Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿಗಾಲದಲ್ಲಿ ಗೋಧಿನುಚ್ಚು ಉಪ್ಪಿಟ್ಟು ತಿನ್ನುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಮಧುಮೇಹ, ಅಧಿಕ ರಕ್ತದೊತ್ತಡ, ಹೃದ್ರೋಗದಿಂದ ಬಳಲುತ್ತಿರುವವರು ಗೋಧಿನುಚ್ಚು ಉಪ್ಪಿಟ್ಟು ತಿನ್ನುವುದು ಉತ್ತಮ. ಮಿಲ್‌ ಮಾಡದೆ ಹಾಗೆ ಕುಟ್ಟಿ ಪುಡಿ ಮಾಡಿ ತಯಾರಿಸುವುದಕ್ಕೆ ಬ್ರೋಕನ್‌ ವೀಟ್‌ ಅಥವಾ ಗೋಧಿನುಚ್ಚು ಎನ್ನಲಾಗುತ್ತದೆ. ಚಪಾತಿಗಿಂತಲೂ ಗೋಧಿನುಚ್ಚು ಹೆಚ್ಚು ಪೌಷ್ಟಿಕವಾದುದು. ಇದು ಯಾವುದೇ ಅಡ್ಡ ಪರಿಣಾಮಗಳನ್ನು ಹೊಂದಿಲ್ಲ.

ಚಳಿಗಾಲದಲ್ಲಿ ಗೋಧಿನುಚ್ಚು ಉಪ್ಪಿಟ್ಟು ತಿನ್ನುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
Broken Wheat UpmaImage Credit source: desertfoodfeed
Follow us
ಅಕ್ಷತಾ ವರ್ಕಾಡಿ
|

Updated on: Nov 16, 2023 | 8:18 PM

ಉಪ್ಪಿಟ್ಟು 10 ರಿಂದ 15 ನಿಮಿಷಗಳಲ್ಲಿ ತಯಾರಿಸುವ ಉಪಹಾರವಾಗಿದ್ದ ಪ್ರತೀ ಮನೆಯಲ್ಲಿ ವಾರದಲ್ಲಿ ಎರಡು ಸಲವಾದರೂ ಮಾಡುವುದುಂಟು. ಆದರೆ ಉಪ್ಪಿಟ್ಟು ಸಾಕಷ್ಟು ಜನರಿಗೆ ಇಷ್ಟವಾಗುವುದಿಲ್ಲ. ಆದರೆ ವಿಶೇಷವಾಗಿ ಚಳಿಗಾಲದಲ್ಲಿ ತಿನ್ನುವುದರಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ. ಮಧುಮೇಹ, ಅಧಿಕ ರಕ್ತದೊತ್ತಡ, ಹೃದ್ರೋಗದಿಂದ ಬಳಲುತ್ತಿರುವವರು ಗೋಧಿನುಚ್ಚು ಉಪ್ಪಿಟ್ಟು ತಿನ್ನುವುದು ಉತ್ತಮ. ಮಿಲ್‌ ಮಾಡದೆ ಹಾಗೆ ಕುಟ್ಟಿ ಪುಡಿ ಮಾಡಿ ತಯಾರಿಸುವುದಕ್ಕೆ ಬ್ರೋಕನ್‌ ವೀಟ್‌ ಅಥವಾ ಗೋಧಿನುಚ್ಚು ಎನ್ನಲಾಗುತ್ತದೆ. ಚಪಾತಿಗಿಂತಲೂ ಗೋಧಿನುಚ್ಚು ಹೆಚ್ಚು ಪೌಷ್ಟಿಕವಾದುದು. ಇದು ಯಾವುದೇ ಅಡ್ಡ ಪರಿಣಾಮಗಳನ್ನು ಹೊಂದಿಲ್ಲ. ಇದಲ್ಲದೆ, ಗೋಧಿಯಲ್ಲಿರುವ ಫೈಬರ್​​ ಅಂಶ ತೂಕ ಕಡಿಮೆ ಮಾಡುವಲ್ಲಿ ಸಹಾಯಕವಾಗಿದೆ. ಇದು ವಿಶೇಷವಾಗಿ ಫೈಬರ್, ಪ್ರೋಟೀನ್, ವಿಟಮಿನ್ ಮತ್ತು ಖನಿಜಗಳಲ್ಲಿ ಹೆಚ್ಚಿನ ಮತ್ತು ಕಡಿಮೆ ಕ್ಯಾಲೋರಿಗಳನ್ನು ಹೊಂದಿದೆ. ಹಾಗಾಗಿ ತೂಕ ಇಳಿಸಿಕೊಳ್ಳಲು ಬಯಸುವವರು ಗೋಧಿ ಹೊಟ್ಟು ಹಾಕಿ ಮಾಡಿದ ಯಾವುದೇ ಆಹಾರ ಸೇವಿಸಬಹುದು. ಇನ್ನೇನು ಪ್ರಯೋಜನಗಳಿವೆ ಎಂಬುದನ್ನು ತಿಳಿದುಕೊಳ್ಳಿ.

ಗೋಧಿನುಚ್ಚು ಉಪ್ಪಿಟ್ಟು ತಿನ್ನುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳು:

ತೂಕ ಇಳಿಕೆಗೆ ಸಹಾಯಕ:

ಗೋಧಿನುಚ್ಚು ಉಪ್ಮಾವನ್ನು ಎಲ್ಲಾ ತರಕಾರಿಗಳನ್ನು ಸೇರಿಸಿ ತಯಾರಿಸುವುದರಿಂದ, ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ತೂಕ ಇಳಿಸಿಕೊಳ್ಳಲು ಬಯಸುವವರು ಗೋಧಿನುಚ್ಚು ಖುಷಿಯಿಂದ ತಿನ್ನಬಹುದು. ಇದರಲ್ಲಿ ಕ್ಯಾಲೋರಿಯೂ ಕಡಿಮೆ. ಅದರ ಹೊರತಾಗಿ, ಅದರಲ್ಲಿ ಸ್ವಲ್ಪ ಪ್ರಮಾಣವೂ ನಿಮಗೆ ಹೊಟ್ಟೆ ತುಂಬುತ್ತದೆ. ಇದರಿಂದಾಗಿ ಇತರೆ ಆಹಾರ ಪದಾರ್ಥಗಳನ್ನು ತೆಗೆದುಕೊಳ್ಳುವಂತಿಲ್ಲ. ಹಾಗಾಗಿ ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಬೆಸ್ಟ್ ಎನ್ನುತ್ತಾರೆ ಆರೋಗ್ಯ ತಜ್ಞರು.

ಪ್ರೋಟೀನ್ಗಳು:

ಗೋಧಿ ಹೊಟ್ಟು ಸಾಕಷ್ಟು ಪ್ರೋಟೀನ್‌ಗಳನ್ನು ಹೊಂದಿರುತ್ತದೆ. ಅಲ್ಲದೆ ಇದರಿಂದ ತಯಾರಿಸಿದ ಯಾವುದೇ ಆಹಾರ ಪದಾರ್ಥಗಳನ್ನು ಸಂತೋಷದಿಂದ ತೆಗೆದುಕೊಳ್ಳಬಹುದು. ನೀವು ಕಡಿಮೆ ಕೊಬ್ಬಿನ ಆಹಾರವನ್ನು ಸೇವಿಸಿದರೆ, ನೀವು ಸುಲಭವಾಗಿ ತೂಕವನ್ನು ಕಳೆದುಕೊಳ್ಳುತ್ತೀರಿ. ಅಲ್ಲದೆ ದೇಹಕ್ಕೆ ಉತ್ತಮ ಪ್ರೊಟೀನ್ ಕೂಡ ಸಿಗುತ್ತದೆ.

ಇದನ್ನೂ ಓದಿ: ನೀವು ಡಯೆಟ್​ನಲ್ಲಿದ್ದೀರಾ? ಎಣ್ಣೆ ತಿಂಡಿಗಳನ್ನು ತಿಂದ ಮೇಲೆ ಏನು ಮಾಡಬೇಕು?

ನಿಧಾನ ಚಯಾಪಚಯ:

ಗೋಧಿನುಚ್ಚಿನಲ್ಲಿ ನಾರಿನಾಂಶ ಅಧಿಕವಾಗಿರುವುದರಿಂದ ಕರಗಲು ಸ್ವಲ್ಪ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ.ಆದ್ದರಿಂದ ನಿಮಗೆ ಬೇಗನೆ ಹಸಿವಾಗುವುದಿಲ್ಲ. ಆದಾಗ್ಯೂ, ಕೆಲವರು ಗೋಧಿ ಹೊಟ್ಟುಗಳಿಂದ ಜೀರ್ಣಕಾರಿ ಸಮಸ್ಯೆಗಳನ್ನು ಅನುಭವಿಸುತ್ತಾರೆ. ಅಂತಹವರಿಂದ ಈ ಆಹಾರದಿಂದ ದೂರವಿರುವುದು ಉತ್ತಮ.

ಫೈಬರ್ ಅಂಶ ಸಮೃದ್ಧವಾಗಿದೆ:

ಗೋಧಿನುಚ್ಚು ಹೆಚ್ಚಿನ ಫೈಬರ್ ಅನ್ನು ಹೊಂದಿರುತ್ತದೆ. ಹಾಗಾಗಿ ಜೀರ್ಣಾಂಗ ವ್ಯವಸ್ಥೆ ಸರಾಗವಾಗಿ ನಡೆಯಲು ಸಹಾಯ ಮಾಡುತ್ತದೆ. ಇದು ದೇಹದ ಎಲ್ಲಾ ಭಾಗಗಳು ಸರಿಯಾಗಿ ಕಾರ್ಯನಿರ್ವಹಿಸಲು ಸಹ ಸಹಾಯ ಮಾಡುತ್ತದೆ.

ಮಧುಮೇಹವನ್ನು ನಿಯಂತ್ರಿಸಬಹುದು:

ಮಧುಮೇಹಿಗಳು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟದಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ. ಗೋಧಿನುಚ್ಚು ಆಹಾರವನ್ನು ಸಕ್ಕರೆಯಾಗಿ ಪರಿವರ್ತಿಸುವುದನ್ನು ತಡೆಯುತ್ತದೆ. ಆದ್ದರಿಂದ ನೀವು ಯಾವುದೇ ಸಂದೇಹವಿಲ್ಲದೆ ಸೇವಿಸಬಹುದಾಗಿದೆ.

ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ:

ಗೋಧಿನುಚ್ಚು ಉಪ್ಪಿಟ್ಟು ಸೇವಿಸುವುದರಿಂದ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ ಮತ್ತು ಹೃದಯವು ಆರೋಗ್ಯಕರವಾಗಿರುತ್ತದೆ. ಮೂಳೆಗಳೂ ಬಲಗೊಳ್ಳುತ್ತವೆ. ಇದಲ್ಲದೆ, ಗೋಧಿನುಚ್ಚು ಚರ್ಮವನ್ನು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ.‘

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್