Brain Stroke: ಯುವಜನತೆ ಮೆದುಳಿನ ಪಾರ್ಶ್ವವಾಯುವಿಗೆ ಬಲಿಯಾಗುತ್ತಿರುವುದೇಕೆ? ಇದನ್ನು ತಡೆಯುವುದು ಹೇಗೆ?

 ಮೆದುಳಿನ ಪಾರ್ಶ್ವವಾಯು ಪ್ರಕರಣಗಳೂ ವೇಗವಾಗಿ ಹೆಚ್ಚುತ್ತಿವೆ. ಈ ರೋಗ ಮೊದಲು ವಯಸ್ಸಾದವರ ಮೇಲೆ ಹೆಚ್ಚಾಗಿ ಪರಿಣಾಮ ಬೀರುತ್ತಿತ್ತು, ಆದರೆ ಈಗ ಯುವ ಜನತೆ ಕೂಡ ಇದಕ್ಕೆ ಬಲಿಯಾಗುತ್ತಿದ್ದಾರೆ. ಕಳೆದ ಎರಡು ದಶಕಗಳಲ್ಲಿ, ಪಾರ್ಶ್ವವಾಯು ಪ್ರಕರಣಗಳು ಸುಮಾರು 15 ಪ್ರತಿಶತದಷ್ಟು ಹೆಚ್ಚಾಗಿದೆ.

Brain Stroke: ಯುವಜನತೆ ಮೆದುಳಿನ ಪಾರ್ಶ್ವವಾಯುವಿಗೆ ಬಲಿಯಾಗುತ್ತಿರುವುದೇಕೆ? ಇದನ್ನು ತಡೆಯುವುದು ಹೇಗೆ?
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: May 30, 2024 | 3:59 PM

ಭಾರತದಲ್ಲಿ ಹೆಚ್ಚಿನ ಸಂಖ್ಯೆಯ ಸಾವಿಗೆ ಸ್ಟ್ರೋಕ್‌ ಅಥವಾ ಪಾರ್ಶ್ವವಾಯು ಕೂಡಾ ಕಾರಣವಾಗಿದೆ. ಅದರಲ್ಲಿಯೂ ಮೆದುಳಿನಲ್ಲಿ ಸ್ಟ್ರೋಕ್ ತುಂಬಾ ಗಂಭೀರವಾದ ಕಾಯಿಲೆಯಾಗಿದೆ. ಇದರ ಪರಿಣಾಮಗಳು ಆರೋಗ್ಯದ ಮೇಲೆ ದೀರ್ಘಕಾಲದವರೆಗೆ ಇರುತ್ತದೆ. ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಂತೆಯೇ, ಮೆದುಳಿನ ಪಾರ್ಶ್ವವಾಯು ಪ್ರಕರಣಗಳೂ ವೇಗವಾಗಿ ಹೆಚ್ಚುತ್ತಿವೆ. ಈ ರೋಗ ಮೊದಲು ವಯಸ್ಸಾದವರ ಮೇಲೆ ಹೆಚ್ಚಾಗಿ ಪರಿಣಾಮ ಬೀರುತ್ತಿತ್ತು, ಆದರೆ ಈಗ ಯುವ ಜನತೆ ಕೂಡ ಇದಕ್ಕೆ ಬಲಿಯಾಗುತ್ತಿದ್ದಾರೆ. ಕಳೆದ ಎರಡು ದಶಕಗಳಲ್ಲಿ, ಪಾರ್ಶ್ವವಾಯು ಪ್ರಕರಣಗಳು ಸುಮಾರು 15 ಪ್ರತಿಶತದಷ್ಟು ಹೆಚ್ಚಾಗಿದೆ. ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ (CDC) ಅಧ್ಯಯನದಲ್ಲಿ ಇದು ಬಹಿರಂಗವಾಗಿದೆ. ಈ ಅಧ್ಯಯನವು 18 ರಿಂದ 44 ವರ್ಷ ವಯಸ್ಸಿನವರಲ್ಲಿ ಪಾರ್ಶ್ವವಾಯು ಪ್ರಕರಣಗಳು ಹೆಚ್ಚುತ್ತಿವೆ ಎಂದು ತೋರಿಸಿ ಕೊಟ್ಟಿದೆ.

ಇತ್ತೀಚಿನ ವರ್ಷಗಳಲ್ಲಿ ಜನರ ಜೀವನಶೈಲಿಯಲ್ಲಿ ಸಾಕಷ್ಟು ಬದಲಾವಣೆ ಕಂಡುಬಂದಿರುವುದು ಇದಕ್ಕೆ ಕಾರಣ ಎಂದು ವರದಿಯಲ್ಲಿ ತಿಳಿಸಲಾಗಿದೆ. ಇದಲ್ಲದೆ, ಆಹಾರ ಸೇವನೆಯಲ್ಲಿಯೂ ಸಾಕಷ್ಟು ಬದಲಾವಣೆಗಳಾಗಿವೆ. ಜೀವನಶೈಲಿ, ಆಹಾರ ಇವೆಲ್ಲದರ ನಿರಂತರ ಬದಲಾವಣೆ ಇದಕ್ಕೆ ಕಾರಣ ಎನ್ನಲಾಗಿದೆ. ಸಿಡಿಸಿ ಪ್ರಕಾರ, 2010 ರಿಂದ ನಿರಂತರವಾಗಿ ಪಾರ್ಶ್ವವಾಯು ಪ್ರಕರಣಗಳು ಹೆಚ್ಚುತ್ತಿದ್ದು. ಅದರಲ್ಲಿಯೂ ಪುರುಷರು ಮತ್ತು ಮಹಿಳೆಯರಲ್ಲಿ ಪಾರ್ಶ್ವವಾಯು ಅಪಾಯ ಮತ್ತಷ್ಟು ಹೆಚ್ಚಾಗಿದೆ ಎಂದು ಸಂಶೋಧನೆ ತೋರಿಸಿದೆ. ಪುರುಷರಲ್ಲಿ ಸುಮಾರು 7 ಪ್ರತಿಶತ ಮತ್ತು ಮಹಿಳೆಯರಲ್ಲಿ 10 ಪ್ರತಿಶತದಷ್ಟು ಹೆಚ್ಚಳ ಕಂಡುಬಂದಿದೆ. ಪಾರ್ಶ್ವವಾಯು ಪ್ರಕರಣಗಳು ವಿಶ್ವಾದ್ಯಂತ ಸಾವಿಗೆ ಐದನೇ ಅತಿದೊಡ್ಡ ಕಾರಣವಾಗಿದೆ ಎಂದು ಸಂಶೋಧನೆ ತಿಳಿಸಿದೆ.

ಪಾರ್ಶ್ವವಾಯು ಪ್ರಕರಣಗಳು ಏಕೆ ಹೆಚ್ಚುತ್ತಿವೆ?

ಈ ಪ್ರಕರಣಗಳು ಹೆಚ್ಚಾಗಲು ಅನೇಕ ಕಾರಣಗಳಿವೆ ಎಂದು ಸಂಶೋಧನೆ ತೋರಿಸಿದೆ. ಇವುಗಳಲ್ಲಿ, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವಿಕೆ, ಅಧಿಕ ಬಿಪಿ ಮತ್ತು ಕೊಲೆಸ್ಟ್ರಾಲ್ ಪ್ರಮುಖ ಕಾರಣಗಳಾಗಿವೆ. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವಿಕೆಯಿಂದಾಗಿ, ರಕ್ತ ಪರಿಚಲನೆ ಸರಿಯಾಗಿ ನಡೆಯುವುದಿಲ್ಲ. ಇದು ಪಾರ್ಶ್ವವಾಯುವಿಗೆ ಕಾರಣವಾಗುತ್ತದೆ. ಅದರಲ್ಲಿಯೂ ಹೆಚ್ಚಿನ ಸಂದರ್ಭಗಳಲ್ಲಿ, ರೋಗಿಗೆ ಇದರ ರೋಗಲಕ್ಷಣಗಳ ಬಗ್ಗೆ ಸರಿಯಾಗಿ ತಿಳಿದಿರುವುದಿಲ್ಲ ಇದರಿಂದ ಆಸ್ಪತ್ರೆಗೆ ಹೋಗುವುದಕ್ಕೆ ವಿಳಂಬ ಮಾಡುತ್ತಾರೆ. ಚಿಕಿತ್ಸೆ ಸಿಗುವುದು ತಡವಾಗುವುದರಿಂದ ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿದೆ. ಅಂತೆಯೇ, ಬಿಪಿಯ ಹೆಚ್ಚಳದಿಂದಾಗಿ, ಮೆದುಳಿನಲ್ಲಿ ಇರುವ ರಕ್ತನಾಳಗಳ ಮೇಲೆ ಹೆಚ್ಚಿನ ಒತ್ತಡವಿರುತ್ತದೆ ಮತ್ತು ಅವು ರಕ್ತಸ್ರಾವಕ್ಕೆ ಕಾರಣವಾಗುತ್ತವೆ. ಅಂತಹ ಪರಿಸ್ಥಿತಿಯಲ್ಲಿ, ಅಧಿಕ ಬಿಪಿ ಮತ್ತು ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಬೇಕಾಗುತ್ತದೆ. ಸಿಡಿಸಿ ಪ್ರಕಾರ, ಹೆಚ್ಚು ಧೂಮಪಾನ ಮಾಡುವವರು. ಆಲ್ಕೋಹಾಲ್ ಸೇವಿಸುವ ಮತ್ತು ಕೆಟ್ಟ ಜೀವನಶೈಲಿಯನ್ನು ನಡೆಸುತ್ತಿರುವವರು ಮತ್ತು ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಪಾರ್ಶ್ವವಾಯುವಿನ ಅಪಾಯ ಹೆಚ್ಚಾಗಿರುತ್ತದೆ. ಪಾರ್ಶ್ವವಾಯುವಿನ ಆರಂಭಿಕ ರೋಗಲಕ್ಷಣಗಳ ಬಗ್ಗೆ ತಿಳಿದುಕೊಂಡು, ವೈದ್ಯರನ್ನು ಸಂಪರ್ಕಿಸುವುದು ಒಳ್ಳೆಯದು.

ಪಾರ್ಶ್ವವಾಯುವಿನ ಲಕ್ಷಣಗಳು ಯಾವುವು?

*ತೀವ್ರ ತಲೆನೋವು

*ಮಸುಕಾದ ದೃಷ್ಟಿ

*ತಲೆತಿರುಗುವಿಕೆ

*ಮಾತನಾಡಲು ತೊಂದರೆ

ಇದನ್ನೂ ಓದಿ: ದಿನವೂ ಮೊಸರು ತಿನ್ನುವವರ ಗಮನಕ್ಕೆ, ಇದು ಆರೋಗ್ಯಕ್ಕೆ ಒಳ್ಳೆಯದಾ? ಕೆಟ್ಟದ್ದಾ?

ಹೇಗೆ ರಕ್ಷಿಸಿಕೊಳ್ಳುವುದು?

*ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ

*ಪ್ರತಿದಿನ ವ್ಯಾಯಾಮ ಮಾಡಿ

*ತೂಕವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ

*ತಲೆನೋವಿನ ಸಮಸ್ಯೆ ಆಗಾಗ ಕಾಣಿಸಿಕೊಳ್ಳುತ್ತಿದ್ದರೆ, ವೈದ್ಯರನ್ನು ಸಂಪರ್ಕಿಸಿ

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್