Brown Bread: ಬ್ರೌನ್ ಬ್ರೆಡ್ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಾ? ಕೆಟ್ಟದ್ದಾ?

ಬ್ರೌನ್ ಬ್ರೆಡ್ ಆರೋಗ್ಯಕರ ವಿಧದ ಬ್ರೆಡ್ ಆಗಿ ಬಹಳ ಜನಪ್ರಿಯವಾಗಿದೆ. ಇದು ಅನೇಕ ಜನರಿಗೆ ಬೆಳಗಿನ ಉಪಾಹಾರವಾಗಿದೆ. ಕೆಲವರು ಬ್ರೌನ್ ಬ್ರೆಡ್ ಅನ್ನು ಬೇಯಿಸಿದ ಮೊಟ್ಟೆಯೊಂದಿಗೆ ಸೇವಿಸುತ್ತಾರೆ. ಇನ್ನು ಕೆಲವರು ಹಾಲಿನೊಂದಿಗೆ ತಿನ್ನುತ್ತಾರೆ. ಮತ್ತೆ ಕೆಲವರು ರೋಸ್ಟ್ ಮಾಡಿಕೊಂಡು ತಿನ್ನುತ್ತಾರೆ. ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿರುವವರು ಬೆಳಿಗ್ಗೆ 2 ಎರಡು ಬ್ರೌನ್ ಬ್ರೆಡ್ ತಿನ್ನುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಈ ಬ್ರೆಡ್ ತಿನ್ನುವುದರಿಂದ ಆಗುವ ಆರೋಗ್ಯ ಪ್ರಯೋಜನಗಳ ಬಗ್ಗೆ ಮಾಹಿತಿ ಇಲ್ಲಿದೆ.

Brown Bread: ಬ್ರೌನ್ ಬ್ರೆಡ್ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಾ? ಕೆಟ್ಟದ್ದಾ?
ಬ್ರೌನ್ ಬ್ರೆಡ್ Image Credit source: iStock
Follow us
ಸುಷ್ಮಾ ಚಕ್ರೆ
|

Updated on: Feb 28, 2024 | 7:29 PM

ಬ್ರೌನ್ ಬ್ರೆಡ್ (Brown Bread) ಒಂದು ರೀತಿಯ ಬ್ರೆಡ್ ಆಗಿದ್ದು, ಇದನ್ನು ಸಾಮಾನ್ಯವಾಗಿ ಸಂಪೂರ್ಣ ಗೋಧಿ ಹಿಟ್ಟಿನಿಂದ ತಯಾರಿಸಲಾಗುತ್ತದೆ. ಇದು ಹೆಚ್ಚು ಪೋಷಕಾಂಶಗಳು ಮತ್ತು ಫೈಬರ್ ಅನ್ನು ಹೊಂದಿರುತ್ತದೆ. ಬಿಳಿ ಬ್ರೆಡ್ ಅನ್ನು ಸಂಸ್ಕರಿಸಿದ ಹಿಟ್ಟಿನಿಂದ ತಯಾರಿಸಲಾಗುತ್ತದೆ. ಆದ್ದರಿಂದ, ಧಾನ್ಯದಲ್ಲಿ ಕಂಡುಬರುವ ಕೆಲವು ಪೌಷ್ಟಿಕಾಂಶದ ಅಂಶಗಳ ಕೊರತೆ ಅದರಲ್ಲಿರುತ್ತದೆ. ಬ್ರೌನ್ ಬ್ರೆಡ್ ತಿನ್ನುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು ಇಲ್ಲಿವೆ.

  1. ಬಿಳಿ ಬ್ರೆಡ್‌ಗೆ ಹೋಲಿಸಿದರೆ ಬ್ರೌನ್ ಬ್ರೆಡ್ ಉತ್ತಮವಾಗಿದೆ. ಸಂಪೂರ್ಣ ಗೋಧಿ ಹೊಂದಿರುವ ಬ್ರೌನ್ ಬ್ರೆಡ್ ಹೆಚ್ಚು ಪೌಷ್ಟಿಕಾಂಶದ ಪ್ರಯೋಜನಗಳನ್ನು ಹೊಂದಿದೆ.
  2. ಬ್ರೌನ್ ಬ್ರೆಡ್ ಫೈಬರ್, ಜೀವಸತ್ವಗಳು ಮತ್ತು ಖನಿಜಗಳನ್ನು ಹೊಂದಿರುತ್ತದೆ, ಇದು ಆರೋಗ್ಯಕರ ಆಯ್ಕೆಯಾಗಿದೆ.
  3. ಬ್ರೌನ್ ಬ್ರೆಡ್ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.
  4. ಬ್ರೌನ್ ಬ್ರೆಡ್ ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಧಾನ್ಯಗಳಿರುವ ಆಹಾರ ಪದಾರ್ಥಗಳು ಮೆದುಳಿನಲ್ಲಿ ಸಂತೋಷದ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತವೆ.
  5. ಬ್ರೌನ್ ಬ್ರೆಡ್ ನೈಸರ್ಗಿಕ ವಿರೇಚಕವಾಗಿ ಕಾರ್ಯ ನಿರ್ವಹಿಸುವ ಮೂಲಕ ಕರುಳಿನ ಚಲನೆಗೆ ಸಹಾಯ ಮಾಡುತ್ತದೆ.
  6. ಬ್ರೌನ್ ಬ್ರೆಡ್‌ನಲ್ಲಿರುವ ಧಾನ್ಯಗಳು ಪಾರ್ಶ್ವವಾಯುವಿನ ಅಪಾಯವನ್ನು ಕಡಿಮೆ ಮಾಡುತ್ತದೆ.
  7. ಬ್ರೌನ್ ಬ್ರೆಡ್ ದೇಹಕ್ಕೆ ಹಲವಾರು ವಿಟಮಿನ್​ಗಳು ಮತ್ತು ಖನಿಜಗಳನ್ನು ನೀಡುತ್ತದೆ.
  8. ಕಾರ್ಬೋಹೈಡ್ರೇಟ್ ಹೊಂದಿರುವ ಆಹಾರಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸಬಹುದು. ಅನೇಕ ವಿಧದ ಬ್ರೆಡ್ ಕಾರ್ಬೋಹೈಡ್ರೇಟ್‌ಗಳನ್ನು ಹೊಂದಿರುತ್ತದೆ. ಹೀಗಾಗಿ, ಬ್ರೌನ್ ಬ್ರೆಡ್ ಉತ್ತಮ ಆಯ್ಕೆ.
  9. ನಾರಿನಂಶವಿರುವ ಆಹಾರವನ್ನು ತಿನ್ನುವುದರಿಂದ ಅತಿಯಾಗಿ ತಿನ್ನುವುದನ್ನು ತಡೆಯಬಹುದು, ಇದರಿಂದ ಬೇಗನೆ ಹೊಟ್ಟೆ ತುಂಬುತ್ತದೆ. ಬ್ರೌನ್ ಬ್ರೆಡ್ ಫೈಬರ್ ಭರಿತ ಆಹಾರ ಪದಾರ್ಥವಾಗಿದೆ.
  10. ಅನೇಕ ದೀರ್ಘಕಾಲದ ಕಾಯಿಲೆಗಳಿಗೆ ಮೂಲ ಕಾರಣ ಉರಿಯೂತವಾಗಿದೆ. ಬ್ರೌನ್ ಬ್ರೆಡ್‌ನಲ್ಲಿ ಕಂಡುಬರುವ ಧಾನ್ಯಗಳು ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ