AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Borewell water: ಬೋರ್ ವೆಲ್ ನೀರು ಕುಡಿಯುವವರಿಗೆ ಈ ಕಾಯಿಲೆ ಬರುವುದು ಖಚಿತ

ಬೇಕೋ ಬೇಡವೋ ಮನೆಯಲ್ಲಿ ಬೋರ್ ವೆಲ್ ಕೊರೆಯುವುದು ಜನಗಳಿಗೆ ಅಭ್ಯಾಸವಾಗಿದೆ. ಆದರೆ ಈ ನೀರು ಆರೋಗ್ಯದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬುದು ನಿಮಗೆ ತಿಳಿದಿದೆಯೇ? ಸಾಮಾನ್ಯವಾಗಿ ಮಿತಿಗಿಂತ ಹೆಚ್ಚು ಆಳವಾಗಿ ಕೊರೆದ ಕೊಳವೆ ಬಾವಿಗಳ ನೀರನ್ನು ಬಳಸುವುದು ಅನೇಕ ರೋಗಗಳಿಗೆ ಕಾರಣವಾಗಬಹುದು ಎಂದು ವರದಿಗಳು ಹೇಳುತ್ತವೆ. ನೀರು ಇಲ್ಲದಾಗ ಜನರು ಆಳವಾದ ಕೊಳವೆ ಬಾವಿಗಳನ್ನು ಕೊರೆಸುತ್ತಾರೆ. ಈ ನೀರನ್ನು ಬಳಕೆ ಮಾಡಿದರೆ ಬೇಡದ ರೋಗಗಳು ಬರುತ್ತದೆ. ಹಾಗಾದರೆ ಬೋರ್ ವೆಲ್ ನೀರಿನ ಅಡ್ಡಪರಿಣಾಮಗಳೇನು? ಈ ನೀರನ್ನು ನಿಯಮಿತವಾಗಿ ಕುಡಿಯುವುದರಿಂದ ಯಾವ ರೀತಿಯ ಕಾಯಿಲೆಗಳು ಬರುತ್ತವೆ? ಇಲ್ಲಿದೆ ತಜ್ಞರು ನೀಡಿರುವ ಸಂಪೂರ್ಣ ಮಾಹಿತಿ.

Borewell water: ಬೋರ್ ವೆಲ್ ನೀರು ಕುಡಿಯುವವರಿಗೆ ಈ ಕಾಯಿಲೆ ಬರುವುದು ಖಚಿತ
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 26, 2024 | 10:33 AM

ಇತ್ತೀಚಿನ ವರ್ಷಗಳಲ್ಲಿ ಕೊಳವೆಬಾವಿಗಳ ಸಂಖ್ಯೆ ಹೆಚ್ಚಾಗಿದೆ. ಎಲ್ಲಿ ನೋಡಿದರೂ ನೀವು ಬೋರ್ ವೆಲ್ ಗಳನ್ನು ಕಾಣಬಹುದಾಗಿದೆ. ಬೇಕೋ ಬೇಡವೋ ಮನೆಯಲ್ಲಿ ಬೋರ್ ವೆಲ್ ಕೊರೆಯುವುದು ಜನಗಳಿಗೆ ಅಭ್ಯಾಸವಾಗಿದೆ. ಆದರೆ ಈ ನೀರು ಆರೋಗ್ಯದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬುದು ನಿಮಗೆ ತಿಳಿದಿದೆಯೇ? ಸಾಮಾನ್ಯವಾಗಿ ಮಿತಿಗಿಂತ ಹೆಚ್ಚು ಆಳವಾಗಿ ಕೊರೆದ ಕೊಳವೆ ಬಾವಿಗಳ ನೀರನ್ನು ಬಳಸುವುದು ಅನೇಕ ರೋಗಗಳಿಗೆ ಕಾರಣವಾಗಬಹುದು ಎಂದು ವರದಿಗಳು ಹೇಳುತ್ತವೆ. ನೀರು ಇಲ್ಲದಾಗ ಜನರು ಆಳವಾದ ಕೊಳವೆ ಬಾವಿಗಳನ್ನು ಕೊರೆಸುತ್ತಾರೆ. ಈ ನೀರನ್ನು ಬಳಕೆ ಮಾಡಿದರೆ ಬೇಡದ ರೋಗಗಳು ಬರುತ್ತದೆ. ಹಾಗಾದರೆ ಬೋರ್ ವೆಲ್ ನೀರಿನ ಅಡ್ಡಪರಿಣಾಮಗಳೇನು? ಈ ನೀರನ್ನು ನಿಯಮಿತವಾಗಿ ಕುಡಿಯುವುದರಿಂದ ಯಾವ ರೀತಿಯ ಕಾಯಿಲೆಗಳು ಬರುತ್ತವೆ? ಇಲ್ಲಿದೆ ತಜ್ಞರು ನೀಡಿರುವ ಸಂಪೂರ್ಣ ಮಾಹಿತಿ.

ಬಾವಿಯನ್ನು ಒಂದು ಮಿತಿಗಿಂತ ಆಳ ಮಾಡಿದರೆ ಆಗ ರಾಸಾಯನಿಕ ತ್ಯಾಜ್ಯಗಳನ್ನು ಹೊಂದಿರುವ ನೀರು ಲಭ್ಯವಾಗುತ್ತದೆ. ಈ ನೀರನ್ನು ನಿಯಮಿತವಾಗಿ ಕುಡಿಯುವುದರಿಂದ ಕ್ಯಾನ್ಸರ್ ಸೇರಿದಂತೆ ಅನೇಕ ರೋಗಗಳಿಗೆ ಕಾರಣವಾಗಬಹುದು ಎಂದು ಅಧ್ಯಯನಗಳು ತೋರಿಸಿ ಕೊಟ್ಟಿವೆ. ಬೋರ್ ವೆಲ್ ನೀರಿನಲ್ಲಿ ಫ್ಲೋರೈಡ್, ನೈಟ್ರೇಟ್ ಮತ್ತು ಪಾದರಸದ ಅಂಶ ಹೆಚ್ಚಾಗಿರುತ್ತದೆ. ಅವುಗಳನ್ನು ಎಷ್ಟೇ ಶುದ್ಧೀಕರಿಸಿದರೂ, ಅವುಗಳನ್ನು ನೀರಿನಿಂದ ಬೇರ್ಪಡಿಸಲು ಸಾಧ್ಯವಿಲ್ಲ.

ಇದನ್ನೂ ಓದಿ: ಹಪ್ಪಳ ತಿನ್ನುವುದರಿಂದ ನಿಮ್ಮ ಆರೋಗ್ಯ ಚೆನ್ನಾಗಿರುತ್ತೆ

ಕ್ಯಾನ್ಸರ್ ಗೆ ಕಾರಣವಾಗಬಹುದು

ಅದೂ ಅಲ್ಲದೆ ಬೋರ್ ವೆಲ್ ನೀರಿನಲ್ಲಿ ಯುರೇನಿಯಂ ಮಟ್ಟ ಹೆಚ್ಚಾಗಿದೆ ಎಂದು ಸಂಶೋಧನೆಗಳಿಂದ ತಿಳಿದು ಬಂದಿದೆ. ಸಾಮಾನ್ಯವಾಗಿ ಕುಡಿಯುವ ನೀರಿನಲ್ಲಿ ಯುರೇನಿಯಂ ಮಟ್ಟ ಹೆಚ್ಚಾಗಿದ್ದರೆ ಕ್ಯಾನ್ಸರ್, ಶ್ವಾಸಕೋಶ, ಮೂತ್ರಪಿಂಡ ಮತ್ತು ಚರ್ಮದ ಕಾಯಿಲೆಗಳಿಗೆ ಕಾರಣವಾಗಬಹುದು. ಹಾಗಾಗಿ ತಜ್ಞರು ಕೊಳವೆಬಾವಿಗಳ ನೀರನ್ನು ಕುಡಿಯುವುದನ್ನು ತಪ್ಪಿಸಿ ಎನ್ನುತ್ತಾರೆ. ಅದೂ ಅಲ್ಲದೆ ಈ ನೀರು ಸ್ನಾನಕ್ಕೂ ಯೋಗ್ಯವಲ್ಲ. ಕೆಲವರಿಗೆ ಇದರಿಂದ ಚರ್ಮದಲ್ಲಿ ಅಲರ್ಜಿ ಉಂಟಾಗಬಹುದು ಅಥವಾ ಕೂದಲು ಉದುರಲು ಪ್ರಾಂರಭವಾಗಬಹುದು. ಇದೆಲ್ಲಾ ಕಾರಣಗಳಿಂದ ಬೋರ್ ವೆಲ್ ನೀರು ದಿನ ಬಳಕೆಗೆ ಒಳ್ಳೆಯದಲ್ಲ ಎನ್ನಲಾಗುತ್ತದೆ. ಹಾಗಾಗಿ ಸಾಧ್ಯವಾದಷ್ಟು ಈ ನೀರನ್ನು ತ್ಯಜಿಸಿ ನಿಮ್ಮ ಅಮೂಲ್ಯವಾದ ಆರೋಗ್ಯವನ್ನು ಕಾಪಾಡಿಕೊಳ್ಳಿ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು