ಇಂದಿನ ಕಾಲದಲ್ಲಿ, ಮಧುಮೇಹದಿಂದ ಬಳಲುತ್ತಿರುವವರ ಸಂಖ್ಯೆ ಕಡಿಮೆಯೇನಲ್ಲ. ಸಾಮಾನ್ಯವಾಗಿ ಪ್ರತಿಯೊಂದು ಮನೆಯಲ್ಲೂ ಮಧುಮೇಹ ರೋಗಿಗಳಿದ್ದಾರೆ. ಇದು ವಿಶೇಷವಾಗಿ ನಮ್ಮ ದೇಶದ ಅತಿದೊಡ್ಡ ಸಮಸ್ಯೆ ಎಂದರೆ ತಪ್ಪಾಗಲಾರದು. ಆಧುನಿಕ ಜೀವನಶೈಲಿ ರಕ್ತದಲ್ಲಿನ ಸಕ್ಕರೆ ಸಮಸ್ಯೆಗಳನ್ನು ಉಲ್ಬಣಗೊಳಿಸುತ್ತಿದೆ. ದೇಹದಲ್ಲಿ ಸಕ್ಕರೆ ಮಟ್ಟವು ಹೇಗೆ ಹೆಚ್ಚಾಗುತ್ತದೆ ಎಂಬುದು ಅನೇಕರಿಗೆ ತಿಳಿದಿಲ್ಲ. ಇದನ್ನು ನಿಯಂತ್ರಿಸುವುದು ಹೇಗೆ? ಇಲ್ಲವಾದಲ್ಲಿ ದೇಹದ ಉಳಿದ ಭಾಗಗಳಿಗೆ ಯಾವ ರೀತಿಯ ಹಾನಿಯಾಗಬಹುದು? ಈ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು.
ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಾಮಾನ್ಯವಾಗಿ ಔಷಧಿಗಳನ್ನು ತೆಗೆದುಕೊಳ್ಳಲಾಗುತ್ತದೆ. ಆದರೆ ಅದರ ಜೊತೆಗೆ ನಾವು ಸೇವಿಸುತ್ತಿರುವ ಆಹಾರದ ಬಗ್ಗೆಯೂ ಸರಿಯಾದ ರೀತಿಯಲ್ಲಿ ಕಾಳಜಿ ವಹಿಸಬೇಕು. ಬ್ರೊಕೋಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಪೌಷ್ಟಿಕತಜ್ಞರ ಪ್ರಕಾರ ಬ್ರೊಕೋಲಿಯಲ್ಲಿ ಸಾಕಷ್ಟು ಫೈಬರ್ ಅಂಶವಿದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಜೊತೆಗೆ ಇದು ಗ್ಲೂಕೋಸ್ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುತ್ತದೆ. ಬ್ರೊಕೋಲಿಯಲ್ಲಿರುವ ‘ಗ್ಲುಕೋಸಿನೋಲೇಟ್ಗಳು’ ರಕ್ತದಲ್ಲಿನ ಸಕ್ಕರೆ ಮಟ್ಟದ ಏರಿಳಿತಗಳನ್ನು ನಿಯಂತ್ರಿಸುತ್ತವೆ. ಬ್ರೊಕೋಲಿಯಲ್ಲಿ ವಿಟಮಿನ್ ಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳಿವೆ. ಇವು ಮಧುಮೇಹಿಗಳನ್ನು ಆರೋಗ್ಯವಾಗಿರಿಸುವುದಲ್ಲದೆ ಇತರ ಅನೇಕ ದೈಹಿಕ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.
ಇದನ್ನೂ ಓದಿ: ಈ ಹಣ್ಣುಗಳನ್ನು ಸಿಪ್ಪೆಯೊಂದಿಗೆ ತಿನ್ನುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಿಸಬಹುದು
ಮಧುಮೇಹಿಗಳಿಗೆ ತರಕಾರಿಗಳನ್ನು ತಿನ್ನುವುದನ್ನು ಬಿಟ್ಟು ಬೇರೆ ಆಯ್ಕೆಗಳಿಲ್ಲ. ಬ್ರೊಕೋಲಿಯನ್ನು ಪಲ್ಯಗಳಲ್ಲಿ ಮಾತ್ರವಲ್ಲ, ವಿವಿಧ ರೀತಿಯಲ್ಲಿ ತಿನ್ನಬಹುದು. ಸಲಾಡ್, ಜ್ಯೂಸ್ ಗಳನ್ನು ಸಹ ತಯಾರಿಸಬಹುದು.
ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:
Published On - 9:51 am, Thu, 6 June 24