Blood Pressure: ಬಿಪಿ ಸಮಸ್ಯೆ ಇರುವವರು ಈ ಹಣ್ಣನ್ನು ತಪ್ಪದೆ ತಿನ್ನಿ
ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುವುದು ಬಹಳ ಮುಖ್ಯ ಏಕೆಂದರೆ ಇದು ಇತರ ಅನೇಕ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ ಎಂದು ತಜ್ಞರು ಹೇಳುತ್ತಾರೆ. ಅದಕ್ಕಾಗಿಯೇ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಕೆಲವು ಆಹಾರ ಪದ್ದತಿಗಳನ್ನು ರೂಢಿಸಿಕೊಳ್ಳುವುದು ಅನಿವಾರ್ಯವಾಗಿದೆ.

ಪ್ರಸ್ತುತ ದಿನಗಳಲ್ಲಿ ಬದಲಾಗುತ್ತಿರುವ ಜೀವನಶೈಲಿ, ಅನಾರೋಗ್ಯಕರ ಆಹಾರ ಪದ್ಧತಿಯು ಆರೋಗ್ಯಕ್ಕೆ ದೊಡ್ಡ ಕಂಟಕವಾಗಿ ಪರಿಣಮಿಸಿದೆ. ದೈನಂದಿನ ದಿನಚರಿಯಲ್ಲಿ ಬದಲಾವಣೆಗಳು, ಯೋಗ, ವ್ಯಾಯಾಮದಂತಹ ಒಳ್ಳೆಯ ಅಭ್ಯಾಸಗಳನ್ನು ರೂಢಿಸಿಕೊಳ್ಳದಿರುವುದರಿಂದ, ಅನೇಕ ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತಿದೆ. ಕ್ಯಾನ್ಸರ್, ಮಧುಮೇಹ ಮತ್ತು ಬೊಜ್ಜು ಕ್ರಮೇಣ ಮಾರಣಾಂತಿಕ ಕಾಯಿಲೆಗಳಾಗುತ್ತಿವೆ. ಅದರಲ್ಲಿಯೂ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಹಾಗಾಗಿ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುವುದು ಬಹಳ ಮುಖ್ಯ ಏಕೆಂದರೆ ಇದು ಇತರ ಅನೇಕ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ ಎಂದು ತಜ್ಞರು ಹೇಳುತ್ತಾರೆ. ಅದಕ್ಕಾಗಿಯೇ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಕೆಲವು ಆಹಾರ ಪದ್ದತಿಗಳನ್ನು ರೂಢಿಸಿಕೊಳ್ಳುವುದು ಅನಿವಾರ್ಯವಾಗಿದೆ.
ತಜ್ಞರು ಹೇಳುವ ಪ್ರಕಾರ ಕೆಲವು ಹಣ್ಣುಗಳನ್ನು ತಿನ್ನುವುದರಿಂದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಬಹುದು. ಇದನ್ನು ಗುಣಪಡಿಸಲು ಸಾಧ್ಯವಿಲ್ಲ ಆದರೆ ಇದನ್ನು ನಮ್ಮ ಹತೋಟಿಯಲ್ಲಿ ಇಟ್ಟುಕೊಳ್ಳಬಹುದು ಹಾಗಾಗಿ ಬಹಳ ಜಾಗರೂಕರಾಗಿ ಈ ಮಾರಣಾಂತಿಕ ಸಮಸ್ಯೆಯನ್ನು ನಿಯಂತ್ರಿಸಬೇಕು. ಇಲ್ಲವಾದಲ್ಲಿ ಇದು ಮೆದುಳಿನ ರಕ್ತಸ್ರಾವ ಮತ್ತು ಪಾರ್ಶ್ವವಾಯುವಿನ ಅಪಾಯವನ್ನು ಹೆಚ್ಚಿಸಬಹುದು. ಹಾಗಾದರೆ ರಕ್ತದೊತ್ತಡ ನಿಯಂತ್ರಿಸಬಹುದಾದ ಹಣ್ಣುಗಳು ಯಾವವು ತಿಳಿದುಕೊಳ್ಳಿ.
ಬಾಳೆಹಣ್ಣು: ಈ ಹಣ್ಣು ನಿಮಗೆ ವರ್ಷವಿಡೀ ಲಭ್ಯವಿರುತ್ತದೆ. ಇದು ತುಂಬಾ ಪೌಷ್ಟಿಕವಾಗಿದ್ದು ಜೀರ್ಣಕ್ರಿಯೆಯ ಸಮಸ್ಯೆಯನ್ನು ನಿವಾರಿಸುತ್ತದೆ. ಬಾಳೆಹಣ್ಣಿನಲ್ಲಿರುವ ಪೋಷಕಾಂಶಗಳು ರಕ್ತದೊತ್ತಡಕ್ಕೆ ರಾಮಬಾಣವಾಗಿದೆ. ಪ್ರತಿದಿನ ಇದನ್ನು ಸೇವಿಸುವುದರಿಂದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಬಹುದು. ಅಲ್ಲದೆ ಇದು ಪಾರ್ಶ್ವವಾಯುವಿನಿಂದ ಕೂಡ ನಿಮ್ಮನ್ನು ರಕ್ಷಿಸಲು ಸಹಾಯ ಮಾಡುತ್ತದೆ.
ಇದನ್ನೂ ಓದಿ: ಈ ತರಕಾರಿ ಸೇವನೆ ಮಾಡುವುದರಿಂದ ಕ್ಯಾನ್ಸರ್ ತಡೆಗಟ್ಟಬಹುದು, ಇದರಲ್ಲಿದೆ ಆರೋಗ್ಯ ಪ್ರಯೋಜನ
ಮಾವು: ಬೇಸಿಗೆಯಲ್ಲಿ ಕಂಡು ಬರುವ ಈ ಹಣ್ಣು ರುಚಿಕರ ಮಾತ್ರವಲ್ಲ, ಅನೇಕ ರೋಗಗಳಿಂದ ನಿಮ್ಮನ್ನು ರಕ್ಷಿಸುತ್ತದೆ. ರಕ್ತದೊತ್ತಡದ ಸಮಸ್ಯೆಗಳಿಂದ ಬಳಲುತ್ತಿರುವ ರೋಗಿಗಳು ಮಾವಿನ ಹಣ್ಣುಗಳನ್ನು ಸೇವನೆ ಮಾಡುವುದು ಒಳ್ಳೆಯದು. ಇದರಲ್ಲಿರುವ ಬೀಟಾ ಕ್ಯಾರೋಟಿನ್ ಮತ್ತು ಫೈಬರ್ ಕೂಡ ಆರೋಗ್ಯಕ್ಕೆ ಒಳ್ಳೆಯದು. ಈ ಎರಡು ಅಂಶಗಳು ಬಿಪಿಯನ್ನು ನಿಯಂತ್ರಿಸಲು ಸಹಾಯ ಮಾಡುತ್ತವೆ, ಅಲ್ಲದೆ ದೇಹದ ಆರೋಗ್ಯಕ್ಕೂ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ.
ಕಿವಿ: ಈ ಹಣ್ಣು ಆರೋಗ್ಯಕ್ಕೆ ಪ್ರಯೋಜನಕಾರಿಯಾದ ಅನೇಕ ಪೋಷಕಾಂಶಗಳನ್ನು ಹೊಂದಿದೆ. ಇದು ಆಂಟಿ-ಆಕ್ಸಿಡೆಂಟ್ಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿದೆ, ಜೊತೆಗೆ ನಮ್ಮ ಜೀರ್ಣಾಂಗ ವ್ಯವಸ್ಥೆ ಆರೋಗ್ಯವಾಗಿರುವಂತೆ ನೋಡಿಕೊಳ್ಳುತ್ತದೆ. ಈ ಹಣ್ಣು ರೋಗನಿರೋಧಕ ಶಕ್ತಿಯನ್ನು ಕೂಡ ಹೆಚ್ಚಿಸಲು ಸಹಾಯ ಮಾಡುತ್ತದೆ.
ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: