ಲಿವರ್
Image Credit source: Getty Images
ಯಕೃತ್ತು ಅಥವಾ ಲಿವರ್ (Liver) ನಮ್ಮ ದೇಹದ ಪ್ರಮುಖ ಅಂಗಗಳಲ್ಲಿ ಒಂದಾಗಿದೆ. ಇದು ಆರೋಗ್ಯವಾಗಿದ್ದಾಗ ಮಾತ್ರ ನಮ್ಮ ದೇಹ ಚೆನ್ನಾಗಿರಲು ಸಾಧ್ಯ. ಹಾಗಾಗಿ ಇದನ್ನು ಆರೋಗ್ಯವಾಗಿಟ್ಟುಕೊಳ್ಳಲು ನಮ್ಮ ಆಹಾರ ಪದ್ದತಿಯಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಳ್ಳಬೇಕು. ನಾವು ತಿನ್ನುವ ಆಹಾರ ಸರಿಯಾಗಿದ್ದಾಗ ಮಾತ್ರ ನಮ್ಮ ಲಿವರ್ ಚೆನ್ನಾಗಿರಲು ಸಾಧ್ಯವಾಗುತ್ತದೆ. ಅದಕ್ಕಾಗಿಯೇ ಪಿತ್ತಜನಕಾಂಗವನ್ನು ಆರೋಗ್ಯಕರವಾಗಿಡಲು ನಮ್ಮ ಜೀವನಶೈಲಿ (Lifestyle) ಮತ್ತು ನಾವು ಅನುಸರಿಸುವ ಆಹಾರ ಪದ್ಧತಿ (Diet) ಸರಿಯಾಗಿ ಇರಬೇಕಾಗುತ್ತದೆ. ಹಾಗಾದರೆ ನಮ್ಮ ಯಕೃತ್ತಿನ ಆರೋಗ್ಯಕ್ಕೆ ಪ್ರಯೋಜನಕಾರಿಯಾದ ಹಣ್ಣುಗಳು (Fruits) ಯಾವವು? ಫ್ಯಾಟಿ ಲಿವರ್ ಸಮಸ್ಯೆ ಕಡಿಮೆ ಮಾಡಲು ಯಾವ ಹಣ್ಣುಗಳ ಸೇವನೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ.
ಈ ಹಣ್ಣು ನಿಮ್ಮ ಲಿವರ್ ಗೆ ಒಳ್ಳೆಯದು:
- ನಿಂಬೆ ರಸದಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಬೆಳಿಗ್ಗೆ ಸ್ವಲ್ಪ ಉಗುರು ಬೆಚ್ಚಗಿನ ನೀರಿಗೆ ಸ್ವಲ್ಪ ನಿಂಬೆ ರಸವನ್ನು ಬೆರೆಸಿ ಕುಡಿಯುವುದರಿಂದ ಪಿತ್ತಜನಕಾಂಗ ಸ್ವಚ್ಛವಾಗುತ್ತದೆ. ನಿಯಮಿತವಾಗಿ ಮಾಡುವ ಈ ಅಭ್ಯಾಸವು ನಿಮ್ಮ ಯಕೃತ್ತಿನ ಕಾರ್ಯವನ್ನು ಸುಧಾರಿಸುತ್ತದೆ.
- ಕಿತ್ತಳೆ ಹಣ್ಣಿನಲ್ಲಿಯೂ ವಿಟಮಿನ್ ಸಿ ಹೇರಳವಾಗಿದ್ದು ಅವು ದೇಹಕ್ಕೆ ಅಗತ್ಯವಾದ ಉತ್ಕರ್ಷಣ ನಿರೋಧಕಗಳಾಗಿ ಕಾರ್ಯನಿರ್ವಹಿಸುತ್ತವೆ. ಹಾಗಾಗಿ ಪ್ರತಿದಿನ ಕಿತ್ತಳೆ ಹಣ್ಣನ್ನು ತಿನ್ನುವುದು ಯಕೃತ್ತಿನಿಂದ ಹಾನಿಕಾರಕ ಅಂಶವನ್ನು ಹೊರಹಾಕಲು ಸಹಾಯ ಮಾಡುವುದಲ್ಲದೆ ಲಿವರ್ ಆರೋಗ್ಯವಾಗಿರಲು ಸಹಾಯ ಮಾಡುತ್ತದೆ.
- ದ್ರಾಕ್ಷಿ ನಮ್ಮ ಲಿವರ್ ಆರೋಗ್ಯವಾಗಿರಲು ಸಹಾಯ ಮಾಡುತ್ತದೆ. ಇದರಲ್ಲಿರುವ ವಿಟಮಿನ್ ಸಿ ದೇಹಕ್ಕೆ ರೋಗನಿರೋಧಕ ಶಕ್ತಿಯನ್ನು ನೀಡುತ್ತದೆ. ಅದರಲ್ಲಿಯೂ ಕಪ್ಪು ದ್ರಾಕ್ಷಿ, ಯಕೃತ್ತಿನ ಆರೋಗ್ಯಕ್ಕೆ ಉಪಯುಕ್ತವಾಗಿದೆ.
- ಸೇಬುಗಳಲ್ಲಿರುವ ಫೈಬರ್ ಅಂಶವು ಪಿತ್ತಜನಕಾಂಗದಲ್ಲಿ ಸಂಗ್ರಹವಾಗಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕರಗಿಸಲು ಸಹಾಯ ಮಾಡುತ್ತದೆ. ಇದಲ್ಲದೆ, ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ದೇಹದಲ್ಲಿನ ಫ್ರೀ ರಾಡಿಕಲ್ ಗಳಿಂದ ಮುಕ್ತಿ ನೀಡಿ ನಮ್ಮ ಯಕೃತ್ತನ್ನು ಆರೋಗ್ಯವಾಗಿಡುತ್ತದೆ.
- ಅನಾನಸ್ ನಲ್ಲಿ ಬ್ರೊಮೆಲೈನ್ ಎಂಬ ನೈಸರ್ಗಿಕ ಕಿಣ್ವವಿದೆ. ಇದು ದೇಹದಲ್ಲಿನ ಉರಿಯೂತದ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಲಿವರ್ ನ ಒತ್ತಡವನ್ನು ಕಡಿಮೆ ಮಾಡಲು ಮತ್ತು ಅದರ ಕಾರ್ಯವನ್ನು ಸುಧಾರಿಸಲು ಈ ಹಣ್ಣು ಉಪಯುಕ್ತವಾಗಿದೆ.
- ಪಪ್ಪಾಯಿಯಲ್ಲಿ ಪಪೈನ್ ಎಂಬ ಪ್ರಮುಖ ಕಿಣ್ವವಿದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಜೊತೆಗೆ ಪಿತ್ತಜನಕಾಂಗವನ್ನು ಸ್ವಚ್ಛವಾಗಿಡಲು ಈ ಹಣ್ಣು ಸಹಾಯ ಮಾಡುತ್ತದೆ.
- ಮಾವಿನ ಹಣ್ಣಿನಲ್ಲಿ ವಿಟಮಿನ್ ಎ, ಸಿ, ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳು ಹೇರಳವಾಗಿರುತ್ತದೆ. ಅವು ನಮ್ಮ ಲಿವರ್ ಅನ್ನು ರಕ್ಷಿಸಲು ಮತ್ತು ದೇಹದಲ್ಲಿನ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ. ಮಾವಿನಹಣ್ಣನ್ನು ಮಿತವಾಗಿ ತೆಗೆದುಕೊಂಡರೆ ದೇಹಕ್ಕೆ ಉತ್ತಮ ಪ್ರಯೋಜನಗಳಿವೆ.
- ಕಲ್ಲಂಗಡಿಯಲ್ಲಿ ನೀರು ಸಮೃದ್ಧವಾಗಿದ್ದು ಇದರಲ್ಲಿರುವ ಲೈಕೋಪೀನ್ ಎಂಬ ಉತ್ಕರ್ಷಣ ನಿರೋಧಕ ಯಕೃತ್ತನ್ನು ಹಾನಿಕಾರಕ ಆಹಾರಗಳಿಂದ ರಕ್ಷಿಸುತ್ತದೆ. ಅದರಲ್ಲಿಯೂ ಈ ಹಣ್ಣು ಬೇಸಿಗೆಯ ದಿನಗಳಲ್ಲಿ ಯಕೃತ್ತನ್ನು ತಂಪಾಗಿಸುತ್ತದೆ.
- ಕಿವಿ ಹಣ್ಣಿನಲ್ಲಿ ವಿಟಮಿನ್ ಸಿ ಅಧಿಕವಾಗಿದೆ. ಇದು ಯಕೃತ್ತಿನ ಆರೋಗ್ಯವನ್ನು ಸುಧಾರಿಸುವುದಲ್ಲದೆ ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ಕೊಬ್ಬಿನ ಯಕೃತ್ತಿನಂತಹ ಸಮಸ್ಯೆಗಳನ್ನು ಅಂದರೆ ಫ್ಯಾಟಿ ಲಿವರ್ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಪ್ರತಿನಿತ್ಯ ನಮ್ಮ ಆಹಾರದಲ್ಲಿ ಈ ಹಣ್ಣುಗಳನ್ನು ಸೇವನೆ ಮಾಡುವುದರಿಂದ ಲಿವರ್ ಚೆನ್ನಾಗಿರುವುದು ಮಾತ್ರವಲ್ಲ ನಮ್ಮ ಪೂರ್ತಿ ದೇಹ ಆರೋಗ್ಯವಾಗಿರುತ್ತದೆ.
ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ