AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೇನ್ ಟ್ಯೂಮರ್ ಲಕ್ಷಣಗಳು ಹೇಗಿರುತ್ತೆ ಗೊತ್ತಾ? ಮೈಗ್ರೇನ್ ಅಥವಾ ಸ್ಟ್ರೆಸ್ ಎಂದು ನಿರ್ಲಕ್ಷ್ಯ ಮಾಡದಿರಿ

ಬ್ರೇನ್ ಟ್ಯೂಮರ್ ಬಗ್ಗೆ ಜನರು ಸಾಮಾನ್ಯವಾಗಿ ಗೊಂದಲಕ್ಕೊಳಗಾಗುತ್ತಾರೆ. ಇದರ ಆರಂಭಿಕ ಲಕ್ಷಣಗಳು ತುಂಬಾ ಸೌಮ್ಯ ಮತ್ತು ಸಾಮಾನ್ಯವಾಗಿರುವುದೇ ಇದಕ್ಕೆ ಕಾರಣ. ಹಾಗಾಗಿ ಜನ ಇದನ್ನು ಒತ್ತಡ ಅಥವಾ ಮೈಗ್ರೇನ್ ಎಂದು ಭಾವಿಸುತ್ತಾರೆ. ಹೌದು, ಆರಂಭಿಕ ಹಂತದಲ್ಲಿ ಬ್ರೇನ್ ಟ್ಯೂಮರ್ ಲಕ್ಷಣಗಳು ಸಾಮಾನ್ಯ ತಲೆನೋವಿನಂತೆ ಕಾಣುವುದರಿಂದ ಹಲವರು ಇದನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಹಾಗಾದರೆ ಸಾಮಾನ್ಯ ತಲೆನೋವು ಮತ್ತು ಬ್ರೇನ್ ಟ್ಯೂಮರ್ ಗಿರುವ ವ್ಯತ್ಯಾಸವೇನು, ಅದನ್ನು ತಿಳಿದುಕೊಳ್ಳುವುದು ಹೇಗೆ? ಇಲ್ಲಿದೆ ಮಾಹಿತಿ.

ಬ್ರೇನ್ ಟ್ಯೂಮರ್ ಲಕ್ಷಣಗಳು ಹೇಗಿರುತ್ತೆ ಗೊತ್ತಾ? ಮೈಗ್ರೇನ್ ಅಥವಾ ಸ್ಟ್ರೆಸ್ ಎಂದು ನಿರ್ಲಕ್ಷ್ಯ ಮಾಡದಿರಿ
Brain TumorImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Jun 12, 2026 | 10:28 PM

Share

ಇತ್ತೀಚಿನ ದಿನಗಳಲ್ಲಿ ತಲೆನೋವು, ಒತ್ತಡ ಮತ್ತು 0 (Migraine) ಸಮಸ್ಯೆಗಳು ಸಾಮಾನ್ಯವಾಗಿವೆ. ಆದರೆ ಕೆಲವೊಮ್ಮೆ ಇದೇ ಲಕ್ಷಣಗಳು ಬ್ರೇನ್ ಟ್ಯೂಮರ್ (Brain Tumor) ಎಂಬ ಗಂಭೀರ ಸಮಸ್ಯೆಯ ಸೂಚನೆಯಾಗಿರಬಹುದು. ಹೌದು, ಆರಂಭಿಕ ಹಂತದಲ್ಲಿ ಬ್ರೇನ್ ಟ್ಯೂಮರ್ ಲಕ್ಷಣಗಳು ಸಾಮಾನ್ಯ ತಲೆನೋವಿನಂತೆ ಕಾಣುವುದರಿಂದ ಹಲವರು ಇದನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ನ್ಯೂರೋ ಸರ್ಜನ್‌ಗಳ ಪ್ರಕಾರ, ನಿರಂತರ ತಲೆನೋವು, ದೃಷ್ಟಿ ಸಮಸ್ಯೆ, ವಾಂತಿ, ಸಮತೋಲನ ಕಳೆದುಕೊಳ್ಳುವುದು ಅಥವಾ ಮಾತಿನಲ್ಲಿ ತೊಂದರೆ ಕಾಣಿಸಿಕೊಂಡರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಅಗತ್ಯ. ಹಾಗಾದರೆ ಸಾಮಾನ್ಯ ತಲೆನೋವು ಮತ್ತು ಬ್ರೇನ್ ಟ್ಯೂಮರ್ ಗಿರುವ ವ್ಯತ್ಯಾಸವೇನು, ಅದನ್ನು ತಿಳಿದುಕೊಳ್ಳುವುದು ಹೇಗೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಸಾಮಾನ್ಯ ತಲೆನೋವಿಗಿಂತ ವಿಭಿನ್ನವಾದ ನೋವು:

ಬ್ರೇನ್ ಟ್ಯೂಮರ್‌ನಿಂದ ಉಂಟಾಗುವ ತಲೆನೋವು ಸಾಮಾನ್ಯ ಒತ್ತಡದ ತಲೆನೋವಿನಂತಿರದು. ಇದು ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಹೋಗುತ್ತದೆ. ವಿಶೇಷವಾಗಿ ಬೆಳಿಗ್ಗೆ ಸಮಯದಲ್ಲಿ ಹೆಚ್ಚು ತೀವ್ರವಾಗಿರುತ್ತದೆ. ಕೆಮ್ಮಿದಾಗ, ತಲೆ ತಗ್ಗಿಸಿದಾಗ ಅಥವಾ ಮಲಗಿದಾಗ ನೋವು ಹೆಚ್ಚಾಗಬಹುದು. ಇದನ್ನು ನಿದ್ರಾಹೀನತೆ ಅಥವಾ ಮೈಗ್ರೇನ್ ಎಂದು ನಿರ್ಲಕ್ಷ್ಯ ಮಾಡುವುದು ಅಪಾಯಕಾರಿಯಾಗಿದೆ.

ನಿರಂತರ ವಾಂತಿ ಮತ್ತು ವಾಕರಿಕೆ:

ಬೆಳಿಗ್ಗೆ ಎದ್ದ ಕೂಡಲೇ ವಾಕರಿಕೆ ಅಥವಾ ವಾಂತಿ ಆಗುವುದು ಕೂಡ ಪ್ರಮುಖ ಲಕ್ಷಣವಾಗಿದೆ. ಮೆದುಳಿನ ಒಳಭಾಗದಲ್ಲಿ ಒತ್ತಡ ಹೆಚ್ಚಾದಾಗ ಈ ಸಮಸ್ಯೆ ಕಾಣಿಸಬಹುದು. ಹಲವರು ಇದನ್ನು ಅಜೀರ್ಣ ಅಥವಾ ಆಸಿಡ್ ಸಮಸ್ಯೆ ಎಂದು ತಪ್ಪಾಗಿ ಅರ್ಥಮಾಡಿಕೊಳ್ಳುತ್ತಾರೆ.

ದೃಷ್ಟಿ ಸಮಸ್ಯೆ:

ಬ್ರೇನ್ ಟ್ಯೂಮರ್ ಮೆದುಳಿನ ದೃಷ್ಟಿಯನ್ನು ನಿಯಂತ್ರಿಸುವ ಭಾಗದ ಮೇಲೆ ಪರಿಣಾಮ ಬೀರಿದರೆ, ಮಸುಕಾಗಿ ಕಾಣುವುದು, ಡಬಲ್ ವಿಸನ್, ಬೆಳಕಿಗೆ ಕಣ್ಣು ಬಿಡಲು ಸಾಧ್ಯವಾಗದಿರುವುದು ಅಥವಾ ಕೆಲ ಕ್ಷಣ ದೃಷ್ಟಿ ಕಳೆದುಕೊಂಡಂತೆ ಆಗಬಹುದು. ಆದರೆ ಮೊಬೈಲ್ ಹೆಚ್ಚು ಬಳಸುವುದರಿಂದಲೂ ಈ ರೀತಿ ಆಗುತ್ತದೆ ಎಂದು ನಿರ್ಲಕ್ಷ್ಯ ಮಾಡಬಾರದು.

ಇದನ್ನೂ ಓದಿ: ಬ್ರೈನ್ ಟ್ಯೂಮರ್‌ಗೆ ಶಸ್ತ್ರಚಿಕಿತ್ಸೆಯೊಂದೇ ಪರಿಹಾರವೇ? ಮಿಥ್ ಮತ್ತು ಫ್ಯಾಕ್ಟ್ಸ್ ಬಗ್ಗೆ ತಿಳಿದುಕೊಳ್ಳಿ

ನೆನಪಿನ ಶಕ್ತಿ ಮತ್ತು ಮಾತನಾಡುವಾಗ ಸಮಸ್ಯೆ:

ಯಾವುದಾದರೂ ಮುಖ್ಯ ವಿಷಯವನ್ನು ಮರೆತುಹೋಗುವುದು, ಸರಿಯಾಗಿ ಗಮನ ಕೇಂದ್ರೀಕರಿಸಲಾಗದಿರುವುದು ಅಥವಾ ಮಾತನಾಡುವಾಗ ಪದಗಳು ನೆನಪಿಗೆ ಬರದಿರುವುದು ಕೂಡ ಬ್ರೇನ್ ಟ್ಯೂಮರ್‌ನ ಸೂಚನೆಯಾಗಿರಬಹುದು.

ಸಮತೋಲನ ಕಳೆದುಕೊಳ್ಳುವುದು: ನಡೆಯುವಾಗ ವಾಲುವುದು, ತಲೆಸುತ್ತು, ದೇಹದ ಸಮತೋಲನ ತಪ್ಪುವುದು ಅಥವಾ ಬೇಗ ದಣಿವಾಗುವುದು ಕೂಡ ಎಚ್ಚರಿಕೆಯ ಲಕ್ಷಣಗಳಾಗಿವೆ.

ಚಿಕಿತ್ಸೆ ಹೇಗೆ?

ಬ್ರೇನ್ ಟ್ಯೂಮರ್ ಚಿಕಿತ್ಸೆಯು ಅದರ ಗಾತ್ರ, ಪ್ರಕಾರ ಮತ್ತು ಇರುವ ಸ್ಥಳದ ಮೇಲೆ ಅವಲಂಬಿತವಾಗಿರುತ್ತದೆ. ಸರ್ಜರಿ, ರೇಡಿಯೇಷನ್ ಥೆರಪಿ ಮತ್ತು ಕಿಮೋಥೆರಪಿ ಸೇರಿದಂತೆ ಹಲವು ಪರಿಣಾಮಕಾರಿ ಚಿಕಿತ್ಸೆಗಳು ಲಭ್ಯವಿವೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್