Lung Health: ನಿಮ್ಮ ಶ್ವಾಸಕೋಶ ಆರೋಗ್ಯವಾಗಿರಲು ನಿಯಮಿತವಾಗಿ ಈ ಹಣ್ಣುಗಳ ಸೇವನೆ ಮಾಡಿ
ಶ್ವಾಸಕೋಶ ಆರೋಗ್ಯವಾಗಿರುವುದು ಬಹಳ ಮುಖ್ಯ. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಅತಿಯಾದ ಮಾಲಿನ್ಯ, ಧೂಮಪಾಗಳಿಂದ ಶ್ವಾಸಕೋಶ ದುರ್ಬಲಗೊಳ್ಳುತ್ತಿದೆ. ಇಂತಹ ಸಂದರ್ಭಗಳಲ್ಲಿ ನಮ್ಮ ಆರೋಗ್ಯವನ್ನು ನಾವು ಕಾಪಾಡಿಕೊಳ್ಳುವುದು ಅನಿವಾರ್ಯ. ಆದರೆ ಇದಕ್ಕೆ ಔಷಧಿಗಳ ಮೊರೆ ಹೋಗುವ ಬದಲು ಕೆಲವು ನೈಸರ್ಗಿಕ ಹಣ್ಣುಗಳನ್ನು ಸೇವನೆ ಮಾಡುವ ಮೂಲಕ ನಮ್ಮ ಶ್ವಾಸಕೋಶದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹಾಗಾದರೆ ಪ್ರತಿನಿತ್ಯ ಯಾವ ರೀತಿಯ ಹಣ್ಣುಗಳ ಸೇವನೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ.

ನಮ್ಮ ದೇಹದ ಪ್ರತಿಯೊಂದು ಅಂಗವೂ ಕೂಡ ಸರಿಯಾಗಿ ಕಾರ್ಯನಿರ್ವಹಿಸಲು ಆರೋಗ್ಯಕರವಾದ ಜೀವನಶೈಲಿ (Lifestyle) ಯನ್ನು ರೂಢಿಸಿಕೊಂಡಿರಬೇಕಾಗುತ್ತದೆ. ಹಾಗಾಗಿ ಪ್ರತಿನಿತ್ಯ ನಮ್ಮ ಆಹಾರ ಕ್ರಮಗಳನ್ನು ಸರಿಯಾಗಿ ಇಟ್ಟುಕೊಳ್ಳುವುದು ಅವಶ್ಯಕ. ಅದರಲ್ಲಿಯೂ ವಿಶೇಷವಾಗಿ ನಮ್ಮ ಶ್ವಾಸಕೋಶ (Lungs) ಆರೋಗ್ಯಕರವಾಗಿ ಇರಬೇಕಾದರೆ ದಿನನಿತ್ಯ ಕೆಲವು ನೈಸರ್ಗಿಕ ಆಹಾರಗಳನ್ನು ಸೇವಿಸುವುದು ಸೂಕ್ತವಾಗಿದ್ದು ಅವುಗಳಲ್ಲಿ ಹಣ್ಣುಗಳು (Fruits) ಒಳ್ಳೆಯ ಆಯ್ಕೆಯಾಗಿದೆ. ಅದರಲ್ಲಿಯೂ ಕೆಲವು ಹಣ್ಣುಗಳು ಶ್ವಾಸಕೋಶದ ಆರೋಗ್ಯವನ್ನು ಕಾಪಾಡಿಕೊಳ್ಳಲು ಮತ್ತು ಅವುಗಳ ಕಾರ್ಯವನ್ನು ಮತ್ತಷ್ಟು ಬಲಪಡಿಸಲು ಸಹಾಯ ಮಾಡುತ್ತದೆ. ಹಾಗಾದರೆ ಪ್ರತಿನಿತ್ಯ ಯಾವ ರೀತಿಯ ಹಣ್ಣುಗಳ ಸೇವನೆ ಮಾಡುವುದು ಒಳ್ಳೆಯದು? ಶ್ವಾಸಕೋಶದ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬಹುದು ಎಂಬುದನ್ನು ತಿಳಿದುಕೊಳ್ಳಿ.
ಅನಾನಸ್
ಈ ಹಣ್ಣಿನಲ್ಲಿ ನೈಸರ್ಗಿಕವಾಗಿ ಕಂಡು ಬರುವ ಬ್ರೊಮೆಲೈನ್ ಎಂಬ ಅಂಶವಿದ್ದು ಇದು ಶ್ವಾಸಕೋಶದ ಉರಿಯೂತವನ್ನು ನಿಯಂತ್ರಿಸುತ್ತದೆ ಮತ್ತು ಉಸಿರಾಟದ ತೊಂದರೆಗಳಿಗೆ ಪರಿಹಾರ ನೀಡುತ್ತದೆ. ಇದರಲ್ಲಿರುವ ಮ್ಯಾಂಗನೀಸ್ ನಂತಹ ಖನಿಜಗಳು ಅಂಗಾಂಶಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ.
ಪಪ್ಪಾಯಿ
ಇದರಲ್ಲಿ ವಿಟಮಿನ್ ಸಿ ಸಮೃದ್ಧವಾಗಿದ್ದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಪಪ್ಪಾಯಿ ಹಣ್ಣು ಪ್ರಮುಖ ಪಾತ್ರ ವಹಿಸುತ್ತದೆ. ಈ ಹಣ್ಣನ್ನು ತಿನ್ನುವ ಮೂಲಕ, ಶ್ವಾಸಕೋಶವನ್ನು ಆರೋಗ್ಯವಾಗಿಟ್ಟುಕೊಳ್ಳಬಹುದು ಜೊತೆಗೆ ಇದರಲ್ಲಿರುವ ಔಷಧೀಯ ಗುಣಗಳು ಸೋಂಕುಗಳು ಬರದಂತೆ ತಡೆಯುವ ಶಕ್ತಿಯನ್ನು ಕೂಡ ಒಳಗೊಂಡಿರುವುದರಿಂದ ಪದೇ ಪದೇ ಕಾಯಿಲೆಗಳು ಬರುವುದಿಲ್ಲ.
ಇದನ್ನೂ ಓದಿ: ಚಿಕ್ಕ ಮಕ್ಕಳಿಗೆ ಬೆಳ್ಳಿ ಆಭರಣಗಳನ್ನು ಹಾಕಲು ಕಾರಣವೇನು?
ಕಿವಿ
ಈ ಹಣ್ಣು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ವಿಟಮಿನ್ ಸಿ ಮತ್ತು ಪೊಟ್ಯಾಸಿಯಮ್ ಸಮೃದ್ಧವಾಗಿದೆ. ಇದು ಶ್ವಾಸಕೋಶ ಆರೋಗ್ಯವಾಗಿರಲು ಸಹಾಯ ಮಾಡುತ್ತವೆ. ಅದಲ್ಲದೆ ಕಿವಿ ಹಣ್ಣನ್ನು ಆಗಾಗ ಸೇವನೆ ಮಾಡುವುದರಿಂದ ಉಸಿರಾಟದ ತೊಂದರೆಗಳನ್ನು ಕೂಡ ಕಡಿಮೆ ಮಾಡುತ್ತದೆ.
ಸ್ಟ್ರಾಬೆರಿ
ಇದರಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದ್ದು ಅವು ಅಂಗಾಂಶಗಳನ್ನು ರಕ್ಷಿಸುವುದಕ್ಕೆ ಸಹಾಯ ಮಾಡುತ್ತವೆ. ಜೊತೆಗೆ ಇದರಲ್ಲಿರುವ ವಿಟಮಿನ್ ಸಿ ಕೂಡ ಶ್ವಾಸಕೋಶವನ್ನು ಆರೋಗ್ಯಕರವಾಗಿರಿಸುತ್ತದೆ. ಸ್ಟ್ರಾಬೆರಿ ದೇಹದಲ್ಲಿನ ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ಫ್ರೀ ರಾಡಿಕಲ್ಗಳನ್ನು ಪರೀಕ್ಷಿಸುತ್ತದೆ.
ಕಲ್ಲಂಗಡಿ
ಬೇಸಿಗೆಯಲ್ಲಿ ಹೆಚ್ಚಾಗಿ ಸೇವನೆ ಮಾಡುವ ಹಣ್ಣುಗಳಲ್ಲಿ ಕಲ್ಲಂಗಡಿಯೂ ಒಂದು. ಇದು ಶ್ವಾಸಕೋಶಕ್ಕೆ ಬಹಳ ಒಳ್ಳೆಯದು. ಇದರಲ್ಲಿರುವ ಲೈಕೋಪೀನ್ ಮತ್ತು ವಿಟಮಿನ್ ಸಿ ನಂತಹ ಪೋಷಕಾಂಶಗಳು ಅಂಗಾಂಗಳನ್ನು ಆರೋಗ್ಯಕರವಾಗಿರಿಸುತ್ತದೆ. ಕಲ್ಲಂಗಡಿ ಸೇವನೆ ಮಾಡುವುದು ದೇಹದಲ್ಲಿ ತೇವಾಂಶವನ್ನು ಉಳಿಸಿಕೊಳ್ಳುತ್ತದೆ ಮತ್ತು ಉರಿಯೂತವನ್ನು ಕಡಿಮೆ ಮಾಡುತ್ತದೆ.
ಮಾವಿನ ಹಣ್ಣು
ಮಾವು ಸಾಮಾನ್ಯವಾಗಿ ಎಲ್ಲರಿಗೂ ಇಷ್ಟವಾಗುತ್ತದೆ. ಇದರಲ್ಲಿ ಬೀಟಾ- ಕ್ಯಾರೋಟಿನ್, ವಿಟಮಿನ್ ಎ ಮತ್ತು ವಿಟಮಿನ್ ಸಿ ಸಮೃದ್ಧವಾಗಿದೆ. ಅವು ಶ್ವಾಸಕೋಶವನ್ನು ಆಕ್ಸಿಡೇಟಿವ್ ಒತ್ತಡದಿಂದ ರಕ್ಷಿಸುತ್ತವೆ ಮತ್ತು ಅವುಗಳ ಕಾರ್ಯವನ್ನು ಸುಧಾರಿಸುತ್ತವೆ. ಇದು ಉಸಿರಾಟದ ವ್ಯವಸ್ಥೆಯನ್ನು ಕೂಡ ಸುಧಾರಿಸಲು ಸಹಾಯ ಮಾಡುತ್ತದೆ.
ದಾಳಿಂಬೆ
ಈ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕಗಳು, ವಿಟಮಿನ್ ಸಿ ಮತ್ತು ವಿಟಮಿನ್ ಇ ನಂತಹ ಪ್ರಮುಖ ಪೋಷಕಾಂಶಗಳು ಸಮೃದ್ಧವಾಗಿದೆ. ಈ ಅಂಶಗಳು ಶ್ವಾಸಕೋಶದ ಕೋಶಗಳನ್ನು ಬಲಪಡಿಸುತ್ತವೆ ಮತ್ತು ವಾತಾವರಣದಲ್ಲಿರುವ ಹಾನಿಕಾರಕ ಅನಿಲಗಳಿಂದ ದೇಹವನ್ನು ರಕ್ಷಿಸುತ್ತವೆ. ಹಾಗಾಗಿ ದಾಳಿಂಬೆ ಹಣ್ಣನ್ನು ಆಗಾಗ ಸೇವನೆ ಮಾಡುವುದರಿಂದ ಶ್ವಾಸಕೋಶಕ್ಕೆ ಸಂಬಂಧ ಪಟ್ಟ ಸೋಂಕನ್ನು ತಡೆಯಬಹುದು.
ಕಿತ್ತಳೆ
ಈ ಹಣ್ಣಿನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ದೇಹವನ್ನು ವೈರಸ್ಗಳು ಮತ್ತು ಬ್ಯಾಕ್ಟೀರಿಯಾಗಳಿಂದ ರಕ್ಷಿಸುತ್ತದೆ. ನಿಯಮಿತವಾಗಿ ಕಿತ್ತಳೆ ಹಣ್ಣನ್ನು ಸೇವನೆ ಮಾಡುವುದರಿಂದ ಉಸಿರಾಟದ ವ್ಯವಸ್ಥೆಯೂ ಬಲಗೊಳ್ಳುತ್ತದೆ. ಜೊತೆಗೆ ಆಗಾಗ ಬರುವ ಶೀತ ಮತ್ತು ಕೆಮ್ಮಿನಂತಹ ಸಮಸ್ಯೆಗಳಿಂದ ಮುಕ್ತಿ ನೀಡುತ್ತದೆ. ಈ ಹಣ್ಣುಗಳನ್ನು ಪ್ರತಿನಿತ್ಯ ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳುವುದರಿಂದ ಶ್ವಾಸಕೋಶ ಆರೋಗ್ಯವಾಗಿರುತ್ತದೆ.
ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ