ಕಪ್ಪು ಬೆಳ್ಳುಳ್ಳಿ
ದಿನನಿತ್ಯ ಅಡುಗೆಗೆ ಬಳಸುವ ಬೆಳ್ಳುಳ್ಳಿ ಅಡುಗೆಯ ಪರಿಮಳ ಮಾತ್ರವಲ್ಲದೇ, ರುಚಿ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಈ ಬೆಳ್ಳುಳ್ಳಿ ಸೇವನೆ ಮಾಡುವುದರಿಂದ ಹಲವಾರು ಆರೋಗ್ಯ ಲಾಭಗಳಿವೆ. ಆದರೆ ಬಿಳಿ ಬೆಳ್ಳುಳ್ಳಿ ರೂಪವಾಗಿರುವ ಕಪ್ಪು ಬೆಳ್ಳುಳ್ಳಿಯು ಅಷ್ಟೇನು ರುಚಿಯನ್ನು ಹೊಂದಿಲ್ಲವಾದರೂ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದರ ನಿಯಮಿತ ಸೇವನೆ ಹಲವಾರು ಆರೋಗ್ಯ ಸಮಸ್ಯೆಗಳನ್ನು ದೂರವಿರಿಸಲು ಸಹಕಾರಿಯಾಗಿದೆ.
- ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ : ಕಪ್ಪು ಬೆಳ್ಳುಳ್ಳಿಯನ್ನು ಸೇವನೆಯೂ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದರಲ್ಲಿನ ಹೆಚ್ಚಿನ ಉತ್ಕರ್ಷಣ ನಿರೋಧಕ ಮಟ್ಟವು ಮಧುಮೇಹ ಸಮಸ್ಯೆಯಿಂದ ಉಂಟಾಗುವ ತೊಂದರೆಗಳನ್ನು ದೂರ ಮಾಡುತ್ತದೆ. ಗರ್ಭಾವಸ್ಥೆಯಲ್ಲಿದ್ದಾಗ ಮಧುಮೇಹದ ಬರುವುದನ್ನು ತಡೆಯುತ್ತದೆ.
- ಹೃದಯದ ಆರೋಗ್ಯಕ್ಕೆ ಸಹಕಾರಿ: ಕಪ್ಪು ಬೆಳ್ಳುಳ್ಳಿಯು ಹೃದಯದ ಆರೋಗ್ಯವನ್ನು ಕಾಪಾಡಲು ಸಹಕಾರಿಯಾಗಿದೆ. ಕಪ್ಪು ಬೆಳ್ಳುಳ್ಳಿಯಲ್ಲಿರುವ ಆಲಿಸಿನ್ ಅಂಶವು ಹೇರಳವಾಗಿದೆ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ರಕ್ತ ಪರಿಚಲನೆ ಸುಧಾರಿಸುತ್ತದೆ. ರಕ್ತದೊತ್ತಡವನ್ನು ನಿಯಂತ್ರಿಸುವ ಮೂಲಕ ಅಧಿಕ ರಕ್ತದೊತ್ತಡದ ಅಪಾಯವನ್ನು ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ.
- ಕ್ಯಾನ್ಸರ್ ಅಪಾಯವನ್ನು ತಗ್ಗಿಸುತ್ತದೆ : ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕಪ್ಪು ಬೆಳ್ಳುಳ್ಳಿ ಸೇವನೆ ಮಾಡುವುದರಿಂದ ರಕ್ತ ಕ್ಯಾನ್ಸರ್ ಹಾಗೂ ಕೊಲೊನ್ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ. ಕ್ಯಾನ್ಸರ್ ನಂತಹ ಸಮಸ್ಯೆಗಳಿದ್ದರೆ ಇದರ ನಿಯಮಿತವಾದ ಸೇವನೆಯಿಂದ ಚಿಕಿತ್ಸೆಯಲ್ಲಿ ಧನಾತ್ಮಕ ಬದಲಾವಣೆ ತರುತ್ತದೆ.
- ಜೀರ್ಣಕ್ರಿಯೆಗೆ ಸಹಕಾರಿ : ಕಪ್ಪು ಬೆಳ್ಳುಳ್ಳಿ ಸೇವನೆಯಿಂದ ಜೀರ್ಣಕ್ರಿಯೆ ಸಮಸ್ಯೆಗಳನ್ನು ದೂರವಿರಿಸುತ್ತದೆ. ಇದರಲ್ಲಿರುವ ಪೋಷಕಾಂಶಗಳು ಆಹಾರವು ಜೀರ್ಣವಾಗಲು ಸಹಾಯ ಮಾಡುತ್ತದೆ.
- ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ : ಕಪ್ಪು ಬೆಳ್ಳುಳ್ಳಿಯಲ್ಲಿ ಆಂಟಿ ಬ್ಯಾಕ್ಟಿರಿಯಲ್ ಮತ್ತು ಆಂಟಿ ವೈರಲ್ ಗುಣಗಳು ಹೇರಳವಾಗಿದೆ. ಇದರ ನಿಯಮಿತ ಸೇವನೆಯಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚುತ್ತದೆ. ದೇಹದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸಿ, ಸೋಂಕುಗಳ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡಲು ಸಹಾಯ ಮಾಡುತ್ತದೆ.
- ಮೆದುಳಿನ ಆರೋಗ್ಯವನ್ನು ಕಾಪಾಡುತ್ತದೆ : ಕಪ್ಪು ಬೆಳ್ಳುಳ್ಳಿಯೂ ದೇಹಕ್ಕೆ ಸಂಬಂಧಪಟ್ಟ ಸಮಸ್ಯೆಯನ್ನು ಮಾತ್ರವಲ್ಲದೇ ಮನಸ್ಸಿನ ಸಮಸ್ಯೆಯನ್ನು ದೂರವಾಗಿಸುತ್ತದೆ. ಕಪ್ಪು ಬೆಳ್ಳುಳ್ಳಿಯೂ ಬುದ್ಧಿಮಾಂದ್ಯತೆ, ಖಿನ್ನತೆಯಂತಹ ಸಮಸ್ಯೆಗಳು ದೂರವಾಗಿಸಿ, ಮೆದುಳು ಚೆನ್ನಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳುತ್ತದೆ.
- ಯಕೃತ್ತಿನ ಸಮಸ್ಯೆಗಳನ್ನು ದೂರವಾಗಿಸಲು ಸಹಕಾರಿ : ಪಿತ್ತಜನಕಾಂಗ ಅಥವಾ ಯಕೃತ್ತಿನ ಸಮಸ್ಯೆಗಳನ್ನು ಕಡಿಮೆ ಮಾಡುವಲ್ಲಿ ಕಪ್ಪು ಬೆಳ್ಳುಳ್ಳಿ ಪಾತ್ರ ಬಹುದೊಡ್ಡದಿದೆ. ಇದರ ನಿಯಮಿತ ಸೇವನೆಯಿಂದ ಪಿತ್ತಜನಕಾಂಗವು ನಿರ್ವಿಶೀಕರಣಗೊಳಿಸಿ ಯಕೃತ್ತಿಗೆ ಹಾನಿಯಾಗುವುದನ್ನು ತಪ್ಪಿಸುತ್ತದೆ.
ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ