Breast Cancer: ನಿಮ್ಮಲ್ಲಿ ಈ ಲಕ್ಷಣಗಳು ಕಂಡು ಬಂದರೆ ಸ್ತನ ಕ್ಯಾನ್ಸರ್​​ನ ಲಕ್ಷಣವಾಗಿರಬಹುದು

ಮಹಿಳೆಯರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸ್ತನ ಕ್ಯಾನ್ಸರ್ ನಂತಹ ಗಂಭೀರ ಕಾಯಿಲೆಯು ಕಾಣಿಸಿಕೊಳ್ಳುತ್ತಿದೆ. ಆದರೆ ಹೆಚ್ಚಿನ ಮಹಿಳೆಯರಿಗೆ ಸ್ತನ ಕ್ಯಾನ್ಸರ್ ಬಗ್ಗೆ ತಿಳಿದಿದ್ದರೂ ಕೂಡ ರೋಗ ಲಕ್ಷಣವು ಅರಿವಿಗೆ ಬರುವುದೇ ಇಲ್ಲ. ದೇಹದಲ್ಲಿ ಕೆಲವು ಬದಲಾವಣೆಗಳು ಕಂಡರೂ ಕೂಡ ಅದನ್ನು ನಿರ್ಲಕ್ಷ್ಯ ಮಾಡುವುದೇ ಹೆಚ್ಚು. ಮಹಿಳೆಯರ ಸ್ತನಗಳಲ್ಲಿ ಈ ಕೆಲವು ಲಕ್ಷಣಗಳು ಕಂಡು ಬಂದರೆ ಸ್ತನ ಕ್ಯಾನ್ಸರ್ ಇರುವುದು ಗ್ಯಾರಂಟಿ.

Breast Cancer: ನಿಮ್ಮಲ್ಲಿ ಈ ಲಕ್ಷಣಗಳು ಕಂಡು ಬಂದರೆ  ಸ್ತನ ಕ್ಯಾನ್ಸರ್​​ನ ಲಕ್ಷಣವಾಗಿರಬಹುದು
Breast Cancer
Follow us
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ

Updated on: Mar 27, 2024 | 8:13 PM

ಇಂದಿನ ಜೀವನ ಶೈಲಿ ಹಾಗೂ ಬದಲಾದ ಆಹಾರ ಶೈಲಿಯಿಂದಾಗಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಡುತ್ತಿದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚು ಜನರಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಮತ್ತು ವಿವಿಧ ರೀತಿಯ ಕ್ಯಾನ್ಸರ್ ಕಾಯಿಲೆಗಳಿಂದ ಬಳಲುವವರ ಸಂಖ್ಯೆಯು ಹೆಚ್ಚಾಗಿದೆ. ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಅತ್ಯಂತ ಸಾಮಾನ್ಯವಾದ ಕ್ಯಾನ್ಸರ್ ಆಗಿದ್ದು, ಇತ್ತೀಚೆಗಿನ ಕೆಲವು ವರ್ಷಗಳಲ್ಲಿ ಈ ಕ್ಯಾನ್ಸರ್ ಕಾಯಿಲೆಗೆ ತುತ್ತಾಗುತ್ತಿರುವವರ ಸಂಖ್ಯೆಯು ಏರಿಕೆಯಾಗುತ್ತಿದೆ. ಪ್ರತಿ ವರ್ಷ ಸುಮಾರು 2.1 ಮಿಲಿಯನ್ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಕಾಯಿಲೆಯು ಕಾಣಿಸಿಕೊಳ್ಳುತ್ತಿದೆ. ಸ್ತನದ ಹಾಲು ಉತ್ಪಾದಿಸುವ ಗ್ರಂಥಿಗಳಲ್ಲಿ ಅಥವಾ ಗ್ರಂಥಿಗಳಿಂದ ಮೊಲೆತೊಟ್ಟುಗಳಿಗೆ ಹಾಲನ್ನು ಸಾಗಿಸುವ ಮಾರ್ಗಗಳಲ್ಲಿ ಕ್ಯಾನ್ಸರ್ ರೂಪುಗೊಳ್ಳುತ್ತದೆ.

ಸ್ತನದ ಕೊಬ್ಬಿನ ಅಥವಾ ನಾರಿನ ಸಂಯೋಜಕ ಅಂಗಾಂಶವು ಕ್ಯಾನ್ಸರ್ ಕೋಶಗಳಿಗೆ ಹಾಟ್‌ಸ್ಪಾಟ್ ಆಗಿರಬಹುದು. ಕೆಲವು ಸಂದರ್ಭಗಳಲ್ಲಿ ಕ್ಯಾನ್ಸರ್ ಕೋಶಗಳು ನಿಮ್ಮ ತೋಳುಗಳ ಅಡಿಯಲ್ಲಿ ದುಗ್ಧರಸ ಗ್ರಂಥಿಗಳನ್ನು ತಲುಪಬಹುದು. ಅದಲ್ಲದೇ, ದೇಹದ ವಿವಿಧ ಭಾಗಗಳಿಗೆ ಹರಡುವ ಸಾಧ್ಯತೆಯು ಅಧಿಕವಾಗಿದೆ. ಆರಂಭಿಕ ಹಂತದಲ್ಲಿ ಈ ಕ್ಯಾನ್ಸರ್ ಅನ್ನು ಪತ್ತೆ ಹಚ್ಚಿ ಚಿಕಿತ್ಸೆ ಪಡೆದರೆ ಈ ಗಂಭೀರ ಕಾಯಿಲೆಯಿಂದ ಪಾರಾಗಬಹುದು.

ಇದನ್ನೂ ಓದಿ: ಕ್ಯಾನ್ಸರ್ ಅಪಾಯಕ್ಕೂ ಕ್ಯಾಲ್ಸಿಯಂ, ವಿಟಮಿನ್ ಡಿ ಸಪ್ಲಿಮೆಂಟ್​ಗೂ ಏನು ಸಂಬಂಧ?

ಸ್ತನ ಕ್ಯಾನ್ಸರ್ ಲಕ್ಷಣಗಳು:

ಸ್ತನ ಕ್ಯಾನ್ಸರ್ ಎದೆಯ ಅಂಗಾಂಶದಿಂದ ಬೆಳೆಯುವ ಕ್ಯಾನ್ಸರ್ ಆಗಿದ್ದು, ಈ ಕೆಲವು ಲಕ್ಷಣಗಳು ಕಂಡು ಬಂದರೆ ಅಂತಹವರಲ್ಲಿ ಸ್ತನ ಕ್ಯಾನ್ಸರ್ ಇದೆ ಎನ್ನುವುದನ್ನು ಸೂಚಿಸುತ್ತದೆ.

  • ಸ್ತನ ಗಾತ್ರ ಅಥವಾ ಆಕಾರದಲ್ಲಿ ಬದಲಾವಣೆ.
  • ಸ್ತನದ ಮಂದಗೊಳ್ಳುವಿಕೆ.
  • ಎದೆಯ ಸುತ್ತ ಬಟಾಣಿಯಂತಹ ಸಣ್ಣ ಗಡ್ಡೆಗಳು.
  • ಮುಟ್ಟಿನ ಸಮಯದಲ್ಲಿ ಕಂಕುಳ ಭಾಗಗಳಲ್ಲಿ ಅಥವಾ ಸ್ತನದ ಸುತ್ತ ಉಂಡೆಗಳು ಕಾಣಿಸಿಕೊಳ್ಳುತ್ತವೆ.
  • ಕಂಕುಳದ ಎರಡು ಭಾಗಗಳಲ್ಲಿ ಉಂಡೆ ಅಥವಾ ಊತ ಕಾಣಿಸುವುದು.
  • ಎದೆಯ ಚರ್ಮದಲ್ಲಿ ತೀವ್ರವಾದ ಬದಲಾವಣೆ ಉಂಟಾಗುವುದು.
  • ಸ್ತನ ಅಥವಾ ಮೊಲೆತೊಟ್ಟುಗಳ ಚರ್ಮದಲ್ಲಿ ಬದಲಾವಣೆಗಳು.
  • ಮೊಲೆತೊಟ್ಟುಗಳಿಂದ ಸ್ವಲ್ಪ ರಕ್ತಸ್ರಾವ ಅಥವಾ ದ್ರವ ವಿಸರ್ಜನೆ.
  • ಮೊಲೆತೊಟ್ಟುಗಳ ಚರ್ಮವು ಕೆಂಪು ಅಥವಾ ಕಿತ್ತಳೆ ಬಣ್ಣದ ಚರ್ಮವನ್ನು ಹೋಲುತ್ತದೆ.

ಈ ಕೆಲವು ಲಕ್ಷಣಗಳು ಕಂಡು ಬಂದರೆ ತಕ್ಷಣವೇ ವೈದ್ಯರನ್ನು ಭೇಟಿಯಾಗಿ ಪ್ರಾರಂಭಿಕ ಹಂತದಲ್ಲಿಯೇ ಚಿಕಿತ್ಸೆ ಪಡೆದುಕೊಂಡರೆ  ಈ ಮಹಾ ಮಾರಿ ರೋಗದಿಂದ ಪಾರಾಗಬಹುದು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ