AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿದಿನ ಬ್ಲೂಬೆರ್ರಿ ತಿಂದರೆ ಆರೋಗ್ಯಕ್ಕೆ ಎಷ್ಟೊಂದು ಲಾಭವಿದೆ ಗೊತ್ತೆ? ವಿಜ್ಞಾನ ಹೇಳುವ ಅಚ್ಚರಿಯ ಸಂಗತಿಗಳು

ಪ್ರಕೃತಿ ನಮಗೆ ನೀಡಿರುವ ಹಣ್ಣುಗಳಲ್ಲಿ, ಹೆಚ್ಚಿನವು ನಮ್ಮ ಆರೋಗ್ಯವನ್ನು ಒಂದಲ್ಲಾ ಒಂದು ರೀತಿಯಲ್ಲಿ ಕಾಪಾಡುವಂತದ್ದು. ಈ ಸಾಲಿಗೆ ಬೆರಿಹಣ್ಣುಗಳು ಕೂಡ ಸೇರಿಕೊಳ್ಳುತ್ತದೆ. ಗಾತ್ರದಲ್ಲಿ ಚಿಕ್ಕದಾಗಿದ್ದರೂ, ಅವು ಒದಗಿಸುವ ಆರೋಗ್ಯ ಪ್ರಯೋಜನಗಳು ಅಗಾಧವಾಗಿವೆ. ಅದಕ್ಕಾಗಿಯೇ ಅವುಗಳನ್ನು ಸೂಪರ್‌ಫುಡ್ ಎಂದು ಕರೆಯಲಾಗುತ್ತದೆ. ನೀವು ಪ್ರತಿದಿನ ಒಂದು ಕಪ್ ಬೆರಿಹಣ್ಣುಗಳನ್ನು ಸೇವಿಸಿದರೆ ನಿಮ್ಮ ದೇಹದಲ್ಲಿ ಯಾವ ರೀತಿಯ ಬದಲಾವಣೆಗಳಾಗುತ್ತದೆ ಮತ್ತು ಈ ಬಗ್ಗೆ ತಜ್ಞರ ಅಭಿಪ್ರಾಯವೇನು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಪ್ರತಿದಿನ ಬ್ಲೂಬೆರ್ರಿ ತಿಂದರೆ ಆರೋಗ್ಯಕ್ಕೆ ಎಷ್ಟೊಂದು ಲಾಭವಿದೆ ಗೊತ್ತೆ? ವಿಜ್ಞಾನ ಹೇಳುವ ಅಚ್ಚರಿಯ ಸಂಗತಿಗಳು
Blueberries Health BenefitsImage Credit source: Getty images
ಪ್ರೀತಿ ಭಟ್​, ಗುಣವಂತೆ
|

Updated on: Jun 27, 2026 | 6:22 PM

Share

ಮುಖ್ಯಾಂಶಗಳು

  • ಹೃದಯದ ಆರೋಗ್ಯಕ್ಕೆ ಉತ್ತಮ ಬ್ಲೂಬೆರ್ರಿ
  • ಈ ಹಣ್ಣು ರಕ್ತದೊತ್ತಡ, ಮಧುಮೇಹ ನಿಯಂತ್ರಣಕ್ಕೆ ಸಹಕಾರಿ
  • ಬ್ಲೂಬೆರ್ರಿ ಹಣ್ಣಿಗೆ ವೃದ್ಧಾಪ್ಯವನ್ನು ನಿಧಾನಗೊಳಿಸುವ ಶಕ್ತಿ ಇದೆ

ಇತ್ತೀಚಿನ ದಿನಗಳಲ್ಲಿ ಆರೋಗ್ಯಕರ ಆಹಾರದತ್ತ ಜನರ ಒಲವು ಹೆಚ್ಚುತ್ತಿದೆ. ಅಂತಹ ಸೂಪರ್‌ಫುಡ್‌ಗಳಲ್ಲಿ ಬ್ಲೂಬೆರ್ರಿ (Blueberry) ಪ್ರಮುಖ ಸ್ಥಾನ ಪಡೆದಿದೆ. ಗಾತ್ರದಲ್ಲಿ ಚಿಕ್ಕದಾಗಿದ್ದರೂ, ಪೋಷಕಾಂಶ ಮತ್ತು ಆಂಟಿಆಕ್ಸಿಡೆಂಟ್‌ಗಳಿಂದ ಸಮೃದ್ಧವಾಗಿರುವ ಈ ಹಣ್ಣು ದೇಹಕ್ಕೆ ಹಲವು ಆರೋಗ್ಯಕರ ಪ್ರಯೋಜನಗಳನ್ನು ನೀಡುತ್ತದೆ ಎಂದು ಅಧ್ಯಯನಗಳು ಸೂಚಿಸುತ್ತವೆ. ಆದರೆ ಈ ಹಣ್ಣು ಸ್ವಲ್ಪ ದುಬಾರಿಯಾಗಿರುವುದರಿಂದ ಜನ ಇದನ್ನು ತಿನ್ನುವುದಕ್ಕೆ ಹಿಂದೇಟು ಹಾಕುತ್ತಾರೆ. ಸಾಮಾನ್ಯವಾಗಿ ಈ ಹಣ್ಣನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ನೀವು ಊಹಿಸಲೂ ಸಾಧ್ಯವಿಲ್ಲದಷ್ಟು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಹಾಗಾದರೆ ಇದರ ಸೇವನೆಯಿಂದ ಸಿಗುವ ಪ್ರಯೋಜನಗಳೇನು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ವೃದ್ಧಾಪ್ಯವನ್ನು ನಿಧಾನಗೊಳಿಸುವ ಶಕ್ತಿ ಇದೆ;

ಬ್ಲೂಬೆರ್ರಿಯಲ್ಲಿರುವ ಆಂಥೋಸೈನಿನ್ (Anthocyanin) ಎಂಬ ಆಂಟಿಆಕ್ಸಿಡೆಂಟ್ ದೇಹದ ಕೋಶಗಳನ್ನು ಆಕ್ಸಿಡೇಟಿವ್ ಒತ್ತಡದಿಂದ ರಕ್ಷಿಸುತ್ತದೆ. ಇದರಿಂದ ಚರ್ಮದ ಆರೋಗ್ಯ ಉತ್ತಮವಾಗಿದ್ದು, ವಯಸ್ಸಾಗುವ ಲಕ್ಷಣಗಳು ತಡವಾಗಿ ಕಾಣಿಸಿಕೊಳ್ಳುತ್ತದೆ. ಯಾವಾಗಲೂ ಯಂಗ್ ಆಗಿ ಕಾಣುವುದಕ್ಕೆ ಇದು ಒಂದು ಕಾರಣವಾಗಬಹುದು.

ಹೃದಯದ ಆರೋಗ್ಯಕ್ಕೆ ಒಳ್ಳೆಯದು

ಬ್ಲೂಬೆರ್ರಿಯನ್ನು ನಿಯಮಿತವಾಗಿ ಸೇವಿಸುವುದರಿಂದ ರಕ್ತನಾಳಗಳ ಕಾರ್ಯಕ್ಷಮತೆ ಸುಧಾರಿಸಬಹುದು. ಕೆಟ್ಟ ಕೊಲೆಸ್ಟ್ರಾಲ್ (LDL) ಮಟ್ಟವನ್ನು ಕಡಿಮೆ ಮಾಡಲು ಮತ್ತು ರಕ್ತದೊತ್ತಡ ನಿಯಂತ್ರಣಕ್ಕೆ ಸಹಕಾರಿಯಾಗುವುದರಿಂದ ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ನೆರವಾಗುತ್ತದೆ.

ಇದನ್ನೂ ಓದಿ: ಡ್ರೈ ಫ್ರೂಟ್ಸ್ ತಿನ್ನುವುದಕ್ಕೆ ತುಂಬಾ ಇಷ್ಟಾನಾ? ಹಾಗಿದ್ರೆ ಇವುಗಳನ್ನು ತಿನ್ನುವ ಸರಿಯಾದ ವಿಧಾನದ ಬಗ್ಗೆ ತಿಳಿದುಕೊಳ್ಳಿ

ಮೆದುಳಿನ ಕಾರ್ಯಕ್ಷಮತೆ ಹೆಚ್ಚಿಸಬಹುದು

ಈ ಹಣ್ಣಿನಲ್ಲಿರುವ ಪೋಷಕಾಂಶಗಳು ಮೆದುಳಿನ ಕೋಶಗಳ ನಡುವಿನ ಸಂವಹನವನ್ನು ಉತ್ತಮಗೊಳಿಸಲು ಸಹಕಾರಿಯಾಗಬಹುದು. ಇದರಿಂದ ನೆನಪಿನ ಶಕ್ತಿ, ಏಕಾಗ್ರತೆ ಮತ್ತು ಚಿಂತನಾ ಸಾಮರ್ಥ್ಯ ಹೆಚ್ಚಾಗಬಹುದು.

ರಕ್ತದಲ್ಲಿನ ಸಕ್ಕರೆ ಮತ್ತು ತೂಕ ನಿಯಂತ್ರಣಕ್ಕೆ ಸಹಕಾರಿ

ಬ್ಲೂಬೆರ್ರಿಯಲ್ಲಿ ಸಕ್ಕರೆ ಪ್ರಮಾಣ ಕಡಿಮೆ ಹಾಗೂ ಫೈಬರ್ ಅಧಿಕವಾಗಿರುತ್ತದೆ. ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರವಾಗಿಡಲು ಸಹಾಯವಾಗಬಹುದು. ಜೊತೆಗೆ ಹೆಚ್ಚು ಹೊತ್ತು ಹೊಟ್ಟೆ ತುಂಬಿದ ಅನುಭವ ನೀಡುವುದರಿಂದ ತೂಕ ನಿಯಂತ್ರಣಕ್ಕೂ ನೆರವಾಗುತ್ತದೆ.

ಹೇಗೆ ಸೇವಿಸಬೇಕು?

ತಾಜಾ ಬ್ಲೂಬೆರ್ರಿಯನ್ನು ನೇರವಾಗಿ ತಿನ್ನಬಹುದು. ಅಲ್ಲದೆ ಓಟ್ಸ್, ಮೊಸರು, ಸ್ಮೂದಿ ಅಥವಾ ಹಣ್ಣಿನ ಸಲಾಡ್‌ನಲ್ಲಿ ಸೇರಿಸಿಕೊಂಡರೂ ಉತ್ತಮ. ಆದರೆ ಮಧುಮೇಹ ಅಥವಾ ಇತರ ಆರೋಗ್ಯ ಸಮಸ್ಯೆಗಳಿರುವವರು ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವ ಮೊದಲು ವೈದ್ಯರು ಅಥವಾ ಪೌಷ್ಟಿಕ ತಜ್ಞರ ಸಲಹೆ ಪಡೆಯುವುದು ಉತ್ತಮ.

ಗಮನಿಸಿ: ಈ ಮಾಹಿತಿ ಸಾಮಾನ್ಯ ಆರೋಗ್ಯ ಮಾಹಿತಿಯಾಗಿದ್ದು. ಇದು ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಆರೋಗ್ಯ ಸಂಬಂಧಿತ ಯಾವುದೇ ಸಮಸ್ಯೆಗಳಿದ್ದರೆ ವೈದ್ಯರನ್ನು ಸಂಪರ್ಕಿಸಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ
ಲಿಂಗನಮಕ್ಕಿ ಡ್ಯಾಂನಲ್ಲಿ ತೀವ್ರ ನೀರಿನ ಕೊರತೆ: ವಿದ್ಯುತ್ ಉತ್ಪಾದನೆ ಸ್ಥಗಿತ
ಲಿಂಗನಮಕ್ಕಿ ಡ್ಯಾಂನಲ್ಲಿ ತೀವ್ರ ನೀರಿನ ಕೊರತೆ: ವಿದ್ಯುತ್ ಉತ್ಪಾದನೆ ಸ್ಥಗಿತ
ಪ್ರತಿ ವರ್ಷ ಒಂದೊಂದು ಕ್ಷೇತ್ರದಲ್ಲಿ ಕೆಂಪೇಗೌಡ ಜಯಂತಿ ಆಚರಣೆ: ಸಿಎಂ
ಪ್ರತಿ ವರ್ಷ ಒಂದೊಂದು ಕ್ಷೇತ್ರದಲ್ಲಿ ಕೆಂಪೇಗೌಡ ಜಯಂತಿ ಆಚರಣೆ: ಸಿಎಂ
ಅಡ್ಡ ಮತದಾನ ಬಗ್ಗೆ ವಿಜಯೇಂದ್ರಗೆ ವವರದಿ ಸಲ್ಲಿಸಿ ಸಿ.ಟಿ ರವಿ ಹೇಳಿದ್ದೇನು?
ಅಡ್ಡ ಮತದಾನ ಬಗ್ಗೆ ವಿಜಯೇಂದ್ರಗೆ ವವರದಿ ಸಲ್ಲಿಸಿ ಸಿ.ಟಿ ರವಿ ಹೇಳಿದ್ದೇನು?
ಮಡಿಕೇರಿ: ಎಂಟು ತಿಂಗಳ ಮಗುವಿನ ಗಂಟಲಲ್ಲಿತ್ತು ಎಲ್​ಇಡಿ ಬಲ್ಬ್!
ಮಡಿಕೇರಿ: ಎಂಟು ತಿಂಗಳ ಮಗುವಿನ ಗಂಟಲಲ್ಲಿತ್ತು ಎಲ್​ಇಡಿ ಬಲ್ಬ್!
ರಾಯಚೂರು ಜಿಲ್ಲೆಯಲ್ಲಿ 318 ಶೂನ್ಯ ಶಿಕ್ಷಕ ಸರ್ಕಾರಿ ಶಾಲೆಗಳು!
ರಾಯಚೂರು ಜಿಲ್ಲೆಯಲ್ಲಿ 318 ಶೂನ್ಯ ಶಿಕ್ಷಕ ಸರ್ಕಾರಿ ಶಾಲೆಗಳು!