಷ ಆರೋಪವನ್ನು ಸಿಬಿಐಗೆ ವಹಿಸಲಿ: ವಿಜಯೇಂದ್ರ ಆಗ್ರಹ
ಚೌಲಗೆರೆ ಬಳಿ ಹೊಸ ಟೋಲ್​ಗೆ ತೀವ್ರ ವಿರೋಧ, ಹೆದ್ದಾರಿ ತಡೆದು ಪ್ರತಿಭಟನೆ
ಚೌಲಗೆರೆ ಬಳಿ ಹೊಸ ಟೋಲ್​ಗೆ ತೀವ್ರ ವಿರೋಧ, ಹೆದ್ದಾರಿ ತಡೆದು ಪ್ರತಿಭಟನೆ
ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ಸುಳ್ಳು ಆರೋಪ ಮಾಡುತ್ತಿದೆ: ಆರ್ ಅಶೋಕ
ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ಸುಳ್ಳು ಆರೋಪ ಮಾಡುತ್ತಿದೆ: ಆರ್ ಅಶೋಕ
Assembly Session: ಚರ್ಚೆಯಾಗುತ್ತಿವೆ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳು
Assembly Session: ಚರ್ಚೆಯಾಗುತ್ತಿವೆ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳು
ಭಿನ್ನಾಭಿಪ್ರಾಯಗಳನ್ನು ಸಾರ್ವಜನಿಕವಾಗಿ ತೋರ್ಪಡಿಸದ ಸಿಎಂ ಮತ್ತು ಡಿಸಿಎಂ
ಭಿನ್ನಾಭಿಪ್ರಾಯಗಳನ್ನು ಸಾರ್ವಜನಿಕವಾಗಿ ತೋರ್ಪಡಿಸದ ಸಿಎಂ ಮತ್ತು ಡಿಸಿಎಂ