
ಇತ್ತೀಚಿನ ದಿನಗಳಲ್ಲಿ ಆರೋಗ್ಯಕರ ಆಹಾರದತ್ತ ಜನರ ಒಲವು ಹೆಚ್ಚುತ್ತಿದೆ. ಅಂತಹ ಸೂಪರ್‌ಫುಡ್‌ಗಳಲ್ಲಿ ಬ್ಲೂಬೆರ್ರಿ (Blueberry) ಪ್ರಮುಖ ಸ್ಥಾನ ಪಡೆದಿದೆ. ಗಾತ್ರದಲ್ಲಿ ಚಿಕ್ಕದಾಗಿದ್ದರೂ, ಪೋಷಕಾಂಶ ಮತ್ತು ಆಂಟಿಆಕ್ಸಿಡೆಂಟ್‌ಗಳಿಂದ ಸಮೃದ್ಧವಾಗಿರುವ ಈ ಹಣ್ಣು ದೇಹಕ್ಕೆ ಹಲವು ಆರೋಗ್ಯಕರ ಪ್ರಯೋಜನಗಳನ್ನು ನೀಡುತ್ತದೆ ಎಂದು ಅಧ್ಯಯನಗಳು ಸೂಚಿಸುತ್ತವೆ. ಆದರೆ ಈ ಹಣ್ಣು ಸ್ವಲ್ಪ ದುಬಾರಿಯಾಗಿರುವುದರಿಂದ ಜನ ಇದನ್ನು ತಿನ್ನುವುದಕ್ಕೆ ಹಿಂದೇಟು ಹಾಕುತ್ತಾರೆ. ಸಾಮಾನ್ಯವಾಗಿ ಈ ಹಣ್ಣನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ನೀವು ಊಹಿಸಲೂ ಸಾಧ್ಯವಿಲ್ಲದಷ್ಟು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಹಾಗಾದರೆ ಇದರ ಸೇವನೆಯಿಂದ ಸಿಗುವ ಪ್ರಯೋಜನಗಳೇನು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
ಬ್ಲೂಬೆರ್ರಿಯಲ್ಲಿರುವ ಆಂಥೋಸೈನಿನ್ (Anthocyanin) ಎಂಬ ಆಂಟಿಆಕ್ಸಿಡೆಂಟ್ ದೇಹದ ಕೋಶಗಳನ್ನು ಆಕ್ಸಿಡೇಟಿವ್ ಒತ್ತಡದಿಂದ ರಕ್ಷಿಸುತ್ತದೆ. ಇದರಿಂದ ಚರ್ಮದ ಆರೋಗ್ಯ ಉತ್ತಮವಾಗಿದ್ದು, ವಯಸ್ಸಾಗುವ ಲಕ್ಷಣಗಳು ತಡವಾಗಿ ಕಾಣಿಸಿಕೊಳ್ಳುತ್ತದೆ. ಯಾವಾಗಲೂ ಯಂಗ್ ಆಗಿ ಕಾಣುವುದಕ್ಕೆ ಇದು ಒಂದು ಕಾರಣವಾಗಬಹುದು.
ಬ್ಲೂಬೆರ್ರಿಯನ್ನು ನಿಯಮಿತವಾಗಿ ಸೇವಿಸುವುದರಿಂದ ರಕ್ತನಾಳಗಳ ಕಾರ್ಯಕ್ಷಮತೆ ಸುಧಾರಿಸಬಹುದು. ಕೆಟ್ಟ ಕೊಲೆಸ್ಟ್ರಾಲ್ (LDL) ಮಟ್ಟವನ್ನು ಕಡಿಮೆ ಮಾಡಲು ಮತ್ತು ರಕ್ತದೊತ್ತಡ ನಿಯಂತ್ರಣಕ್ಕೆ ಸಹಕಾರಿಯಾಗುವುದರಿಂದ ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ನೆರವಾಗುತ್ತದೆ.
ಇದನ್ನೂ ಓದಿ: ಡ್ರೈ ಫ್ರೂಟ್ಸ್ ತಿನ್ನುವುದಕ್ಕೆ ತುಂಬಾ ಇಷ್ಟಾನಾ? ಹಾಗಿದ್ರೆ ಇವುಗಳನ್ನು ತಿನ್ನುವ ಸರಿಯಾದ ವಿಧಾನದ ಬಗ್ಗೆ ತಿಳಿದುಕೊಳ್ಳಿ
ಈ ಹಣ್ಣಿನಲ್ಲಿರುವ ಪೋಷಕಾಂಶಗಳು ಮೆದುಳಿನ ಕೋಶಗಳ ನಡುವಿನ ಸಂವಹನವನ್ನು ಉತ್ತಮಗೊಳಿಸಲು ಸಹಕಾರಿಯಾಗಬಹುದು. ಇದರಿಂದ ನೆನಪಿನ ಶಕ್ತಿ, ಏಕಾಗ್ರತೆ ಮತ್ತು ಚಿಂತನಾ ಸಾಮರ್ಥ್ಯ ಹೆಚ್ಚಾಗಬಹುದು.
ಬ್ಲೂಬೆರ್ರಿಯಲ್ಲಿ ಸಕ್ಕರೆ ಪ್ರಮಾಣ ಕಡಿಮೆ ಹಾಗೂ ಫೈಬರ್ ಅಧಿಕವಾಗಿರುತ್ತದೆ. ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರವಾಗಿಡಲು ಸಹಾಯವಾಗಬಹುದು. ಜೊತೆಗೆ ಹೆಚ್ಚು ಹೊತ್ತು ಹೊಟ್ಟೆ ತುಂಬಿದ ಅನುಭವ ನೀಡುವುದರಿಂದ ತೂಕ ನಿಯಂತ್ರಣಕ್ಕೂ ನೆರವಾಗುತ್ತದೆ.
ತಾಜಾ ಬ್ಲೂಬೆರ್ರಿಯನ್ನು ನೇರವಾಗಿ ತಿನ್ನಬಹುದು. ಅಲ್ಲದೆ ಓಟ್ಸ್, ಮೊಸರು, ಸ್ಮೂದಿ ಅಥವಾ ಹಣ್ಣಿನ ಸಲಾಡ್‌ನಲ್ಲಿ ಸೇರಿಸಿಕೊಂಡರೂ ಉತ್ತಮ. ಆದರೆ ಮಧುಮೇಹ ಅಥವಾ ಇತರ ಆರೋಗ್ಯ ಸಮಸ್ಯೆಗಳಿರುವವರು ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವ ಮೊದಲು ವೈದ್ಯರು ಅಥವಾ ಪೌಷ್ಟಿಕ ತಜ್ಞರ ಸಲಹೆ ಪಡೆಯುವುದು ಉತ್ತಮ.
ಗಮನಿಸಿ: ಈ ಮಾಹಿತಿ ಸಾಮಾನ್ಯ ಆರೋಗ್ಯ ಮಾಹಿತಿಯಾಗಿದ್ದು. ಇದು ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಆರೋಗ್ಯ ಸಂಬಂಧಿತ ಯಾವುದೇ ಸಮಸ್ಯೆಗಳಿದ್ದರೆ ವೈದ್ಯರನ್ನು ಸಂಪರ್ಕಿಸಿ.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ